NEWSನಮ್ಮಜಿಲ್ಲೆನಮ್ಮರಾಜ್ಯ

KSRTC ನೌಕರರ ವಿರುದ್ಧ ಯಾವುದೇ ಕ್ರಮ ತೆಗೆದುಕೊಳ್ಳದಂತೆ ಸೂಚನೆ ನೀಡಿ: ಕಾರ್ಮಿಕ ಆಯುಕ್ತರಿಗೆ ಒಕ್ಕೂಟ ಮನವಿ

ವಿಜಯಪಥ ಸಮಗ್ರ ಸುದ್ದಿ

ಬೆಂಗಳೂರು: ಸಾರಿಗೆ ಸಂಸ್ಥೆಯ ನಾಲ್ಕೂ ನಿಗಮಗಳ ನೌಕರರು ತಮ್ಮ ನ್ಯಾಯಯುತ ಬೇಡಿಕೆಗಳ ಈಡೇರಿಕೆಗಾಗಿ ಸಂಸ್ಥೆಯ ದೈನಂದಿನ ಕಾರ್ಯಾಚರಣೆಗೆ ಆಡಚಣೆ ಮಾಡದೆ ಹಾಗೂ ಸಾರ್ವಕನಿಕರಿಗೆ ತೊಂದರೆಯಾಗದ ರೀತಿಯಲ್ಲಿ ಹಮ್ಮಿಕೊಳ್ಳುತ್ತಿರುವ ಶಾಂತಿಯುತ ಹೋರಾಟಗಳ ಸಮಯದಲ್ಲಿ ಸಾರಿಗೆ ಸಂಸ್ಥೆಯ ಆಧಿಕಾರಿಗಳು ನೌಕರರ ಮೇಲೆ ಯಾವುದೇ ಶಿಸ್ತುಕ್ರಮ, ಶಿಕ್ಷಾದೇಶ ಮತ್ತು ದಂಡಾದೇಶಗಳ ಮಾಡಬಾರದು ಎಂದು ಸೂಚಿಸಬೇಕೆಂದು ಕಾರ್ಮಿಕ ಆಯುಕ್ತರಲ್ಲಿ ನೌಕರರ ಒಕ್ಕೂಟ ಮನವಿ ಮಾಡಿದೆ.

ಈ ಸಂಬಂಧ ಇಂದು ಕಾರ್ಮಿಕ ಆಯುಕ್ತರಿಗೆ ಮನವಿ ಸಲ್ಲಿಸರುವ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನೌಕರರ ಕೂಟ ಹಾಗೂ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನೌಕರರ ನಾಲ್ಕೂ ನಿಗಮಗಳ ಸಂಘಟನೆಗಳ ಒಕ್ಕೂಟ, ಸಾರಿಗೆ ನೌಕರರ ನ್ಯಾಯಯುತ ಬೇಡಿಕೆಗಳ ಈಡೇರಿಕೆಗಾಗಿ ಹಲವು ಬಾರಿ ಸರ್ಕಾರಕ್ಕೆ ಮತ್ತು ಸಾರಿಗೆ ಆಡಳಿತ ಮಂಡಳಿ ಮನವಿ ಪತ್ರಗಳನ್ನು ನೀಡಿ ಒತ್ತಾಯಿಸುತ ಬರುತ್ತಿದ್ದೇವೆ.

ಈ ಹಿನ್ನೆಲೆಯಲ್ಲಿ ಸರ್ಕಾರ ಹಾಗೂ ಆಡಳಿತ ಮಂಡಳಿ ಕಾರ್ಮಿಕ ಸಂಘಟನೆಗಳೊಂದಿಗೆ ಹಲವು ಸಭೆಗಳು ತಮ್ಮ, ಸಾರಿಗೆ ಸಚಿವರ ಮತ್ತು ಮುಖ್ಯ ಮಂತ್ರಿಗಳ ಅಧ್ಯಕ್ಷತೆಯಲ್ಲಿ ನಡೆದರು ಯಾವುದೇ ಅಂತಿಮ ನಿರ್ಧಾರಕ್ಕೆ ಬಾರದೆ ಸಾರಿಗೆ ನೌಕರರಿಗೆ ಸಿಗಬೇಕಾದ ನ್ಯಾಯಯುತ ಆರ್ಥಿಕ ಸೌಲಭ್ಯಗಳು ಸಿಗದೆ ಪ್ರಸ್ತುತ ಕರ್ತವ್ಯ ನಿರ್ವಹಿಸುತ್ತಿರುವ ಹಾಗೂ ನಿವೃತ್ತಿಗೊಂಡಿರುವ ಲಕ್ಷಾಂತರ ನೌಕರರು ನಾನಾ ರೀತಿಯ ಆರ್ಥಿಕ ಸಮಸ್ಯೆಗಳಿಂದ ಬಳಲುತ್ತಿದ್ದಾರೆ.

