Vijayapatha - ವಿಜಯಪಥ > NEWS > ದೇಶ-ವಿದೇಶ > ಬಿಜೆಪಿ ಪ್ರಚಾರ ಕಾರ್ಯಕ್ರಮದಲ್ಲಿ ಪ್ರಜ್ಞೆ ತಪ್ಪಿದ ಕೇಂದ್ರ ಸಚಿವ ನಿತಿನ್ ಗಡ್ಕರಿ
ಬಿಜೆಪಿ ಪ್ರಚಾರ ಕಾರ್ಯಕ್ರಮದಲ್ಲಿ ಪ್ರಜ್ಞೆ ತಪ್ಪಿದ ಕೇಂದ್ರ ಸಚಿವ ನಿತಿನ್ ಗಡ್ಕರಿ
DevaApril 24, 2024
ಮುಂಬೈ: ಮಹಾರಾಷ್ಟ್ರದ ಯವತ್ಮಾಲ್‌ನಲ್ಲಿ ಲೋಕಸಭಾ ಚುನಾವಣಾ ಭಾಗವಾಗಿ ನಡೆದ ಬಿಜೆಪಿ ಪ್ರಚಾರ ಕಾರ್ಯಕ್ರಮದಲ್ಲಿ ಕೇಂದ್ರ ಸಚಿವ ನಿತಿನ್ ಗಡ್ಕರಿ ಪ್ರಜ್ಞೆ ತಪ್ಪಿದರು.
ಮಹಾರಾಷ್ಟ್ರ ಸಿಎಂ ಏಕನಾಥ್ ಶಿಂಧೆ ನೇತೃತ್ವದ ಶಿವಸೇನೆ ಅಭ್ಯರ್ಥಿ ರಾಜಶ್ರೀ ಪಾಟೀಲ್ ಪರ ಪ್ರಚಾರ ನಡೆಸುತ್ತಿದ್ದ ವೇಳೆ ಪ್ರಜ್ಞೆ ತಪ್ಪಿದರು.
ಇನ್ನು, ಪ್ರಜ್ಞೆ ತಪ್ಪಿದ ಕೂಡಲೇ ಇವರನ್ನು ಸ್ಥಳೀಯ ಆಸ್ಪತ್ರೆಗೆ ದಾಖಲು ಮಾಡಲಾಯ್ತು. ಸದ್ಯ ಅವರ ಆರೋಗ್ಯ ಸುಧಾರಿಸಿದೆ. ಈ ಬಗ್ಗೆ ಖುದ್ದು ಗಡ್ಕರಿ ಅವರೇ ಟ್ವೀಟ್ ಮಾಡಿ ಸ್ಪಷ್ಟನೆ ನೀಡಿದ್ದಾರೆ. ತಾವು ಆರೋಗ್ಯವಾಗಿ ಇರೋದಾಗಿ ತಿಳಿಸಿದ್ದಾರೆ.
ಗಡ್ಕರಿ ಅವರು ಬಿಜೆಪಿಯ ನಾಗ್ಪುರ ಅಭ್ಯರ್ಥಿಯಾಗಿ ಲೋಕಸಭೆ ಚುನಾವಣೆಯ ಮೊದಲ ಹಂತದಲ್ಲಿ ಸ್ಪರ್ಧಿಸಿದ್ದು, ಮೊದಲ ಹಂತದ ಚುನಾವಣೆ ಮುಗಿದಿದೆ.
Related
Deva
Leave a reply