NEWSನಮ್ಮಜಿಲ್ಲೆನಮ್ಮರಾಜ್ಯ

KSRTC ಸೇವೆ- ನಿರ್ವಹಣೆಗೆ ಮಾರುಹೋದ ಯುಪಿ ಸರ್ಕಾರ, ಅಧಿಕಾರಿಗಳ ತಂಡ ಕಳುಹಿಸಿ ಮಾಹಿತಿ ಸಂಗ್ರಹ

ವಿಜಯಪಥ ಸಮಗ್ರ ಸುದ್ದಿ

ಬೆಂಗಳೂರು: ಎಲ್ಲೆಡೆ ಯುಪಿ ಮಾಡೆಲ್ ಎನ್ನುವ ಚರ್ಚೆಯ ನಡುವೆ ಯುಪಿಯಲ್ಲೇ ಕರ್ನಾಟಕ ಮಾಡೆಲ್‌ನ ಚಿಂತನೆ ನಡೆದಿದ್ದು ಕುತೂಹಲಮೂಡಿಸಿದೆ. ಇದಕ್ಕೆ ತಾಜಾ ನಿದರ್ಶನ ಎಂಬಂತೆ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮದ (KSRTC) ಉಪಕ್ರಮಗಳಿಗೆ ಉತ್ತರ ಪ್ರದೇಶ ಸರ್ಕಾರ ಫಿದಾ ಆಗಿದ್ದು, ಸಾಮಾನ್ಯ ಸಾರಿಗೆ ಹಾಗೂ ಪ್ರೀಮಿಯಂ ಸೇವೆಗಳೆರಡರ ನಿರ್ವಹಣೆಗೂ ಮಾರುಹೋಗಿದ್ದು ಯುಪಿ ಸರ್ಕಾರದ ಅಧಿಕಾರಿಗಳ ನಿಯೋಗವೇ KSRTC ಕಚೇರಿಗೆ ಭೇಟಿ ನೀಡಿ ಮಾಹಿತಿ ಪಡೆದುಕೊಂಡಿದೆ.

ಹೌದು! ನಿನ್ನೆ ಉತ್ತರ ಪ್ರದೇಶ ಸರ್ಕಾರದ ಹಿರಿಯ ಅಧಿಕಾರಿಗಳ ತಂಡದ ಯುಪಿಆರ್‌ಟಿಸಿ ನಿಯೋಗ KSRTC ಕೇಂದ್ರ ಕಚೇರಿಗೆ ಭೇಟಿ ನೀಡಿ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮಗಳ ಸೇವೆ ನಿರ್ವಾಹಣೆ ಬಗ್ಗೆ ಮಾಹಿತಿ ಸಂಗ್ರಹಿಸಿದೆ.

ಮುಖ್ಯ ಮಂತ್ರಿ ಯೋಗಿಆದಿತ್ಯ ನಾಥ್ ಅವರ ಸಲಹೆಗಾರ ಡಾ.ಕೆ.ವಿ.ರಾಜು, ಯುಪಿ ಸಾರಿಗೆ ಇಲಾಖೆ ಪ್ರಧಾನ ಕಾರ್ಯದರ್ಶಿ ಎಲ್. ವೆಂಕಟೇಶ್ವರಲು ಹಾಗೂ ಉದ್ಯಮಶೀಲತೆ ಇಲಾಖೆ ಪ್ರಧಾನ ಕಾರ್ಯದರ್ಶಿ ಡಾ.ಎಂ.ಕೆ.ಷಣ್ಮುಗ ಸುಂದರಂ ಸೇರಿದಂತೆ ಅಧಿಕಾರಿಗಳ ತಂಡವು ಶಾಂತಿನಗರದಲ್ಲಿರುವ ನಿಗಮದ ಕೇಂದ್ರ ಕಚೇರಿಗೆ ಭೇಟಿ ನೀಡಿ ನಿಗಮದಲ್ಲಿ ಅನುಷ್ಠಾನಗೊಳಿಸಿರುವ ಉಪಕ್ರಮಗಳ ಬಗ್ಗೆ ಪ್ರಾತ್ಯಕ್ಷಿಕೆಯ ಮೂಲಕ ವಿವರ ಪಡೆದರು.

