CrimeNEWSನಮ್ಮಜಿಲ್ಲೆ

ನಿರ್ಮಾಣ ಹಂತದ ಶಾಲಾ ಕಟ್ಟಡ ಕುಸಿತ: ಇಬ್ಬರು ಮೃತ, 20ಕ್ಕೂ ಹೆಚ್ಚು ಮಂದಿಗೆ ಗಾಯ

ವಿಜಯಪಥ ಸಮಗ್ರ ಸುದ್ದಿ

ಆನೇಕಲ್: ನಿರ್ಮಾಣ ಹಂತದ ಶಾಲಾ ಕಟ್ಟಡ ಕುಸಿದು ಇಬ್ಬರು ಅಸುನೀಗಿದ್ದು, 20ಕ್ಕೂ ಹೆಚ್ಚು ಮಂದಿ ಕಾರ್ಮಿಕರು ಗಂಭೀರವಾಗಿ ಗಾಯಗೊಂಡಿರುವ ಘಟನೆ ಬೆಂಗಳೂರು ನಗರ ಜಿಲ್ಲೆ ಆನೇಕಲ್ ತಾಲೂಕಿನ ಬ್ಯಾಡರಹಳ್ಳಿಯಲ್ಲಿ ನಡೆದಿದೆ.

ಸೇಂಟ್ ಅಗ್ನೇಸ್ ಶಾಲಾ ಕಟ್ಟಡದ ನಿರ್ಮಾಣ ಕಾರ್ಯ ನಡೆಯುತ್ತಿತ್ತು. ಈ ವೇಳೆ ಎರಡನೇ ಅಂತಸ್ತಿನ ಕಟ್ಟಡ ಕುಸಿದು ಇಬ್ಬರು ಕಾರ್ಮಿಕರು ಮೃತಪಟ್ಟಿದ್ದು, ಐವರು ಕಾರ್ಮಿಕರ ಸ್ಥಿತಿ ತೀರಾ ಗಂಭೀರವಾಗಿದೆ ಎಂದು ಪ್ರಾಥಮಿಕ ಮೂಲಗಳಿಂದ ತಿಳಿದುಬಂದಿದೆ.

ಕಟ್ಟಡದ ಅವಶೇಷಗಳ ಅಡಿಯಲ್ಲಿ ಕಾರ್ಮಿಕರು ಸಿಲುಕಿರುವ ಸಾಧ್ಯತೆ ಇದೆ ಎನ್ನಲಾಗಿದೆ. ಸ್ಥಳಕ್ಕೆ ಆನೇಕಲ್ ಪೊಲೀಸರು ಹಾಗೂ ಅಗ್ನಿಶಾಮಕ ದಳದ ಸಿಬ್ಬಂದಿ ದೌಡಾಯಿಸಿದ್ದು, ಕಟ್ಟಡದ ಅವಶೇಷಗಳ ತೆರವು ಕಾರ್ಯಾಚರಣೆ ನಡೆಯುತ್ತಿದೆ.

ಸದ್ಯ ಗಾಯಾಳುಗಳನ್ನು ಚಿಕಿತ್ಸೆಗಾಗಿ ಆನೇಕಲ್ ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಸ್ಥಳದಲ್ಲಿ ಆತಂಕದ ವಾತಾವರಣ ನಿರ್ಮಾಣವಾಗಿದೆ. ಗಾಯಗೊಂಡ ಕಾರ್ಮಿಕರು ಕೋಲ್ಕತ್ತಾ ಮೂಲದವರು. ಒಟ್ಟು ನೂರಕ್ಕೂ ಹೆಚ್ಚು ಮಂದಿ ಕೆಲಸ ಮಾಡುತ್ತಿದ್ದಾರೆ.

