ಮದ್ದೂರು: ಸವಾರನ ನಿಯಂತ್ರಣ ಕಳೆದುಕೊಂಡ ಬೈಕ್ ವಿಸಿ ನಾಲೆಗೆ ಬಿದ್ದ ಪರಿಣಾಮ ಬೈಕ್ ಹಿಂಬದಿ ಕುಳಿತಿದ್ದ ವೃದ್ಧ ಸೇರಿ ಇಬ್ಬರು ಮೃತಪಟ್ಟಿರುವ ಘಟನೆ ತಾಲೂಕಿನ ಹೊಸಗಾವಿ ಬಳಿ ನಡೆದಿದೆ.
ಮದ್ದೂರಿನ ರಾಮಣ್ಣ (70) ಹಾಗೂ ಭರತ್ (19) ಅಪಘಾತದಲ್ಲಿ ಮೃತಪಟ್ಟವರು ಎಂದು ತಿಳಿದು ಬಂದಿದೆ.
ಮಂಡ್ಯ ಜಿಲ್ಲೆಯ ಮದ್ದೂರು ತಾಲೂಕಿನ ಹೊಸಗಾವಿ ಗ್ರಾಮದ ಬಳಿ ವಿಸಿ ನಾಲೆಯ ತಡೆ ಗೋಡೆಗೆ ಡಿಕ್ಕಿ ಹೊಡೆದ ಬೈಕ್, ನಾಲೆಗೆ ಉರುಳಿ ಬಿದ್ದಿದೆ. ಈ ವೇಳೆ ಬೈಕ್‌ನಲ್ಲಿದ್ದ ಇಬ್ಬರೂ ಸ್ಥಳದಲ್ಲೇ ಅನುನೀಗಿದ್ದಾರೆ.
ವಿಷಯ ತಿಳಿಯುತ್ತಿದ್ದಂತೆ ಸ್ಥಳಕ್ಕೆ ಬಂದ ಮದ್ದೂರು ಪೊಲೀಸ್ ಠಾಣೆ ಪರಿಶೀಲನೆ ನಡೆಸಿ ಮೃತ ದೇಹಗಳನ್ನು ಆಸ್ಪತ್ರೆಗೆ ರವಾನಿಸಿದ್ದಾರೆ. ಅಪಘಾತ ಸಂಬಂಧ ಪ್ರಕರಣ ದಾಖಲಿಸಿಕೊಂಡು ಮುಂದಿನ ಕಾನೂನು ಕ್ರಮ ಜರುಗಿಸುತ್ತಿದ್ದಾರೆ.
Related

Megha