ಸ್ವಾವಲಂಬಿ ಬದುಕಿಗೆ ಸರ್ಕಾರ ಯೋಜನೆ ಬಳಸಿಕೊಳ್ಳಿ: ಗ್ರಾಮೀಣ ಮಹಿಳೆಯರಿಗೆ ಜಿಲ್ಲಾ ಪಂಚಾಯಿತಿ ಸಿಇಒ ಡಾ.ಅನುರಾಧ ಕರೆ

ಬೆಂಗಳೂರು: ಮಹಿಳೆಯರ ಸಬಲೀಕರಣಕ್ಕಾಗಿ ಸರ್ಕಾರವು ರಾಷ್ಟ್ರೀಯ ಗ್ರಾಮೀಣ ಜೀವನೋಪಾಯ ಅಭಿಯಾನದ ಮೂಲಕ ಹಲವು ಯೋಜನೆಗಳನ್ನು ಜಾರಿಗೆ ತಂದಿದ್ದು ಮಹಿಳೆಯರು ಇದರ ಸದುಪಯೋಗ ಪಡೆದುಕೊಳ್ಳಬೇಕು ಎಂದು ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಡಾ.ಕೆ.ಎನ್. ಅನುರಾಧ ಹೇಳಿದರು.
ಕೌಶಲ್ಯಾಭಿವೃದ್ಧಿ, ಉದ್ಯಮಶೀಲತೆ ಹಾಗೂ ಜೀವನೋಪಾಯ ಇಲಾಖೆ ಹಾಗೂ ಗ್ರಾಮೀಣಾಭಿವೃದ್ದಿ ಮತ್ತು ಪಂಚಯತ್ ರಾಜ್ ಇಲಾಖೆ ಸಹಯೋಗದೊಂದಿಗೆ ಜಿಲ್ಲಾಡಳಿತ ಭವನದ ಸಭಾಂಗಣದಲ್ಲಿ ಸಂಜೀವಿನಿ ಡೇ-ಎನ್.ಆರ್.ಎಲ್.ಎಂ ಯೋಜನೆಯಡಿ ಗ್ರಾಮ ಪಂಚಾಯಿತಿ ಮಟ್ಟದ ಒಕ್ಕೂಟಗಳಡಿ ಕಾರ್ಯನಿರ್ವಹಿಸುತ್ತಿರುವ ಸಮುದಾಯ ಸಿಬ್ಬಂದಿಗಳಿಗೆ ಆಯೋಜಿಸಿದ್ದ ಸರ್ಕಾರದ ವಿವಿಧ ಇಲಾಖಾ ಕಾರ್ಯಕ್ರಮಗಳ ಒಗ್ಗೂಡಿಸುವಿಕೆಯ ಕಾರ್ಯಾಗಾರ ಉದ್ಘಾಟಿಸಿ ಮಾತನಾಡಿದರು.
ಗ್ರಾಮಗಳ ಅಭಿವೃದ್ಧಿಯಿಂದ ರಾಷ್ಟ್ರದ ಅಭಿವೃದ್ಧಿ ಸಾಧ್ಯ ಹಾಗಾಗಿ ರಾಷ್ಟ್ರೀಯ ಗ್ರಾಮೀಣ ಜೀವನೋಪಾಯ ಅಭಿಯಾನದಡಿ ವಿವಿಧ ಯೋಜನೆಗಳ ಸೌಲಭ್ಯಗಳನ್ನು ಪಂಚಾಯಿತಿ ಮಟ್ಟದಲ್ಲಿ ಒಕ್ಕೂಟಗಳನ್ನು ರಚಿಸಿಕೊಂಡು ಗ್ರಾಮ ಮಟ್ಟದಲ್ಲಿ ಸ್ವ-ಸಹಾಯ ಗುಂಪುಗಳನ್ನು ರಚಿಸಿ ಮಹಿಳೆಯರ ಸ್ವಾವಲಂಬಿ ಬದುಕಿಗೆ ಆರ್ಥಿಕ ಶಕ್ತಿ ತುಂಬಲಾಗುತ್ತಿದೆ ಎಂದರು.
