NEWSನಮ್ಮಜಿಲ್ಲೆನಮ್ಮರಾಜ್ಯ

ವೇತನ ಸೇರಿದಂತೆ ಇತರ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ 2ನೇ ದಿನವು ಮುಂದುವರಿದ ಸಾರಿಗೆ ನೌಕರರ ಧರಣಿ

ವಿಜಯಪಥ ಸಮಗ್ರ ಸುದ್ದಿ

ಬೆಂಗಳೂರು: ವೇತನ ಸೇರಿದಂತೆ ಇತರ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಮಾ.1ರಿಂದ ಫ್ರೀಂಡಂ ಪಾರ್ಕ್‌ನಲ್ಲಿ ಸಾರಿಗೆ ನೌಕರರು ಹಮ್ಮಿಕೊಂಡಿರುವ ಅನಿರ್ದಿಷ್ಟಾವಧಿ ಧರಣಿ ಸತ್ಯಾಗ್ರಹ ಎರಡನೆ ದಿನವು ಮುಂದುವರಿದಿದೆ.

2020ರ ಡಿಸೆಂಬರ್‌ನಲ್ಲಿ ನಡೆದ ಮುಷ್ಕರದ ಸಮಯದಲ್ಲಿ ಸಂಧಾನ ಸಭೆ ನಡೆಸಿದ ಸರ್ಕಾರ ಸಾರಿಗೆ ನೌಕರರಿಗೂ 6 ನೇ ವೇತನ ಆಯೋಗ ಮಾದರಿಯಲ್ಲಿ ವೇತನ ನೀಡುವುದಾಗಿ ಲಿಖಿತ ಭರವಸೆ ಕೊಟ್ಟು, ಮೂರು ತಿಂಗಳ ಒಳಗೆ ಈಡೇರಿಸುವುದಾಗಿ ಹೇಳಿತ್ತು.

ಆದರೆ, ಈವರೆಗೂ ಕೊಟ್ಟ ಲಿಖಿತ ಭರವಸೆಯನ್ನು ಈಡೇರಿಸಿಲ್ಲ ಮತ್ತು ಸಮಸ್ಯೆಗಳನ್ನು ಸಂಪೂರ್ಣ ನಿವಾರಣೆ ಮಾಡಿಲ್ಲ. ಕೆಲವು ತಿಂಗಳ ಹಿಂದೆ ಸಾರಿಗೆ ಸಚಿವ ಶ್ರೀರಾಮುಲು ಅವರು ಬಹಿರಂಗ ಸಭೆಗಳಲ್ಲಿ ಮತ್ತು ಮಾಧ್ಯಮಗಳ ಮುಂದೆ ಸಾರಿಗೆ ನೌಕರರನ್ನು 7ನೇ ವೇತನ ಆಯೋಗದಲ್ಲಿ ಸೇರ್ಪಡೆ ಮಾಡುವುದು ನನ್ನ ಕಮಿಟ್‌ಮೆಂಟ್ (ಜವಾಬ್ದಾರಿ) ಎಂದು ಹೇಳಿದ್ದಾರೆ.

ಆದರೆ ಈ ಸರ್ಕಾರದ ಕೊನೆಯ ಬಜೆಟ್‌ನಲ್ಲೂ ಸರ್ಕಾರ ಸಾರಿಗೆ ನೌಕರರಿಗೆ ನೀಡಿದ ಲಿಖಿತ ಭರವಸೆಯನ್ನು ಈಡೇರಿಸಿಲ್ಲ. ನಾವು ಈ ಬಜೆಟ್‌ನಲ್ಲಿ ನಮ್ಮ ಬೇಡಿಕೆ ಈಡೇರುತ್ತದೆ ಎಂದು ಚಾತಕ ಪಕ್ಷಿಯಂತೆ ಕಾಯುತ್ತಿದ್ದೆವು. ಇದರಿಂದ ಸಾರಿಗೆ ಸಂಸ್ಥೆಯ 1.07 ಲಕ್ಷ ಸಾರಿಗೆ ನೌಕರರು ಮತ್ತು ಕುಟುಂಬ ಸದಸ್ಯರಿಗೆ ಭಾರಿ ನಿರಾಸೆಯಾಗಿದೆ.

