NEWSನಮ್ಮರಾಜ್ಯ

ನಾಳೆಯಿಂದ ಬಿಎಂಟಿಸಿ, ಜಿಲ್ಲೆ ಒಳಗಡೆ KSRTC ಬಸ್‌ ಓಡಾಟ

ಅಧಿಕೃತ ಘೋಷಣೆ ಮಾಡಿದ ಮುಖ್ಯಮಂತ್ರಿ ಯಡಿಯೂರಪ್ಪ

ವಿಜಯಪಥ ಸಮಗ್ರ ಸುದ್ದಿ

ಬೆಂಗಳೂರು: ರೆಡ್‌ ಜೋನ್‌ ಕಂಟೈನ್‌ಮೆಂಟ್‌ ಜೋನ್‌ ಬಿಟ್ಟು ಸಾರಿಗೆಯ 4 ನಿಗಮಗಳ ಬಸ್‌ ಸಂಚಾರ ನಾಳೆಯಿಂದಲೇ ಆರಂಭವಾಗಲಿದೆ. ಆದರೆ 30 ಜನ ಮಾತ್ರ ಒಂದು ಬಸ್‌ನಲ್ಲಿ ಪ್ರಯಾಣ ಮಾಡಬೇಕು ಎಂದು ಮುಖ್ಯಮಂತ್ರಿ ಬಿ.ಎಸ್‌ . ಯಡಿಯೂರಪ್ಪ ತಿಳಿಸಿದ್ದಾರೆ.

ಇಂದು ವಿಧಾನಸೌಧದಲ್ಲಿ ಕರೆದಿದ್ದ ಸಚಿವ ಸಂಪುಟ ಸಭೆಯಲ್ಲಿ ಎಲ್ಲಾ ಸಚಿವರ ಅಭಿಪ್ರಾಯವನ್ನು ಸಂಗ್ರಹಿಸಿ ಈ ನಿರ್ಧಾರವನ್ನು ಸರ್ಕಾರ ತೆಗೆದುಕೊಂಡಿದೆ ಎಂದು ಸಭೆ ಬಳಿಕ ನಡೆದ ಸುದ್ದಿಗೋಷ್ಠಿಯಲ್ಲಿ ಸಿಎಂ ಬಿಎಸ್‌ವೈ ತಿಳಿಸಿದರು.

ನಿಮ್ಮ ನೆಚ್ಚಿನ ಸುದ್ದಿಗಳಿಗೆ ವಿಜಯಪಥ ಆಪ್‌ ಡೌನ್ಲೋಡ್‌ ಮಾಡಿಕೊಳ್ಳಲು ಇಲ್ಲಿ ಕ್ಲಿಕ್ಕಿಸಿ  https://play.google.com/store/apps/detail

ಬೆಂಗಳೂರು  ಮಹಾನಗರ ಸಾರಿಗೆ ಸಂಸ್ಥೆ ಬಸ್‌ಗಳ ಓಡಾಟವನ್ನು ಆರಂಭಿಸಲಾಗಿದೆ.  ಆದರೆ ಈ ನಡುವೆ ಪ್ರತಿಯೊಬ್ಬರೂ ಮಾಸ್ಕ್‌ ಧರಿಸುವುದು ಕಡ್ಡಾಯ, ಅದನ್ನು ಉಲ್ಲಂಘಿಸಿದರೆ ಕಾನೂನು ಕ್ರಮ ಜರುಗಿಸಲಾಗುವುದು.

ಸಲೂನ್‌ ಶಾಪ್‌ ತೆರಯಲೂ ಅನುಮತಿ ನೀಡಿದ್ದು, ಭಾನುವಾರ ಮಾತ್ರ ಯಾವುದೇ ಅಂಗಡಿಗಳನ್ನು ತೆರೆಯುವಂತಿಲ್ಲ ಎಂಬ ತೀರ್ಮಾನವನ್ನು ಸರ್ಕಾರ ತೆಗೆದುಕೊಂಡಿದೆ.

ನಿಮ್ಮ ನೆಚ್ಚಿನ ಸುದ್ದಿಗಳಿಗೆ ವಿಜಯಪಥ ಆಪ್‌ ಡೌನ್ಲೋಡ್‌ ಮಾಡಿಕೊಳ್ಳಲು ಇಲ್ಲಿ ಕ್ಲಿಕ್ಕಿಸಿ  https://play.google.com/store/apps/detail

ಪಾರ್ಕ್‌ಗಳಲ್ಲಿ ಬೆಳಗ್ಗೆ 7ರಿಂದ 9 ಗಂಟೆ ಮತ್ತು ಸಂಜೆ  5ರಿಂದ 7 ಗಂಟೆವರೆಗೆ ಓಡಾಡಬಹುದು. ಇದು ಕೇಂದ್ರ ಸರ್ಕಾರ ಹೊರಡಿಸಿರುವ ಮಾರ್ಗ ಸೂಚಿಯಂತೆ ನಮ್ಮ ಸಚಿವರು ಮತ್ತು ಅಧಿಕಾರಿಗಳ ಜತೆ ಚರ್ಚೆ ಈ ನಿರ್ಧಾರಗಳನ್ನು ತೆಗೆದುಕೊಂಡಿದ್ದೇವೆ. ಕಂಟೈನ್‌ಮೆಂಟ್‌ ಜೋನ್‌ಗಳಲ್ಲಿ ಯಾವುದೇ ಬದಲಾವಣೆ ಇರವುದಿಲ್ಲ.

