CrimeNEWSನಮ್ಮಜಿಲ್ಲೆಬೆಂಗಳೂರು

ಪ್ರತ್ಯೇಕ ಸ್ಥಳಗಳಲ್ಲಿ ಬೈಕ್‌ಗಳಿಗೆ ಅಪರಿಚಿತ ವಾಹನಗಳು ಡಿಕ್ಕಿ: ಬೈಕ್‌ ಸವಾರರಿಬ್ಬರು ಸಾವು

ವಿಜಯಪಥ ಸಮಗ್ರ ಸುದ್ದಿ

ಬೆಂಗಳೂರು: ಎರಡು ಪ್ರತ್ಯೇಕ ಸ್ಥಳಗಳಲ್ಲಿ ಅಪರಿಚಿತ ವಾಹನನಗಳು ಬೈಕ್‌ಗಳಿಗೆ ಡಿಕ್ಕಿ ಹೊಡೆದ ಪರಿಣಾಮ ಬೈಕ್​ ಸವಾರರಿಬ್ಬರು ಮೃತಪಟ್ಟಿರುವ ಘಟನೆ ಬೆಂಗಳೂರಿನ ಜರುಗಿದೆ.

ಅಪರಿಚಿತ ವಾಹನನ ಬೈಕ್‌ಗೆ ಡಿಕ್ಕಿ ಹೊಡೆದ ಪರಿಣಾಮ ಬೈಕ್​ ಸವಾರ ಫ್ಲೈ ಓವರ್ ಮೇಲಿಂದ ಕಳೆಗೆ ಬಿದ್ದು ಮೃತಪಟ್ಟಿರುವುದು ಜಾಲಹಳ್ಳಿ ಮುಖ್ಯ ರಸ್ತೆ ರಾಕ್ ಲೈನ್ ಮಾಲ್ ಮುಂಭಾಗದ ಫ್ಲೈ ಓವರ್​ನಲ್ಲಿ ನಡೆದಿದೆ.

ಪ್ರಸಾದ್ ಮೃತ ಬೈಕ್‌ ಸವಾರ. ಅಪಘಾತ ರಭಸಕ್ಕೆ ಪ್ರಸಾದ್ ಫ್ಲೈ ಓವರ್ ಮೇಲಿಂದ ಕೆಳಕ್ಕೆ ಬಿದ್ದಿದ್ದಾನೆ. ಸದ್ಯ ಪ್ರಸಾದ್ ಮೃತದೇಹವನ್ನು ಮರಣೋತ್ತರ ಪರೀಕ್ಷೆಗಾಘಿ ವಿಕ್ಟೋರಿಯಾ ಆಸ್ಪತ್ರೆಗೆ ರವಾನಿಸಲಾಗಿದೆ.

ಪೀಣ್ಯ ಸಂಚಾರಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದ್ದು, ಸಂಬಂಧಪಟ್ಟ ಪೊಲೀಸರಿಗೆ ಮಾಹಿತಿ ತಿಳಿಸಿದ್ದು, ಪೊಲೀಸರು ಮುಂದಿನ ಕ್ರಮ ಜರುಗಿಸುತ್ತಿದ್ದಾರೆ.

ಸ್ಕೂಟರ್​ಗೆ ಡಿಕ್ಕಿ ಸವಾರ ಸಾವು: ಮತ್ತೊಂದು ಪ್ರಕರಣದಲ್ಲೂ ಅಪರಿಚಿತ ವಾಹನ ಸ್ಕೂಟರ್​ಗೆ ಡಿಕ್ಕಿ ಹೊಡೆದ ಪರಿಣಾಮ ಯುವಕ ಸಾವನ್ನಪ್ಪಿದ ಘಟನೆ ಕೆಂಗೇರಿ ಸಂಚಾರಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ಮುಖೇಶ್ (22) ಮೃತರು.

ನಿನ್ನೆ ರಾತ್ರಿ  9.30ರ ಸುಮಾರಿಗೆ ಬೈಕ್​ನಲ್ಲಿ ಮುಖೇಶ್ ತನ್ನ ಬೈಕ್ ನಲ್ಲಿ ನೈಸ್ ರಸ್ತೆಯ ಹೊಸಕೆರೆಹಳ್ಳಿ ಕಡೆಯಿಂದ  ಸೋಂಪುರ ಕ್ಲವರ್ ಲೀಫ್ ಕಡೆಗೆ ಹೋಗುತ್ತಿದ್ದರು.ಈ ವೇಳೆ ಅತಿ ವೇಗ ಮತ್ತು ನಿರ್ಲಕ್ಷತೆಯಿಂದ ಬಂದ ಅಪರಿಚಿತ ವಾಹನವೊಂದು ಮುಖೇಶ್​ ಸ್ಕೂಟರ್​ಗೆ ಡಿಕ್ಕಿ ಹೊಡೆದಿದೆ.