ಮಹಿಳೆಯರು ಸ್ವಾವಲಂಬಿಯಾಗಿ ದುಡಿದು ಆರ್ಥಿಕವಾಗಿ ಸಧೃಡರಾಗಬೇಕು. ಆರ್ಥಿಕವಾಗಿ ಸ್ವಾತಂತ್ರಳಾಗದಿದ್ದರೆ ಎಂದಿಗೂ ಅವಳು ಸಬಲಳಾಗಲು ಸಾಧ್ಯವಿಲ್ಲ ಅದಕ್ಕಾಗಿ ಸರ್ಕಾರ ಮಹಿಳೆಯರಿಗೆ ಎನ್.ಆರ್.ಎಲ್.ಎಂ ಯೋಜನೆಯಡಿ ಹಲವಾರು ಉಚಿತ ತರಬೇತಿ ಕಾರ್ಯಕ್ರಮವನ್ನು ನಡೆಸುತ್ತಿದೆ ಮತ್ತು ಮಹಿಳೆಯರು ಸ್ವ ಉದ್ಯೊಗ ನಡೆಸಲು ಸ್ವ-ಸಹಾಯ ಸಂಘಗಳ ಮೂಲಕ ಸಾಲ ಸೌಲಭ್ಯ ನೀಡುತ್ತಿದೆ.
ಅದರಂತೆಯೇ ಜಿಲ್ಲೆಯಲ್ಲಿ 6 ಸಾವಿರ ಸ್ವ-ಸಹಾಯ ಸಂಘಗಳಿದ್ದು ಅದರಲ್ಲಿ 60 ಸಾವಿರ ಜನ ಮಹಿಳಾ ಸದಸ್ಯರು ಇದ್ದಾರೆ. ಸ್ವ-ಸಹಾಯ ಸಂಘಗಳು 2017-2018 ರಿಂದ ಇದುವರೆಗೆ ಜಿಲ್ಲೆಯಲ್ಲಿ 50 ಕೋಟಿ ವಹಿವಾಟು ನಡೆಸಿದ್ದಾರೆ, 31 ಕೋಟಿ ಹಣವನ್ನು ಸಾಲ ಪಡೆದಿದ್ದು ಸದ್ಯ 21 ಕೋಟಿ ಹಣ ಮರು ಪಾವತಿಯಾಗಿದೆ ಹಾಗಾಗಿ ಮರು ಪಾವತಿ ಇನ್ನು ಹೆಚ್ಚು ನಡೆಸುವಂತೆ ಮಹಿಳಾ ಸಂಘದ ಸದಸ್ಯರಿಗೆ ತಿಳಿಸಿದರು.
ಎಸ್.ವಿ.ಇ.ಪಿ ಯೋಜನೆ:
ಈ ಯೋಜನೆಯಡಿ 2400 ಮಹಿಳಾ ಉದ್ಯಮಿಗಳು ಸಾಲ ಪಡೆದು ಸ್ವ ಉದ್ಯೊಗವನ್ನು ನಡೆಸುತ್ತಿದ್ದಾರೆ. ಭಾಗ್ಯ ಎಂಬುವವರು ಸ್ವ-ಸಹಾಯ ಸಂಘದಿಂದ ಎಸ್.ವಿ.ಇ.ಪಿ ಯೋಜನೆಯಲ್ಲಿ ಸಾಲ ಪಡೆದು ಶುಭ ಸಮಾರಂಭಗಳಿಗೆ ಹೂವಿನ ಅಲಂಕಾರವನ್ನು ಮಾಡಿಕೊಡುವ ಕೆಲಸವನ್ನು ಮಾಡುತ್ತಿದ್ದಾರೆ. ಇದರಿಂದ ಇವರು ಲಾಭವನ್ನು ಗಳಿಸಿದ್ದಾರೆ. ಹಾಗೆಯೇ ಮಂಜಮ್ಮ ಅವರು ಈ ಯೋಜನೆಯಿಂದ ಸಾಲ ಪಡೆದು ಊಟದ ತಟ್ಟೆ ತಯಾರಕ ಯಂತ್ರವನ್ನು ಖರೀದಿಸಿ ಸ್ವ ಉದ್ಯೊಗವನ್ನು ಮಾಡುತ್ತಿದ್ದಾರೆ ಇದರಿಂದ ಅಧಿಕ ಲಾಭವನ್ನು ಗಳಿಸಿದ್ದಾರೆ.
