Please assign a menu to the primary menu location under menu

NEWSನಮ್ಮಜಿಲ್ಲೆಬೆಂಗಳೂರು

ಮತಗಟ್ಟೆ ಅಧಿಕಾರಿಗಳ ತರಬೇತಿ ಸ್ಥಳಗಳಿಗೆ ಭೇಟಿ ನೀಡಿದ ತುಷಾರ್ ಗಿರಿ ನಾಥ್

ವಿಜಯಪಥ ಸಮಗ್ರ ಸುದ್ದಿ

ಬೆಂಗಳೂರು: ಲೋಕಸಭಾ ಚುನಾವಣೆ ಹಿನ್ನೆಲೆ ಜಿಲ್ಲಾ ಚುನಾವಣಾಧಿಕಾರಿ ಹಾಗೂ ಮುಖ್ಯ ಆಯುಕ್ತ  ತುಷಾರ್ ಗಿರಿ ನಾಥ್  ಇಂದು ಮತಗಟ್ಟೆ ಅಧಿಕಾರಿಗಳಿಗೆ ತರಬೇತಿ ನಡೆಯುತ್ತಿರುವ ಮೂರು ಸ್ಥಳಗಳಿಗೆ ಭೇಟಿ ನೀಡಿ ಪರಿಶೀಲಿಸಿದರು.

1. ಡಾ. ಬಿ.ಆರ್ ಅಂಬೇಡ್ಕರ್ ವೈದ್ಯಕೀಯ ಕಾಲೇಜು, ಹೆಬ್ಬಾಳ: ಲೋಕಸಭಾ ಚುನಾವಣೆ ಹಿನ್ನೆಲೆ ಹೆಬ್ಬಾಳ ವಿಧಾನಸಭಾಕ್ಷೇತ್ರದ ಕಾಡುಗೊಂಡನಹಳ್ಳಿ ವ್ಯಾಪ್ತಿಯಲ್ಲಿ ಬರುವ ಡಾ. ಬಿ.ಆರ್ ಅಂಬೇಡ್ಕರ್ ವೈದ್ಯಕೀಯ ಕಾಲೇಜಿನಲ್ಲಿ ಮತಗಟ್ಟೆ ಅಧಿಕಾರಿಗಳಿಗೆ ನಡೆಸುತ್ತಿರುವ ಮೊದಲ ತರಬೇತಿ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಲಾಯಿತು.

ಮತದಾನದ ದಿನ‌ ಮತಗಟ್ಟೆಗಳ ಬಳಿ ನಡೆಯುವ ಎಲ್ಲಾ‌ ಚಟುವಟಿಕೆಗಳ ಕುರಿತು ಮಾಸ್ಟರ್ ಟ್ರೈನರ್ ಗಳು ತರಬೇತಿಯಲ್ಲಿ ವಿವರವಾಗಿ ಮಾಹಿತಿ ನೀಡಲಿದ್ದಾರೆ. ಇದರಿಂದ ಮತದಾನದ ದಿನ ಯಾವುದೇ ಸಮಸ್ಯೆಯಾಗದಂತೆ ಚುನಾವಣೆಯನ್ನು ಸುಸೂತ್ರವಾಗಿ ನಡೆಸಲು ಸಹಕಾರಿಯಾಗಲಿದೆ ಎಂದು ತಿಳಿಸಿದರು.

ತರಬೇತಿಯ ವೇಳೆ ಪ್ರಿಸೈಡಿಂಗ್ ಅಧಿಕಾರಿ ಹಾಗೂ ಅಸಿಸ್ಟಂಟ್ ಪ್ರಿಸೈಡಿಂಗ್ ಅಧಿಕಾರಿಗಳಿಗೆ ಕೈಪಿಡಿ(Hand Book) ನೀಡಲಾಗುವುದು. ಅದರಲ್ಲಿ ಸಂಪೂರ್ಣ ವಿವರಗಳು ಇರಲಿದೆ ನಿಮಗೇನಾದರು ಸಂದೇಹ/ಸಂಶಯಗಳಿದ್ದಲ್ಲಿ ಕೈಪಿಡಿಯಲ್ಲಿ ನೋಡಿಕೊಳ್ಳಬಹುದೆಂದು ಹೇಳಿದರು.

