Please assign a menu to the primary menu location under menu

NEWSಕೃಷಿದೇಶ-ವಿದೇಶನಮ್ಮರಾಜ್ಯ

ದೆಹಲಿ ರೈತ ಹೋರಾಟದಲ್ಲಿ ಹುತಾತ್ಮ ಅನ್ನದಾತರಿಗೆ ಮೈಸೂರಲ್ಲಿ ಶ್ರದ್ಧಾಂಜಲಿ

ವಿಜಯಪಥ ಸಮಗ್ರ ಸುದ್ದಿ

ಮೈಸೂರು: ಮೈಸೂರಿನ ನ್ಯಾಯಾಲಯದ ಮುಂಭಾಗದ ಗಾಂಧಿ ಪ್ರತಿಮೆ ಬಳಿ ಇಂದು ರಾಜ್ಯ ರೈತ ಸಂಘಗಳ ಒಕ್ಕೂಟ, ರಾಜ್ಯ ಕಬ್ಬು ಬೆಳೆಗಾರರ ಸಂಘದ ಮೈಸೂರು ಜಿಲ್ಲಾ ಸಮಿತಿಯಿಂದ ದೆಹಲಿಯ ರೈತರ ಹೋರಾಟದ ವೇಳೆ ಪೊಲೀಸರ ಗೋಲಿಬಾರ್‌ನಿಂದ ಮಡಿದ ರೈತರಿಗೆ ಇಂದು ಮೇಣದ ಬತ್ತಿಹಚ್ಚಿ ಶ್ರದ್ಧಾಂಜಲಿ ಅರ್ಪಿಸಲಾಯಿತು.

ಕೇಂದ್ರ ಸರ್ಕಾರ ರೈತರ ಸಮಸ್ಯೆ ನೀಗಿಸುವಂತೆ ಹೋರಾಟ ಮಾಡುತ್ತಿದ್ದ ರೈತರ ಮೇಲೆ ಪೊಲೀಸ್ ದುರ್ಬಳಕೆ ಮಾಡಿ ರೈತರ ಹೋರಾಟವನ್ನು ಹತ್ತಿಕ್ಕಲು ಗೋಲಿಬಾರ್ ನಡೆಸಿ ರೈತರನ್ನು ಕಗ್ಗೊಲೆ ಮಾಡಲಾಗಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು.

ಪೊಲೀಸ್ ಗೋಲಿಬಾರ್‌ನಲ್ಲಿ ಪ್ರಾಣ ಕಳೆದುಕೊಂಡ ಯುವ ರೈತರ ಕುಟುಂಬಕ್ಕೆ ಪಂಜಾಬ್ ಸರ್ಕಾರ ಒಂದು ಕೋಟಿ ರೂ.ಗಳ ಪರಿಹಾರ ನೀಡಿದೆ ಹಾಗೂ ಅವರ ಕುಟುಂಬಕ್ಕೆ ಉದ್ಯೋಗ ನೀಡಲು ಭರವಸೆ ನೀಡಿದೆ.

ಆದರೆ, ಗೋಲಿಬಾರ್ ಮಾಡಿದ ಪೊಲೀಸ್ ಅಧಿಕಾರಿಯ ವಿರುದ್ಧವೂ ಕ್ರಿಮಿನಲ್ ಮೊಕದ್ದಮೆ ದಾಖಲಿಸಬೇಕು ಎಂದು ಒತ್ತಾಯಿಸಿದರು.

ರೈತರ ಹೋರಾಟವನ್ನು ಇದೇ ರೀತಿ ನಿರ್ಲಕ್ಷ್ಯ ಮಾಡಿದರೆ ಮುಂದೆ ಬರುವ ಚುನಾವಣೆಯಲ್ಲಿ ಹಾಲಿ ಇರುವ ಸಂಸದರನ್ನು ಸೋಲಿಸುವ ಕೆಲಸ ಮಾಡಬೇಕಾಗುತ್ತದೆ ಎಂದು ಎಚರಿಸಿದರು.

ಫೆ.26ರಂದು ರಾಜ್ಯಾದ್ಯಂತ ಎಂಪಿಗಳ ಮನೆ ಕಚೇರಿಗಳ ಮುಂದೆ ಹೋರಾಟ ನಡೆಸಿ ನಿದ್ರಾವಸ್ಥೆಯಲ್ಲಿರುವ ಸಂಸದರನ್ನು ಎಚ್ಚರಿಸಲಾಗುವುದು. ಈಗಲಾದರೂ ರೈತರ ಹೋರಾಟದ ಪರವಾಗಿ ಕೇಂದ್ರ ಸರ್ಕಾರದ ಗಮನ ಸೆಳೆಯುವಂತೆ ಮೈಸೂರು ಕೊಡಗು ಸಂಸದ ಪ್ರತಾಪ್ ಸಿಂಹ ಕಚೇರಿ ಮುಂದೆ ಹೋರಾಟ ಮಾಡಿ ಒತ್ತಾಯಿಸಲಾಗುವುದು ಎಂದು ತಿಳಿಸಿದರು.

