NEWSನಮ್ಮಜಿಲ್ಲೆನಮ್ಮರಾಜ್ಯರಾಜಕೀಯ

ಅಧಿವೇಶನದಲ್ಲಿ ಸಾರಿಗೆ ನೌಕರರ ಬೇಡಿಕೆ ಈಡೇರಿಕೆ ಸಂಬಂಧ ಕೋಲಾಹಲ : ಸದನದ ಬಾವಿಗಿಳಿದು ವಿಪಕ್ಷಗಳ ಪ್ರತಿಭಟನೆ

ವಿಜಯಪಥ ಸಮಗ್ರ ಸುದ್ದಿ

ಬೆಳಗಾವಿ: ಸದನದಲ್ಲಿ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನೌಕರರ ಸಮಸ್ಯೆ ನಿವಾರಣೆ ಮಾಡುವ ಸಂಬಂಧ ಆಡಳಿ ಮತ್ತು ವಿಪಕ್ಷಗಳ ನಡುವೆ ಭಾರಿ ವಾಗ್ವಾದ ನಡೆದಿದ್ದು, ಸದನದಲ್ಲಿ ಕೋಲಾಹಲವೇ ಸೃಷ್ಟಿಯಾಗಿದೆ.

ಸಾರಿಗೆ ನೌಕರರ ಬೇಡಿಕೆ ಈಡೇರಿಸಿ ಎಂದು ಕಾಂಗ್ರೆಸ್‌ ಮತ್ತು ಜೆಡಿಎಸ್‌ ಶಾಸಕರು ಪಟ್ಟುಹಿಡಿದರು ಈ ವೇಳೆ ಸಚಿವ ಗೋವಿಂದ ಕಾರಜೋಳ ಅವರು ವಿಪಕ್ಷ ಶಾಸಕರ ವಿರುದ್ಧ ಏಕವಚನ ಪ್ರಯೋಗ ಮಾಡಿದರು. ಹೀಗಾಗಿ ಸದಸನಲ್ಲಿ ಕೋಲಹಲವೇ ಸೃಷ್ಟಿಯಾಯಿತು.

ಇದನ್ನು ಖಂಡಿಸಿ ಸದನದ ಬಾವಿಗಿಳಿದು ವಿಪಕ್ಷ ಶಾಸಕರು ಆಡಳಿತ ಪಕ್ಷದ ವಿರುದ್ಧ ಧಿಕ್ಕಾರ ಕೂಗಿದರು. ಅಲ್ಲದ ವಿಪಕ್ಷ ನಾಯಕ ಸಿದ್ದರಾಮಯ್ಯ ಅವರು ಕೂಡ ಸರ್ಕಾರದ ಸಚಿವರ ನಡೆಯನ್ನು ಖಂಡಿಸಿ ತೀವ್ರ ತರಾಟೆಗೆ ತೆಗೆದುಕೊಂಡರು.

ಇನ್ನು ನೌಕರರ ಬೇಡಿಕೆ ಈಡೆರಿಸುವಲ್ಲಿ ಸರ್ಕಾರಕ್ಕೆ ಏನು ಸಮಸ್ಯೆಯಾಗಿದೆ ಎಂದು ಕಿಡಿಕಾರಿದ ವಿಪಕ್ಷಗಳಿಗೆ ಸಚಿವ ಶ್ರೀರಾಮುಲು ಅವರು ಈ ಬಗ್ಗೆ ಈಗಾಗಲೇ ಮಾತುಕತೆ ಮಾಡಿದ್ದೇನೆ ಸದನ ಮುಕ್ತಾಯವಾಗುವುದರೊಳಗೆ ತೀರ್ಮಾನವಾಗಲಿದೆ ಎಂದು ಉತ್ತರ ನೀಡಿದರು.

ಈ ವೇಳೆ ಸಾರಿಗೆ ನೌಕರರ ಬೇಡಿಕೆ ಈಡೇರಿಸಬೇಕು ಎಂಬ ಬಗ್ಗೆ ಮಾತನಾಡಲು ಜೆಡಿಎಸ್ ಶಾಸಕ ಡಿ.ಸಿ. ತಮ್ಮಣ್ಣ ಮತ್ತು ಕಾಂಗ್ರೆಸ್‌ ಶಾಸಕರಿಗೆ ಮಾತನಾಡಲು ಅವಕಾಶ ನೀಡದಂತೆ ಬಿಜೆಪಿಯ ಸಚಿವರು ಪಟ್ಟು ಹಿಡಿದ್ದಾರೆ. ಇದರಿಂದ ಸದಸನಲ್ಲಿ ಗದ್ದಲ ಉಂಟಾಗಿ ಸದನವನ್ನು 10 ನಿಮಿಷಗಳ ಕಾಲ ಮುಂದೂಡಲಾಯಿತು.

