NEWSನಮ್ಮಜಿಲ್ಲೆಬೆಂಗಳೂರು

ಅನಧಿಕೃತ ಕಟ್ಟಡ, ಭಗ್ನಾವಶೇಷ ವಿಲೇವಾರಿ ನಿಯಮ ಮೀರಿದರೆ ಕಠಿಣ ಕ್ರಮ-ದಂಡ: ಆರ್. ಪ್ರತಿಭಾ ಎಚ್ಚರಿಕೆ

ವಿಜಯಪಥ ಸಮಗ್ರ ಸುದ್ದಿ

ಬೆಂಗಳೂರು: ನಗರದ ಹೊರವಲಯದಲ್ಲಿ ಪಾಲಿಕೆಯ ವ್ಯಾಪ್ತಿಯ ಹೊರಗಡೆ ಮತ್ತು ಸುತ್ತಮುತ್ತಲಿನ ಪ್ರದೇಶಗಳಲ್ಲಿ ಹಾಗೂ ಬೆಂಗಳೂರು ನಗರಕ್ಕೆ ಸಂಪರ್ಕ ಕಲ್ಪಿಸುವ ರಸ್ತೆಗಳ ಬದಿ/ ಇಕ್ಕೆಲಗಳಲ್ಲಿ ಅನಧಿಕೃತ ಕಟ್ಟಡ ಮತ್ತು ಭಗ್ನಾವಶೇಷ ವಿಲೇವಾರಿ ಮಾಡುವವರ ವಿರುದ್ಧ ಕಠಿಣ ಕ್ರಮ ತೆಗೆದುಕೊಳ್ಳುವ ಜತೆಗೆ ದಂಡವನ್ನು ವಿಧಿಸಲಾಗುವುದು ಎಂದು ಬಿಬಿಎಂಪಿ ಘನತ್ಯಾಜ್ಯ ವಿಭಾಗದ ಜಂಟಿ ಆಯುಕ್ತರಾದ ಆರ್. ಪ್ರತಿಭಾ ಎಚ್ಚರಿಕೆ ನೀಡಿದ್ದಾರೆ.

ಈ ಸಂಬಂಧ ಮಾತನಾಡಿರುವ ಅವರು, ಅನಧಿಕೃತ ಅನಾಮಧೇಯ ವ್ಯಕ್ತಿಗಳಿಂದ/ ಏಜೆನ್ಸಿಗಳಿಂದ ಕಟ್ಟಡ ಮತ್ತು ಭಗ್ನಾವಶೇಷ ತ್ಯಾಜ್ಯದ ಅನಧಿಕೃತ ವಿಲೇವಾರಿಯು ಅತಿರೇಕವಾಗಿ ನಡೆಯುತ್ತಿರುವುದನ್ನು ಗಮನಿಸಲಾಗಿದೆ. ಈ ಪ್ರವೃತ್ತಿಯು ನಗರಕ್ಕೆ ಸಂಚರಿಸುವ ಸಾರ್ವಜನಿಕರಲ್ಲಿ ಬೆಂಗಳೂರು ನಗರದ ಸ್ವಚ್ಛತೆಯ ಕುರಿತು ಋಣಾತ್ಮಕ ಮನೋಭಾವನೆಯನ್ನು ಉಂಟುಮಾಡುವುದಲ್ಲದೇ ನಗರದ ಘನತೆ ಕುಂದಿಸುತ್ತಿರುವುದನ್ನು ಅತೀ ಗಂಭೀರವಾಗಿ ಪರಿಗಣಿಸಲಾಗಿದೆ ಎಂದು ತಿಳಿಸಿದ್ದಾರೆ.

ಇನ್ನು ಈ ಹಿನ್ನೆಲೆಯಲ್ಲಿ, ಕಟ್ಟಡ ಮತ್ತು ಭಗ್ನಾವಶೇಷ ತ್ಯಾಜ್ಯ ನಿರ್ವಹಣೆಯ ಕುರಿತಂತೆ ಉತ್ಪಾದಕರು/ ಸಂಗ್ರಹಣಾದಾರರು/ ಸಾಗಾಣಾದಾರರು/ ವಿಲೇವಾರಿದಾರರು ಮತ್ತು ಸಾರ್ವಜನಿಕರಿಗಾಗಿ ಈ ಎಚ್ಚರಿಕೆ ನೀಡಲಾಗುತ್ತಿದೆ.