ಬಸ್‌ ಪ್ರಯಾಣ ಟಿಕೆಟ್‌ ದರದಲ್ಲಿ ಯಾವುದೇ ಏರಿಕೆ ಮಾಡುವುದಿಲ್ಲ. ಸರ್ಕಾರವೇ ಅದರ ಲಾಸ್‌ ಅನ್ನು ಭರಿಸಲಿದೆ.  ಭಾನುವಾರ ಮಾತ್ರ ಜನರು ಸೇರಿದಂತೆ ಆಟೋರಿಕ್ಷಾ, ಬಸ್‌, ಕ್ಯಾಬ್‌ಗಳು ಓಡಾಡುವಂತಿಲ್ಲ. ಅಂದು ಸಂರ್ಪೂಣ ಲಾಕ್‌ಡೌನ್‌ ಇರಲಿದೆ. ಒಂದು ವೇಳೆ ಓಡಾಡಲಿದ್ದರೆ ಅದಕ್ಕೆ ತಕ್ಕ ಶಿಕ್ಷೆ ಅನುಭವಿಸಬೇಕಾಗುತ್ತದೆ ಎಂದು ಸಿಎಂ ಮಾಹಿತಿ ನೀಡಿದ್ದಾರೆ.

ನಿಮ್ಮ ನೆಚ್ಚಿನ ಸುದ್ದಿಗಳಿಗೆ ವಿಜಯಪಥ ಆಪ್‌ ಡೌನ್ಲೋಡ್‌ ಮಾಡಿಕೊಳ್ಳಲು ಇಲ್ಲಿ ಕ್ಲಿಕ್ಕಿಸಿ  https://play.google.com/store/apps/detail

 

 

Leave a Reply

error: Content is protected !!
LATEST
ಕೋರಮಂಗಲದ ಬಿಡಿಎ ಕಾಂಪ್ಲೆಕ್ಸ್ ಕೆಡವಿ ಮಾಲ್ ಕಟ್ಟುವ ಬಿಡಿಎ ನಿರ್ಧಾರಕ್ಕೆ ಎಎಪಿ ವಿರೋಧ ಜೈಲಲ್ಲೇ ದೇವರಾಜೇಗೌಡರ ಜೀವಕ್ಕೆ ಅಪಾಯವಿದೆ : ಸುರೇಶಗೌಡ ಆತಂಕ KSRTC ಬಸ್‌- ಕಾರು ನಡುವೆ ಭೀಕರ ಅಪಘಾತ: ಕಾರು ಚಾಲಕ ಸಾವು, ನಾಲ್ವರ ಸ್ಥಿತಿ ಗಂಭೀರ ಜಿಆರ್ ಫಾರ್ಮ್ ಹೌಸ್‌ನಲ್ಲಿ ರೇವ್​ ಪಾರ್ಟಿ: ನಟಿಯರು ಸೇರಿ 80ಕ್ಕೂ ಹೆಚ್ಚು ಬಂಧನ KSRTC: ಹೆದ್ದಾರಿಯಲ್ಲಿ ಕೆಟ್ಟುನಿಂತ ಬಸ್‌ಗಳು - ಕಿಮೀ ವರೆಗೆ ಟ್ರಾಫಿಕ್ ಜಾಮ್ KSRTC: ₹185 ಟಿಕೆಟ್‌ ಕೊಟ್ಟು ₹200 ಕೇಳಿದ ಕಂಡಕ್ಟರ್‌ - ದೂರು ಕೊಟ್ಟ ಪ್ರಯಾಣಿಕ ಧೈರ್ಯವಿದ್ದರೆ ಎಎಪಿ ಮುಖಂಡರೆಲ್ಲರನ್ನೂ ಜೈಲಿಗೆ ಹಾಕಿ: ಪ್ರಧಾನಿ ಮೋದಿಗೆ ಪೃಥ್ವಿ ರೆಡ್ಡಿ ಸವಾಲು ಪತ್ನಿ, ಮಗನಿಗೆ ಮಾಸಿಕ ಜೀವನಾಂಶ ಪಾವತಿಸದ ಪತಿ ಆಸ್ತಿ ಮುಟ್ಟುಗೋಲು: ಹೈಕೋರ್ಟ್ ಮಹತ್ವದ ಆದೇಶ ಬೆಳ್ಳಂಬೆಳಗ್ಗೆ ಸರಣಿ ಅಪಘಾತ: ಕಾರು ನಜ್ಜುಗುಜ್ಜು - ಪ್ರಯಾಣಿಕರು ಸೇಫ್ ರಾಜ್ಯ ಸರ್ಕಾರಿ ನೌಕರರಿಗೆ ಸಿಹಿ ಸುದ್ದಿ:‌ ಶೇ.25.5 ವೇತನ ಹೆಚ್ಚಳ ಬಹುತೇಕ ಖಚಿತ