ಪಿ.ಎಂ.ಎಫ್.ಎಂ.ಇ ಯೋಜನೆ: ಪ್ರಧಾನ ಮಂತ್ರಿಗಳ ಕಿರು ಆಹಾರ ಸಂಸ್ಕರಣಾ ಉದ್ದಿಮೆಗಳ ನಿಯಮಬದ್ಧಗೊಳಿಸುವಿಕೆ ಯೋಜನೆಯಡಿ ಹಲವಾರು ಸ್ವ-ಸಹಾಯ ಸಂಘಗಳ ಮಹಿಳೆಯರು ಸಾಲ ಪಡೆದು ಸ್ವ ಉದ್ಯೊಗವನ್ನು ನಡೆಸುತ್ತಿದ್ದಾರೆ. ರಾಧಿಕಾ, ಜಗದೇಶ್ವರಿ ಸ್ವ-ಸಹಾಯ ಸಂಘ ಇವರು ಹಪ್ಪಳ ಮಾರಾಟ ಮಾಡುತ್ತಿದ್ದು ಇದರಿಂದ ಲಾಭವನ್ನು ಗಳಿಸಿದ್ದಾರೆ.
ಕೂಸಿನ ಮನೆ: ಅನೇಕ ಮಹಿಳೆಯರು ಮಕ್ಕಳನ್ನು ನೋಡಿಕೋಳ್ಳುತ್ತಲೆ ದುಡಿದು ಜೀವನ ನಡೆಸುತಿದ್ದಾರೆ. ಅವರಿಗೆ ದುಡಿಯುವ ಆಸೆ ಇದ್ದರು ಕೆಲಸಕ್ಕೆ ಹೋಗಲು ಆಗುತ್ತಿಲ್ಲ. ಅದಕ್ಕಾಗಿ ಕೂಸಿನ ಮನೆಯನ್ನು ಪ್ರಾರಂಭಿಸಿದ್ದು ಮಹಿಳೆಯರು ತಮ್ಮ ಮಕ್ಕಳನ್ನು ಅಲ್ಲಿ ಬಿಟ್ಟು ಕೆಲಸಕ್ಕೆ ಹೋಗಿ ಬರಬಹುದು ಇದರಿಂದ ಮಹಿಳೆಯು ಆರ್ಥಿಕವಾಗಿ ಸಬಲಳಾಗಬಹುದು.
ಎಸ್.ಡಬ್ಲ್ಯೂ.ಎಂ ಯೋಜನೆಯ ಸ್ವಚ್ಚವಾಹಿನಿ ವಾಹನವನ್ನು ಮಹಿಳೆಯರೆ ಚಲಾಯಿಸುವ ಅವಕಾಶ ಕಲ್ಪಿಸಲಾಗಿದೆ ಮತ್ತು ನಲ್ ಜಲ್ ಮಿತ್ರ ಯೋಜನೆಯಡಿ ಮಹಿಳೆಯರು ತರಬೇತಿ ಪಡೆದು ಕೆಲಸ ಮಾಡಬಹುದಾಗಿದ್ದು ಈ ಎಲ್ಲಾ ಯೋಜನೆಗಳ ಸದುಪಯೋಗ ಪಡೆದುಕೊಳ್ಳಿ ಮಹಿಳೆಯರಿಗೆ ತಿಳಿಸಿದರು.
