ಮಂಡ್ಯ/ತುಮಕೂರು: ಎರಡು ಪ್ರತ್ಯೇಕ ರಸ್ತೆ ಅಪಘಾತದಲ್ಲಿ ಇಬ್ಬರು ಬೈಕ್ ಸವಾರರರು ಮೃತಪಟ್ಟಿರುವ ಘಟನೆ ನಡೆದಿದೆ.
ಅದರಲ್ಲಿ ತುಮಕೂರು ಜಿಲ್ಲೆ ಗುಬ್ಬಿ ಪಟ್ಟಣದ ಶ್ರೀವಿನಾಯಕ ನಗರ ಎರಡನೇ ಕ್ರಾಸ್ ಬಳಿ ಖಾಸಗಿ ಶಾಲಾ ವಾಹನಕ್ಕೆ ದ್ವಿಚಕ್ರ ವಾಹನದಲ್ಲಿ ಬಂದ ತೇಜಸ್ ಎಂಬ ಬಾಲಕ (14) ಆಯತಪ್ಪಿ ಬಸ್ನ ಹಿಂಬದಿ ಚಕ್ರಕ್ಕೆ ಸಿಲುಕಿ ಸ್ಥಳದಲ್ಲೇ ದಾರುಣವಾಗಿ ಮೃತಪಟ್ಟಿದ್ದಾನೆ.
ಇನ್ನು ಅಪ್ರಾಪ್ತನಿಗೆ ಬೈಕ್ ನೀಡಿದ ಪಾಲರು ಇಂದು ಮಗನನ್ನು ಕಳೆದುಕೊಂಡು ಗೋಳಾಡುತ್ತಿದ್ದಾರೆ. ಆದರೆ ಇತ್ತ ಇಂಥ ಮಕ್ಕಳ ಕೈಗೆ ಪಾಲಕರು ವಾಹನಗಳನ್ನು ಕೊಡುತ್ತಿರುವುದು ಕಾನೂನು ಬಾಹಿರವಾಗಿದೆ. ಹೀಗಾಗಿ ವಾಹನ ಚಾಲನೆಗೆ ಅವಕಾಶ ಮಾಡಿಕೊಟ್ಟ ವಾಹನ ಮಾಲೀಕರ ಮೇಲೆಯೂ ಕ್ರಮ ಜರುಗಿಸಲಾಗುವುದು ಎಂದು ಸಿಪಿಐ ಗೋಪಿನಾಥ್ ತಿಳಿಸಿದ್ದಾರೆ.
ಅಪಘಾತದ ವಿಷಯ ತಿಳಿಯುತ್ತಿದ್ದಂತೆ ಸ್ಥಳಕ್ಕೆ ಗುಬ್ಬಿ ಪೊಲೀಸರು ಆಗಮಿಸಿ ಸಾವಿಗೀಡಾದ ಬಾಲಕನನ್ನು ಗುಬ್ಬಿ ಸಾರ್ವಜನಿಕ ಆಸ್ಪತ್ರೆಯ ಶವಾಗಾರದಲ್ಲಿ ಇರಿಸಲಾಗಿದ್ದು ಮುಂದಿನ ತನಿಖೆಯನ್ನು ಕೈಗೊಂಡಿದ್ದಾರೆ.
ಇನ್ನು ಮತ್ತೊಂದು ಅಪಘಾತ ಪಾವಗಡ ತಾಲೂಕಿನ ನಿಡಗಲ್ ಹೋಬಳಿಯ ಕರೆಕ್ಯಾತನಹಳ್ಳಿ ಸ್ವಾರಮ್ಮ ದೇವಸ್ಥಾನದ ಸಮೀಪದ ಶಿರಾ ಮುಖ್ಯ ರಸ್ತೆಯಲ್ಲಿ ಅಪರಿಚಿತ ವಾಗನ ಬೈಕ್ ಸವಾರನ ಮೇಲೆ ಹರಿದ ಪರಿಣಾಮ ಆತ ಸ್ಥಳದಲ್ಲೇ ಮೃತಪಟ್ಟಿದ್ದಾನೆ.
ತಾಲೂಕಿನ ಅರಸೀಕೆರೆ ಗ್ರಾಮದ ನಿವಾಸಿ 25 ವರ್ಷದ ಕುಮಾರ್ ಅಪಘಾತದಲ್ಲಿ ಮೃತಪಟ್ಟವನು. ಈತ ಜೆಸಿಬಿ ಡ್ರೈವರ್ ಆಗಿ ಕೆಲಸ ಮಾಡುತ್ತಿದ್ದ ಎಂದು ತಿಳಿದು ಬಂದಿದೆ. ಶ್ರಾವಣ ಶನಿವಾರ ನಿಮ್ಮಿತ್ತ ಪಾವಗಡ ಪಟ್ಟಣದ ಶನಿಮಹಾತ್ಮ ಸ್ವಾಮಿ ದರ್ಶನಕ್ಕೆ ಬಂದು ವಾಪಸ್ ತನ್ನೂರಿಗೆ ಹೋಗುವಾಗ ಈ ಘಟನೆ ನಡೆದಿದೆ.
ದುರಾದೃಷ್ಟವಶಾತ್ ಇತ ಪ್ರಯಾಣಿಸುತ್ತಿದ್ದ ದ್ವಿಚಕ್ರ ವಾಹನದ ಚಕ್ರ ಪಂಕ್ಚರ್ ಆಗಿದೆ ಬೆನ್ನೆಲ್ಲೆ ರಸ್ತೆಗೆ ಬಿದ್ದಿದ್ದಾನೆ. ಇದೇ ವೇಳೆ ಹಿಂದಿನಿಂದ ಬಂದ ಮತ್ಯಾವುದೋ ದೊಡ್ಡ ವಾಹನ ತಲೆಮೇಲೆ ಹರಿದಿದ್ದು ಪರಿಣಾಮ ಸ್ಥಳದಲ್ಲೇ ಹಸುನೀಗಿದ್ದಾನೆ. ತಲೆ ಭಾಗ ಸಂಪೂರ್ಣ ನಜ್ಜುಗುಜ್ಜಾಗಿದೆ.
ಈ ಘಟನೆ ಮಾಹಿತಿ ಪಡೆದ ಅರಸೀಕೆರೆ ಪೊಲೀಸ್ ಸಬ್ ಇನ್ಸ್ ಪೆಕ್ಟರ್ ತಾರಾಸಿಂಗ್ ಮತ್ತು ಸಿಬ್ಬಂದಿ ಸ್ಥಳಕ್ಕೆ ಬಂದು ಪರಿಶೀಲನೆ ನಡೆಸಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.