NEWSದೇಶ-ವಿದೇಶವಿಜ್ಞಾನ

ಜಾಗತಿಕವಾಗಿ ಉದ್ಯೋಗಿಗಳ ಕಡಿತಕ್ಕೆ ಮುಂದಾದ ಟ್ವಿಟ್ಟರ್

ವಿಜಯಪಥ ಸಮಗ್ರ ಸುದ್ದಿ

ವಾಷಿಂಗ್ಟನ್: ಟ್ವಿಟ್ಟರ್ ಅನ್ನು ಆರೋಗ್ಯಕರ ಹಾದಿಯಲ್ಲಿ ಇರಿಸುವ ಪ್ರಯತ್ನವಾಗಿ ನಾವು ಜಾಗತಿಕವಾಗಿ ಉದ್ಯೋಗಿಗಳನ್ನು ಕಡಿತಗೊಳಿಸುವ ಪ್ರಕ್ರಿಯೆ ಕೈಗೊಳ್ಳುತ್ತಿದ್ದೇವೆ ಎಂದು ಟೆಸ್ಲಾ ಸಿಇಒ ಎಲೋನ್ ಮಸ್ಕ್ ತಿಳಿಸಿದ್ದಾರೆ.

ಮಸ್ಕ್ ಟ್ವಿಟ್ಟರ್ (Twitter) ಅನ್ನು ಸ್ವಾಧೀನಪಡಿಸಿಕೊಳ್ಳುವುದಕ್ಕೂ ಮೊದಲೇ ಇದರ ಅನಗತ್ಯ ಉದ್ಯೋಗಿಗಳನ್ನು ಸಾಮೂಹಿಕವಾಗಿ ವಜಾಗೊಳಿಸುವ (Layoff) ಬಗ್ಗೆ ತಿಳಿಸಿದ್ದರು. ಅದರಂತೆ ಇದೀಗ ಮಸ್ಕ್ ಟ್ವಿಟ್ಟರ್‌ನ ಮಾಲೀಕನಾಗಿ ಒಂದು ವಾರ ಕಳೆದಿದ್ದು, ಉದ್ಯೋಗಿಗಳನ್ನು ವಜಾಗೊಳಿಸಲು ಈಗಿಂದಲೇ ಕ್ರಮ ಜರುಗಿಸುವ ಸುಳಿವು ನೀಡಿದ್ದಾರೆ.

ಶುಕ್ರವಾರ ಬೆಳಗ್ಗೆ ಈ ಬಗ್ಗೆ ಕಂಪನಿ ತನ್ನ ಉದ್ಯೋಗಿಗಳಿಗೆ ಮೇಲ್ ಮಾಡಿದೆ. ಅದರಲ್ಲಿ ಮೈಕ್ರೋಬ್ಲಾಗಿಂಗ್ ಪ್ಲಾಟ್‌ಫಾರ್ಮ್‌ನ ಮಾಲೀಕರ ವೆಚ್ಚವನ್ನು ಕಡಿತಗೊಳಿಸುವ ಪ್ರಯತ್ನದಲ್ಲಿ ಈ ಸಾಮೂಹಿಕ ವಜಾದ ಮಾರ್ಗವನ್ನು ಅನುಸರಿಸಲಾಗುತ್ತಿದೆ ಎಂಬುದು ವರದಿಯಾಗಿದೆ.

ಇನ್ನು ಟ್ವಿಟ್ಟರ್‌ನ ಎಷ್ಟು ಉದ್ಯೋಗಿಗಳು ವಜಾಗೊಳ್ಳುತ್ತಾರೆ ಎಂಬ ಬಗ್ಗೆ ಮಾಹಿತಿಯಿಲ್ಲ. ಆದರೂ ಕಂಪನಿಯಲ್ಲಿ ಈಗಾಗಲೇ ಇರುವ ಅರ್ಧದಷ್ಟು ಉದ್ಯೋಗಿಗಳು ಕಡಿತಗೊಳ್ಳುವ ಸಾಧ್ಯತೆ ಇದೆ ಎನ್ನಲಾಗಿದೆ.