Leave a Reply

error: Content is protected !!
LATEST
ರೈಲ್ವೆ ನೌಕರರಿಗೆ ದಸರಾ ಹಬ್ಬದ ಬಂಪರ್: 78 ದಿನಗಳ ಸಂಬಳಕ್ಕೆ ಸಮನಾದ ಬೋನಸ್ ಘೋಷಣೆ ಅ.6ರಂದು ನಿವೃತ್ತ ನೌಕರರ ಸಭೆ: BMTC & KSRTC ನಿವೃತ್ತ ನೌಕರರ ಸಂಘದ ಕಾರ್ಯಧ್ಯಕ್ಷ ನಂಜುಂಡೇಗೌಡ KSRTC ತುಮಕೂರು: ಖಾಸಗಿ ಚಾಲಕರಿಗೆ ಮಣೆ ಹಾಕುವ ಡಿಸಿ, ಡಿಎಂಇ 20-30ವರ್ಷಗಳಿಂದ ಸೇವೆ ಸಲ್ಲಿಸುತ್ತಿರುವ ಚಾಲಕರ ಕಡೆಗಣನೆ... ಕರ್ನಾಟಕ - ಆಂಧ್ರ ಗಡಿಯಲ್ಲಿ ಕೆಎಸ್‌ಆರ್‌ಟಿಸಿ ಬಸ್‌ ಸೇವೆ ಹೆಚ್ಚಿಸಿ: ಎರಡೂ ನಿಗಮಗಳ ಎಂಡಿಗಳಿಗೆ ಪ್ರಯಾಣಿಕರ ಒತ್ತಾಯ ಹೆಚ್ಚುವರಿ ಪಿಂಚಣಿಗೆ ಆಗ್ರಹಿಸಿ ಇಪಿಎಸ್ ಪಿಂಚಣಿದಾರರ ಬೃಹತ್ ಪ್ರತಿಭಟನೆ KSRTC ನಿವೃತ್ತ ನೌಕರರಿಗೆ ಹೆಚ್ಚಿನ ಪಿಂಚಣಿ ಅನುಷ್ಠಾನ ಶೀಘ್ರ ಜಾರಿಗೊಳಿಸಿ: ಕೇಂದ್ರದ ರಾಜ್ಯ ಕಾರ್ಮಿಕ ಸಚಿವರಿಗೆ ಸಂಸದ... ಬಿಸ್ಮಿಲ್ಲ ನಗರದ ಸಮುದಾಯ ಭವನ ಕಾಮಗಾರಿ ಪೂರ್ಣಗೊಳಿಸಲು ಎಎಪಿ ಆಗ್ರಹ KSRTC ಹೊಳೆನರಸೀಪುರ ಘಟಕದ ನೌಕರರಿಗೆ ಕಿರುಕುಳ ಕೊಡುತ್ತಿರುವ DME- ದೂರು ನೀಡಿ 5 ತಿಂಗಳಾದರೂ ಸ್ಪಂದಿಸದ ಎಂಡಿ! BMTC ಚಾಲನಾ ಸಿಬ್ಬಂದಿಗಳಿಗೆ ಗನ್ ಲೈಸನ್ಸ್ ಪಡೆಯಲು ಅನುಮತಿ ನೀಡಬೇಕು: ಲಿಖಿತವಾಗಿ ಎಂಡಿಗೆ ಮನವಿ ಸಲ್ಲಿಸಿದ ನೌಕರ ಅರ್ಕಾವತಿ ಡಿನೋಟಿಫಿಕೇಷನ್ ಪ್ರಕರಣ ಕುರಿತ ಕೆಂಪಣ್ಣ ಆಯೋಗದ ವರದಿ ತಕ್ಷಣ ಬಹಿರಂಗ ಪಡಿಸಿ, ಸದನದಲ್ಲಿ ಮಂಡಿಸಿ: ಎಎಪಿ ಒತ್...