ಬೆಂಗಳೂರು: ರಾಜ್ಯದ ಬಹುತೇಕ ಎಲ್ಲ ಜಿಲ್ಲೆಯಲ್ಲಿ ಭೂಮಿ ಹದ ಮಾಡುವ ಕೃಷಿ ಚಟುವಟಿಕೆಗಳು ಬಿರುಸುಗೊಂಡಿದ್ದು, ರೈತರು ಡಿಎಪಿ ರಸಗೊಬ್ಬರ ಬದಲಿಗೆ ಸಂಯುಕ್ತ ರಸಗೊಬ್ಬರ ಬಳಸುವಂತೆ ಕೃಷಿ ಇಲಾಖೆ ಮಾರ್ಗಸೂಚಿ ಹೊರಡಿಸಿದೆ.
ಸಸ್ಯಗಳ ಬೆಳವಣಿಗೆಗೆ 17 ಪೋಷಕಾಂಶಗಳ ಅಗತ್ಯವಿರುತ್ತದೆ. ಅವುಗಳಲ್ಲಿ ಗಾಳಿ ಮತ್ತು ನೀರಿನ ಮೂಲಕ ಇಂಗಾಲ, ಜಲಜನಕ ಮತ್ತು ಆಮ್ಲಜನಕವು ಸ್ವಾಭಾವಿಕವಾಗಿ ದೊರೆಯಲಿದ್ದು, ಉಳಿದ 14 ಪೋಷಕಾಂಶಗಳಿಗೆ ಸಂಯುಕ್ತ ರಸಗೊಬ್ಬರ ಬಳಕೆಗೆ ಸಲಹೆ ನೀಡಲಾಗಿದೆ.
ಸಾರಜನಕ, ರಂಜಕ, ಪೊಟ್ಯಾಷ್, ಕ್ಯಾಲ್ಸಿಯಂ, ಮೆಗ್ನೀಷಿಯಂ, ಗಂಧಕ, ಕಬ್ಬಿಣ, ಜಿಂಕ್, ಬೋರಾನ್, ತಾಮ್ರ ಮ್ಯಾಂಗನೀಸ್, ಮಾಲಿಬಿನಂ ಕ್ಲೋರಿನ್ ಹಾಗೂ ನಿಕ್ಕಲ್ ಅಗತ್ಯವಿದ್ದು, ಇವುಗಳಲ್ಲಿ ಯಾವುದೇ ಒಂದು ಪೋಷಾಕಾಂಶದ ಕೊರತೆಯಾದರೂ ಸಸ್ಯಗಳ ಬೆಳವಣಿಗೆ ಮತ್ತು ಅಭಿವೃದ್ಧಿಯ ಮೇಲೆ ಪರಿಣಾಮ ಬೀರಿ ಇಳುವರಿ ಕುಂಠಿತವಾಗುತ್ತದೆ.
ಆದ್ದರಿಂದ ಬಿತ್ತನೆಗೆ ಮುಂಚಿತವಾಗಿ ಕೊಟ್ಟಿಗೆ ಗೊಬ್ಬರ/ ಹಸಿರೆಲೆ ಗೊಬ್ಬರ/ ಹಿಂಡಿ ಇತ್ಯಾದಿ ಸಾವಯವ ಗೊಬ್ಬರ ಬಳಕೆ ಮಾಡುವುದರಿಂದ ಇಳುವರಿ ಹೆಚ್ಚಾಗಲಿದೆ.
