Please assign a menu to the primary menu location under menu

NEWSದೇಶ-ವಿದೇಶನಮ್ಮರಾಜ್ಯ

8ನೇ ಬಾರಿ ಬಜೆಟ್ ಮಂಡಿಸಿ ಇತಿಹಾಸ ಬರೆಯಲು ಸಜ್ಜಾದ ಕೇಂದ್ರ ಸಚಿವೆ ನಿರ್ಮಲಾ ಸೀತಾರಾಮನ್

ವಿಜಯಪಥ ಸಮಗ್ರ ಸುದ್ದಿ

ನ್ಯೂಡೆಲ್ಲಿ: ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರು ಶುಕ್ರವಾರ ಅಂದರೆ ಇಂದು 11 ಗಂಟೆಗೆ ತಮ್ಮ ಸತತ 8ನೇ ಬಜೆಟ್ ಮಂಡಿಸಿ ದಾಖಲೆ ಬರೆಯಲು ಸಜ್ಜಾಗಿದ್ದಾರೆ. ಈ ಮೂಲಕ ಸಂಸತ್ ಇತಿಹಾಸದಲ್ಲೇ ಹೆಚ್ಚು ಬಜೆಟ್ ಮಂಡಿಸಿದ ಮಹಿಳಾ ಹಣಕಾಸು ಮಂತ್ರಿ ಎಂಬ ಹೆಗ್ಗಳಿಕೆಗೆ ಪಾತ್ರವಾಗಲಿದ್ದಾರೆ.

ಫೆ.1 ರಂದು ಸೀತಾರಾಮನ್ ಅವರು 8ನೇ ಬಜೆಟ್ ಮಂಡಿಸಲಿದ್ದು, ಇದು ಭಾರತದ ಸಂಸದೀಯ ಇತಿಹಾಸದಲ್ಲಿ ಹೊಸ ದಾಖಲೆಯಾಗಲಿದೆ. ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಎನ್‌ಡಿಎ ಸರ್ಕಾರದಲ್ಲಿ ಹಣಕಾಸು ಮಂತ್ರಿಯಾಗಿರುವ ನಿರ್ಮಲಾ ಸೀತಾರಾಮನ್ ಅವರು ಇದುವರೆಗೆ 7 ಬಜೆಟ್ ಮಂಡಿಸಿದ್ದಾರೆ.

ಇನ್ನು ಇಂದು 8ನೇ ಬಜೆಟ್ ಮಂಡಿಸಿ ದಾಖಲೆ ಬರೆಯಲಿದ್ದಾರೆ. 2019, 2020, 2021, 2022, 2023, 2024 (ಮಧ್ಯಂತರ ಬಜೆಟ್), 2024 (ಪೂರ್ಣ ಬಜೆಟ್) ಅವಧಿಯಲ್ಲಿ ಬಜೆಟ್ ಮಂಡಿಸಿದ್ದಾರೆ. ಈ ಮೂಲಕ ಕೇಂದ್ರದಲ್ಲಿ ಮಹಿಳಾ ಹಣಕಾಸು ಸಚಿವರಾಗಿ 8ನೇ ಬಾರಿಗೆ ಬಜೆಟ್‌ ಮಂಡಿಸುತ್ತಿರುವ ಹೆಗ್ಗಳಿಕೆಗೆ ಪಡೆಯುತ್ತಿದ್ದಾರೆ.

ಮೊರಾರ್ಜಿ ದೇಸಾಯಿ – 10 ಬಜೆಟ್: ಪ್ರಧಾನಿ ಜವಾಹರಲಾಲ್ ನೆಹರೂ ಮತ್ತು ನಂತರ ಪ್ರಧಾನಿ ಲಾಲ್ ಬಹದ್ದೂರ್ ಶಾಸ್ತ್ರಿ ನೇತೃತ್ವದ ಸರ್ಕಾರದ ಅವಧಿಯಲ್ಲಿ ಹಣಕಾಸು ಸಚಿವರಾಗಿದ್ದ ಮಾಜಿ ಪ್ರಧಾನಿ ಮೊರಾರ್ಜಿ ದೇಸಾಯಿ ಅವರು ಅತಿ ಹೆಚ್ಚು ಬಜೆಟ್ ಮಂಡಿಸಿದ ದಾಖಲೆಯನ್ನು ಹೊಂದಿದ್ದಾರೆ.

