Please assign a menu to the primary menu location under menu

NEWSನಮ್ಮಜಿಲ್ಲೆನಮ್ಮರಾಜ್ಯ

ಅನುಚಿತ ಪ್ರಭಾವ – ಬಿಜೆಪಿ ಅಭ್ಯರ್ಥಿ ಡಾ.ಕೆ.ಸುಧಾಕರ್ ವಿರುದ್ಧ ಎಫ್‌ಐಆರ್‌ ದಾಖಲು

ವಿಜಯಪಥ ಸಮಗ್ರ ಸುದ್ದಿ

ನೆಲಮಂಗಲ: ಆದಾಯ ತೆರಿಗೆ ಇಲಾಖೆ ಅಧಿಕಾರಿಗಳು ಬಿಜೆಪಿ ಮುಖಂಡ, ಚಿಕ್ಕಬಳ್ಳಾಪುರ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಡಾ. ಕೆ.ಸುಧಾಕರ್ ಆಪ್ತ, ಬಿಜೆಪಿಯ ಮಾಜಿ ಜಿಲ್ಲಾಧ್ಯಕ್ಷ ಮಾದಾವರ ಗೋವಿಂದಪ್ಪ ಮನೆ ಮೇಲೆ ದಾಳಿ ಮಾಡಿ, 4.82 ಕೋಟಿ ಹಣವನ್ನು ಜಪ್ತಿ ಮಾಡಿದ್ದರು.

ಅಧಿಕಾರಿಗಳು ಹಣ ಜಪ್ತಿ ಮಾಡಿಕೊಂಡ ಬಳಿಕ ಬೆಂಗಳೂರು ಉತ್ತರ ತಾಲೂಕಿನ ಚುನಾವಣಾ ನೋಡೆಲ್ ಅಧಿಕಾರಿ ಮುನೀಶ್ ಮೌದ್ಗಿಲ್ ಅವರಿಗೆ ಅಭ್ಯರ್ಥಿ ಸುಧಾಕರ್ ವಾಟ್ಸಪ್ ಕರೆ ಮಾಡಿ, “ಗೋವಿಂದಪ್ಪ ಅವರಿಗೆ ಸಹಾಯ ಮಾಡಿ, ಅಲ್ಲದೆ ಹಣವನ್ನು ವಾಪಸ್‌ ಕೊಡಿಸುವಂತೆ” ಹೇಳಿದ್ದಾರೆ.

ಜತೆಗೆ ಗೋವಿಂದಪ್ಪ ಕೂಡ ಮುನೀಶ್ ಮೌದ್ಗಿಲ್ ಅವರಿಗೆ ವಾಟ್ಸಪ್​ ಮೂಲಕ “Please Help will we great full to you” ಎಂದು ಸಂದೇಶ ಕಳುಹಿಸಿದ್ದಾರೆ. ಈ ವಿಚಾರವಾಗಿ ಸಾಕ್ಷಿ ಸಮೇತ ಮುನೀಶ್ ಮೌದ್ಗಿಲ್ ಅವರು ಆದಾಯ ತೆರಿಗೆ ಇಲಾಖೆ ಅಧಿಕಾರಿಗಳಿಗೆ ನೀಡಿದ್ದರು. ಬಳಿಕ ಎಸ್​ಎಸ್​ಟಿ ತಂಡದ ಮುಖ್ಯಸ್ಥ ದಶರಥ್​ ವಿ. ಕಂಬಾರ್ ಮಾದನಾಯಕನಹಳ್ಳಿ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ.

ಸುಧಾಕರ್ ವಿರುದ್ಧ ಅನುಚಿತ ಪ್ರಭಾವ, ಲಂಚ ಮತ್ತು ಭ್ರಷ್ಟಾಚಾರದ ಪ್ರಯತ್ನ ಮಾಡಿದ್ದಕ್ಕಾಗಿ RP ಕಾಯಿದೆ 1951ರ ಅಡಿಯಲ್ಲಿ ಸೆಕ್ಷನ್ 171ಇ (ಲಂಚ ಸ್ವೀಕಾರ), 171ಎಫ್​ (ಚುನಾವಣೆಯಲ್ಲಿ ಅನಪೇಕ್ಷಿತ ಪ್ರಭಾವ ಬೀರುವಿಕೆ) 171ಬಿ (ಮತದಾರರಿಗೆ ಹಣದ ಆಮಿಷ), 171ಸಿ (ಚುನಾವಣೆ ಕರ್ತವ್ಯಕ್ಕೆ ಅಡ್ಡಿ ಹಾಗೂ ಹಸ್ತಕ್ಷೇಪ) ಆರೋಪದಡಿ ಎಫ್​ಐಆರ್ ದಾಖಲಾಗಿದೆ.