ಇಂದಿನ ಶ್ರದ್ಧಾಂಜಲಿ ಸಭೆಯಲ್ಲಿ ರಾಜ್ಯ ಸಂಘಟನಾ ಕಾರ್ಯದರ್ಶಿ ಅತ್ತಹಳ್ಳಿ ದೇವರಾಜ್, ಜಿಲ್ಲಾ ಪ್ರಧಾನ ಕಾರ್ಯದರ್ಶಿ ಬರಡನಪುರ ನಾಗರಾಜ್, ಕಿರಗಸೂರು ಶಂಕರ್, ಜಿಲ್ಲಾ ಉಪಾಧ್ಯಕ್ಷ ಮಾರ್ಬಳ್ಳಿ ನೀಲಕಂಠಪ್ಪ, ಬಿ ಪಿ ಪರಶಿವಮೂರ್ತಿ, ತಾಲೂಕು ಅಧ್ಯಕ್ಷ ಲಕ್ಷ್ಮಿಪುರ ವೆಂಕಟೇಶ್, ಮುಖಂಡರಾದ ವರಕೋಡು ನಾಗೇಶ್, ವಾಜಮಂಗಲ ಮಹಾದೇವ, ಕಾಟೂರು ನಾಗೇಶ್, ಕೂಡನಹಳ್ಳಿ ಸೋಮಣ್ಣ, ಕುಂತನಳ್ಳಿ ಕುಳ್ಳೇಗೌಡ, ಸಾತಗಳ್ಳಿ ಬಸವರಾಜು,
ಆದಿಬೆಟ್ಟಳ್ಳಿ ಕುಮಾರ್, ಕೇಬಲ್ ರವಿ, ಯಾಕನೂರು ಮಲ್ಲೇಶ್, ಚಂದ್ರು, ಬರಡನಪುರ ಮಹದೇವಸ್ವಾಮಿ ಇನ್ನು ಮುಂತಾದವರು ಇದ್ದರು.

Leave a Reply

error: Content is protected !!
LATEST
ಹೆಂಡತಿ, ಮಾವನ ಕಾಟ: ರೈಲಿಗೆ ತಲೆಕೊಟ್ಟು ಹೆಡ್‌ಕಾನ್‌ಸ್ಟೇಬಲ್ ಆತ್ಮಹತ್ಯೆ 9 ಸಾವಿರ ರೂ. ಲಂಚ ಪ್ರಕರಣ: ಪಿಡಿಒಗೆ 3 ವರ್ಷ ಜೈಲು ಶಿಕ್ಷೆ, 50 ಸಾವಿರ ರೂ.ದಂಡ KSRTC ತುಮಕೂರು: ಆತ್ಮಹತ್ಯೆಗೆ ಯತ್ನಿಸಿ ಆಸ್ಪತ್ರೆಗೆ ದಾಖಲಾಗಿರುವ ಚಾಲಕನಿಗೆ ಧೈರ್ಯ ತುಂಬಿದ ಡಿಸಿ, ಅಧಿಕಾರಿಗಳು KSRTC: ಡಿ.31ರ ಮುಷ್ಕರ ಬೆಂಬಲಿಸುವಂತೆ ಕೂಟಕ್ಕೆ ಜಂಟಿ ಕ್ರಿಯಾ ಸಮಿತಿ ಮನವಿ ಸರ್ಕಾರದ ನಡೆಯೇ  BMTC ಆರ್ಥಿಕವಾಗಿ ಕುಸಿಯಲು ಕಾರಣ: ವರದಿ ಕೊಟ್ಟ CAG KSRTC ಕುಣಿಗಲ್‌: ಹಲ್ಲೆಕೋರರ ವಿರುದ್ಧ ಕ್ರಮ ಜರುಗಿಸದಿರುವುದಕ್ಕೆ ಮನನೊಂದ ಚಾಲಕ ಆತ್ಮಹತ್ಯೆಗೆ ಯತ್ನ KSRTC: ಈ ಅಧಿವೇಶನದಲ್ಲಾದರೂ ಸಿಎಂ ಸರಿ ಸಮಾನ ವೇತನ ಬಗ್ಗೆ ದಿಟ್ಟ ಹೆಜ್ಜೆ ಇಡಲಿ BMTC: ಆಧಾರ್‌ ಕಾರ್ಡ್‌ ಯಾವ ಭಾಷೆಯಲ್ಲೇ ಇರಲಿ ಕರ್ನಾಟಕದ ವಿಳಾಸವಿದ್ದರೆ ಉಚಿತ ಪ್ರಯಾಣ ಹಾವೇರಿ: ಸರ್ಕಾರಿ ಬಸ್ ಹತ್ತಲು ಹೋದ ವೃದ್ಧೆ ಕಾಲುಗಳ ಮೇಲೆ ಹಿಂಬದಿ ಚಕ್ರ ಹರಿದು ಕಾಲುಗಳು ಕಟ್‌ KSRTC ಮಡಿಕೇರಿ: ಸಹೋದ್ಯೋಗಿ ಕಂಡಕ್ಟರ್‌ ಕೊಲ್ಲುವ ಬೆದರಿಕೆ ಹಾಕಿ ಗಾಳಿಯಲ್ಲಿ ಗುಂಡ್ಹಾರಿಸಿದ ಡ್ರೈವರ್‌ ಬಂಧನ