ಇದೆಲ್ಲ ಮನಗಂಡ ನಾವು ಸಾರಿಗೆ ನೌಕರರು ಮತ್ತು ಅವರ ಕುಟುಂಬ ಸದಸ್ಯರು ಇದೇ ಏ.8ರಿಂದ ಚಿತ್ರದುರ್ಗದ ಜಿಲ್ಲಾಧಿಕಾರಿಗಳ ಕಚೇರಿಯಿಂದ ಪಾದಯಾತ್ರೆ ಜಾಥಾ ಹೊರಟು ಏ.21 ರಂದು ಬೆಂಗಳೂರಿನ ಸ್ವಾತಂತ್ರ್ಯ ಉದ್ಯಾನವನ ತಲುಪಿ ಅಲ್ಲಿ ನಮ್ಮ ಬೇಡಿಕೆಗಳು ಈಡೇರಿಸುವವರೆಗೂ ಅನಿರ್ದಿಷ್ಟಾವಧಿ ಆಮರಣಾಂತಕ ಉಪವಾಸ
ಸತ್ಯಾಗ್ರಹ ಹಮ್ಮಿಕೊಳ್ಳಲು ನಿರ್ಧರಿಸಿದ್ದೇವೆ.

ಸಾರಿಗೆ ಸಂಸ್ಥೆಯ ನಾಲ್ಕೂ ನಿಗಮಗಳ ನೌಕರರು ಮತ್ತು ಕುಟುಂಬ ಸದಸ್ಯರು ಮಾಡುತ್ತಿರುವ ಈ ಶಾಂತಿಯುತ ಹೋರಾಟದಿಂದ ಸಂಸ್ಥೆಯ ದೈನಂದಿನ ಕಾರ್ಯಾಚರಣೆಗೆ ಆಡಚಣೆ ಮಾಡದೆ ಹಾಗೂ ಸಾರ್ವಕನಿಕರಿಗೆ ತೊಂದರೆಯಾಗುವುದಿಲ್ಲ. ಈ ರೀತಿಯಲ್ಲಿ ಹಮ್ಮಿಕೊಳ್ಳುತ್ತಿರುವ ಕಾರಣ ಈ ಶಾಂತಿಯುತ ಹೋರಾಟಗಳಲ್ಲಿ ಭಾಗವಹಿಸುವ ನೌಕರರ ವಿರುದ್ಧ ಸಂಸ್ಥೆಯ ನಿಯಾಮಾವಳಿಗಳ ಕಾರಣ ತೋರಿಸಿ ಯಾವುದೇ ಶಿಸ್ತು ಕ್ರಮ, ಶಿಕ್ಷಾದೇಶ ಹಾಗೂ ದಂಡಾದೇಶಗಳನ್ನು ಮಾಡಬಾರದೆಂದು ತಾವು ಸಾರಿಗೆ ಸಂಸ್ಥೆಯ ನಾಲ್ಕೂ ನಿಗಮಗಳ ಆಧಿಕಾರಿಗಳಿಗೆ ಸೂಚನೆ ನೀಡಬೇಕೆಂದು ಸಮಸ್ತ ಸಾರಿಗೆ ನೌಕರರ ಪರವಾಗಿ ವಿನಂತಿಸಿಕೊಳ್ಳುತ್ತೇವೆ.

ಬೇಡಿಕೆಗಳು: ಸರ್ಕಾರ ನೀಡಿರುವ ಪ್ರಣಾಳಿಕೆ ಭರವಸೆಯಂತೆ ಸಾರಿಗೆ ನೌಕರರಿಗೂ, ಸರ್ಕಾರಿ ನೌಕರರಂತೆ ಸರಿಸಮಾನ ವೇತನ (7 ನೇ ವೇತನ ಆಯೋಗದ ಮಾದರಿಯಲ್ಲಿ) 01/01/2024 ರಿಂದ ಜಾರಿಗೆ ಬರುವಂತೆ ಕೂಡಲೇ ನೀಡುವುದು.

01/01/2020 ರಿಂದ ಅನ್ವಯವಾಗುವಂತೆ ವೇತನ ಪರಿಷ್ಕರಣೆ ಮಾಡಲಾಗಿದ್ದು, ಸದರಿ ವೇತನ ಪರಿಷ್ಕರಣೆಯ 38 ತಿಂಗಳ ಹಿಂಬಾಕಿಯನ್ನು ನೀಡುವುದು. (ಈಗಾಗಲೇ ಸರ್ಕಾರ 26 ತಿಂಗಳ ವೇತನ ಹಿಂಬಾಕಿ ನೀಡುವ ಸುತ್ತೋಲೆ ಹೊರಡಿಸಿದ್ದು ಬಾಕಿ 12 ತಿಂಗಳ ವೇತನ ಹಿಂಬಾಕಿಯನ್ನು ಸರ್ಕಾರ ಅಥವಾ ಸಂಸ್ಥೆ ಭರಿಸುವುದು.)

