NEWSದೇಶ-ವಿದೇಶನಮ್ಮರಾಜ್ಯ

ಕೇಂದ್ರ ಬಜೆಟ್: ರಾಜ್ಯಕ್ಕೆ ಉಂಡೆನಾಮ ಹಾಕಿದ ನಿರ್ಮಲಾ ಸೀತಾರಾಮನ್ ವಿರುದ್ಧ ನಾಳೆ ಚೊಂಬು ಹಿಡಿದು ಪ್ರತಿಭಟನೆ – ಮೋಹನ್ ದಾಸರಿ

ವಿಜಯಪಥ ಸಮಗ್ರ ಸುದ್ದಿ

ಬೆಂಗಳೂರು: ಮೋದಿ ಮೂರನೇ ಬಾರಿ ಅಧಿಕಾರ ಹಿಡಿದ ಬಳಿಕ ಮಂಡಿಸಿದ ಕೇಂದ್ರ ಬಜೆಟ್‌ನಲ್ಲಿ ರಾಜ್ಯಕ್ಕೆ ಭಾರಿ ಅನ್ಯಾಯ ಮಾಡಲಾಗಿದೆ. ಕರ್ನಾಟಕದಿಂದ ರಾಜ್ಯಸಭೆಗೆ ಆಯ್ಕೆಯಾದ ಸಚಿವೆ ನಿರ್ಮಲಾ ಸೀತಾರಾಮನ್‌ ರಾಜ್ಯಕ್ಕೆ ಉಂಡೆನಾಮ ಹಾಕಿದ್ದಾರೆ ಎಂದು ಆಮ್ ಆದ್ಮಿ ಪಾರ್ಟಿ ರಾಜ್ಯ ಸಂಘಟನಾ ಕಾರ್ಯದರ್ಶಿ ಮೋಹನ್ ದಾಸರಿ ಕಿಡಿ ಕಾರಿದ್ದಾರೆ.

ಕೇಂದ್ರ ಬಜೆಟ್‌ ಬಗ್ಗೆ ಪ್ರತಿಕ್ರಿಯೆ ನೀಡಿದ ಅವರು, ಮೇಕೆದಾಟು ಸಮಾನಾಂತರ ಯೋಜನೆ, ಭದ್ರಾ ಮೇಲ್ದಂಡೆ ಯೋಜನೆ, ಕಳಸಾ ಬಂಡೂರಿ ಕುಡಿಯುವ ನೀರಿನ ಯೋಜನೆ ಬಗ್ಗೆ ಯಾವುದೇ ಪ್ರಸ್ತಾಪ ಮಾಡದೆ ರಾಜ್ಯಕ್ಕೆ ನಾಮ ಹಾಕಲಾಗಿದೆ ಎಂದು ಹೇಳಿದರು.

ರಾಯಚೂರಿನಲ್ಲಿ ಏಮ್ಸ್ ಸ್ಥಾಪನೆ ಬಗ್ಗೆ ನಿರೀಕ್ಷೆ ಇಟ್ಟುಕೊಳ್ಳಲಾಗಿತ್ತು, ಅದಕ್ಕೂ ಕೇಂದ್ರ ಸರ್ಕಾರ ಎಳ್ಳುನೀರು ಬಿಟ್ಟಿದೆ. ಬೆಂಗಳೂರಿನಲ್ಲಿ 60 ಕಿಮೀ ಸುರಂಗ ರಸ್ತೆ ನಿರ್ಮಾಣದ ಬಗ್ಗೆ ಕೂಡ ಪ್ರಸ್ತಾಪ ಮಾಡಿಲ್ಲ ಎಂದರು.

ಬಿಡದಿ ಕೈಗಾರಿಕಾ ಪ್ರದೇಶಕ್ಕೆ ಮೆಟ್ರೋ ಮಾರ್ಗ ವಿಸ್ತರಣೆ ಮಾಡುವ ಬಗ್ಗೆ ಮತ್ತು 44.65 ಕಿ.ಮೀ ಉದ್ದದ ಮೂರನೇ ಹಂತದ ಮೆಟ್ರೋ ಹಂತದ ವಿಸ್ತರಣೆ ಬಗ್ಗೆ ಕೂಡ ಬಜೆಟ್‌ನಲ್ಲಿ ಯಾವುದೇ ಪ್ರಸ್ತಾಪ ಮಾಡಿಲ್ಲ. 37 ಕಿ.ಮೀ. ಹೆಬ್ಬಾಳ-ಸರ್ಜಾಪುರ ಯೋಜನೆಗೆ ಕೂಡ ಉಂಡೇನಾಮ ಹಾಕಿದ್ದಾರೆ ಎಂದರು.