1. ಕಟ್ಟಡ ಮತ್ತು ಭಗ್ನಾವಶೇಷ ತ್ಯಾಜ್ಯದ ವೈಜ್ಞಾನಿಕ ಅಧಿಕೃತ ಸಂಗ್ರಹಣೆ, ಸಾಗಾಣೆ ಮತ್ತು ವಿಲೇವಾರಿಯ ಪ್ರಾಥಮಿಕ ಜವಾಬ್ದಾರಿಯು ತ್ಯಾಜ್ಯ ಉತ್ಪಾದಕರದ್ದಾಗಿದೆ. 2. ಕಟ್ಟಡ ಮತ್ತು ಭಗ್ನಾವಶೇಷ ತ್ಯಾಜ್ಯವನ್ನು ವೈಜ್ಞಾನಿಕವಾಗಿ ಸಂಗ್ರಹಿಸಿ ಅಧಿಕೃತವಾಗಿ ಗುರುತಿಸಿದ ಸಂಸ್ಕರಣ ಘಟಕಗಳಿಗೆ ಸಾಗಿಸಿ ವಿಲೇವಾರಿಯನ್ನು ಕೈಗೊಳ್ಳಬೇಕು.

3. ಕಟ್ಟಡ ಮತ್ತು ಭಗ್ನಾವಶೇಷ ತ್ಯಾಜ್ಯವನ್ನು ಅನಧಿಕೃತವಾಗಿ ಎಲ್ಲೆಂದರಲ್ಲಿ, ಸಾರ್ವಜನಿಕ ಸ್ಥಳಗಳಲ್ಲಿ, ರಸ್ತೆಗಳ ಬದಿಯಲ್ಲಿ ಇಕ್ಕೆಲಗಳಲ್ಲಿ, ಚರಂಡಿಗಳಲ್ಲಿ, ಖಾಲಿ ನಿವೇಶನಗಳಲ್ಲಿ ಅಥವಾ ಕ್ವಾರಿಗಳಲ್ಲಿ ಸುರಿಯುವುದನ್ನು ಕಟ್ಟಡ ಮತ್ತು ಭಗ್ನಾವಶೇಷ ತ್ಯಾಜ್ಯ ನಿರ್ವಹಣಾ ನಿಯಮಗಳು-2016ರನ್ವಯ ನಿಷೇಧಿಸಲಾಗಿದ್ದು, ದಂಡಾರ್ಹ ಮತ್ತು ಕಾನೂನಾತ್ಮಕವಾಗಿ ಅಪರಾಧವಾಗಿದೆ.

4. ಕಟ್ಟಡ ಮತ್ತು ಭಗ್ನಾವಶೇಷ ತ್ಯಾಜ್ಯದ ಅನಧಿಕೃತ ವಿಲೇವಾರಿಗಾಗಿ ತ್ಯಾಜ್ಯ ಉತ್ಪಾದಕರನ್ನೊಳಗೊಂಡಂತೆ ತ್ಯಾಜ್ಯ ಸಂಗ್ರಹಣೆ ಮತ್ತು ಸಾಗಾಣೆ/ ವಿಲೇವಾರಿದಾರರಿಗೂ ಸಹ ನಿಯಮಾವಳಿಗಳನ್ವಯ (ರೂ.10,000 ಪ್ರತಿ ಟನ್‌ಗೆ) ದಂಡವನ್ನು ವಿಧಿಸಲಾಗುವುದು ಮತ್ತು ಪರಿಸರ (ಸಂರಕ್ಷಣೆ) ಕಾಯ್ದೆ 1986ರನ್ವಯ ಕರ್ನಾಟಕ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿಯ ಮೂಲಕ ಕಾನೂನಾತ್ಮಕವಾಗಿ ಕ್ರಮಕೈಗೊಳ್ಳಲಾಗುವುದು.

5. ನಗರದ ಹೊರವಲಯದಲ್ಲಿ ಕಟ್ಟಡ ಮತ್ತು ಭಗ್ನಾವಶೇಷ ತ್ಯಾಜ್ಯದ ಅನಧಿಕೃತ ವಿಲೇವಾರಿಗಾಗಿ ಪಾಲಿಕೆಯ ವ್ಯಾಪ್ತಿಯಲ್ಲಿ ಸಂಚರಿಸುವ ಎಲ್ಲ ವಾಹನಗಳನ್ನು ತಕ್ಷಣದಿಂದ ಜಾರಿಗೆ ಬರುವಂತೆ ಪಾಲಿಕೆಯ ಎಲ್ಲ ಸೂಪರವೈಸರ್/ ಕಿರಿಯ ಆರೋಗ್ಯ ಪರಿವೀಕ್ಷಕರು/ ವಾರ್ಡ್‌ ಮಾರ್ಷಲ್ಸ್/ ಮಾರ್ಷಲ್ ಸೂಪರವೈಸ‌ರ್‌ಗಳ ಮುಖೇನ ತಪಾಸಣೆಗೆ ಒಳಪಡಿಸಿ ನಿಯಮಾವಳಿಗಳನ್ವಯ ದಂಡವನ್ನು ವಿಧಿಸಿ ವಾಹನಗಳನ್ನು ವಶಪಡಿಸಿಕೊಂಡು ಹತ್ತಿರದ ಪೊಲೀಸ್‌ ಠಾಣೆಯ ಸುಪರ್ದಿಗೆ ಮುಂದಿನ ಕ್ರಮಕ್ಕಾಗಿ ನೀಡಲಾಗುವುದು.

