CrimeNEWSನಮ್ಮಜಿಲ್ಲೆ

ಬೈಕ್ ಓವರ್ ಟೇಕ್ ವಿಚಾರಕ್ಕೆ ಗಲಾಟೆ: ಯುವಕನ ಕೊಲೆಯಲ್ಲಿ ಅಂತ್ಯ

ವಿಜಯಪಥ ಸಮಗ್ರ ಸುದ್ದಿ

ಉತ್ತರ ಕನ್ನಡ: ಬೈಕ್ ಓವರ್ ಟೇಕ್ ಮಾಡುವ ವಿಚಾರಕ್ಕೆ ನಡೆದ ಗಲಾಟೆಯಲ್ಲಿ ಯುವಕನೋರ್ವನನ್ನು ಭೀಕರವಾಗಿ ಕೊಲೆ ಮಾಡಿರುವ ಘಟನೆ ಯಲ್ಲಾಪುರ ತಾಲೂಕಿನ ಹುಣಶೆಟ್ಟಿಕೊಪ್ಪ ಜಾತ್ರೆಯಲ್ಲಿ ನಡೆದಿದೆ.

ಹಳಿಯಾಳ ಮೂಲದ ಪ್ರಜ್ವಲ್ ಪ್ರಕಾಶ್ ಕಕ್ಕೇರಿಕರ (24) ಹತ್ಯೆಯಾದ ಯುವಕ.

ಸಾಣಾ ಮರಾಠಿ, ಅನಿಕೇತ್ ಮಿರಾಶಿ, ರಿತೇಶ್ ಪಾಟೀಲ್, ಪಾಂಡುರಂಗ ಕಳಸುರಕರ್, ಪ್ರಶಾಂತ್ ಕಲಸುರಕರ್ ಹಾಗೂ ರೂಪೇಶ್ ಕೊಲೆ ಆರೋಪಿಗಳಾಗಿದ್ದಾರೆ.

ಯಲ್ಲಾಪುರ ತಾಲೂಕಿನ ಹುಣಶೆಟ್ಟಿಕೊಪ್ಪ ಜಾತ್ರೆಗೆ ಬೈಕ್‌ನಲ್ಲಿ ತೆರಳುತ್ತಿತ್ತಾಗ ಓವರ್ ಟೇಕ್ ಮಾಡುವ ವಿಚಾರಕ್ಕೆ ಯುವಕ ಹಾಗೂ ಒಂದು ಗುಂಪಿನ ನಡುವೆ ಗಲಾಟೆ ನಡೆದಿದೆ. ಆ ಗಲಾಟೆ ತಾರಕಕ್ಕೆ ಏರುತ್ತಿದ್ದಂತೆ ಗುಂಪಿನಲ್ಲಿದ್ದವರು ಯುವಕನನ್ನು ಹತ್ಯೆ ಮಾಡಿ ಪರಾರಿಯಾಗಿದ್ದಾರೆ.

ಈ ಸಂಬಂಧ ಲ್ಲಾಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ತಲೆ ಮರೆಸಿಕೊಂಡಿರುವ ಹಂತಕರ ಪತ್ತೆಗೆ ಪೊಲೀಸರು ಬಲೆ ಬೀಸಿದ್ದಾರೆ.

Leave a Reply

error: Content is protected !!
LATEST
ಅತಿಯಾಗಿ ಲೈಂಗಿಕ ಕ್ರಿಯೆಗೆ ಪೀಡಿಸಿದ್ದರಿಂದ ಒಂಟಿ ಮಹಿಳೆಯ ಕೊಲೆ: ಹತ್ಯೆ ರಹಸ್ಯ ಬೇಧಿಸಿದ ಪೊಲೀಸರು ಆಗಸದಲ್ಲೇ ಡಿಕ್ಕಿ ಹೊಡೆದುಕೊಂಡ ನೌಕಾಪಡೆಯ 2 ಹೆಲಿಕಾಪ್ಟರ್‌ಗಳು ನೋಡ ನೋಡುತ್ತಿದ್ದಂತೆ ಪತನ: 10 ಮಂದಿ ಮೃತ KSRTC: ಸಾರಿಗೆ ನಿಗಮಗಳ ಖಾಸಗೀಕರಣಕ್ಕೆ ಅವಕಾಶ ನೀಡುತ್ತಿದೆ ಕೇಂದ್ರ ಬೃಹತ್‌ ಕೈಗಾರಿಕಾ ಸಚಿವಾಲಯ KSRTC: ಏಪ್ರಿಲ್‌-ಜೂನ್‌ ಪೀಕ್‌ ಸೀಸನ್‌ ಎಂದು ಚಾಲನಾ ಸಿಬ್ಬಂದಿಗಳಿಗೆ ರಜೆ ಕೊಡದೆ ಹಿಂಸಿಸುತ್ತಿರುವ ಅಧಿಕಾರಿಗಳು..! ಬಿಜೆಪಿ ರಾಜಕೀಯ ಲಾಭಕ್ಕೆ ನೇಹಾ ಪ್ರಕರಣ ಬಳಸಿಕೊಳ್ಳುತ್ತಿರುವುದು ನಾಚಿಕೆಗೇಡಿನ ವಿಚಾರ: ಜಗದೀಶ್ ವಿ. ಸದಂ IVRS, ಬಲ್ಕ್ SMS ಮೂಲಕ ಮತದಾರರಿಗೆ ಮೊಬೈಲ್‌ ಸಂದೇಶ: ತುಷಾರ್ ಗಿರಿನಾಥ್ KSRTC: ವೇತನ ಸಮಸ್ಯೆ ಪರಿಹರಿಸದೆ ಅಸಡ್ಡೆ ತೋರಲು ಇವರು ಕಾರಣಗಳು....!? ರಾಜಕೀಯ ಪಕ್ಷಗಳ ಚುನಾವಣಾ ಪ್ರಣಾಳಿಕೆಗಳು ಜನರ ವಂಚಿಸುವ ಮಂತ್ರ ದಂಡಗಳು : ಕುರುಬೂರ್‌ ಶಾಂತಕುಮಾರ್‌ 'ನಮ್ಮ ನಡೆ ಮತಗಟ್ಟೆಯ ಕಡೆ' ಜಾಗೃತಿ ಜಾಥಾಗೆ ಮನೋಜ್ ಕುಮಾರ್ ಮೀನಾ, ತುಷಾರ್ ಗಿರಿನಾಥ್ ಚಾಲನೆ ಕೊಡಗು: ಹುಲಿದಾಳಿಗೆ ಅಸ್ಸಾಂ ಮೂಲದ ಕಾರ್ಮಿಕ ಬಲಿ