NEWSನಮ್ಮಜಿಲ್ಲೆಶಿಕ್ಷಣ-

ಅತ್ತಹಳ್ಳಿ: ಪಠೇತರ ಚಟುವಟಿಕೆಗಳಿಂದ ಪ್ರತಿಭೆ ಅನಾವರಣ : ಮುಖ್ಯ ಶಿಕ್ಷಕ ಚಿನ್ನಸ್ವಾಮಿ

Vijayapatha - ವಿಜಯಪಥ
ವಿಜಯಪಥ ಸಮಗ್ರ ಸುದ್ದಿ

ಬನ್ನೂರು: ಹೋಬಳಿಯ ಅತ್ತಹಳ್ಳಿ ಹಿರಿಯ ಪ್ರಾಥಮಿಕ ಶಾಲಾ ಆವರಣದಲ್ಲಿ ಶುಕ್ರವಾರ ಆಯೋಜಿಸಿದ್ದ ಕೇತುಪುರ ಕ್ಲಸ್ಟರ್ ಮಟ್ಟದ ಪ್ರಾಥಮಿಕ ಶಾಲೆಗಳ ಪ್ರತಿಭಾ ಕಾರಂಜಿ (Pratibha Karanji) ಕಾರ್ಯಕ್ರಮವನ್ನು ಗ್ರಾಪಂ ಅಧ್ಯಕ್ಷೆ ಜಯಲಕ್ಷ್ಮೀ  ಉದ್ಘಾಟಿಸಿದರು.

ಸಮಾರಂಭದಲ್ಲಿ ಮಾತನಾಡಿದ ಪ್ರೌಢಶಾಲಾ ಮುಖ್ಯ ಶಿಕ್ಷಕ ಚಿನ್ನಸ್ವಾಮಿ, ಪ್ರತಿಭಾ ಕಾರಂಜಿ ಎಂಬುವುದು ಮಕ್ಕಳು ತಮ್ಮಲ್ಲಿರುವ ಪ್ರತಿಭೆಯನ್ನು ವ್ಯಕ್ತಪಡಿಸಲು ಅತ್ಯುತ್ತಮವಾದ ವೇದಿಕೆ ಒದಗಿಸಿಕೊಡುತ್ತದೆ ಎಂದು ಹೇಳಿದರು.

ಸಾವಿರಾರು ವರ್ಷಗಳ ಇತಿಹಾಸ ಇರುವ ಸುಂದರ ಸಾಂಸ್ಕೃತಿಕ ಹಿನ್ನೆಲೆ ಇರುವ ಭಾರತದಲ್ಲಿ ವಿಭಿನ್ನ ಸಂಸ್ಕೃತಿಗಳನ್ನು ಕಾಣಬಹುದು. ಈ ವೈವಿಧ್ಯಮಯ ಭಾರತದ ಹಲವು ಮುಖಗಳನ್ನು ಹಾಗೂ ಬಣ್ಣಗಳನ್ನು ಇಂಥ ಮಕ್ಕಳ ಪ್ರತಿಭಾ ಕಾರಂಜಿಯಲ್ಲಿ ಕಾಣಬಹುದಾಗಿದೆ ಎಂದರು.

ಮೈಸೂರು ಜಿಲ್ಲೆಯ ತಿ.ನರಸೀಪುರ ತಾಲೂಕಿನ ಅತ್ತಹಳ್ಳಿಯೂ ಸಹ ಹಲವು ವೈವಿದ್ಯಗಳಿಂದ ಕೂಡಿದೆ ಎಂದ ಅವರು, ವಿದ್ಯಾರ್ಥಿಗಳ ಸರ್ವಾಂಗೀಣ ಪ್ರತಿಭೆಯನ್ನು ಕೇವಲ ಪಠ್ಯ ಪುಸ್ತಕಗಳು ಹಾಗೂ ಅಂಕಗಳಿಂದ ನೋಡದೆ, ಪಠೇತರ ಚಟುವಟಿಕೆಗಳನ್ನು ಹಮ್ಮಿಕೊಳ್ಳುವ ಮೂಲಕ ಗುರುತಿಸಿದರೆ ಪ್ರತಿಭಾನ್ವಿತರಿಗೆ ಅವಕಾಶ ಸಿಗಲಿದೆ. ಮುಂಬರುವ ಶೈಕ್ಷಣಿಕ ವರ್ಷದಿಂದ ರಾಷ್ಟ್ರೀಯ ಶಿಕ್ಷಣ ನೀತಿ ತರಲು ಸರ್ಕಾರ ಉದ್ದೇಶಿಸಿರುವ ಹಿನ್ನೆಲೆಯಲ್ಲಿ ಈಗಾಗಲೇ ಎಲ್ಲರೂ ಕಾರ್ಯೋನ್ಮುಖರಾಗಬೇಕು ಎಂದು ಸಲಹೆ ನೀಡಿದರು.

