CRIMENEWSನಮ್ಮಜಿಲ್ಲೆ

ಕಾವೇರಿ ನದಿಯಲ್ಲಿ ಈಜಲು ಹೋಗಿದ್ದ ಇಬ್ಬರು ಯುವಕರು ನೀರಿನಲ್ಲಿ ಮುಳುಗಿ ಸಾವು

ವಿಜಯಪಥ ಸಮಗ್ರ ಸುದ್ದಿ

ಮಂಡ್ಯ: ಕಾವೇರಿ ನದಿಯಲ್ಲಿ ಈಜಲು ಹೋಗಿದ್ದ ವೇಳೆ ಮುಳುಗಿ ಇಬ್ಬರು ಯುವಕರು ಮೃತಪಟ್ಟಿರುವ ಘಟನೆ ಜಿಲ್ಲೆಯ ಶ್ರೀರಂಗಪಟ್ಟಣ ತಾಲೂಕಿನ ಬಲಮುರಿಯಲ್ಲಿ ನಡೆದಿದೆ.

ಮೈಸೂರಿನ ಬೆಳಗೊಳ ಕೈಗಾರಿಕಾ ಪ್ರದೇಶದಲ್ಲಿರುವ ಕೇನ್ಸ್ ಟೆಕ್ನಾಲಜಿಯಲ್ಲಿ ಕೆಲಸ ಮಾಡುತ್ತಿದ್ದ ಚಾಮರಾಜನಗರ ಜಿಲ್ಲೆಯ ಸಂತೆಮರಳಿ ಬಳಿಯ ತಮರವಾಡಿ ಗ್ರಾಮದ ಮೋಹನ್ ಕುಮಾರ್(21) ಹಾಗೂ ಮೈಸೂರಿನ ಜಯಪುರ ಬಳಿಯ ಕೆಳಹಳ್ಳಿ ಗ್ರಾಮದ ರವಿಚಂದ್ರ (21) ಎಂಬುವವರೆ ನೀರಿನಲ್ಲಿ ಮುಳುಗಿ ಮೃತಪಟ್ಟ ಯುವಕರು.

ಈ ಇಬ್ಬರು ಐಟಿಐ ಮುಗಿಸಿ ಕೇನ್ಸ್ ಟೆಕ್ನಾಲಜಿಯಲ್ಲಿ ಹೊಸದಾಗಿ ಕೆಲಸಕ್ಕೆ ಸೇರಿದ್ದರು, ಇವರು ತಮ್ಮ ಮತ್ತೊಬ್ಬ ಸ್ನೇಹಿತ ವಿಕಾಸ್ ಜತೆಗೂಡಿ ಬಲಮುರಿ ಪ್ರವಾಸಿ ತಾಣಕ್ಕೆ ಹೋಗಿದ್ದರು. ಆದರೆ, ಈಜು ಬಾರದೆ ಇದ್ದಿದ್ದರಿಂದ ಇಬ್ಬರು ನೀರುಪಾಲಾಗಿದ್ದಾರೆ ಎಂದು ತಿಳಿದು ಬಂದಿದೆ.

ಇನ್ನು ಈಜು ಬಾರದೆ ನೀರಲ್ಲಿ ಮುಳಗಿರುವ ಬಗ್ಗೆ ವಿಕಾಸ್ ಸಮೀಪದ ಗದ್ದೆಯಲ್ಲಿ ಕೆಲಸ ಮಾಡುತ್ತಿದ್ದ ರೈತರ ಮೂಲಕ ಕೆ.ಆರ್.ಸಾಗರ ಪೊಲೀಸ್ ಠಾಣೆ ಮಾಹಿತಿ ನೀಡಿದ್ದಾರೆ.

ವಿಷಯ ತಿಳಿಯುತ್ತಿದ್ದಂತೆ ಸರ್ಕಲ್‌ ಇನ್ಸ್‌ಪೇಕ್ಟರ್‌ ವಿವೇಕಾನಂದ, ಎಸ್‌ಐ ರಮೇಶ್ ಕರ್ಕಿಕಟ್ಟೆ ಮತ್ತು ಸಿಬ್ಬಂದಿ ಸ್ಥಳಕ್ಕೆ ಆಗಮಿಸಿ, ಸ್ಥಳೀಯ ನುರಿತ ಈಜುಗಾರರು ಹಾಗೂ ಅಗ್ನಿ ಶಾಮಕ ದಳ ಸಿಬ್ಬಂದಿಯೊಂದಿಗೆ ಕಾರ್ಯಾ ಚರಣೆ ನಡೆಸಿ ಮೋಹನ್ ಕುಮಾರ್, ರವಿಚಂದ್ರ ಅವರ ಪಾರ್ಥಿವ ಶರೀರವನ್ನು ಹೊರತೆಗೆದಿದ್ದಾರೆ.