ದಾಳಿ ನಡೆದಿದ್ದು ಹೇಗೆ?: ಗೋವಿಂದಪ್ಪನವರ ನೆಲಮಂಗಲದ ಮನೆಯಲ್ಲಿ ಹಣ ಇದೆ ಎಂದು ಮಾಹಿತಿ ತಿಳಿಯುತ್ತಿದ್ದಂತೆಯೇ ಐಟಿ ಅಧಿಕಾರಿಗಳು ಶುಕ್ರವಾರ (ಏ.25) ದಾಳಿ ಮಾಡಿದ್ದರು. 10 ಜನ ಐಟಿ ಅಧಿಕಾರಿಗಳು ಮನೆಯ ಇಂಚಿಂಚು ಪರಿಶೀಲನೆ ಮಾಡಿದ್ದರು. ಈ ವೇಳೆ ಕೋಟ್ಯಂತರ ರೂಪಾಯಿ ನಗದು ಹಣ ಹಾಗೂ ಚಿನ್ನಾಭರಣೆ ಪತ್ತೆಯಾಗಿತ್ತು.

ಕೂಡಲೇ ಐಟಿ ಸಿಬ್ಬಂದಿ ಹಣ ಎಣಿಕೆ ಮೆಷಿನ್ ಹಾಗೂ ಚಿನ್ನಭರಣ ತೂಕದ ಮೆಷಿನ್ ತೆಗೆದುಕೊಂಡು ಬಂದು ಎಣಿಕೆ ಮಾಡಿದ್ದು, ಮನೆಯಲ್ಲಿ ದಾಖಲೆ ಇಲ್ಲದೆ ಪತ್ತೆಯಾದ ಬರೋಬ್ಬರಿ 4 ಕೋಟಿ 80ಲಕ್ಷ ರೂ. ಹಣ ವಶಕ್ಕೆ ಪಡೆದುಕೊಂಡಿದ್ದರು. ಈ ಹಣವನ್ನು ಚುನಾವಣೆ ಸಂದರ್ಭದಲ್ಲಿ ಮತದಾರರಿಗೆ ಹಂಚಲೆಂದು ಸಂಗ್ರಹಿಸಲಾಗಿತ್ತು ಎನ್ನಲಾಗಿದೆ.

Leave a Reply

error: Content is protected !!
LATEST
Kho Kho World Cup 2025: ತಿ.ನರಸೀಪುರದ ಚೈತ್ರಾ ನಾಡು, ದೇಶದ ಕೀರ್ತಿಯ ಮುಗಿಲೆತ್ತೆಕ್ಕೆ ಹಾರಿಸಿದ ಅಪ್ಪಟ ಗ್ರಾಮೀಣ ಪ... ಜಗಜಿತ್ ದಲೈವಾಲ 53 ದಿನಗಳ ಉಪವಾಸ ಕೈ ಬಿಟ್ಟು ಚಿಕಿತ್ಸೆಗೆ ಒಪ್ಪಿಗೆ ನೀಡಿರುವುದು ಸ್ವಾಗತಾರ್ಹ: ಕುರುಬೂರ್ ಶಾಂತಕುಮಾರ್ KSRTC ಬಸ್‌ ಬ್ರೇಕ್‌ ವೈಫಲ್ಯಗೊಂಡು ಪಲ್ಟಿ: 30ಕ್ಕೂ ಹೆಚ್ಚು ಮಂದಿಗೆ ಗಾಯ BMTC ಎಲೆಕ್ಟ್ರಿಕ್ ಬಸ್ ಬ್ರೇಕ್ ವೈಫಲ್ಯ: ಡಾಬಾ, ಬೀಡಾ ಅಂಗಡಿಗೆ ಡಿಕ್ಕಿ KSRTC: ಅಧಿಕಾರಿಗಳು, ಸಿಬ್ಬಂದಿಗಳಿಗೂ ಕಿರುಕುಳ ನೀಡುತ್ತಿದ್ದ ಸಂಚಾರಿ ನಿರೀಕ್ಷಕ ಉಮೇಶ್‌  ವಜಾ- ಸಿಟಿಎಂ ಆದೇಶ ಬೆಂಗಳೂರಿನಲ್ಲಿ ಶಾಲೆ ಕಲಿತ ಆ ದಿನಗಳ ಕನ್ನಡದಲ್ಲೇ ಬ್ಯಾಂಕಾಕ್‌ನಲ್ಲಿ ಮೆಲುಕುಹಾಕಿದ ಸೂಪರ್‌ಸ್ಟಾರ್‌ ರಜನಿಕಾಂತ್ KSRTC ನೌಕರರಿಗೆ ಉಚಿತ ಚಿಕಿತ್ಸೆ ನೀಡದಿದ್ದರೆ ಅಂಥ ಆಸ್ಪತ್ರೆಗಳು ಹೊರಕ್ಕೆ: ಅಧಿಕಾರಿಗಳ ಎಚ್ಚರಿಕೆ KSRTC: ನೌಕರರಿಗೆ ಸರಿ ಸಮಾನ ವೇತನ ಕೊಡುವುದು ಸರ್ಕಾರದ ಆದ್ಯ ಕರ್ತವ್ಯ-ಬೈರೇಗೌಡ KSRTC: ಗೊಂದಲದ ನಡುವೆಯೂ 1280 ಸಿಬ್ಬಂದಿಗಳಿಗೆ ಆರೋಗ್ಯ ಸೇವೆ ಮದುವೆಗೆ ಒಪ್ಪಿ ಬಳಿಕ ತಿರಸ್ಕರಿಸಿದ ಪ್ರಿಯತಮೆ: ಕೋಪಗೊಂಡು ಇರಿದ ಪ್ರಿಯತಮ