ಎಸ್‌ಡಿಎಂಸಿ ಅಧ್ಯಕ್ಷ ಸ್ವಾಮಿ ಮಾತನಾಡಿ, ನಮ್ಮ ದೇಶದಲ್ಲಿ ಪ್ರತಿಭಾವಂತರಿಗೆ ಕೊರತೆ ಇಲ್ಲ. ಆದರೆ, ಮಕ್ಕಳಲ್ಲಿ ಇರುವ ಪ್ರತಿಭೆಯನ್ನು ಹೊರಹೊಮ್ಮುವ ವೇದಿಕೆಯನ್ನು ಸೃಷ್ಟಿಸಬೇಕು. ಗ್ರಾಮಾಂತರ ಪ್ರದೇಶಗಳಲ್ಲಿ ಜಾನಪದ ಕಲೆ, ಸಾಹಿತ್ಯ ಅಪಾರವಾಗಿದ್ದು, ಪ್ರತಿಭಾನ್ವಿತರನ್ನು ಗುರುತಿಸಿ ಪ್ರೋತ್ಸಾಹ ನೀಡಬೇಕೆಂದು ತಿಳಿಸಿದರು.

ಸಿಆರ್‌ಪಿ ಪ್ರತಿಮಾ ಮಾತನಾಡಿ, ಪ್ರತಿಭಾ ಕಾರಂಜಿಯ ವಿವಿಧ ಸ್ಪರ್ಧೆಗಳಲ್ಲಿ ಭಾಗವಹಿಸುವ ಮಕ್ಕಳು ಸ್ಪರ್ಧಾ ಮನೋಭಾವದಿಂದ ಹೊಂದಬೇಕು, ಆ ಮೂಲಕ ತಮ್ಮ ಪ್ರತಿಭೆ ತೋರ್ಪಡಿಸಿ ತಾಲೂಕು, ಜಿಲ್ಲಾ, ರಾಜ್ಯ, ರಾಷ್ಟ್ರ ಮಟ್ಟದಲ್ಲಿ ಸ್ಪರ್ಧೆ ಮಾಡಿ ತಮ್ಮ ಶಾಲೆ, ಪಾಲಕರು ಹಾಗೂ ನಾಡಿಗೂ ಕೀರ್ತಿ ತರಬೇಕೆಂದು ಕರೆ ನೀಡಿದರು.

ಕ್ಲಸ್ಟರ್‌ನ 10 ಶಾಲೆಗಳ ಮುಖ್ಯ ಶಿಕ್ಷಕರು, ಸಹ ಶಿಕ್ಷಕರು ತಮ್ಮ ತಮ್ಮ ಶಾಲೆಯ ಮಕ್ಕಳನ್ನು ಪ್ರತಿಭಾ ಕಾರಂಜಿ ಕಾರ್ಯಕ್ರಮಕ್ಕೆ ಕರೆ ತಂದಿದ್ದರು. ಕಿರಿಯ, ಹಿರಿಯ ವಿಭಾಗ, ಪ್ರೌಢ ವಿಭಾಗ ಹೀಗೆ ಅನೇಕ ವಿಭಾಗಗಳಲ್ಲಿ ಮಕ್ಕಳ ವೈಯಕ್ತಿಕ ಹಾಗೂ ಸಾಮೂಹಿಕ ಕಾರ್ಯಕ್ರಮಗಳು ಎಲ್ಲರ ಗಮನ ಸೆಳೆದವು .ಈ ಕಾರ್ಯಕ್ರಮಕ್ಕೆ ಕ್ಲಸ್ಟರ್‌ನ ಎಲ್ಲ ಸಿಬ್ಬಂದಿ ವರ್ಗದವರು ಸಹಕಾರ ನೀಡಿದರು, ಈ ಸಂದರ್ಭದಲ್ಲಿ ವಿಜೇತರಾದ ಮಕ್ಕಳಿಗೆ ಪ್ರಶಸ್ತಿ ಪತ್ರ, ಬಹುಮಾನ ನೀಡಿ ಗೌರವಿಸಲಾಯಿತು.