ಬಿತ್ತನೆ ಸಮಯದಲ್ಲಿ ಬೆಳೆಗಳಿಗೆ ಶಿಫಾರಸ್ಸಿನಂತೆ ಸಮತೋಲನಾತ್ಮಕ ರಸಗೊಬ್ಬರಗಳ ಬಳಸುವುದರಿಂದ ಸರಿದೂಗಿಸಬಹುದು. ಇದಕ್ಕಾಗಿ ರೈತರು ಕೇವಲ ಒಂದೇ ಸಂಸ್ಥೆಯ ಅಥವಾ ಒಂದೇ ವಿಧಧ ರಸಗೊಬ್ಬರಕ್ಕೆ ಆದ್ಯತೆ ನೀಡದೆ ಮಾರುಕಟ್ಟೆಯಲ್ಲಿ ದೊರೆಯುವ ಡಿ.ಎ.ಪಿ ರಸಗೊಬ್ಬರಕ್ಕೆ ಪರ್ಯಾಯವಾಗಿ ಗಂಧಕ ಒದಗಿಸುವ 20:20:0:13 ಹಾಗೂ ಇತರೆ ಸಂಯುಕ್ತ ರಸಗೊಬ್ಬರಗಳಾದ 15:15:15, 10:26:26, 12:32:16, 22:22:11, 17:17:17, 14:28:14, 19:19:19, 20:10:10, 14:35:14 ರಸಗೊಬ್ಬರಗಳನ್ನೂ ಸಹ ಬಳಸಬಹುದು. ಬಿತ್ತನೆ ನಂತರ ನ್ಯಾನೋ ಡಿಎಪಿ ಮತ್ತು ನ್ಯಾನೋ ಯೂರಿಯಾ ಪ್ಲಸ್ ಗಳನ್ನು ಸಹ ಅವಶ್ಯಕತೆಗೆ ಅನುಗುಣವಾಗಿ ಸಿಂಪರಣೆಯಾಗಿ ಬಳಸಬಹುದು.
ಸಾಮಾನ್ಯವಾಗಿ 1 ಹಕ್ಟೇರ್ ರಾಗಿ ಬೆಳೆ ಬೆಳೆಯಲು ಯೂರಿಯಾ ಮತ್ತು ಡಿ.ಎ.ಪಿ ಬಳಸಿದರೆ ರೂ, 1630/-ಬೇಸಾಯ ವೆಚ್ಚವಾಗುತ್ತದೆ. ರೈತರು ಯೂರಿಯಾ ಹಾಗೂ ಡಿಎಪಿಯನ್ನು ಹೆಚ್ಚಾಗಿ ಬಳಸುತ್ತಿದ್ದು, ಇವುಗಳಲ್ಲಿ ಸಾರಜನಕ ಮತ್ತು ರಂಜಕದ ಅಂಶ ಮಾತ್ರವಿರುತ್ತದೆ.

ಆದರೆ ಬೆಳೆಗಳಿಗೆ ರೋಗ ನಿರೋದಕ ಶಕ್ತಿ ನೀಡಿ ಕಾಳಿನ ತೂಕ ಹೆಚ್ಚಿಸಲು ಅತ್ಯಂತ ಅವಶ್ಯಕವಾಗಿರುವ ಪೋಟ್ಯಾಷ್ ಲಭ್ಯವಿರುವುದಿಲ್ಲ. ಪ್ರತ್ಯೇಕವಾಗಿ ಪೋಟ್ಯಾಷ್ ಪೋಷಕಾಂಶ ಸೇರಿಸಲು 33 ಕೆ.ಜಿ ಎಂಒಪಿ ಬೇಕಾಗುತ್ತದೆ. 33 ಕೆ.ಜಿ ಎಂಒಪಿಗೆ 1132 ರೂ.ಗಳು ವೆಚ್ಚವಾಗುತ್ತದೆ. ಒಟ್ಟಾರೆ ಪ್ರತಿ ಹೆಕ್ಟೇರಿಗೆ 2761 ರೂ.ಗಳು ವೆಚ್ಚವಾಗುತ್ತದೆ.
