ಉಡುಪಿ: ಧಾರ್ಮಿಕ ಸಮಾರಂಭದಲ್ಲಿ ಭಾಗವಹಿಸಿದ್ದ ಯುವತಿಯೊಬ್ಬರು ಕುಸಿದು ಬಿದ್ದು ಮೃತಪಟ್ಟಿರುವ ಘಟನೆ ಉಡುಪಿಯಲ್ಲಿ ನಡೆದಿದೆ.
ಹಾವಂಜೆಯ ನಿವಾಸಿ ಜೋಸ್ನಾ ಲೂವಿಸ್ (23) ಕುಸಿದು ಬಿದ್ದು ಅಸುನೀಗಿದ ಯುವತಿ. ಜೋಸ್ನಾ ಬ್ರಹ್ಮಾವರ ತಾಲೂಕು, ಕೊಳಲಗಿರಿಯ ಸಮೀಪದ ಹಾವಂಜೆಯ ತನ್ನ ಸಂಬಂಧಿಕರ ಮನೆಗೆ ಬಂದಿದ್ದರು.
ರಾತ್ರಿ ಸುಮಾರು 8:30ಕ್ಕೆ ಯುವತಿ ಕುಳಿತಲ್ಲೇ ಕುಸಿದುಬಿದ್ದಿದ್ದಾರೆ. ತಕ್ಷಣ ಆಕೆಯನ್ನು ಸಂಬಂಧಿಕರು ಮಣಿಪಾಲ ಆಸ್ಪತ್ರೆಗೆ ದಾಖಲಿಸಿದ್ದಾರೆ. ಚಿಕಿತ್ಸೆ ಫಲಕಾರಿಯಾಗದೆ ಗುರುವಾರ ಬೆಳಗ್ಗೆ ಜೋಸ್ನಾ ಮೃತಪಟ್ಟಿದ್ದಾರೆ ಎಂದು ತಿಳಿಸಿದ್ದಾರೆ.
ಜ್ಯೋಸ್ನಾಗೆ ಯಾವುದೇ ಅನಾರೋಗ್ಯದ ಸಮಸ್ಯೆ ಇರಲಿಲ್ಲ ಎಂದು ಕುಟುಂಬಸ್ಥರು ಹೇಳಿದ್ದಾರೆ. ಘಟನೆ ಸಂಬಂಧ ಬ್ರಹ್ಮಾವರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.