NEWSನಮ್ಮರಾಜ್ಯರಾಜಕೀಯ

ಮೇಲ್ಮನೆ ಸಭಾಪತಿ ಅವಿಶ್ವಾಸ: ಉಪಸಭಾಪತಿಯನ್ನೇ ಎಳೆದಾಡಿದ ಬಿಜೆಪಿ ಕಾಂಗ್ರೆಸ್‌ ಸದಸ್ಯರು

ವಿಜಯಪಥ ಸಮಗ್ರ ಸುದ್ದಿ
  • ವಿಜಯಪಥ ಸಮಗ್ರ ಸುದ್ದಿ

ಬೆಂಗಳೂರು: ವಿಧಾನ ಪರಿಷತ್ ಕಲಾಪ ಹೈ ಡ್ರಾಮಾಗೆ ಸಾಕ್ಷಿಯಾಗಿದ್ದು ಕಾಂಗ್ರೆಸ್ ಬಿಜೆಪಿ ಸದಸ್ಯರು ಪರಸ್ಪರ ಉಪಸಭಾಪತಿಗಳನ್ನು ಎಳೆದಾಡುವ ಮೂಲಕ ದುರ್ವರ್ತನೆ ತೋರಿದ್ದಾರೆ. ಅಲ್ಲದೆ ಕಾಂಗ್ರೆಸ್ ಸದಸ್ಯರು ಸಭಾಂಗಣದ ಬಾಗಿಲು ಒದ್ದು, ಸಭಾಪತಿ ಮುಂದಿನ ಗಾಜನ್ನು ಕಿತ್ತು ಹಾಕಿದ್ದಾರೆ.

ಬೆಳಗ್ಗೆ 11.10ರ ಸುಮಾರಿಗೆ ಕಲಾಪ ಆರಂಭಗೊಳ್ಳುತ್ತಿದ್ದಂತೆ ಸಭಾಪತಿ ಸ್ಥಾನದಲ್ಲಿ ಉಪ ಸಭಾಪತಿ ಜೆಡಿಎಸ್ ನ ಧರ್ಮೇಗೌಡ ಕುಳಿತಿದ್ದನ್ನು ಕಂಡು ಆಕ್ರೋಶಗೊಂಡ ಕಾಂಗ್ರೆಸ್ ಸದಸ್ಯರು ಅವರನ್ನು ಎಬ್ಬಿಸಿ ಎಳೆದೊಯ್ದರು. ಈ ವೇಳೆ ಬಿಜೆಪಿ ಮತ್ತು ಕಾಂಗ್ರೆಸ್ ಸದಸ್ಯರ ನಡುವೆ ನೂಕಾಟ, ತಳ್ಳಾಟ ನಡೆಯಿತು. ಬಿಜೆಪಿ ಸದಸ್ಯರು ಮತ್ತೆ ಅವರನ್ನು ಕರೆತಂದರು. ಈ ವೇಳೆ ಕಾಂಗ್ರೆಸ್ ಸದಸ್ಯ ಬಸವರಾಜ ಪಾಟೀಲ ಇಟಗಿ ಅವರನ್ನು ಸಭಾಪತಿ ಪೀಠದಲ್ಲಿ ಕಾಂಗ್ರೆಸ್ ಸದಸ್ಯರು ಕುಳ್ಳಿರಿಸಿ ಅವರ ಸುತ್ತಲೂ ನಿಂತುಕೊಂಡರು.

ಪೀಠದ ಮುಂದೆ ಎರಡು ಪಕ್ಷಗಳ ಸದಸ್ಯರು ಹೈಡ್ರಾಮ ಮಾಡಿದ್ದು ಬಿಜೆಪಿ ಸದಸ್ಯರು ಸಭಾಪತಿ ಬರದಂತೆ ಸಭಾಂಗಣ ಬಾಗಿಲನ್ನು ಮುಚ್ಚಿದ್ದಾರೆ. ಈ ವೇಳೆ ಕಾಂಗ್ರೆಸ್‌ ಸದಸ್ಯರು ಬಾಗಿಲನ್ನು ಕಾಲಿನಲ್ಲಿ ಒದ್ದು ಬಾಗಿಲು ತೆರೆದರು. ಇದಕ್ಕೆ ಬಿಜೆಪಿ ಸದಸ್ಯರು ವಿರೋಧ ವ್ಯಕ್ತಪಡಿಸಿದ್ದಾರೆ.

ಒಟ್ಟಾರೆ ವಿಧಾನ ಪರಿಷತ್ ಇಂದು ಅಕ್ಷರಶಃ ರಣಾಂಗಣವಾಗಿಯಿತು. ಸಭಾಪತಿ ವಿಷಯದಲ್ಲಿ ಕಾಂಗ್ರೆಸ್ – ಬಿಜೆಪಿ ಸದಸ್ಯರ ನಡುವೆ ವಾಗ್ಯುದ್ಧ, ಕೈ ಕೈ ಮಿಲಾಯಿಸುವಿಕೆ, ನೂಕಾಟ, ತಳ್ಳಾಟಕ್ಕೂ ಸಾಕ್ಷಿಯಾಯಿತು.

