NEWSನಮ್ಮಜಿಲ್ಲೆನಮ್ಮರಾಜ್ಯ

ಪತ್ರಿಕಾ ವಿತರಕರನ್ನು ಅಸಂಘಟಿತ ಕಾರ್ಮಿಕರೆಂದು ಪರಿಗಣಿಸಿ : ಮಾಜಿ ಮೇಯರ್‌ ಸಂದೇಶ್ ಸ್ವಾಮಿ

ವಿಜಯಪಥ ಸಮಗ್ರ ಸುದ್ದಿ

ಮೈಸೂರು : ಸರ್ಕಾರ ಪತ್ರಿಕಾ ವಿತರಕರನ್ನು ಅಸಂಘಟಿತ ಕಾರ್ಮಿಕರೆಂದು ಪರಿಗಣಿಸಿ ಅವರಿಗೆ ಸಿಗುವ ಸೌಲಭ್ಯಗಳನ್ನು ನೀಡುವ ಮೂಲಕ ರಕ್ಷಣೆಗೆ ಧಾವಿಸಬೇಕು ಎಂದು ಮಾಜಿ ಮೇಯರ್‌ ಸಂದೇಶ್ ಸ್ವಾಮಿ ಒತ್ತಾಯಿಸಿದ್ದಾರೆ.

ವಿಶ್ವ ಪತ್ರಿಕಾ ವಿತರಕರ ದಿನಾಚರಣೆ ಅಂಗವಾಗಿ 40 ವರ್ಷಗಳಿಂದ ಮನೆ ಮನೆಗೆ ತೆರಳಿ ಪತ್ರಿಕಾ ವಿತರಣೆ ಮಾಡುತ್ತಿರುವ ಪತ್ರಿಕಾ ವಿತರಕ ಸೇನಾನಿಗಳಿಗೆ ಇಂದು (ಭಾನುವಾರ) ನಗರದ ಕೆಎಂಪಿಕೆ ಚಾರಿಟಬಲ್ ಟ್ರಸ್ಟ್ ಅಗ್ರಹಾರ ವೃತ್ತದಲ್ಲಿ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಪತ್ರಿಕಾ ವಿತರಕರನ್ನು ಸನ್ಮಾನಿಸಿ ಮಾತನಾಡಿದರು.

ಒಬ್ಬ ವರದಿಗಾರ ಸುದ್ದಿ ಬರೆಯಬಹುದು, ಪತ್ರಿಕಾಲಯದಲ್ಲಿ ಅದನ್ನು ಪ್ರಕಟಿಸಬಹುದು. ಆದರೆ ಅದನ್ನು ಜನರಿಗೆ ತಲುಪಿಸುವ ಕಾರ್ಯ ಪ್ರಮುಖವಾದದ್ದು,  ಪತ್ರಿಕಾ ವಿತರಕರು ಇಲ್ಲದಿದ್ದರೆ ಇಡೀ ದಿನ ಮಾಡಿದ ಕೆಲಸ ವ್ಯರ್ಥವಾಗುತ್ತದೆ. ಹೀಗಾಗಿ ವಿತರಕರ ಆರೋಗ್ಯವು ಮಹಳ ಮುಖ್ಯ ಎಂದು ಹೇಳಿದರು.

ಜನಸಾಮಾನ್ಯರಿಗೆ ಬೆಳಗ್ಗೆ ಏಳುತ್ತಲೇ ಪತ್ರಿಕೆ ಓದುವ ಹವ್ಯಾಸ ಇರುವುದು ಸಹಜ. ಅದನ್ನು ತಲುಪಿಸುವಲ್ಲಿ ಪತ್ರಿಕಾ ವಿತರಕರ ಪಾತ್ರ ಬಹುಮುಖ್ಯವಾಗಿದೆ. ಬೇಸಿಗೆ, ಚಳಿ, ಮಳೆ ಎನ್ನದೆ ಪ್ರತಿನಿತ್ಯ ಬೆಳಗ್ಗೆ ಪತ್ರಿಕೆಗಳನ್ನು ಮನೆಮನೆಗೆ ತಲುಪಿಸವ ಕಾರ್ಯ ಮಾಡುತ್ತಾರೆ. ಜಗತ್ತು ಎಷ್ಟೇ ಆಧುನಿಕತೆಯಲ್ಲಿ ಬೆಳೆದರೂ ಪತ್ರಿಕೆಗಳ ಓದುವುದನ್ನು ಮಾತ್ರ ಯಾರೂ ಬಿಡುವುದಿಲ್ಲ. ಈ ನಿಟ್ಟಿನಲ್ಲಿ ಪತ್ರಿಕಾ ವಿತರಕರನ್ನು ಸಮಾಜದಲ್ಲಿ ಗೌರವದಿಂದ ಕಾಣಬೇಕು ಎಂದರು.