ಮೊರಾರ್ಜಿ ದೇಸಾಯಿ ಅವರು ಒಟ್ಟು 10 ಬಜೆಟ್ ಮಂಡಿಸಿದ್ದಾರೆ. 1959ರ ಫೆಬ್ರವರಿ 28 ರಂದು ತಮ್ಮ ಮೊದಲ ಬಜೆಟ್ ಮಂಡಿಸಿದರು. 1962 ರಲ್ಲಿ ಮಧ್ಯಂತರ ಬಜೆಟ್ ಮಂಡಿಸುವ ಮೊದಲು ಎರಡು ವರ್ಷಗಳಲ್ಲಿ ಪೂರ್ಣ ಬಜೆಟ್ ಮಂಡಿಸಿದ್ದರು. ಇದರ ನಂತರ ಎರಡು ಪೂರ್ಣ ಬಜೆಟ್‌ಗಳು ಮಂಡನೆಯಾದವು.

ನಾಲ್ಕು ವರ್ಷಗಳ ನಂತರ, ಅವರು 1967 ರಲ್ಲಿ ಮತ್ತೊಂದು ಮಧ್ಯಂತರ ಬಜೆಟ್ ಅನ್ನು ಮಂಡಿಸಿದರು. ನಂತರ 1967, 1968 ಮತ್ತು 1969 ರಲ್ಲಿ ಮೂರು ಪೂರ್ಣ ಬಜೆಟ್‌ಗಳನ್ನು ಮಂಡಿಸಿದರು. ಈ ಮೂಲಕ ಒಟ್ಟು 10 ಬಜೆಟ್‌ಗಳನ್ನು ಮಂಡಿಸಿದ್ದಾರೆ.

ಚಿದಂಬರಂ – 9 ಬಜೆಟ್: ಹಣಕಾಸು ಮಾಜಿ ಸಚಿವ ಪಿ. ಚಿದಂಬರಂ ಒಂಬತ್ತು ಬಾರಿ ಬಜೆಟ್ ಮಂಡಿಸಿದ್ದಾರೆ. ಅವರು ಮೊದಲ ಬಾರಿಗೆ 1996ರ ಮಾರ್ಚ್ 19 ರಂದು ಪ್ರಧಾನಿ ಎಚ್.ಡಿ. ದೇವೇಗೌಡ ನೇತೃತ್ವದ ಯುನೈಟೆಡ್ ಫ್ರಂಟ್ ಸರ್ಕಾರದ ಅವಧಿಯಲ್ಲಿ ಬಜೆಟ್ ಮಂಡಿಸಿದರು. ಮುಂದಿನ ವರ್ಷ ಅದೇ ಸರ್ಕಾರದ ಅಡಿಯಲ್ಲಿ ಅವರು ಮತ್ತೊಂದು ಬಜೆಟ್ ಮಂಡಿಸಿದರು.

2014 ರಲ್ಲಿ ಕಾಂಗ್ರೆಸ್ ನೇತೃತ್ವದ ಯುಪಿಎ ಅಧಿಕಾರಕ್ಕೆ ಬಂದಾಗ ಬಜೆಟ್ ಮಂಡನೆ ಮಾಡಿದರು. 2004 ಮತ್ತು 2008 ರ ನಡುವೆ ಅವರು ಐದು ಬಜೆಟ್ ಮಂಡಿಸಿದರು. ಕೇಂದ್ರ ಗೃಹ ಸಚಿವರಾಗಿ ಅಲ್ಪ ಅವಧಿ ಸೇವೆ ಸಲ್ಲಿಸಿದರು. ಮತ್ತೆ ಹಣಕಾಸು ಸಚಿವಾಲಯಕ್ಕೆ ಮರಳಿ, 2013 ಮತ್ತು 2014 ರಲ್ಲಿ ಬಜೆಟ್ ಮಂಡಿಸಿದ್ದಾರೆ. ಪಾರ್ಲಿಮೆಂಟ್‌ನಲ್ಲಿ ಅತಿ ಹೆಚ್ಚು ಬಜೆಟ್ ಮಂಡಿಸಿದವರ ಪೈಕಿ ಚಿದಂಬರಂ 2ನೇ ಸ್ಥಾನದಲ್ಲಿದ್ದಾರೆ.