ಸಭಾಪತಿ ವಿರುದ್ಧ ಸಲ್ಲಿಸಿರುವ ಅವಿಶ್ವಾಸ ನಿರ್ಣಯ ಸೂಚನೆಯ ಬಗ್ಗೆ ಮೊದಲು ಪ್ರಸ್ತಾಪವಾಗಬೇಕು ಎಂದು ಜೆಡಿಎಸ್- ಬಿಜೆಪಿ ಸದಸ್ಯರು ಒತ್ತಾಯಿಸಿ ಘೋಷಣೆ ಕೂಗಿದರು. ಕಡಿಮೆ ಸಂಖ್ಯೆಯಲ್ಲಿದ್ದ ಮಾರ್ಷಲ್ ಗಳಿಗೆ ಪರಿಸ್ಥಿತಿಯನ್ನು ನಿಭಾಯಿಸಲು ಸಾಧ್ಯವಾಗಲಿಲ್ಲ. ಈ ಮಧ್ಯೆ ಸಭಾಪತಿ ಪ್ರತಾಪ್ ಚಂದ್ರ ಶೆಟ್ಟಿ ಕಲಾಪಕ್ಕೆ ಆಗಮಿಸಿ ಕಲಾಪವನ್ನು ಅನಿರ್ದಿಷ್ಟಾವಧಿಗೆ ಮುಂದೂಡಿದರು.

Leave a Reply

error: Content is protected !!
LATEST
ನ.27 "ನಿಧಿ ಆಪ್ಕೆ ನಿಕಟ್" ಇಪಿಎಸ್ ಪಿಂಚಣಿದಾರರ ಪ್ರತಿಭಟನೆ ಬೆಂಗ್ರಾ: ವಿವೇಕಾನಂದರ ಜನ್ಮ ದಿನ ಅಂಗವಾಗಿ ನ.30ರಂದು ಯುವ ಜನೋತ್ಸವ ಕಾಂಗ್ರೆಸ್‌ ತನ್ನ ಪ್ರಣಾಳಿಕೆಯಲ್ಲೇ ಸರಿ ಸಮಾನ ವೇತನ ಘೋಷಣೆ ಮಾಡಿದೆ: ಸರ್ಕಾರ ಕೊಡಲು ಸಿದ್ಧವಿದ್ದರೂ ಕ್ರಿಯಾ ಸಮಿತಿ ಕ್... ಸರಿಸಮಾನ ವೇತನದ ನಿರ್ಧಾರ: ನಮಗೆ ಸಾರಿಗೆ ಸಚಿವರು ಕೊಟ್ಟ ಭರವಸೆ ಶೀಘ್ರ ಈಡೇರಲಿದೆ ಎಂದ ಅಧಿಕಾರಿ, ಮೇಲ್ವಿಚಾರಕರ ಮುಖಂಡ... KSRTC: ಸ್ವಯಂ ಘೋಷಿತ ಕಾರ್ಮಿಕ ನಾಯಕರ "ಚೌಕಾಶಿ" ವೇತನ ಒಪ್ಪಂದಕ್ಕೆ ಇತೀಶ್ರೀ ಹಾಡಿ - ಎಂಡಿಗೆ ಮನವಿ NWKRTC: ತಾಂತ್ರಿಕ ದೋಷದಿಂದ ಚಾಲಕನ ನಿಯಂತ್ರಣ ತಪ್ಪಿ ಮರಕ್ಕೆ ಡಿಕ್ಕಿ ಹೊಡೆದ ಬಸ್‌- ಚಾಲನಾ ಸಿಬ್ಬಂದಿಗಳಿಗೆ ಗಾಯ ನಿರುದ್ಯೋಗಿ ಯುವಕ - ಯುವತಿಯರಿಗೆ ಮಾತ್ರ: PM ಇಂಟರ್ನ್​ಶಿಪ್ಪ್‌ಗೆ ಅರ್ಜಿ ಹಾಕಿ -ಪ್ರತಿ ತಿಂಗಳು ₹5000 ಭತ್ಯೆ ಪಡೆಯಿರ... KSRTC ನೌಕರರು ಈಗಾಗಲೇ ಮುಷ್ಕರಕ್ಕೆ ಸಿದ್ಧ, ನಾವು ದಿನಾಂಕ ಘೋಷಣೆ ಮಾಡುತ್ತೇವೆ -ಸರ್ಕಾರಕ್ಕೆ ಜಂಟಿ ಕ್ರಿಯಾ ಸಮಿತಿ ಎಚ್... KSRTC: ಮೊಬೈಲ್‌ನಲ್ಲಿ ಮಾತನಾಡಿಕೊಂಡು ಬಸ್‌ ಚಾಲನೆ - ಚಾಲಕನ ನಿರ್ಲಕ್ಷ್ಯಕ್ಕೆ ಕಿಡಿ KSRTC ಕೋಲಾರ: ನೌಕರರ ಪರ ನಿಲ್ಲಬೇಕಾದ ಕಾರ್ಮಿಕ ಕಲ್ಯಾಣ ಅಧಿಕಾರಿಯೇ ವಿರುದ್ಧ ನಿಂತರೆ ಎಲ್ಲಿ ಸಿಗಲಿದೆ ನ್ಯಾಯ?