ಸಾಮಾನ್ಯವಾಗಿ ಜನರು ಪತ್ರಿಕಾ ವಿತರಕರನ್ನು ಕೀಳು ಮಟ್ಟದಲ್ಲಿ ನೋಡುತ್ತಾರೆ. ಅದು ಬದಲಾಗಬೇಕು. ಯಾವುದೇ ಕ್ಷೇತ್ರದಲ್ಲಾದರೂ ತಮ್ಮ ಕೆಲಸಕ್ಕೆ ತಕ್ಕಂತೆ ಗೌರವ ಇರುತ್ತದೆ. ಅದೇ ರೀತಿ ಪತ್ರಿಕಾ ವಿತರಕರನ್ನೂ ಕೂಡ ಗೌರವಿಸುವಂತಾಗಬೇಕು ಎಂದರು.

ಕೊರೊನಾ ವಾರಿಯರ್ಸ್‌ ರೀತಿ ಕೆಲಸ ಮಾಡಿದರೂ ಪತ್ರಿಕಾ ವಿತರಕರಿಗೆ ಸರ್ಕಾರದಿಂದ ಯಾವುದೇ ಕನಿಷ್ಠ ಸೌಲಭ್ಯಗಳೂ ಸಿಗುತ್ತಿಲ್ಲ. ವರ್ಷಪೂರ್ತಿ ಕೆಲಸ ಮಾಡುವ ಅವರಿಗೆ ವಿಶೇಷ ‌ಭತ್ಯೆ, ಮಕ್ಕಳ ಶಿಕ್ಷಣಕ್ಕೆ ನೆರವು ನೀಡಬೇಕು. ಆಗ ಮಾತ್ರ ಅವರು ಮಾಡುತ್ತಿರುವ ಕೆಲಸದಲ್ಲಿ ಸಾರ್ಥಕತೆ ಸಿಗುತ್ತದೆ ಎಂದು ಹೇಳಿದರು.

ಹೋಟೆಲ್ ಮಾಲೀಕರ ಸಂಘದ ಅಧ್ಯಕ್ಷ ಸಿ. ನಾರಾಯಣಗೌಡ ಮಾತನಾಡಿ, ಮಾಜಿ ರಾಷ್ಟ್ರಪತಿ ದಿವಂಗತ ಅಬ್ದುಲ್ ಕಲಾಮ್ ಅವರು ಸಹ ಪತ್ರಿಕಾ ವಿತರಕರಾಗಿ ಮೇಲ್ಮಟ್ಟಕ್ಕೆ ಬಂದವರು ಎಂದ ಅವರು, ವಿತರಕರು ಮಳೆಗಾಲದಲ್ಲಿ ಸಾಕಷ್ಟು ಸಮಸ್ಯೆ ಎದುರಿಸುತ್ತಾರೆ ವಾಹನಗಳಿಂದ ಪತ್ರಿಕೆಗಳ ಬಂಡಲ್ ಗಳನ್ನು ಇಳಿಸಿಕೊಳ್ಳಲು, ವಿತರಕರಿಗೆ ಹಾಗೂ ಪತ್ರಿಕೆ ಹಾಕುವ ಹುಡುಗರಿಗೆ ಹಂಚಲು ಕಷ್ಟವಾಗುತ್ತದೆ ಎಂದು ಗಮನ ಸೆಳೆದರು.