ಈ ಕುಸಿದ ಕಟ್ಟಡದ 2ನೇ ಮಹಡಿಯಲ್ಲಿ ಸೆಂಟ್ರಿಂಗ್ ಕಾಂಕ್ರೀಟ್ ಹಾಕಲಾಗುತ್ತಿತ್ತು. ಈ ಸಮಯದಲ್ಲಿ ಭಾರ ಹೆಚ್ಚಾಗಿ ಹೆಚ್ಚಾಗಿ ಸಿಮೆಂಟ್ ಹಾಗೂ ಕಬ್ಬಿಣ ಕುಸಿದಿದೆ. ಸ್ಥಳದಲ್ಲಿದ್ದ ಕಾರ್ಮಿಕರು ಗಾಯಗೊಂಡಿದ್ದಾರೆ. ಗಾಯಗೊಂಡವರ ಪೈಕಿ ಐವರ ಸ್ಥತಿ ಗಂಭೀರವಾಗಿದೆ. ಅವರನ್ನು ಬೆಂಗಳೂರಿನ ಆಸ್ಪತ್ರೆಗೆ ರವಾನಿಸಲಾಗಿದೆ ಎಂದು ಸ್ಥಳದಲ್ಲಿ ಕೆಲಸ ಮಾಡುವ ಕಾರ್ಮಿಕರೊಬ್ಬರು ತಿಳಿಸಿದ್ದಾರೆ.

Leave a Reply

error: Content is protected !!
LATEST
ಪತ್ನಿ ಜೊತೆ 40 ವರ್ಷಗಳ ಹಿಂದೆ ಕೋಪ ಮಾಡಿಕೊಂಡಿದ್ದ ಪತಿ- ಸಾಯುವ ವೇಳೆಯೂ ಮಾತಾಡಲಿಲ್ಲ ! ಬೆಳಗಾವಿ: ಸವದತ್ತಿ ಯಲ್ಲಮ್ಮ ದೇವಿಯ ಹುಂಡಿಯಲ್ಲಿ 2 ತಿಂಗಳಲ್ಲೇ₹ 1.96 ಕೋಟಿ ಕಾಣಿಕೆ ಸಂಗ್ರಹ ಕಡ್ಡಾಯವಾಗಿ ಮಣ್ಣಿನ ಪರೀಕ್ಷೆ ಮಾಡಿಸಿ: ಕೃಷಿ ಇಲಾಖೆ ಸಹಾಯಕ ನಿರ್ದೇಶಕ ಪ್ರಸಾದ್ ಕೆ.ಆರ್‌.ಪೇಟೆ: ಚೌಡೇಶ್ವರಿ ಅಮ್ಮನವರ ದೇಗುಲದಲ್ಲಿ ಆಷಾಢ ಶುಕ್ರವಾರ ಸಂಭ್ರಮ ಸಂಸತ್‌ನಲ್ಲಿ ಕನ್ನಡಿಗರ ಪರ ಧ್ವನಿ ಎತ್ತಿ: ರಾಜ್ಯದ ಎನ್‌ಡಿಎ ಸಂಸದರಿಗೆ ಎಎಪಿಯ ಡಾ. ಮುಖ್ಯಮಂತ್ರಿ ಚಂದ್ರು ಆಗ್ರಹ “ಶಕ್ತಿ" ಯೋಜನೆಯಿಂದ ಸಾರಿಗೆ ನಿಗಮಗಳ ಆದಾಯ ಹೆಚ್ಚಾಗಿದೆ- ಆದರೆ ನೌಕರರಿಗೆ ವೇತನಕೊಡಲು ಹಣವಿಲ್ಲ- ಎಂಥಾ ಹೇಳಿಕೆ ಇದು ಸಾ... KRS ಭರ್ತಿ: ಅಣೆಕಟ್ಟೆಯಿಂದ ಒಂದು ಲಕ್ಷ ಕ್ಯುಸೆಕ್‌ಗೂ ಅಧಿಕ ಪ್ರಮಾಣದ ನೀರು ಬಿಡುಗಡೆ- ಕಾವೇರಿ ಕೊಳ್ಳದ ಜನರಿಗೆ ಎಚ್ಚರಿ... ಪೊಲೀಸರ ಮೇಲೆ ಹಲ್ಲೆ ಮಾಡಿ ಪರಾರಿಗೆ ಯತ್ನ: ಕಳ್ಳನ ಹೆಡೆಮುರಿಕಟ್ಟಿದ ಮಹಿಳಾ ಎಸ್‌ಐ ಕೃಷ್ಣರಾಜಪೇಟೆ: ಶ್ರೀ ಚೌಡೇಶ್ವರಿ ಅಮ್ಮನವರ ಕರಗ ಮಹೋತ್ಸವ ಅದ್ದೂರಿ ಬೆಳಗಾವಿ: ಸವದತ್ತಿ ಯಲ್ಲಮ್ಮ ದೇವಿಯ ಹುಂಡಿಗೆ ಹರಿದು ಬಂತು ಕೋಟಿ ಕೋಟಿ ಹಣ