ಪ್ರಣಬ್ ಮುಖರ್ಜಿ – 8 ಬಜೆಟ್: ಪ್ರಣಬ್ ಮುಖರ್ಜಿ ಅವರು ಹಣಕಾಸು ಸಚಿವರಾಗಿದ್ದ ಅವಧಿಯಲ್ಲಿ ಎಂಟು ಬಜೆಟ್‌ಗಳನ್ನು ಮಂಡಿಸಿದ್ದಾರೆ. ಕಾಂಗ್ರೆಸ್ ನೇತೃತ್ವದ ಸರ್ಕಾರದಲ್ಲಿ ಅವರು 1982, 1983 ಮತ್ತು 1984 ರಲ್ಲಿ ಆಯವ್ಯಯ ಮಂಡಿಸಿದ್ದರು. 2009 ರಿಂದ 2012ರ ನಡುವೆ ಯುಪಿಎ ಸರ್ಕಾರದ ಅವಧಿಯಲ್ಲಿ ಸತತ ಐದು ಬಜೆಟ್‌ಗಳನ್ನು ಮಂಡಿಸಿದ್ದಾರೆ.

ದೇಶ್‌ಮುಖ್ – 7 ಬಜೆಟ್: ಭಾರತೀಯ ರಿಸರ್ವ್ ಬ್ಯಾಂಕ್ (ಆರ್‌ಬಿಐ)ನ ಮೊದಲ ಭಾರತೀಯ ಗವರ್ನರ್ ಸಿ.ಡಿ. ದೇಶ್‌ಮುಖ್ ಅವರು 7 ಬಜೆಟ್‌ಗಳನ್ನು ಮಂಡಿಸಿದ್ದಾರೆ. ಮೊದಲ, ಎರಡನೇ ಪಂಚವಾರ್ಷಿಕ ಯೋಜನೆಗಳ ಸೂತ್ರೀಕರಣ ಮತ್ತು ಅನುಷ್ಠಾನದಲ್ಲಿ ಅವರು ನಿರ್ಣಾಯಕ ಪಾತ್ರ ವಹಿಸಿದ್ದರು.

ಯಶವಂತ್ ಸಿನ್ಹಾ – 7 ಬಜೆಟ್: ಪ್ರಧಾನಿ ಅಟಲ್ ಬಿಹಾರಿ ವಾಜಪೇಯಿ ನಾಯಕತ್ವದ, ಬಿಜೆಪಿ ನೇತೃತ್ವದ ಎನ್‌ಡಿಎ ಸರ್ಕಾರದಲ್ಲಿ ಯಶವಂತ್ ಸಿನ್ಹಾ ಕೂಡ 7 ಬಜೆಟ್‌ಗಳನ್ನು ಮಂಡಿಸಿದ್ದಾರೆ. ಭಾರತದ ಆರ್ಥಿಕತೆಯನ್ನು ಉದಾರೀಕರಣಗೊಳಿಸುವ ಗುರಿಯನ್ನು ಹೊಂದಿರುವ ಸುಧಾರಣೆಗಳನ್ನು ಪರಿಚಯಿಸಿದ್ದಕ್ಕಾಗಿ ಅವರ ಅಧಿಕಾರಾವಧಿಯನ್ನು ಸ್ಮರಿಸಲಾಗುತ್ತದೆ.