ಇತರೆ ಸಂಯುಕ್ತ ರಸಗೊಬ್ಬರಗಳಾದ 14:35:14, 11:30:14, 10:26:26 ಬಳಸಿದ್ದಲ್ಲಿ ಎಲ್ಲಾ ಎನ್.ಪಿ.ಕೆ ಪೋಷಕಾಂಶಗಳು ಲಭ್ಯವಿದ್ದು, ಪ್ರತಿ ಹೆಕ್ಟೇರಿಗೆ 2500 ಗಳಿಗಿಂತ ಕಡಿಮೆ ವೆಚ್ಚವಾಗುತ್ತದೆ. ಸಂಯುಕ್ತ ರಸಗೊಬ್ಬರಗಳನ್ನು ಬಳಸುವುದರಿಂದ ಸಸಿಗಳಿಗೆ ಅವಶ್ಯವಿರುವ ಪೊಟ್ಯಾಷ್ ಪೋಷಕಾಂಶವು ಲಭ್ಯವಾಗಿ ಸಸಿಗಳಲ್ಲಿ ಕಿಣ್ವಗಳನ್ನು ಸಕ್ರಿಯಗೊಳಿಸಿ ನೀರು ಮತ್ತು ಪೋಷಕಾಂಶಗಳ ಸಾಗಾಣೆಗೆ ಸಹಾಯ ಮಾಡುವುದಲ್ಲದೇ ಬರ ಪರಿಸ್ಥಿತಿಯಲ್ಲಿಯೂ ಬೆಳೆಗಳನ್ನು ಹಸಿರಾಗಿಡಲು ಸಹಾಯ ಮಾಡುತ್ತದೆ ಹಾಗೂ ಬೆಳೆ ಉತ್ಪಾದಕತೆ ಮತ್ತು ಗುಣಮಟ್ಟ ಸುಧಾರಿಸಲು ಕಾರಣವಾಗುತ್ತದೆ.
ಆದ್ದರಿಂದ ಜಿಲ್ಲೆಯ ಪ್ರಮುಖ ಬೆಳೆಯಾದ ರಾಗಿ ಬೆಳೆಯ ಬೇಸಾಯ ವೆಚ್ಚ ಕಡಿಮೆ ಮಾಡಲು ಹಾಗೂ ಮಣ್ಣಿಗೆ ರಂಜಕದ ಪೋಷಕಾಂಶ ಸೇರಿಸುವ ಉದ್ದೇಶದಿಂದ ಡಿಎಪಿ ರಸಗೊಬ್ಬರದ ಬದಲಾಗಿ ಅಥವಾ ಪರ್ಯಾಯವಾಗಿ ಕಾಂಪ್ಲೆಕ್ಸ್ ರಸಗೊಬ್ಬರಗಳನ್ನು ಬಳಸಲು ಕೃಷಿ ಇಲಾಖೆ ರೈತರಿಗೆ ಸಲಹೆ ನೀಡಿದೆ.
Related


You Might Also Like
ಬೆಳ್ಳಂಬೆಳಗ್ಗೆ ನಡು ರಸ್ತೆಯಲ್ಲೇ ಧಗಧಗಿಸಿದ ಬಿಎಂಟಿಸಿ ಬಸ್- ಸದ್ಯ 75 ಪ್ರಯಾಣಿಕರು ಸೇಫ್
ಬೆಂಗಳೂರು: ಚಲಿಸುತ್ತಿದ್ದ ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆ ಬಸ್ ಇಂಜಿನ್ನಲ್ಲಿ ಬೆಂಕಿ ಕಾಣಿಸಿಕೊಂಡ ಕ್ಷಣಾರ್ಧದಲ್ಲೆ ಹೊತ್ತು ಉರಿದು ಸಂರ್ಪೂಣ ಸುಟ್ಟು ಕರಕಲಾದ ಘಟನೆ ನಗರದ ಎಚ್ಎಎಲ್ ಮುಖ್ಯದ್ವಾರದ...
ಬೆಳ್ಳಂಬೆಳಗ್ಗೆ ಅನಿರೀಕ್ಷಿತ ಭೇಟಿ ನೀಡಿ ಹಾಜರಾತಿ ಪರಿಶೀಲಿಸಿದ ಆಯುಕ್ತರು: ಪೌರ ಕಾರ್ಮಿಕರ ಮೇಲ್ವಿಚಾರಕರಿಬ್ಬರ ಮೇಲೆ ಕ್ರಮ
ಬೆಂಗಳೂರು: ಸರ್ವಜ್ಞನಗರ ಕ್ಷೇತ್ರದ ಬಾಣಸವಾಡಿಯ ಬಿಎಸ್ಎನ್ಎಲ್ ಮಸ್ಟರಿಂಗ್ ಪಾಯಿಂಟ್ (ಭುವನಗಿರಿ ಪಾರ್ಕ್) ನಲ್ಲಿ ಇಂದು ಮುಂಜಾನೆ ಬೆಂಗಳೂರು ಉತ್ತರ ನಗರ ಪಾಲಿಕೆ ಆಯುಕ್ತ ಪೊಮ್ಮಲ ಸುನೀಲ್ ಕುಮಾರ್...