ಇನ್ನು ಸ್ವಲ್ಪ ಮಳೆ ಹನಿಗಳು ಬಿದ್ದರೂ ಪತ್ರಿಕೆ ಹಾಳಾಗುತ್ತದೆ, ಆದ್ದರಿಂದ ಪತ್ರಿಕೆಗಳ ಹಂಚಿಕೆಗೆ ಮೈಸೂರು ನಗರ ಹಾಗೂ ತಾಲೂಕು ಕೇಂದ್ರಗಳಲ್ಲಿ ಜಾಗ ನಿಗದಿ ಪಡಿಸಬೇಕು. ಇನ್ನು ಮೈಸೂರು ನಗರ ಪಾಲಿಕೆ ಶಾಶ್ವತವಾಗಿ ಜಾಗ ಕಲ್ಪಿಸಿ ಕೊಡಬೇಕು. ಮೈಸೂರಿನ ವಸ್ತುಪ್ರದರ್ಶನ ಆವರಣ ಅಥವಾ ಟೌನ್ ಹಾಲ್ ಸೇರಿದಂತೆ ಇನ್ನಿತರ ಯಾವುದಾದರೂ ಸ್ಥಳದಲ್ಲಿ ಪತ್ರಿಕಾ ವಿತರಕರಿಗೆ ಶಾಶ್ವತ ಸ್ಥಳಾವಕಾಶ ಮಾಡಿಕೊಡಬೇಕು ಹಾಗೂ ಸರ್ಕಾರ ಪತ್ರಿಕಾ ವಿತರಕರನ್ನು ಗುರುತಿಸಿ ರಾಜ್ಯಮಟ್ಟದ ಪ್ರಶಸ್ತಿ ನೀಡುವ ಮೂಲಕ ಅವರನ್ನು ಗೌರವಿಸಬೇಕು ಎಂದು ಹೇಳಿದರು.

ಸುಜೀವ್ ಫೌಂಡೇಶನ್ ಅಧ್ಯಕ್ಷ ರಾಜರಾಂ ಮಾತನಾಡಿ, ಮುಂದಿನ ದಿನಗಳಲ್ಲಿ ಮೈಸೂರು ನಗರದ ಪತ್ರಿಕೆಯ ಪ್ರತಿಯೊಬ್ಬ ವಿತರಕರನ್ನೂ ಗುರುತಿಸುವ ಕೆಲಸ ಆಗಬೇಕು. ಸರ್ಕಾರ ಅವರಿಗೊಂದು ಗುರುತಿನ ಚೀಟಿ ನೀಡಬೇಕು. ಹಾಗೆಯೇ ನಮ್ಮ ಸಂಸ್ಥೆ ವತಿಯಿಂದ ಮುಂದಿನ ದಿನಗಳಲ್ಲಿ ಪತ್ರಿಕಾ ವಿತರಕರಿಗೆ ಜೀವವಿಮೆ ಹಾಗೂ ಪತ್ರಿಕೆ ಹಾಕುವ ಬ್ಯಾಗ್ ಮತ್ತು ಅವರ ರಕ್ಷಣೆಗೆ ಗುಣಮಟ್ಟದ ಜರ್ಕಿನ್ ನೀಡಲಾಗುವುದು ಎಂದು ಹೇಳಿದರು.

ಪತ್ರಿಕಾ ವಿತರಕರಾದ ಓಂ ದೇವ್, ಹರೀಶ್, ಜವರಪ್ಪ, ಮಂಜುನಾಥ್ , ಚಂದ್ರಶೇಖರ್ ಜೈದೇವ್ , ಪಾರ್ಶ್ವನಾಥ, ಅವರನ್ನು ಸನ್ಮಾನಿಸಲಾಯಿತು. ಇಳೆಯಾಳ್ವಾರ್ ಸ್ವಾಮೀಜಿ , ಮೈಸೂರು ನಗರ ಮತ್ತು ಜಿಲ್ಲಾ ಬ್ರಾಹ್ಮಣ ಸಂಘದ ಅಧ್ಯಕ್ಷ ಡಿ.ಟಿ. ಪ್ರಕಾಶ್, ಸುಜೀವ್ ಫೌಂಡೇಶನ್ ಅಧ್ಯಕ್ಷ ರಾಜಾರಾಂ, ಮೈಸೂರು ಜಿಲ್ಲಾ ಪತ್ರಿಕಾ ಪ್ರತಿನಿಧಿಗಳ ಸಂಘದ ಪ್ರಧಾನ ಕಾರ್ಯದರ್ಶಿ ಹಾಗೂ ಮೈಸೂರು ಜಿಲ್ಲಾ ಒಕ್ಕಲಿಗರ ಸಂಘದ ನಿರ್ದೇಶಕ ರವಿ ಎ. ಮುಡಾ ಸದಸ್ಯರಾದ ನವೀನ್ ಕುಮಾರ್ ಇತರರು ಇದ್ದರು.