ಸರ್ಕಾರ ಸಾರಿಗೆ ನೌಕರರ ಮೇಲೆ ತೋರುತ್ತಿರುವ ಈ ನಿರ್ಲಕ್ಷ್ಯತನವನ್ನು ಖಂಡಿಸಿ ಹಾಗೂ ಕೂಡಲೇ ನಮ್ಮ ಬೇಡಿಕೆಗಳನ್ನು ಈಡೇರಿಸುವಂತೆ ಒತ್ತಾಯಿಸಿ,  ಅನಿದಿರ್ಷ್ಟಾವಧಿ ಧರಣಿ ಸತ್ಯಾಗ್ರಹ ಮಾಡುತ್ತಿದ್ದೇವೆ ಎಂದು ನೌಕರರ ಕೂಟದ ಅಧ್ಯಕ್ಷ ಚಂದ್ರಶೇಖರ್‌  ತಿಳಿಸಿದರು.

ಸರಿ ಸಮಾನ ವೇತನ ನೀಡಬೇಕು: ಪ್ರಮುಖವಾಗಿ ಮುಷ್ಕರದ ಸಮಯದಲ್ಲಿ ಸಾರಿಗೆ ಸಂಸ್ಥೆಯ ನಾಲ್ಕು ನಿಗಮಗಳಲ್ಲಿ, ನೌಕರರಿಗೆ ಆಗಿರುವ ಎಲ್ಲ ಸಮಸ್ಯೆಗಳನ್ನು ನಿವಾರಣೆ ಮಾಡಿ. ದಿನಾಂಕ: 06/04/2021 ರ ಯಥಾಸ್ಥಿತಿ ಕಾಪಾಡಬೇಕು. ಜತೆಗೆ ಸರ್ಕಾರ ನೀಡಿರುವ ಲಿಖಿತ ಭರವಸೆಯಂತೆ ಸಾರಿಗೆ ನೌಕರರಿಗೂ ವೇತನ ಆಯೋಗದ ಮಾದರಿಯಲ್ಲಿ, ಸರ್ಕಾರಿ ನೌಕರರ ಸರಿ ಸಮಾನ ವೇತನ ನೀಡಬೇಕು.

ಇನ್ನು 1992ರಲ್ಲಿ ಕಾರ್ಮಿಕ ಸಂಘಟನೆಗಳ ಚುನಾವಣೆ ನಡೆಸಿದ್ದು ಆ ಬಳಿಕ ಈವರೆಗೂ ಚುನಾವಣೆ ನಡೆಸಿಲ್ಲ ಹೀಗಾಗಿ ಕೂಡಲೇ ಚುನಾವಣೆ ನಡೆಸುವುದಕ್ಕೆ ಕ್ರಮ ಜರುಗಿಸಬೇಕು. ಸಾರಿಗೆ ಸಂಸ್ಥೆಯನ್ನು ಖಾಸಗೀಕರಣ ಮಾಡುವ ಯೋಜನೆಯನ್ನು ಕೈಬಿಡಬೇಕು ಎಂದು ಆಗ್ರಹಿಸಿ ಧರಣಿ ನಡೆಸುತ್ತಿದ್ದಾರೆ.

ನೌಕರರು ಡ್ಯೂಟಿಗೆ ಗೈರಾಗದೆ ತಮ್ಮ ಪಾಲಿನ ಕರ್ತವ್ಯವನ್ನು ಮಾಡಿಕೊಂಡು ಮತ್ತು ರಜೆ ಇರುವವರು ಈ ಧರಣಿಯಲ್ಲಿ ಭಾಗವಹಿಸುತ್ತಿದ್ದಾರೆ. ಅಲ್ಲದೆ ನೌಕರರ ಕುಟುಂಬದವರು ಕೂಡ ಈ ಹೋರಾಟವನ್ನು ಅಪಾರ ಸಂಖ್ಯೆಯಲ್ಲೇ ಬೆಂಬಲಿಸುತ್ತಿದ್ದು ಸರ್ಕಾರ ಸಂಸ್ಥೆಯ ನೌಕರರಷ್ಟೇ ಅಲ್ಲ ಅಧಿಕಾರಿಗಳ ಬೇಡಿಕೆಯೂ ಇದೆ ಆಗಿದ್ದು, ಇದನ್ನು ಕೂಡಲೇ ಈಡೇರಿಸಬೇಕು ಎಂದು ಆಗ್ರಹಿಸುತ್ತಿದ್ದಾರೆ.