ನಾಡಹಬ್ಬ ದಸರಾಗೆ ರಾಜವಂಶಸ್ಥೆ ಪ್ರಮೋದಾ ದೇವಿ ಒಡೆಯರ ಅಧಿಕೃತವಾಗಿ ಆಹ್ವಾನಿಸಿದ ಜಿಲ್ಲಾ ಉಸ್ತುವಾರಿ ಸಚಿವ HCM
ಮೈಸೂರು: ನಾಡಹಬ್ಬ ದಸರಾ ಮಹೋತ್ಸವಕ್ಕೆ ರಾಜವಂಶಸ್ಥೆ ಪ್ರಮೋದಾ ದೇವಿ ಒಡೆಯರ್ ಅವರನ್ನು ಜಿಲ್ಲಾ ಉಸ್ತುವಾರಿ ಸಚಿವ ಎಚ್.ಸಿ ಮಹದೇವಪ್ಪ ಅಧಿಕೃತವಾಗಿ ಆಹ್ವಾನಿಸಿದರು. ಇದೇ ಸೆ.22 ರಂದು ಪ್ರಾರಂಭವಾಗಲಿರುವ...
ಮೊಸಳೆಹೊಸಳ್ಳಿ ದುರಂತ: ಮೃತರ ಮನೆಗಳಿಗೆ ವ್ಹೀಲ್ ಚೇರ್ನಲ್ಲೇ ತೆರಳಿ ಸಾಂತ್ವನ ಹೇಳಿದ ಮಾಜಿ ಪ್ರಧಾನಿ ಎಚ್ಡಿಡಿ
ಹಾಸನ: ಜಿಲ್ಲೆಯ ಮೊಸಳೆಹೊಸಳ್ಳಿಯಲ್ಲಿ ಮೊನ್ನೆ ನಡೆದ ಅಪಘಾತ ಪ್ರಕರಣ ನಿಜಕ್ಕೂ ಘನಘೋರ. ಅಪಘಾತದಲ್ಲಿ ಗಂಭೀರ ಗಾಯಗೊಂಡು ಚಿಕಿತ್ಸೆ ಪಡೆಯುತ್ತಿದ್ದ ಚಂದನ ಚಿಕಿತ್ಸೆ ಫಲಿಸದೇ ಮೃತಪಟ್ಟಿದ್ದಾರೆ. ಈ ಮೂಲಕ...
ಸಾಲಬಾಧೆ-ಗಂಡ, ಇಬ್ಬರು ಮಕ್ಕಳು ಸೇರಿ ನಾಲ್ವರು ಆತ್ಮಹತ್ಯೆಗೆ ಯತ್ನ ಮೂವರು ಮೃತ: ಸಾವು ಬದುಕಿನ ನಡುವೆ ತಾಯಿ ಸೆಣಸಾಟ
ಹೊಸಕೋಟೆ: ಸಾಲಬಾಧೆ ತಾಳಲಾರದೇ ಒಂದೇ ಕುಟುಂಬದ ನಾಲ್ವರು ಆತ್ಮಹತ್ಯೆಗೆ ಯತ್ನಿಸಿದ್ದು, ಈ ಪೈಕಿ ಮೂವರು ಮೃತಪಟ್ಟಿರುವ ಘಟನೆ ತಾಲೂಕಿನ ಗೊಣಕನಹಳ್ಳಿಯಲ್ಲಿ ಗ್ರಾಮದಲ್ಲಿ ನಡೆದಿದೆ. ಗಂಡ, ಇಬ್ಬರು ಮಕ್ಕಳನ್ನು...