ಮನಮೋಹನ್ ಸಿಂಗ್ – 5 ಬಜೆಟ್: 1991 ರಿಂದ 1995 ರವರೆಗೆ ಪಿ.ವಿ.ನರಸಿಂಹ ರಾವ್ ಸರ್ಕಾರದಲ್ಲಿ ಹಣಕಾಸು ಸಚಿವರಾಗಿದ್ದಾಗ ಮಾಜಿ ಪ್ರಧಾನಿ ಮನಮೋಹನ್ ಸಿಂಗ್ ಅವರು ಸತತ ಐದು ಬಜೆಟ್‌ಗಳನ್ನು ಮಂಡಿಸಿದ್ದರು. ಅಲ್ಲದೆ ಇವರು ಪ್ರಧಾನಿಯಾಗಿದ್ದಾಗಲೂ ಕೂಡ ದೇಶದ ಪ್ರಗತಿಗೆ ಬೇಕಾದ ಹಲವಾರು ಪ್ರಮುಖ ಕ್ರಮಗಳನ್ನು ತೆಗೆದುಕೊಂಡಿದ್ದರು.

Leave a Reply

error: Content is protected !!

Discover more from VIJAYAPATHA.IN

Subscribe now to keep reading and get access to the full archive.

Continue reading

LATEST
THE UNION BUDGET 2025-26: ಮಧ್ಯಮ ವರ್ಗದವರಿಗೆ ತುಸು ನೆಮ್ಮದಿ- ರೈತರಿಗೆ ನಿರಾಸೆ 8ನೇ ಬಾರಿ ಬಜೆಟ್ ಮಂಡಿಸಿ ಇತಿಹಾಸ ಬರೆಯಲು ಸಜ್ಜಾದ ಕೇಂದ್ರ ಸಚಿವೆ ನಿರ್ಮಲಾ ಸೀತಾರಾಮನ್ ಫೆ.2ರಂದು ಇಪಿಎಸ್ ಪಿಂಚಿಣಿದಾರರ 85ನೇ ಮಾಸಿಕ ಸಭೆ: ನಂಜುಂಡೇಗೌಡ ಮಹಿಳೆಯರ ಬೆಳವಣಿಗೆಗೆ ಶ್ರಮಿಸಿದ್ದ ಇಂದಿರಾ ಗಾಂಧಿ: ಸಚಿವ ಮುನಿಯಪ್ಪ 12 ವರ್ಷದ ಬಳಿಕ ಕಾಣಿಸಿಕೊಂಡ ಕೊಹ್ಲಿ 6 ರನ್‌ ಗಳಿಸಿ ಔಟ್‌: ಕಿಕ್ಕಿರಿದು ತುಂಬಿದ್ದ ಕ್ರೀಡಾಂಗಣ..! ಚುನಾವಣೆ ಒಂದು ವಾರ ಇರುವಾಗಲೇ ಪಕ್ಷ ತೊರೆದ ಎಎಪಿಯ ಏಳು ಶಾಸಕರು ರೋಹಿತ್ ವೇಮುಲಾ ಕಾಯ್ದೆ ಜಾರಿಗೆ ಸಚಿವ ಪ್ರಿಯಾಂಕ್ ಖರ್ಗೆ ಒತ್ತಾಯ ವೈದ್ಯೆ ಅಪಹರಿಸಿ ಸಾಮೂಹಿಕ ಅತ್ಯಾಚಾರ ಪ್ರಕರಣ: ನಾಲ್ವರಿಗೆ 20 ವರ್ಷ ಕಠಿಣ ಶಿಕ್ಷೆ ಸರ್ಕಾರದ ಅತಿಥಿ ಶಿಕ್ಷಕರು, ಉಪನ್ಯಾಸಕರ ಗೌರವಧನ ಹೆಚ್ಚಳಕ್ಕೆ ಗ್ರೀನ್ ಸಿಗ್ನಲ್ KPSC ಕನ್ನಡ ಪ್ರಶ್ನೆ ಪತ್ರಿಕೇಲಿ ಸಾಲು ಸಾಲು ತಪ್ಪಿಗೆ 5 ಕೃಪಾಂಕ: ಅಭ್ಯರ್ಥಿಗಳ ಆಕ್ರೋಶ