ಸಾರಿಗೆ ಸಚಿವ ರಾಮಲಿಂಗಾರೆಡ್ಡಿ, KSRTC ವ್ಯವಸ್ಥಾಪಕ ನಿರ್ದೇಶಕ ವಿ.ಅನ್ಬುಕುಮಾರ್, ಯುಪಿ ನಿಯೋಗಕ್ಕೆ ಅಗತ್ಯ ಮಾಹಿತಿ ಒದಗಿಸಿದರು. ನಂತರ ತಂಡ ಬೆಂಗಳೂರು ಕೇಂದ್ರೀಯ ವಿಭಾಗದ ಘಟಕ-4ಕ್ಕೆ ಭೇಟಿ ನೀಡಿ, ನಿಗಮದ ಪ್ರತಿಷ್ಟಿತ ವಾಹನಗಳಾದ ಐರಾವತ ಕ್ಲಬ್ ಕ್ಲಾಸ್, ಅಂಬಾರಿ ಡ್ರೀಮ್ ಕ್ಲಾಸ್, ಅಂಬಾರಿ ಉತ್ಸವ ವಾಹನಗಳ ಕಾರ್ಯಾಚರಣೆ, ತಾಂತ್ರಿಕ ನಿರ್ವಹಣೆಯ ಬಗ್ಗೆ ಮಾಹಿತಿ ಹಾಗೂ ಎಲೆಕ್ಟ್ರಿಕ್ ಬಸ್‌ಗಳ ಘಟಕ ಮತ್ತು ಚಾರ್ಜಿಂಗ್ ಸ್ಟೇಷನ್‌ಗೆ ಭೇಟಿ ಕೊಟ್ಟಿತು. ಪ್ರೀಮಿಯಂ ಸೇವೆಗಳ ಉಪಕ್ರಮಗಳ ಕಾರ್ಯಾಚರಣೆ ಮತ್ತು ನಿರ್ವಹಣೆಗೆ ಮೆಚ್ಚುಗೆ ವ್ಯಕ್ತಪಡಿಸಿತು.

ಈ ಹಿಂದೆ KSRTC ಕೇಂದ್ರ ಕಚೇರಿಗೆ ಭೇಟಿ ನೀಡದ ಯುಪಿ ಅಧಿಕಾರಿಗಳ ನಿಯೋಗ ಸಚಿವ ರಾಮಲಿಂಗಾರೆಡ್ಡಿ ಜತೆ ಸಮಾಲೋಚನೆ ನಡೆಸಿ ಗ್ರಾಮೀಣ ಸಾರಿಗೆ, ನಗರ ಸಾರಿಗೆ, ವೇಗದೂತ, ರಾಜಹಂಸ, ಹವಾನಿಯಂತ್ರಣ ರಹಿತ ಸ್ಲೀಪರ್, ಎಸಿ ಸ್ಲೀಪರ್, ವೋಲ್ವೋ, ಮಲ್ಟಿ ಆಕ್ಸಲ್ ವೋಲ್ವೋ, ಮಲ್ಟಿ ಆ್ಯಕ್ಸಲ್ ಸ್ಲೀಪರ್‌ ಜತೆಗೆ ಅಂತರ್ಜಿಲ್ಲೆಗಳಿಗೆ ಎಸಿ ವಿದ್ಯುತ್ ಚಾಲಿತ ಬಸ್‌ಗಳನ್ನು ಕಾರ್ಯಾಚರಿಸುತ್ತಿರುವ ವಿವರ ಪಡೆದುಕೊಂಡಿತು.

ಇನ್ನು ಈ ಎಲ್ಲ ವಿವರಗಳ ವರದಿ ಮೆಚ್ಚಿರುವ ಉತ್ತರಪ್ರದೇಶ ಸಾರಿಗೆ ಇಲಾಖೆ KSRTC ಉಪಕ್ರಮಗಳ ಕುರಿತು ಸಿಎಂ ಯೋಗಿ ಆದಿತ್ಯನಾಥ್ ಅವರಿಗೆ ಮಾಹಿತಿ ನೀಡಿತ್ತು. ಆ ವರದಿ ಹಿನ್ನೆಲೆಯಲ್ಲಿ ಖುದ್ದು ತಮ್ಮ ಸಲಹೆಗಾರರ ನೇತೃತ್ವದ ತಂಡವನ್ನೇ ಕರ್ನಾಟಕಕ್ಕೆ ಕಳಿಸಿಕೊಟ್ಟಿರುವ ಯೋಗಿ, KSRTC ಉಪಕ್ರಮಗಳ ಬಗ್ಗೆ ಮತ್ತಷ್ಟು ವಿವರ ಪಡೆದುಕೊಂಡು ಬರುವಂತೆ ಸೂಚಿಸಿದ್ದಾರೆ. ಅದರಂತೆ ಅಧಿಕಾರಗಳ ತಂಡ ಬಂದು ಹೋದ 10 ದಿನದಲ್ಲೇ ಸಿಎಂ ಸಲಹೆಗಾರರ ನಿಯೋಗ ರಾಜ್ಯಕ್ಕೆ ಆಗಮಿಸಿ ಮಾಹಿತಿ ಪಡೆದುಕೊಂಡಿದೆ.