KSRTC ಹಾಸನ: ಸತ್ಯ ಮರೆಮಾಚಿದ ತನಿಖಾ ಸಿಬ್ಬಂದಿ ವಿರುದ್ಧ ಕ್ರಮಕ್ಕೆ ಮುಂದಾದ ಡಿಸಿ
ಹಾಸನ: ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಸಂಸ್ಥೆಯ ಹಾಸನ ವಿಭಾಗದ ತನಿಖಾ ಸಿಬ್ಬಂದಿ ಸತ್ಯ ಮರೆಮಾಚಲು ಬಾಡಿ ಕ್ಯಾಮರಾ ಸರಿಯಾಗಿ ಕಾರ್ಯ ನಿರ್ವಹಿಸುತ್ತಿಲ್ಲ. ಕೆಲವೊಂದು ಸಮಯದಲ್ಲಿ ಹ್ಯಾಂಗ್...
KSRTC ಹಾಸನ: ತನಿಖಾಧಿಕಾರಿಗಳ ಬಾಡಿ ಕ್ಯಾಮೆರಾದ ವಿಡಿಯೋ ರೆಕಾರ್ಡಿಂಗ್ ಕೊಡಲು ವಿಫಲ- ಆರೋಪ ಪತ್ರ ಜಾರಿ ಮಾಡಿದ ಡಿಸಿ
ಹಾಸನ: ಸಾರಿಗೆ ಸಂಸ್ಥೆಯ ಮಾರ್ಗ ತನಿಖಾಧಿಕಾರಿಗಳು ಬಾಡಿ ಕ್ಯಾಮೆರಾವನ್ನು ಹಾಕಿಕೊಂಡು ತನಿಖೆ ಮಾಡದ ಪರಿಣಾಮ ಮಾಹಿತಿ ಆಯೋಗದಲ್ಲಿ ಪ್ರಕರಣ ದಾಖಲು ಮಾಡಿದ ನೌಕರನಿಗೆ ವಿಡಿಯೋ ರೆಕಾರ್ಡಿಂಗ್ ಕೊಡಲು...
ಮೆಜೆಸ್ಟಿಕ್ BMTC: ಟೀ ಚೆನ್ನಾಗಿರುವುದಿಲ್ಲ ಬೇರೆ ಅಂಗಡಿಗೆ ಹೋಗೋಣ ಎಂದಿದ್ದಕ್ಕೆ ಚಾಲಕನ ಮೇಲೆ ಹಲ್ಲೆ- ಆರೋಪಿ ಬಂಧನ
ಬೆಂಗಳೂರು: ಈ ಅಂಗಡಿಯಲ್ಲಿ ಬೇಡ ಇಲ್ಲಿ ಟೀ ಚೆನ್ನಾಗಿರುವುದಿಲ್ಲ ಎಂದು ಹೇಳಿ ಅಲ್ಲಿಯೇ ಪಕ್ಕದಲ್ಲಿದ್ದ ಟೀ ಅಂಗಡಿಗೆ ಹೋಗೋಣ ಎಂದು ಸಹೋದ್ಯೋಗಿಗೆ ಹೇಳಿದ್ದಕ್ಕೆ ಕುಪಿತನಾದ ಟೀ ಮಾರುವ...
KRSTC: ಅನ್ಯಮಾರ್ಗದಲ್ಲಿ ಹೋಗಲು ಮಹಿಳಾ ಕಂಡಕ್ಟರನ್ನು ರಾತ್ರಿ ಅರ್ಧದಲ್ಲೇ ಇಳಿಸಿಹೋದ ಸಹೋದ್ಯೋಗಿಗಳು…!
ಸಾರಿಗೆ ಚಾಲನಾ ಸಿಬ್ಬಂದಿಗಳಲ್ಲಿ ಒಬ್ಬರಿಗೊಬ್ಬರು ಆಗುವುದಿಲ್ಲ ಎಂಬುದಕ್ಕೆ ಇದು ಮತ್ತೊಂದು ನಿದರ್ಶನ ಬೆಂಗಳೂರು: ಕರ್ನಾಟಕ ರಾಜ್ಯ ರಸ್ತೆ ಸಾರಿಗೆಯ ನಾಲ್ಕೂ ನಿಗಮಗಳ ಬಹುತೇಕ ಎಲ್ಲ ಚಾಲನಾ ಸಿಬ್ಬಂದಿಗಳಲ್ಲಿ...