ಮಾಸ್ಟರ್ ಟ್ರೈನರ್ ಗಳು ಮತದಾನದ ದಿನ ನಡೆಯುವ ಎಲ್ಲಾ ಪ್ರಕ್ರಿಯೆಗಳ ಕುರಿತು ವಿವರವಾಗಿ ಮಾಹಿತಿ ನೀಡಲಿದ್ದಾರೆ. ಅಲ್ಲದೇ ತರಬೇತಿಯ ಬಳಿಕ ಎಲ್ಲಾ ಮತದಾನ ಅಧಿಕಾರಿಗಳಿಗೆ ವಿವಿ ಪ್ಯಾಟ್, ಕಂಟ್ರೋಲ್ ಯುನಿಟ್ ಹಾಗೂ ಬ್ಯಾಲೆಟ್ ಯೂನಿಟ್ ಹೇಗೆ ಕಾರ್ಯನಿರ್ವಹಿಸಲಿದೆ ಎಂಬುದರ ಬಗ್ಗೆ ಅಣುಕು ಮತದಾನ ಪ್ರದರ್ಶನ(ಮಾಕ್ ಪೋಲ್) ಮೂಲಕ ತಿಳಿಸಿಕೊಡಲಾಗುತ್ತದೆ ಎಂದರು.

2. ಸರ್ಕಾರಿ ಕಲಾ ಕಾಲೇಜು, ಶಿವಾಜಿನಗರ: ಲೋಕಸಭಾ ಚುನಾವಣೆ ಹಿನ್ನೆಲೆ ಶಿವಾಜಿನಗರ ವಿಧಾನಸಭಾಕ್ಷೇತ್ರದ ಸರ್ಕಾರಿ ಕಲಾ ಕಾಲೇಜಿನಲ್ಲಿ ಮತಗಟ್ಟೆ ಅಧಿಕಾರಿಗಳಿಗೆ ನಡೆಸುತ್ತಿರುವ ತರಬೇತಿ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಲಾಯಿತು.

ಮತಗಟ್ಟೆ ಅಧಿಕಾರಿಗಳ ಕೈಪಿಡಿಯು ಭಾರತ ಚುನಾವಣಾ ಅಯೋಗ ಹಾಗೂ ಕರ್ನಾಟಕ ಚುನಾವಣಾ ಆಯೋಗದ ವೆಬ್ ಸೈಟ್ ನಲ್ಲೂ ಲಭ್ಯವಿದ್ದು, ಅಲ್ಲಿಯೂ ಡೌನ್ಲೋಡ್ ಮಾಡಿಕೊಂಡು ವಿವರಗಳನ್ನು ಪಡೆದುಕೊಳ್ಳಬಹುದೆಂದು ತಿಳಿಸಿದರು.

ಮತಗಟ್ಟೆ ಅಧಿಕಾರಿಗಳ ತರಬೇತಿಗಾಗಿ ಅಚ್ಚುಕಟ್ಟಾಗಿ ವ್ಯವಸ್ಥೆ ಮಾಡಿಕೊಂಡಿರುವುದನ್ನು ಗಮನಿಸಿ ಮೆಚ್ಚುಗೆಯನ್ನು ವ್ಯಕ್ತಪಡಿಸಿದರು. ಬಳಿಕ ಊಟ ನೀಡುವ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿದರು.

ಈ ವೇಳೆ ಸಹಾಯಕ ಚುನಾವಣಾಧಿಕಾರಿ ಕಮಲಾ ಬಾಯಿ, ಮತದಾರರ ನೋಂದಣಾಧಿಕಾರಿ ವೀಣಾ ಸೇರಿದಂತೆ ಇನ್ನಿತರೆ ಅಧಿಕಾರಿಗಳು ಉಪಸ್ಥಿತರಿರಲಿದ್ದಾರೆ‌.

3. ಶೇಷಾದ್ರಿಪುರಂ ಕಾಲೇಜು, ಯಲಹಂಕ: ಲೋಕಸಭಾ ಚುನಾವಣೆ ಹಿನ್ನೆಲೆ ಯಲಹಂಕ ವಿಧಾನಸಭಾಕ್ಷೇತ್ರದ ಶೇಷಾದ್ರಿಪುರಂ ಕಾಲೇಜಿನಲ್ಲಿ ಮತಗಟ್ಟೆ ಅಧಿಕಾರಿಗಳಿಗೆ ನಡೆಸುತ್ತಿರುವ ತರಬೇತಿ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಲಾಯಿತು.

ಲೋಕಸಭಾ ಚುನಾವಣೆಗೆ ಎಲ್ಲಾ ರೀತಿಯ ಸಿದ್ದತೆಗಳನ್ನು ಮಾಡಿಕೊಳ್ಳಲಾಗಿದೆ. ಚುನಾವಣಾ ಸಂಬಂಧ ಎಲ್ಲಾ ರೀತಿಯ ಮಾರ್ಗಸೂಚಿಗಳಿದ್ದು, ಅದನ್ನು ಒಮ್ಮೆ ಓದಲು ಸೂಚಿಸಿದರು.