ರಾಜ್ಯ ಸರ್ಕಾರದ ಹೊಸ ಹೆದ್ದಾರಿ ಯೋಜನೆಗಳಾದ ಗುಂಡ್ಲುಪೇಟೆ, ನಂಜನಗೂಡು ಮತ್ತಯ ಮೈಸೂರು ಮೂಲಕ ಕೊಳ್ಳೆಗಾಲ-ಕೇರಳ ಸಂಪರ್ಕಿಸುವ ರಾಷ್ಟ್ರೀಯ ಹೆದ್ದಾರಿ 766 ಅಗಲೀಕರಣ ಯೋಜನೆಯನ್ನು ಕಡೆಗಣಿಸಲಾಗಿದೆ ಎಂದು ಮೋಹನ್ ದಾಸರಿ ಆಕ್ರೋಶ ವ್ಯಕ್ತಪಡಿಸಿದರು.

ಪ್ರತಿ ವರ್ಷ 2 ಕೋಟಿ ಉದ್ಯೋಗ ಸೃಷ್ಟಿ ಮಾಡುತ್ತೇನೆ ಎಂದಿದ್ದ ಪ್ರಧಾನಿ ನರೇಂದ್ರ ಮೋದಿ ಬಳಿಕ ಪಕೋಡ ಮಾಡಿ ಎಂದಿದ್ದರು. ಈಗ ಪ್ರತಿ ವರ್ಷ 75 ಲಕ್ಷ ಉದ್ಯೋಗ ಸೃಷ್ಟಿಸುವುದಾಗಿ ಹೇಳುವ ಮೂಲಕ ವೈಫಲ್ಯವನ್ನು ಒಪ್ಪಿಕೊಂಡಿದ್ದಾರೆ ಎಂದರು.

75 ಲಕ್ಷ ಉದ್ಯೋಗ ಕೊಡುತ್ತೇನೆ ಎನ್ನುವ ಇವರು ಪ್ರತಿ ವರ್ಷ 4 ಕೋಟಿ ವಿದ್ಯಾರ್ಥಿಗಳಿಗೆ ಸ್ಕಿಲ್ ತರಬೇತಿ ಕೊಡುವುದಾಗಿ ಹೇಳಿದ್ದಾರೆ ಉಳಿದ 3.25 ಕೋಟಿ ಮಂದಿ ಏನು ಮಾಡಬೇಕು ಎಂದರು.

ರೈತರ ಆದಾಯ ದ್ವಿಗುಣವಾಗಿಲ್ಲ, ಭಾರತ ಇನ್ನೂ ಗುಡಿಸಲು ಮುಕ್ತವಾಗಿಲ್ಲ, 370 ಕಾಯಿದೆ ಮೂಲಕ ವಿಶೇಷ ಸ್ಥಾನಮಾನ ನೀಡಿದ ಜಮ್ಮು ಮತ್ತು ಕಾಶ್ಮೀರ ಇನ್ನೂ ಉಗ್ರರಿಂದ ಮುಕ್ತವಾಗಿಲ್ಲ, ಪ್ರತಿ ಮನೆಗೂ ವಿದ್ಯುತ್ ಕೊಟ್ಟಿಲ್ಲ ಇದೆಲ್ಲವೂ ಮೋದಿ ಸರ್ಕಾರದ ವೈಫಲ್ಯಕ್ಕೆ ಹಿಡಿದ ಕೈಗನ್ನಡಿ, 100 ಸ್ಮಾರ್ಟ್ ಸಿಟಿ ನಿರ್ಮಾಣ ಮಾಡುವುದಾಗಿ ಮೋದಿ ಮತ್ತೊಂದು ಟೋಪಿ ಹಾಕಿದ್ದಾರೆ ಎಂದರು.

ಎಲ್ಲಿ ಸರ್ಕಾರ ಬೀಳುತ್ತದೋ ಎನ್ನುವ ಭಯದಲ್ಲಿ ಬಿಹಾರ ಮತ್ತು ಆಂಧ್ರಪ್ರದೇಶಕ್ಕೆ ಹೆಚ್ಚಿನ ಅನುದಾನ ನೀಡಲಾಗಿದೆ. ಇವರಿಗೆ ಸರ್ಕಾರ ಭದ್ರಪಡಿಸಿಕೊಳ್ಳಬೇಕೆ ಹೊರತು ಅಭಿವೃದ್ಧಿ ಬೇಕಿಲ್ಲ ಎನ್ನುವುದು ಸಾಬೀತಾಗಿದೆ ಎಂದರು.