ಸ್ವ-ಸಹಾಯ ಗುಂಪುಗಳ ಕೊಡುಗೆ: ಗ್ರಾಮೀಣ ಮಟ್ಟದಲ್ಲಿ ಮಹಿಳೆಯರನ್ನು ಸಣ್ಣ ಗುಂಪುಗಳಾಗಿ ಸಂಘಟಿಸುವ ಮೂಲಕ ಆರ್ಥಿಕವಾಗಿ ಪುನಶ್ಚೇತನ ಗೊಳಿಸುವುದು ಸ್ವ ಸಹಾಯ ಸಂಘಗಳ ಮುಖ್ಯ ಗುರಿ. ಮಹಿಳೆಯರು ಸುಸ್ಥಿರ ವಾದ ಉದ್ಯೋಗಗಳನ್ನು ಕೈಗೊಳ್ಳಲು ಕಡಿಮೆ ಬಡ್ಡಿ ದರದಲ್ಲಿ ಸಾಲ ಸೌಲಭ್ಯ, ಬ್ಯಾಂಕ್ ಸಂಪರ್ಕ ಸೇವೆ, ಉದ್ಯಮದಾರರಾಗಿ ಬೆಳೆಯುವಲ್ಲಿ ಸೂಕ್ತ ಜ್ಞಾನ, ಕೌಶಲ್ಯ ಮತ್ತು ಅವಕಾಶಗಳನ್ನು ಒದಗಿಸಲಾಗುತ್ತದೆ. ಸ್ವ-ಸಹಾಯ ಸಂಘಗಳಲ್ಲಿ ಎಲ್ಲಾ ಸದಸ್ಯರಿಗೂ ಸಮಾನ ಅವಕಾಶ ನೀಡಲಾಗಿದ್ದು, ಎಲ್ಲರಿಗೂ ಸಾಮಾನ ಸೌಲಭ್ಯ ಸಿಗಬೇಕು ಎಂದರು. ಹಾಗೇಯೇ ಸರ್ಕಾರದ ಯೋಜನೆಗಳ ಬಗ್ಗೆ ಗ್ರಾಮ ಮಟ್ಟದಲ್ಲಿ ಎಲ್ಲರಿಗೂ ಅರಿವು ಮೂಡಿಸಿ ಎಂದು ಸ್ವ ಸಂಘಗಳ ಸದಸ್ಯರಿಗೆ ಸೂಚಿಸಿದರು.
ಜಿಲ್ಲಾ ಪಂಚಾಯಿತಿ ಉಪ ಕಾರ್ಯದರ್ಶಿ ಶಿವ ಕುಮಾರ್ ಮಾತನಾಡಿ, ಎನ್.ಆರ್.ಎಲ್.ಎಂ ಒಂದು ದೊಡ್ಡ ಆಲದ ಮರದ ರೀತಿ ಸವಿಸ್ತಾರವಾಗಿ ಬೆಳೆಯುತ್ತಿದೆ. ಈ ಯೋಜನೆಯಡಿ ಪ್ರಮುಖವಾಗಿ ಮಹಿಳೆಯರು ಸ್ವತಂತ್ರವಾಗಿ ಬದುಕಲು ಆಸರೆಯಾಗಿದೆ. ಸಮಾಜದಲ್ಲಿ ಇರುವ ಪುರುಷ ಪ್ರಧಾನ ವ್ಯವಸ್ಥೆಯಲ್ಲಿ ಬದಲಾವಣೆ ಮಾಡುವ ಒಂದು ಆಶಯ ನಮ್ಮದು. ಹೆಣ್ಣು ಮತ್ತು ಗಂಡು ಒಂದು ನಾಣ್ಯದ ಎರಡು ಮುಖಗಳಿದ್ದಂತೆ, ಹಾಗಾಗಿ ಮಹಿಳೆಯರನ್ನು ಎಲ್ಲ ಕ್ಷೇತ್ರದಲ್ಲಿ ಸಮಾನವಾಗಿ ಕಾಣಬೇಕು, ಇದರ ಜತೆಗೆ ಸ್ವ – ಸಹಾಯ ಸಂಘಗಳ ಮೂಲಕ ಎಲ್ಲ ಗ್ರಾಮ ಪಂಚಾಯಿತಿಗಳಲ್ಲಿ ಶೆಡ್ಡುಗಳನ್ನು ನಿರ್ಮಿಸಲು ಯೋಜನೆ ಹಾಕಿಕೊಂಡಿದ್ದೇವೆ, ಇದೇ ರೀತಿ ಇನ್ನೂ ಉತ್ತಮ ತರಬೇತಿಯನ್ನು ಪಡೆಯಬೇಕು ಎಂದರು.