ಈ ಅಂಶಗಳನ್ನು ಸಾರ್ವಜನಿಕರ ಮಾಹಿತಿಗಾಗಿ ಹೊರಡಿಸಲಾಗಿದ್ದು, ಪರಿಸರ ಸಂರಕ್ಷಣೆಗಾಗಿ ಪಾಲಿಕೆಯೊಂದಿಗೆ ಸಹಕರಿಸುವಂತೆ ಘನತ್ಯಾಜ್ಯ ಆರ್. ಪ್ರತಿಭಾ ಕೋರಿದ್ದಾರೆ.

Leave a Reply

error: Content is protected !!
LATEST
ಮಧ್ಯಮ ವರ್ಗದ ವ್ಯಕ್ತಿ ಕೇಳಿದ ಪ್ರಶ್ನೆಗೆ ಉತ್ತರಿಸಲಾಗದೆ ಮೌನಕ್ಕೆ ಶರಣಾದ ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ BBMP-ಡೆಂಗ್ಯೂ ನಿಯಂತ್ರಣಕ್ಕೆ ಮುನ್ನೆಚ್ಚರಿಕೆ : ಸುರಳ್ಕರ್ ವಿಕಾಸ್ ಕಿಶೋರ್ ಉಚಿತ ಕೋಳಿ ಸಾಕಾಣಿಕೆ ತರಬೇತಿಗೆ 18 ರಿಂದ 45 ವರ್ಷದವರಿಂದ ಅರ್ಜಿ ಆಹ್ವಾನ ಪ್ರತಿಷ್ಠಿತ ಶಾಲೆಗಳಿಗೆ ಸೇರ ಬಯಸುವ ಮಕ್ಕಳಿಂದ ಅರ್ಜಿ ಆಹ್ವಾನ: ಷರತ್ತು ಅನ್ವಯ ವಸತಿ ಶಾಲೆಗಳಲ್ಲಿ ಪ್ರಥಮ ಪಿಯುಸಿ ತರಗತಿ ಪ್ರವೇಶಕ್ಕೆ ವಿದ್ಯಾರ್ಥಿಗಳಿಂದ ಅರ್ಜಿ ಆಹ್ವಾನ KSRTC: ₹8.76 ಲಕ್ಷ ನಷ್ಟವುಂಟು ಮಾಡಿರುವ ಅಧಿಕಾರಿಗಳ ವಿರುದ್ಧ ಕಠಿಣ ಕ್ರಮಕ್ಕೆ ಆಗ್ರಹಿಸಿ ಸರ್ಕಾರದ ಮುಖ್ಯ ಕಾರ್ಯದರ್ಶ... BMTC ಚಾಲಕರಿಗೆ ಕೂಡಲೇ ವೇತನ ಪಾವತಿಸಿ: ಎಎಪಿಯ ಜಗದೀಶ್ ವಿ. ಸದಂ ಆಗ್ರಹ ಬಸವನಹಳ್ಳಿ: ನಿವೃತ್ತ ಸಹಾಯಕ ತೋಟಗಾರಿಕಾ ಇಲಾಖೆಯ ನಿರ್ದೇಶಕ ಚಿಕ್ಕಮಾಯಿಗೌಡರ ಪತ್ನಿ ಸಿದ್ದಮ್ಮ ನಿಧನ KSRTC ನೌಕರರ 2024ರ ವೇತನ ಪರಿಷ್ಕರಣೆ, 38 ತಿಂಗಳ ಹಿಂಬಾಕಿ ಬಿಡುಗಡೆಗೆ ಜೂನ್‌ 6ರಬಳಿಕ ನಿರ್ಧಾರ: ರಾಮಲಿಂಗಾರೆಡ್ಡಿ ಚಿಕ್ಕಮಗಳೂರಲ್ಲಿ ಧಾರಾಕಾರ ಮಳೆ- ಬೆಂಗಳೂರಿಗೂ ಆಗಮಿಸಲಿದ್ದಾನೆ ವರುಣ