ಕಾರ್ಯಕ್ರಮದಲ್ಲಿ ಶಾಲೆಯ ಪ್ರಭಾರಿ ಮುಖ್ಯ ಶಿಕ್ಷಕರಾದ ಪಾರ್ವತಮ್ಮ, ದೈಹಿಕ ಶಿಕ್ಷಕರ ಸಂಘದ ಅಧ್ಯಕ್ಷ ಶ್ರೀಕಂಠಯ್ಯ, ಶಿಕ್ಷಣ ಸಂಯೋಜಕ ಪರಮೇಶ್‌, ಬಿಆರ್‌ಪಿ ಮೇರಿ ಶೈಲಾಶ್ರೀ, ಸಹಶಿಕ್ಷಕರಾದ ಶ್ರುತಿ, ಶಾರದಾಂಬಾ, ರಾಮು, ರವಿ, ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಕಾರ್ಯದರ್ಶಿ ಸುಬ್ರಮಣ್ಯ, ಗ್ರಾಪಂ ಸದಸ್ಯರಾದ ನಂದಿನಿ, ವೀಣಾ, ಮಹೇಶ್‌, ಮಾಜಿ ಸದಸ್ಯ ಸತೀಶ್‌, ಪ್ರಾ.ಶಾಲಾ ಶಿಕ್ಷಕರ ಸಂಘದ ನಾಮನಿರ್ದೇಶಿತ ಸದಸ್ಯರಾದ ಸುರೇಶ್‌, ಮಂಜುನಾಥ್‌, ಅನ್ನಪೂರ್ಣ, ಗ್ರಾಮದ ಜಯರಾಮು, ಕೃಷ್ಣೇಗೌಡ, ಗ್ರಾಪಂ ಪಿಡಿಒ ಮಾದೇಶ್‌, ಕಾರ್ಯದರ್ಶಿ ಸಿದ್ದರಾಜು ಮತ್ತಿತರರು ಇದ್ದರು.

Leave a Reply

error: Content is protected !!
LATEST
ನಾಳೆ KSRTC ನೌಕರರಿಗೆ ನಗದು ರಹಿತಾ ವೈದ್ಯಕೀಯ ಚಿಕಿತ್ಸಾ ಯೋಜನೆ ಜಾರಿ ಸಂಬಂಧ ಎಂಡಿ ಅಧ್ಯಕ್ಷತೆಯಲ್ಲಿ ಸಭೆ BMTC: 7ದಿನಗಳಿಂದ LMSನಲ್ಲಿ ರಜೆ ಹಾಕಲಾಗದೆ ನೌಕರರ ಪರದಾಟ- ಸಮಸ್ಯೆ ಗೊತ್ತಿದ್ದರೂ ಅಧಿಕಾರಿಗಳು ಮೌನ BMTC: ಬಸ್‌ ಚಲಾಯಿಸುತ್ತಿದ್ದಾಗಲೇ ಹೃದಯಾಘಾತದಿಂದ ಚಾಲಕ ನಿಧನ- ಸಾರಿಗೆ ಸಚಿವರು, ಎಂಡಿ ಸಂತಾಪ BMTC ಚಿಕ್ಕಲ್ಲಸಂದ್ರ: ಅವೈಜ್ಞಾನಿಕ ಸುತ್ತುವಳಿ ಸಮಯ ನಿಗದಿ ಮಾಡಿರುವುದಲ್ಲದೆ ವ್ಯಕ್ತಿಯೊಬ್ಬನ ದೂರಿಗೆ ಮಣೆಹಾಕಿ ನೌಕರರ... "ಲೋಕಾ"ವಿಚಾರಣೆ ಬಳಿಕ ಮುಗುಳ್ನಗುತ್ತಲೇ ಹೊರ ಬಂದ ಸಿಎಂ ಸಿದ್ದರಾಮಯ್ಯ ಸಿಎಂ ರಾಜೀನಾಮೆಗೆ ಆಗ್ರಹಿಸಿ ಕೇಸರಿ ಪಡೆಯಿಂದ “ಗೋ ಬ್ಯಾಕ್ ಸಿಎಂ ಚಳವಳಿ” LMV ಡಿಎಲ್‌ ಇರುವವರು 7,500 ಕೆಜಿಗಿಂತ ಕಡಿಮೆ ತೂಕದ ಸಾರಿಗೆ ವಾಹನ ಚಲಾಯಿಸಲು ಅರ್ಹರು: ಕೋರ್ಟ್‌ ಆದೇಶ NWKRTC ಕಲಘಟಗಿ ಘಟಕಕ್ಕೆ ಎಂಡಿ ಪ್ರಿಯಾಂಗಾ ಭೇಟಿ: ನೌಕರರ ಕುಂದುಕೊರತೆ ಆಲಿಕೆ BMTC ಸಾಥ್‌ನಿಂದ ಒಂದೇದಿನದಲ್ಲಿ 5.59 ಕೋಟಿ ರೂ. ಆದಾಯ ಗಳಿಸಿದ KSRTC KSRTC: ಆದಾಯ ಸಂಗ್ರಹಣೆಯಲ್ಲಿ 2ನೇ ಘಟಕ ಪ್ರಥಮ- ಪ್ರತಿಯೊಬ್ಬ ಸಿಬ್ಬಂದಿಗೂ ಧನ್ಯವಾದ ತಿಳಿಸಿದ ಸಾರಿಗೆ ಸಚಿವರು, ಅಧಿಕಾರ...