ಕಾರ್ಯಕ್ರಮದಲ್ಲಿ ಅಪರ ಜಿಲ್ಲಾಧಿಕಾರಿ ಸೈಯಿದಾ ಆಯಿಶಾ, ಸೆಂಟ್ರಲ್ ಫಾರ್ ಸ್ಟೇಬಿಲೇಶನ್ ಡೆವಲಪ್ಮೆಂಟ್ ಜನರಲ್ ಮ್ಯಾನೇಜರ್ ಸತ್ಯನಾರಾಯಣ, ಯೋಜನಾ ನಿರ್ದೇಶಕರಾದ ವಿಠಲ್ ಕಾವ್ಳೆ, ಮುಖ್ಯ ಯೋಜನಾಧಿಕಾರಿ ರಾಮಕೃಷ್ಣಯ್ಯ, ಕೈಗಾರಿಕೆ ಇಲಾಖೆ ಜಂಟಿ ನಿರ್ದೇಶಕರಾದ ನರೇಂದ್ರ ಬಾಬು, ಕೃಷಿ ಇಲಾಖೆ ಉನಿರ್ದೇಶಕರಾದ ಗಾಯಿತ್ರಿ, ರೇಷ್ಮೆ ಇಲಾಖೆಯ ಉಪನಿರ್ದೇಶಕರಾದ ಲಕ್ಷ್ಮಣ್, ಮೀನುಗಾರಿಕೆ ಇಲಾಖೆಯ ಉಪನಿರ್ದೇಶಕರಾದ ಚಿಕ್ಕಣ್ಣ, ಲೀಡ್ ಬ್ಯಾಂಕ್ ಮ್ಯಾನೇಜರ್ ರಾಮೋಜಿ, ಹಾಗೂ ಜಿಲ್ಲಾ ಮಟ್ಟದ ಅಧಿಕಾರಿಗಳು, ಸ್ವ-ಸಹಾಯ ಸಂಘಗಳ ಸದಸ್ಯರು, ಶಿಬಿರಾರ್ಥಿಗಳು ಉಪಸ್ಥಿತರಿದ್ದರು.
ಗ್ರಂಥಾಲಯ ನಿರ್ವಹಣೆ ಕುರಿತು ತರಬೇತಿ ಕಾರ್ಯಾಗಾರ: ಜಿಲ್ಲಾಡಳಿತ ಭವನದ ಜಿಲ್ಲಾ ಪಂಚಾಯಿತಿ ಸಭಾಂಗಣದಲ್ಲಿ ಬಂಡವಾಳ ಹೂಡಿಕೆಗಾಗಿ ರಾಜ್ಯಗಳಿಗೆ ವಿಶೇಷ ಸಹಾಯದ ಯೋಜನೆಯಡಿ ಹೊಸದಾಗಿ ಪ್ರಾರಂಭಿಸುತ್ತಿರುವ ಗ್ರಾಮ ಗ್ರಂಥಾಲಯಗಳ ಕುರಿತು ಪಂಚಾಯತಿ ಅಭಿವೃದ್ಧಿ ಅಧಿಕಾರಿಗಳು, ಗ್ರಾಮ ಪಂಚಾಯಿತಿ ಅಧ್ಯಕ್ಷರು ಮತ್ತು ಗ್ರಂಥಾಲಯದ ಮೇಲ್ವಿಚಾರಕರುಗಳಿಗೆ ಒಂದು ದಿನದ ತರಬೇತಿ ಕಾರ್ಯಾಗಾರ ಹಮ್ಮಿಕೊಳ್ಳಲಾಗಿತ್ತು.