ಮತದಾನ ದಿನದಂದ ಕಾರ್ಯನಿರ್ವಹಿಸುವ ಸಲುವಾಗಿ 20,೦೦೦ಕ್ಕೂ ಹೆಚ್ಚು ಪ್ರಿಸೈಡಿಂಗ್ ಅಧಿಕಾರಿ ಹಾಗೂ ಅಸಿಸ್ಟಂಟ್ ಅಧಿಕಾರಿಗಳಿಗೆ ಆದೇಶ ನೀಡಲಾಗಿದೆ. ಮತಗಟ್ಟೆ ಅಧಿಕಾರಿಗಳು ಯಾವ ರೀತಿ ಅರ್ಜಿಗಳನ್ನು ಭರ್ತಿ ಮಾಡಬೇಕು, ಮಾಕ್ ಪೋಲ್ ಸೇರಿದಂತೆ ಇನ್ನಿತರೆ ವಿಷಯಗಳ ಕುರಿತು ಸರಿಯಾಗಿ ಅರ್ಥೈಸಿಕೊಂಡು ಕಾರ್ಯನಿರ್ವಹಿಸಲು ತಿಳಿಸಿದರು.

ಈ ವೇಳೆ ಸಹಾಯಕ ಚುನಾವಣಾಧಿಕಾರಿಯಾದ ಪ್ರಮೋದ್ ಪಾಟೀಲ್, ಮತದಾರರ ನೋಂದಣಾಧಿಕಾರಿ, ಮಾಸ್ಟರ್ ಟ್ರೈನರ್‌ಗಳು, ಮತಗಟ್ಟೆ ಅಧಿಕಾರಿಗಳು ಸೇರಿದಂತೆ ಇನ್ನಿತರೆ ಅಧಿಕಾರಿಗಳು ಇದ್ದರು.

 

Leave a Reply

error: Content is protected !!
LATEST
Kho Kho World Cup 2025: ತಿ.ನರಸೀಪುರದ ಚೈತ್ರಾ ನಾಡು, ದೇಶದ ಕೀರ್ತಿಯ ಮುಗಿಲೆತ್ತೆಕ್ಕೆ ಹಾರಿಸಿದ ಅಪ್ಪಟ ಗ್ರಾಮೀಣ ಪ... ಜಗಜಿತ್ ದಲೈವಾಲ 53 ದಿನಗಳ ಉಪವಾಸ ಕೈ ಬಿಟ್ಟು ಚಿಕಿತ್ಸೆಗೆ ಒಪ್ಪಿಗೆ ನೀಡಿರುವುದು ಸ್ವಾಗತಾರ್ಹ: ಕುರುಬೂರ್ ಶಾಂತಕುಮಾರ್ KSRTC ಬಸ್‌ ಬ್ರೇಕ್‌ ವೈಫಲ್ಯಗೊಂಡು ಪಲ್ಟಿ: 30ಕ್ಕೂ ಹೆಚ್ಚು ಮಂದಿಗೆ ಗಾಯ BMTC ಎಲೆಕ್ಟ್ರಿಕ್ ಬಸ್ ಬ್ರೇಕ್ ವೈಫಲ್ಯ: ಡಾಬಾ, ಬೀಡಾ ಅಂಗಡಿಗೆ ಡಿಕ್ಕಿ KSRTC: ಅಧಿಕಾರಿಗಳು, ಸಿಬ್ಬಂದಿಗಳಿಗೂ ಕಿರುಕುಳ ನೀಡುತ್ತಿದ್ದ ಸಂಚಾರಿ ನಿರೀಕ್ಷಕ ಉಮೇಶ್‌  ವಜಾ- ಸಿಟಿಎಂ ಆದೇಶ ಬೆಂಗಳೂರಿನಲ್ಲಿ ಶಾಲೆ ಕಲಿತ ಆ ದಿನಗಳ ಕನ್ನಡದಲ್ಲೇ ಬ್ಯಾಂಕಾಕ್‌ನಲ್ಲಿ ಮೆಲುಕುಹಾಕಿದ ಸೂಪರ್‌ಸ್ಟಾರ್‌ ರಜನಿಕಾಂತ್ KSRTC ನೌಕರರಿಗೆ ಉಚಿತ ಚಿಕಿತ್ಸೆ ನೀಡದಿದ್ದರೆ ಅಂಥ ಆಸ್ಪತ್ರೆಗಳು ಹೊರಕ್ಕೆ: ಅಧಿಕಾರಿಗಳ ಎಚ್ಚರಿಕೆ KSRTC: ನೌಕರರಿಗೆ ಸರಿ ಸಮಾನ ವೇತನ ಕೊಡುವುದು ಸರ್ಕಾರದ ಆದ್ಯ ಕರ್ತವ್ಯ-ಬೈರೇಗೌಡ KSRTC: ಗೊಂದಲದ ನಡುವೆಯೂ 1280 ಸಿಬ್ಬಂದಿಗಳಿಗೆ ಆರೋಗ್ಯ ಸೇವೆ ಮದುವೆಗೆ ಒಪ್ಪಿ ಬಳಿಕ ತಿರಸ್ಕರಿಸಿದ ಪ್ರಿಯತಮೆ: ಕೋಪಗೊಂಡು ಇರಿದ ಪ್ರಿಯತಮ