ತೆರಿಗೆ ವಿನಾಯಿತಿ ಸಿಗುತ್ತದೆ ಎಂದು ಕಾಯುತ್ತಿದ್ದು ಮಧ್ಯಮ ವರ್ಗದವರಿಗೆ ನಿರಾಸೆ ಮಾಡಿದ್ದಾರೆ. ಸ್ಟಾಡಂರ್ಡ್ ಡಿಡಕ್ಷನ್ ಮಿತಿಯನ್ನು 50,000 ರೂ. ಗಳಿಂದ 75,000 ರೂ. ಗಳಿಗೆ ಮಾಡಿರುವುದಕ್ಕೆ ಮಧ್ಯಮ ವರ್ಗ ವಿರೋಧ ವ್ಯಕ್ತಪಡಿಸಿದೆ ಎಂದರು.

ಕೇಂದ್ರ ಬಜೆಟ್‌ನಲ್ಲಿ ಕರ್ನಾಟಕ ರಾಜ್ಯವನ್ನು ಕಡೆಗಣಿಸಿರುವುದನ್ನು ವಿರೋಧಿಸಿ ನಾಳೆ 24-7-2024 ಬೆಳಗ್ಗೆ 11 ಗಂಟೆಗೆ (ಬುಧವಾರ) ಬೆಂಗಳೂರು ನಗರದ ಫ್ರೀಡಂ ಪಾರ್ಕ್‌ನಲ್ಲಿ ಚೊಂಬು ಹಿಡಿದು ಪ್ರತಿಭಟನೆ ಮಾಡುತ್ತೇವೆ ಎಂದು ಹೇಳಿದ್ದಾರೆ.

Leave a Reply

error: Content is protected !!
LATEST
ಮೈತ್ರಿ ತೆಕ್ಕೆಗೆ ಬನ್ನೂರು ಪುರಸಭೆ: ಜೆಡಿಎಸ್‌ಗೆ ಅಧ್ಯಕ್ಷ ಗದ್ದುಗೆ, ಬಿಜೆಪಿಗೆ ಉಪಾಧ್ಯಕ್ಷ ಗಾದಿ ರಾಜ್ಯದ ಆರು ಪ್ರತ್ಯೇಕ ಸ್ಥಳಗಳಲ್ಲಿ ಅಪಘಾತ: 13 ಮಂದಿ ಸಾವು, ಹಲವರಿಗೆ ಗಾಯ ಯಡಿಯೂರು ಕೆರೆ: ಗಣಪತಿ ವಿಸರ್ಜನಾ ಕಲ್ಯಾಣಿಗೆ ನೀರು ತುಂಬಿಸಿದ ಬಿಬಿಎಂಪಿ ತಂದೆ ನಿಧನರಾದ ದುಃಖದಲ್ಲಿರುವ ನೌಕರನಿಗೆ ರಜೆ ಕೊಡದೆ ಗೈರು ತೋರಿಸಿದ್ದು ಅಲ್ಲದೆ ಕಾರಣ ಕೇಳಿ ನೋಟಿಸ್‌ ಕೊಟ್ಟ ಅಧಿಕಾರಿ... KKRTC ಬಸ್‌-ಶಾಲಾ ಬಸ್‌ ಮುಖಾಮುಖಿ ಡಿಕ್ಕಿ: ಇಬ್ಬರು ಮೃತ- 25ಕ್ಕೂ ಹೆಚ್ಚು ಮಕ್ಕಳಿಗೆ ಗಾಯ KSRTC: 38 ತಿಂಗಳ ವೇತನ ಹೆಚ್ಚಳ ಹಿಂಬಾಕಿಗೆ ಆಗ್ರಹಿಸಿ BMS ಪ್ರತಿಭಟನೆ- ಸರ್ಕಾರದ ವಿರುದ್ಧ ಕಿಡಿ MSRTC: ನೌಕರರ ಮುಷ್ಕರಕ್ಕೆ ಮಣಿದು 6500 ರೂ. ವೇತನ ಹೆಚ್ಚಳಕ್ಕೆ ಒಪ್ಪಿದ ಸರ್ಕಾರ- ಧರಣಿ ವಾಪಸ್‌ MSRTC: ತೀವ್ರಗೊಂಡ ನೌಕರರ ಮುಷ್ಕರ- 11 ಸಂಘಟನೆಗಳ ಒಗ್ಗಟ್ಟು- ನಿಗಮಕ್ಕೆ ನಡುಕ ಚಾಮುಂಡಿಬೆಟ್ಟದಲ್ಲಿ ಧೂಮಪಾನ, ಮದ್ಯಪಾನ, ಗುಟ್ಕಾ ನಿಷೇಧ: ಸಿಎಂ ಘೋಷಣೆ ಪೋಡಿ ಮುಕ್ತ ಅಭಿಯಾನ, ಪೌತಿ ಖಾತೆ ಆಂದೋಲನಕ್ಕೆ ಕ್ರಮ: ಕಂದಾಯ ಸಚಿವ ಕೃಷ್ಣ ಬೈರೇಗೌಡ