Leave a Reply

error: Content is protected !!
LATEST
ಸಾರಿಗೆ ನೌಕರರಿಗೆ ಪ್ರಣಾಳಿಕೆಯಲ್ಲಿ ಕೊಟ್ಟ ಭರವಸೆ ಅನುಷ್ಠಾನಗೊಳಿಸಿ : ಸರ್ಕಾರಕ್ಕೆ ಬೈರಣ್ಣ ಒತ್ತಾಯ KSRTC: ಸಮಸ್ತ 4ನಿಗಮಗಳ ಅಧಿಕಾರಿಗಳು-ನೌಕರರು ಇಟ್ಟಿರುವ ಬೇಡಿಕೆಗಳ ಈಡೇರಿಸಿಕೊಳ್ಳುವುದು ಅಸಾಧ್ಯವೆ ಅಲ್ಲ! ಡಿ.9ರಿಂದ ವಿಧಾನಮಂಡಳ ಅಧಿವೇಶನ, ಉಕ ಪ್ರಗತಿಗೆ ಒತ್ತು: ಸ್ಪೀಕರ್ ಖಾದರ್ ವಿವಿಧ ಬೇಡಿಕೆಗಳ  ಈಡೇರಿಸಿ ಆಗ್ರಹಿಸಿ ಇಪಿಎಸ್ ಪಿಂಚಣಿದಾರರ ಪ್ರತಿಭಟನೆ: ಅಧಿಕಾರಿಗಳ ವಿರುದ್ಧ ಆಕ್ರೋಶ ಸರ್ಕಾರದ ತಾತ್ಸಾರದಿಂದಾಗಿ ಆರ್ಥಿಕವಾಗಿ ಸಬಲವಾಗಿದ್ದರೂ ಸಂಕಷ್ಟದ ಪರಿಸ್ಥಿತಿ ತಲುಪಿದ KSRTC ಸಾರಿಗೆ ನಿಗಮಗಳು! KSRTC ಚಾಲನಾ ಸಿಬ್ಬಂದಿ ಕಾರ್ಮಿಕರಲ್ಲ ನೌಕರರು - ಹುದ್ದೆ ಅರಿವಿಲ್ಲದವರು ಕಾರ್ಮಿಕ ಪದ ಬಳಸುತ್ತಿದ್ದಾರೆ..! ಸಾರಿಗೆ ಸಿಬ್ಬಂದಿಗಳಿಗೆ ಮೋಸ ಮಾಡಿರುವ ನಿಮಗೆ ಯಾವ ನೈತಿಕತೆ ಇದೆ: ಬಿಜೆಪಿಗರ ತರಾಟೆಗೆ ತೆಗೆದುಕೊಂಡ ರಾಮಲಿಂಗಾರೆಡ್ಡಿ ನ.27 "ನಿಧಿ ಆಪ್ಕೆ ನಿಕಟ್" ಇಪಿಎಸ್ ಪಿಂಚಣಿದಾರರ ಪ್ರತಿಭಟನೆ ಬೆಂಗ್ರಾ: ವಿವೇಕಾನಂದರ ಜನ್ಮ ದಿನ ಅಂಗವಾಗಿ ನ.30ರಂದು ಯುವ ಜನೋತ್ಸವ ಕಾಂಗ್ರೆಸ್‌ ತನ್ನ ಪ್ರಣಾಳಿಕೆಯಲ್ಲೇ ಸರಿ ಸಮಾನ ವೇತನ ಘೋಷಣೆ ಮಾಡಿದೆ: ಸರ್ಕಾರ ಕೊಡಲು ಸಿದ್ಧವಿದ್ದರೂ ಕ್ರಿಯಾ ಸಮಿತಿ ಕ್...