ಬಳಿಕ ಇಬ್ಬರ ಪಾರ್ಥಿವ ಶರೀರವನ್ನು ಮೈಸೂರು ಕೆ.ಆರ್. ಆಸ್ಪತ್ರೆ ಶವಾಗಾರಕ್ಕೆ ರವಾನಿಸಲಾಗಿದ್ದು, ಮೃತದೇಹ ಪರೀಕ್ಷೆ ಬಳಿಕ ಸಂಬಂಧಿಕರಿಗೆ ನೀಡಲಾಗುವುದು ಎಂದು ಪೊಲೀಸರು ತಿಳಿಸಿದ್ದಾರೆ. ಈ ಪ್ರಕರಣ ಸಂಬಂಧ ಕೆಆರ್‌ಎಸ್ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ.

Deva
the authorDeva

Leave a Reply

error: Content is protected !!
Latest news
ಗೃಹಲಕ್ಷ್ಮಿ, ಗೃಹಜ್ಯೋತಿಗೆ  ಹೊಸದಾಗಿ ಅರ್ಜಿ ಸಲ್ಲಿಸಬೇಕೆಂಬ ನಿರ್ಧಾರ ಸ್ವಾಗತಾರ್ಹ KSRTC ಪುತ್ತೂರು: ಡ್ರಿಂಕ್ಸ್ ಪರೀಕ್ಷಿಸಲು ಮಷೀನ್ ತಂದಿದ್ದಾರೆ ಎಂದು ತಪ್ಪು ತಿಳಿದು ಹೆದರಿದ ನೌಕರ- ಮೆಟ್ಟಲುಗಳಿಂದ ಬಿ... 2037ರ ವೇಳೆಗೆ ಬೆಂಗಳೂರು ಆಗಲಿದೆ ಜಾಗತಿಕ ಆರ್ಥಿಕ ಶಕ್ತಿಕೇಂದ್ರ: 35 ಲಕ್ಷ ಕೋಟಿ ರೂ.ಗೂ ಅಧಿಕ ಕಾಂಚಾಣ, 30 ಲಕ್ಷ ಹೊಸ ... ಪಂಜಾಬ್ ಮಾದರಿ ಕರ್ನಾಟಕದಲ್ಲೂ ಹೆದ್ದಾರಿ ಟೋಲ್‌ ರದ್ದತಿಗೆ ಆಗ್ರಹಿಸಿ 23ರಂದು ರೈತ ಸಂಘಟನೆಗಳ ಒಕ್ಕೂಟದಿಂದ ಪ್ರತಿಭಟನೆ KSRTC ನೌಕರರ ಪತ್ತಿನ ಸಹಕಾರ ಸಂಘದ ಅಧ್ಯಕ್ಷ ಓಂಕಾರಪ್ಪನ ಸಹಿ ಮಾಡುವ ಅಧಿಕಾರ ರದ್ದುಗೊಳಿಸಿ ತನಿಖೆಗೆ ಹೈ ಕೋರ್ಟ್‌ ಆದೇಶ BMTC: 30ನೇ ಘಟಕದ ಎಲೆಕ್ಟ್ರಿಕ್‌ ಬಸ್‌ಗಳ ಅಸಮರ್ಪಕ ಕಾರ್ಯಾಚರಣೆ ವಿರುದ್ಧ ಸಿಎಸ್‌ಗೆ ದೂರು ನೀಡಿದ ನಿರ್ವಾಹಕರು ಪಬ್‌ನಲ್ಲಿ ಸಂಭವಿಸಿದ ಭೀಕರ ಅಗ್ನಿ ಅವಘಡ -ಅಬಕಾರಿ ಡಿಸಿ ಅಮಾನತಿಗೆ ಶಿಫಾರಸು: ಸಚಿವ ಡಾ.ಯತೀಂದ್ರ ಸಿದ್ದರಾಮಯ್ಯ ಹೊಲದ ಕೂಲಿ ಕೆಲಸ ಬಿಟ್ಟು ಮತ್ತೆ ಶಿಕ್ಷಣದತ್ತ ಹೆಜ್ಜೆ ಇಟ್ಟ ವಿದ್ಯಾರ್ಥಿನಿ: ಪ್ರಾಂಶುಪಾಲರ ಮಾನವೀಯತೆಗೆ ಬೆಲೆ ಕಟ್ಟಲಾದ... ಕನಿಷ್ಠ ವಿದ್ಯಾರ್ಹತೆ SSLC ಪಾಸ್‌: ಡಿಪ್ಲೊಮಾ ಇನ್ ಕೋ ಆಪರೇಟಿವ್ ಮ್ಯಾನೇಜ್‌ಮೆಂಟ್ ಪ್ರವೇಶಕ್ಕೆ ಅರ್ಜಿ ಆಹ್ವಾನ ಕರ್ನಾಟಕದಲ್ಲಿ ‘ಕರ್ತವ್ಯ’ ಕ್ರಾಂತಿ: ಸ್ವದೇಶಿ ಎಐ ತಂತ್ರಜ್ಞಾನದ ಹೊಸ ಹೆಜ್ಜೆ