Leave a Reply

error: Content is protected !!
LATEST
KSRTC ನಿರ್ದೇಶಕರ ಆದೇಶಕ್ಕೂ ಕಿಮ್ಮತ್ತಿಲ್ಲ: ಅಮಾನತು ತೆರವು ಮಾಡದೆ ಚಾಲಕನಿಗೆ ಮಾನಸಿಕ ಹಿಂಸೆ ಕೊಡುತ್ತಿರುವ ತುಮಕೂರು ... ಪ್ರಜ್ವಲ್ ರೇವಣ್ಣ ಪ್ರಕರಣ: ಅಶ್ಲೀಲ ವಿಡಿಯೋಗಳ ಹಂಚಿಕೆ ಅತ್ಯಂತ ಪಾಪ ಕೃತ್ಯ, ಸಂತ್ರಸ್ತೆಯರಿಗೆ ಅವಮಾನ- ಹೈಕೋರ್ಟ್ ವಿಶ್ವವಿಖ್ಯಾತ ಮೈಸೂರು ದಸರಾ ಗಂಡಾನೆಗಳ ನಡುವೆ ಕಿತ್ತಾಟ: ದಿಕ್ಕಾಪಾಲಾಗಿ ಓಡಿದ ಜನರು ಬನ್ನೂರು: ಬಸವನಹಳ್ಳಿ ಬಳಿ ಬೈಕ್‌ಗೆ ಡಿಕ್ಕಿ ಹೊಡೆದ ಹೆಣ್ಣು ಚಿರತೆ ಸಾವು ಅ.3ರಿಂದ ಶಾಲೆಗಳಿಗೆ ದಸರಾ ರಜೆ: ಶಾಲಾ ಶಿಕ್ಷಣ ಇಲಾಖೆ ಆದೇಶ BMTC ನೌಕರರ ₹400 ಕೋಟಿ ಗ್ರಾಚ್ಯುಟಿ, ಗಳಿಕೆ ರಜೆ ನಗದೀಕರಣ ಬಿಡುಗಡೆಗೆ ಮೀನಮೇಷ..!! KSRTC ಬಸ್‌ ರಿಪೇರಿ ಮಾಡಿದ ಖರ್ಚಿನ ಬಿಲ್‌ನಲ್ಲಿ ಸ್ಕ್ರಾಪ್‌ನ ಹಣ ತೋರಿಸದೆ ಗುಳುಂ: ಕ್ರಮಕ್ಕಾಗಿ ಎಂಡಿಗೆ ದೂರು 160 ಕ್ಯಾಬಿನೆಟ್ ಸೆಕ್ರೆಟರಿಯೇಟ್, ಡೆಪ್ಯೂಟಿ ಫೀಲ್ಡ್ ಆಫೀಸರ್ ಹುದ್ದೆಗಳಿಗೆ ಕೂಡಲೇ ಅರ್ಜಿ ಹಾಕಿ ಮುನಿರತ್ನಗೆ ಜಾಮೀನು ಮಂಜೂರು ಮಾಡಿದ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಹೋರಾಟ ಪಂಜಾಬ್, ಹರಿಯಾಣ ರೈತರದಷ್ಟೇ ಎಂಬಂತೆ ಬಿಂಬಿಸುವ ಸುಪ್ರೀಂ ಆದೇಶ ಪುನರ್ ಪರಿಶೀಲಿಸಿ: ಕುರುಬೂರ್‌ ಶಾಂತಕುಮಾರ್