ವರದಿಗಳ ಪ್ರಕಾರ ಟ್ವಿಟ್ಟರ್‌ನ ಎಲ್ಲ ಕಚೇರಿಗಳನ್ನು ತಾತ್ಕಾಲಿಕವಾಗಿ ಬಂದ್‌ ಮಾಡುವ ಹಾಗೂ ಉದ್ಯೋಗಿ ಬ್ಯಾಡ್ಜ್ ಪ್ರವೇಶವನ್ನು ಅಮಾನತುಗೊಳಿಸುವ ಬಗ್ಗೆ ಮೇಲ್‌ನಲ್ಲಿ ತಿಳಿಸಲಾಗಿದೆ. ಇದು ಟ್ವಿಟ್ಟರ್‌ನ ಪ್ರತಿ ಉದ್ಯೋಗಿ, ಟ್ವಿಟ್ಟರ್‌ನ ವ್ಯವಸ್ಥೆ ಹಾಗೂ ಗ್ರಾಹಕರ ಡೇಟಾವನ್ನು ಖಚಿತಪಡಿಸಿಕೊಳ್ಳಲು ಸಹಾಯ ಮಾಡಲಿದೆ ಎಂದು ತಿಳಿಸಲಾಗಿದೆ.

Leave a Reply

error: Content is protected !!
LATEST
ಉಚಿತ ಕೋಳಿ ಸಾಕಾಣಿಕೆ ತರಬೇತಿಗೆ 18 ರಿಂದ 45 ವರ್ಷದವರಿಂದ ಅರ್ಜಿ ಆಹ್ವಾನ ಪ್ರತಿಷ್ಠಿತ ಶಾಲೆಗಳಿಗೆ ಸೇರ ಬಯಸುವ ಮಕ್ಕಳಿಂದ ಅರ್ಜಿ ಆಹ್ವಾನ: ಷರತ್ತು ಅನ್ವಯ ವಸತಿ ಶಾಲೆಗಳಲ್ಲಿ ಪ್ರಥಮ ಪಿಯುಸಿ ತರಗತಿ ಪ್ರವೇಶಕ್ಕೆ ವಿದ್ಯಾರ್ಥಿಗಳಿಂದ ಅರ್ಜಿ ಆಹ್ವಾನ KSRTC: ₹8.76 ಲಕ್ಷ ನಷ್ಟವುಂಟು ಮಾಡಿರುವ ಅಧಿಕಾರಿಗಳ ವಿರುದ್ಧ ಕಠಿಣ ಕ್ರಮಕ್ಕೆ ಆಗ್ರಹಿಸಿ ಸರ್ಕಾರದ ಮುಖ್ಯ ಕಾರ್ಯದರ್ಶ... BMTC ಚಾಲಕರಿಗೆ ಕೂಡಲೇ ವೇತನ ಪಾವತಿಸಿ: ಎಎಪಿಯ ಜಗದೀಶ್ ವಿ. ಸದಂ ಆಗ್ರಹ ಬಸವನಹಳ್ಳಿ: ನಿವೃತ್ತ ಸಹಾಯಕ ತೋಟಗಾರಿಕಾ ಇಲಾಖೆಯ ನಿರ್ದೇಶಕ ಚಿಕ್ಕಮಾಯಿಗೌಡರ ಪತ್ನಿ ಸಿದ್ದಮ್ಮ ನಿಧನ KSRTC ನೌಕರರ 2024ರ ವೇತನ ಪರಿಷ್ಕರಣೆ, 38 ತಿಂಗಳ ಹಿಂಬಾಕಿ ಬಿಡುಗಡೆಗೆ ಜೂನ್‌ 6ರಬಳಿಕ ನಿರ್ಧಾರ: ರಾಮಲಿಂಗಾರೆಡ್ಡಿ ಚಿಕ್ಕಮಗಳೂರಲ್ಲಿ ಧಾರಾಕಾರ ಮಳೆ- ಬೆಂಗಳೂರಿಗೂ ಆಗಮಿಸಲಿದ್ದಾನೆ ವರುಣ BMTC: ವೇತನಕ್ಕೆ ಆಗ್ರಹಿಸಿ ಬಿಎಂಟಿಸಿ ಎಲೆಕ್ಟ್ರಿಕ್‌ ಬಸ್‌ ಚಾಲಕರ ದಿಢೀರ್‌ ಪ್ರತಿಭಟನೆ ನಮ್ಮಲ್ಲಿ ಒಳಜಗಳ ಗಿಳಜಗಳ ಯಾವುದೂ ಇಲ್ಲ : ಸಿಎಂ ಸಿದ್ದರಾಮಯ್ಯ