ಸಾರಿಗೆ ಸಂಸ್ಥೆಗಳಲ್ಲಿ ಸಂಘಗಳ ಮಾನ್ಯತೆಗಾಗಿ, ಕಾರ್ಮಿಕ ಸಂಘಟನೆಗಳ ಚುನಾವಣೆಯನ್ನು ಈ ಕೂಡಲೆ ನಡೆಸಬೇಕು ಇದಕ್ಕೆ ತಾವು ಸಹಕಾರ ನೀಡಬೇಕು ಎಂದು ನೌಕರರ ಒಕ್ಕೂಟದ ಪರವಾಗಿ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನೌಕರರ ಕೂಟದ ರಾಜ್ಯಾಧ್ಯಕ್ಷ ಆರ್.ಚಂದ್ರಶೇಖರ್ ಆದ ನಾನು ತಮ್ಮಲ್ಲಿ ಮನವಿ ಮಾಡಿಕೊಳ್ಳುತ್ತಿದ್ದೇನೆ ಎಂದು ತಿಳಿಸಿದ್ದಾರೆ.

Megha
the authorMegha

Leave a Reply

error: Content is protected !!
Latest news
ತಂದೆ-ತಾಯಿ ಇಬ್ಬರೂ IAS ಆಗಿದ್ದರೆ ಮಕ್ಕಳಿಗೆ ಮೀಸಲಾತಿ ಸೌಲಭ್ಯ ಏಕೆ ಮುಂದುವರಿಯ -ಬೇಕು: ಸುಪ್ರೀಂ ಕೋರ್ಟ್‌ ಮಹತ್ವದ ಪ್... KARNATAKA GOVT: ಕಾರ್ಮಿಕರ ಕನಿಷ್ಠ ವೇತನ ನಿಗದಿ ಮಾಡಿ ಸರ್ಕಾರದ ಆದೇಶ- ಮೇ 22ರಿಂದಲೇ ಜಾರಿ- ಕಾರ್ಮಿಕ ಅಧಿಕಾರಿ ತುಳಸ... ಕಲ್ಲಿದ್ದಲು ಗಣಿಯಲ್ಲಿ ಗ್ಯಾಸ್‌ ಸ್ಫೋಟ: 90 ಜನರು ಮೃತ, 100ಕ್ಕೂ ಹೆಚ್ಚು ಕಾರ್ಮಿಕರಿಗೆ ಗಾಯ KSRTC ತುಮಕೂರು ಡಿಸಿಗೆ ಲಂಚ ಸಂಗ್ರಹ ಆರೋಪ: ಸಂಬಂಧಿಕರ ಫೋನ್‌ ಪೇ ಬಳಸಿ ಸಿಕ್ಕ ಬಿದ್ದ ನೌಕರ ಆತ್ಮಹತ್ಯೆಗೆ ಯತ್ನ- ಪಾರ... ಬಿಎಂಟಿಸಿ ಹೊಸ ವೇಗದೂತ ಬಸ್‌ಗಳ ಸೇವೆಗೆ ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ಚಾಲನೆ ಕಾವೇರಿ ನದಿಯಲ್ಲಿ ಈಜಲು ಹೋಗಿದ್ದ ಇಬ್ಬರು ಯುವಕರು ನೀರಿನಲ್ಲಿ ಮುಳುಗಿ ಸಾವು ನಿವೇಶನ ರಹಿತ 500 ಬಡ ಕುಟುಂಬಗಳಿಗೆ ಜೂನ್ ತಿಂಗಳಲ್ಲಿ ನಿವೇಶನ ವಿತರಣೆ: ಸಚಿವ ಮುನಿಯಪ್ಪ ಸಿಬಿಎಸ್‌ಇ ತ್ರಿಭಾಷಾ ನೀತಿ ವಿರುದ್ಧ ಸುಪ್ರೀಂ ಕೋರ್ಟ್‌ಗೆ ಅರ್ಜಿ ಸಲ್ಲಿಸಿದ ಪಾಲಕರು: ಮುಂದಿನ ವಾರ ವಿಚಾರಣೆ ಫೆಬ್ರವರಿ 2025- ಮಾರ್ಚ್‌ 2025ರ ಎರಡು ತಿಂಗಳ ಗೃಹಲಕ್ಷ್ಮಿ ಹಣ ಬಿಡುಗಡೆಗೆ ನಿರ್ದೇಶನ ನೀಡಲು ಹೈ ಕೋರ್ಟ್‌ ಮೆಟ್ಟಿಲೇರಿ... BMTC ನೌಕರರಿಗೆ ಏಪ್ರಿಲ್-2018 ರಿಂದ ಜುಲೈ-2018 ರವರೆಗಿನ 4ತಿಂಗಳ ಮೂಲ ತುಟ್ಟಭತ್ಯೆ ಮೇ 2026ರ ವೇತನದೊಂದಿಗೆ ಪಾವತಿಸಲ...