ಅಪರಿಚಿತ ವಾಹನ ಡಿಕ್ಕಿ ಹೊಡೆದ ಪರಿಣಾಮ ತಲೆಗೆ ಗಂಭೀರ ಗಾಯಗವಾಗಿದೆ. ಸ್ಥಳದಲ್ಲೇ ಮುಖೇಶ್​ ಸಾವನ್ನಪ್ಪಿದ್ದಾರೆ. ಘಟನಾ ಸ್ಥಳಕ್ಕೆ ಕೆಂಗೇರಿ‌ ಸಂಚಾರಿ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

Leave a Reply

error: Content is protected !!
LATEST
ಚಾಮುಂಡಿ ಹುಟ್ಟುಹಬ್ಬ: ಬೆಳ್ಳಿ ಪಲ್ಲಕ್ಕಿ ಉತ್ಸವಕ್ಕೆ ರಾಜವಂಶಸ್ಥ ಯದುವೀರ್‌ ಕೃಷ್ಣದತ್ತ ಚಾಮರಾಜ ಒಡೆಯರ್‌ ಚಾಲನೆ ನಾಡ ಅಧಿದೇವತೆ ಚಾಮುಂಡಿ ತಾಯಿಯ ವರ್ಧಂತಿ ಸಂಭ್ರಮ: ಬೆಟ್ಟಕ್ಕೆ ಹರಿದು ಬರುತ್ತಿದೆ ಭಕ್ತ ಸಾಗರ KRSನಿಂದ ಕಾವೇರಿ ನದಿಗೆ 1.30 ಲಕ್ಷ ಕ್ಯುಸೆಕ್ ನೀರು ಬಿಡುಗಡೆ ಪತ್ನಿ ಜೊತೆ 40 ವರ್ಷಗಳ ಹಿಂದೆ ಕೋಪ ಮಾಡಿಕೊಂಡಿದ್ದ ಪತಿ- ಸಾಯುವ ವೇಳೆಯೂ ಮಾತಾಡಲಿಲ್ಲ ! ಬೆಳಗಾವಿ: ಸವದತ್ತಿ ಯಲ್ಲಮ್ಮ ದೇವಿಯ ಹುಂಡಿಯಲ್ಲಿ 2 ತಿಂಗಳಲ್ಲೇ₹ 1.96 ಕೋಟಿ ಕಾಣಿಕೆ ಸಂಗ್ರಹ ಕಡ್ಡಾಯವಾಗಿ ಮಣ್ಣಿನ ಪರೀಕ್ಷೆ ಮಾಡಿಸಿ: ಕೃಷಿ ಇಲಾಖೆ ಸಹಾಯಕ ನಿರ್ದೇಶಕ ಪ್ರಸಾದ್ ಕೆ.ಆರ್‌.ಪೇಟೆ: ಚೌಡೇಶ್ವರಿ ಅಮ್ಮನವರ ದೇಗುಲದಲ್ಲಿ ಆಷಾಢ ಶುಕ್ರವಾರ ಸಂಭ್ರಮ ಸಂಸತ್‌ನಲ್ಲಿ ಕನ್ನಡಿಗರ ಪರ ಧ್ವನಿ ಎತ್ತಿ: ರಾಜ್ಯದ ಎನ್‌ಡಿಎ ಸಂಸದರಿಗೆ ಎಎಪಿಯ ಡಾ. ಮುಖ್ಯಮಂತ್ರಿ ಚಂದ್ರು ಆಗ್ರಹ “ಶಕ್ತಿ" ಯೋಜನೆಯಿಂದ ಸಾರಿಗೆ ನಿಗಮಗಳ ಆದಾಯ ಹೆಚ್ಚಾಗಿದೆ- ಆದರೆ ನೌಕರರಿಗೆ ವೇತನಕೊಡಲು ಹಣವಿಲ್ಲ- ಎಂಥಾ ಹೇಳಿಕೆ ಇದು ಸಾ... KRS ಭರ್ತಿ: ಅಣೆಕಟ್ಟೆಯಿಂದ ಒಂದು ಲಕ್ಷ ಕ್ಯುಸೆಕ್‌ಗೂ ಅಧಿಕ ಪ್ರಮಾಣದ ನೀರು ಬಿಡುಗಡೆ- ಕಾವೇರಿ ಕೊಳ್ಳದ ಜನರಿಗೆ ಎಚ್ಚರಿ...