Leave a Reply

error: Content is protected !!
LATEST
ಸರಿಸಮಾನ ವೇತನದ ನಿರ್ಧಾರ: ನಮಗೆ ಸಾರಿಗೆ ಸಚಿವರು ಕೊಟ್ಟ ಭರವಸೆ ಶೀಘ್ರ ಈಡೇರಲಿದೆ ಎಂದ ಅಧಿಕಾರಿ, ಮೇಲ್ವಿಚಾರಕರ ಮುಖಂಡ... KSRTC: ಸ್ವಯಂ ಘೋಷಿತ ಕಾರ್ಮಿಕ ನಾಯಕರ "ಚೌಕಾಶಿ" ವೇತನ ಒಪ್ಪಂದಕ್ಕೆ ಇತೀಶ್ರೀ ಹಾಡಿ - ಎಂಡಿಗೆ ಮನವಿ NWKRTC: ತಾಂತ್ರಿಕ ದೋಷದಿಂದ ಚಾಲಕನ ನಿಯಂತ್ರಣ ತಪ್ಪಿ ಮರಕ್ಕೆ ಡಿಕ್ಕಿ ಹೊಡೆದ ಬಸ್‌- ಚಾಲನಾ ಸಿಬ್ಬಂದಿಗಳಿಗೆ ಗಾಯ ನಿರುದ್ಯೋಗಿ ಯುವಕ - ಯುವತಿಯರಿಗೆ ಮಾತ್ರ: PM ಇಂಟರ್ನ್​ಶಿಪ್ಪ್‌ಗೆ ಅರ್ಜಿ ಹಾಕಿ -ಪ್ರತಿ ತಿಂಗಳು ₹5000 ಭತ್ಯೆ ಪಡೆಯಿರ... KSRTC ನೌಕರರು ಈಗಾಗಲೇ ಮುಷ್ಕರಕ್ಕೆ ಸಿದ್ಧ, ನಾವು ದಿನಾಂಕ ಘೋಷಣೆ ಮಾಡುತ್ತೇವೆ -ಸರ್ಕಾರಕ್ಕೆ ಜಂಟಿ ಕ್ರಿಯಾ ಸಮಿತಿ ಎಚ್... KSRTC: ಮೊಬೈಲ್‌ನಲ್ಲಿ ಮಾತನಾಡಿಕೊಂಡು ಬಸ್‌ ಚಾಲನೆ - ಚಾಲಕನ ನಿರ್ಲಕ್ಷ್ಯಕ್ಕೆ ಕಿಡಿ KSRTC ಕೋಲಾರ: ನೌಕರರ ಪರ ನಿಲ್ಲಬೇಕಾದ ಕಾರ್ಮಿಕ ಕಲ್ಯಾಣ ಅಧಿಕಾರಿಯೇ ವಿರುದ್ಧ ನಿಂತರೆ ಎಲ್ಲಿ ಸಿಗಲಿದೆ ನ್ಯಾಯ? ಮೈಸೂರು: ಸಾಲದ 1ಕಂತು ಕಟ್ಟಿಲ್ಲದ್ದಕ್ಕೆ ಟ್ರ್ಯಾಕ್ಟರ್ ಜಪ್ತಿ ಮಾರಾಟ - ಕೋಟಕ್ ಮಹೇಂದ್ರ ಬ್ಯಾಂಕ್‌ಗೆ ರೈತರ ಮುತ್ತಿಗೆ ಕೆಟ್ಟು ನಿಂತಿದ್ದ KSRTC ಬಸ್‌ ರಿಪೇರಿ ವೇಳೆ ಕಾರು ಡಿಕ್ಕಿ-ಕಂಡಕ್ಟರ್‌  ಮೃತ BMTC: ಸ್ಕೂಟರ್​​ಗೆ ಸೈಡ್​ ಬಿಡಲಿಲ್ಲ ಎಂದು ಬಸ್‌ ಚಾಲಕನ ಮೇಲೆ ಕಿಡಿಗೇಡಿಯಿಂದ ಹಲ್ಲೆ- ಇದು 9ನೇ ಪ್ರಕರಣ- ಆತಂಕದಲ್ಲಿ ...