ಕಾರ್ಯಾಗಾರದ ಅಧ್ಯಕ್ಷತೆ ವಹಿಸಿ ಮಾತನಾಡಿದ ಸಿಇಒ ಅನುರಾಧ ಪ್ರತಿ ಗ್ರಾಮ ಪಂಚಾಯಿತಿಗಳಲ್ಲಿ ಸಮಯಕ್ಕೆ ಸರಿಯಾಗಿ ಗ್ರಂಥಾಲಯವನ್ನು ತೆರೆಯಬೇಕು. ಗ್ರಂಥಾಲಯವನ್ನು ಅಚ್ಚುಕಟ್ಟಾಗಿ ಪುಸ್ತಕಗಳ ಜೋಡಣೆ, ಸ್ವಚ್ಛತೆಯನ್ನು ಕಾಪಾಡಬೇಕು, ಓದುಗರು ಬಂದಾಗ ಅವರಿಗೆ ಸರಿಯಾದ ರೀತಿಯಲ್ಲಿ ಸ್ಪಂದಿಸಬೇಕು. ಸರ್ಕಾರದಿಂದ ಬರುವ ಎಲ್ಲ ಪುಸ್ತಕಗಳನ್ನು ಆಯಾ ಪಂಚಾಯಿತಿಯ ಪಿಡಿಒಗಳ ಬಳಿ ಗ್ರಂಥಾಲಯದ ಮೇಲ್ವಿಚಾರಕರು ಅಥವಾ ಪಾಲಕರು ನೋಂದಾಯಿಸಿಕೊಂಡು ಪಡೆದುಕೊಳ್ಳಬೇಕು. ಗ್ರಂಥಾಲಯಗಳ ಮೇಲ್ವಿಚಾರಣೆ ಹಾಗೂ ಬೇಕಾಗುವ ಸೌಲಭ್ಯಗಳ ಸಂಪೂರ್ಣ ಜವಾಬ್ದಾರಿ ಪಿಡಿಒಗಳದ್ದು ಎಂದು ಹೇಳಿದರು.
Related

You Might Also Like
ಬೆಂ.ಗ್ರಾಮಾಂತರ: ನಾಳೆ ಕೇಂದ್ರ ಗೃಹ ಸಚಿವ ಅಮಿತ್ ಷಾ ಆಗಮ- ವಾಹನ, ಸಾರ್ವಜನಿಕರ ಪ್ರವೇಶ ನಿಷೇಧ: ಡಿಸಿ ಬಸವರಾಜು
ಬೆಂಗಳೂರು ಗ್ರಾಮಾಂತರ: ಕೇಂದ್ರ ಗೃಹ ಸಚಿವ ಅಮಿತ್ ಷಾ ಅವರು ನಾಳೆ (ಜೂ.20) ಬೆಂಗಳೂರು ಉತ್ತರ ತಾಲೂಕಿನ ನಗರೂರು ಗ್ರಾಮದಲ್ಲಿನ ಬಿ.ಜಿ.ಎಸ್ ಆಸ್ಪತ್ರೆಯ ನೂತನ ಘಟಕದ ಕಟ್ಟಡ...
ಡಿಪ್ಲೊಮಾ ಇನ್ ಕೋ ಆಪರೇಟಿವ್ ಮ್ಯಾನೇಜ್ಮೆಂಟ್ ತರಬೇತಿಗೆ ಅರ್ಜಿ ಆಹ್ವಾನ
ಬೆಂಗಳೂರು: ಕರ್ನಾಟಕ ಇನ್ಸ್ಟಿಟ್ಯೂಟ್ ಆಫ್ ಕೋ ಆಪರೇಟಿವ್ ಮ್ಯಾನೇಜ್ಮೆಂಟ್ ಸಂಸ್ಥೆಯು ಆರು ತಿಂಗಳ ಅವಧಿಯ ರೆಗ್ಯುಲರ್ ಡಿಪ್ಲೊಮಾ ಇನ್ ಕೋ ಆಪರೇಟಿವ್ ಮ್ಯಾನೇಜ್ಮೆಂಟ್ ತರಬೇತಿ ಪ್ರವೇಶಕ್ಕೆ ಅರ್ಜಿ...
ಮಾವಿನ ಬೆಂಬೆಲ ಬೆಲೆ ನಿಗದಿಗೆ ಆಹಾರ ಸಚಿವ ಮುನಿಯಪ್ಪ ಒತ್ತಾಯ
ಬೆಂಗಳೂರು: ಮಾವಿಗೆ ಬೆಂಬಲ ಬೆಲೆ ಷೋಷಣೆ ಮಾಡಲು ಸರ್ಕಾರವನ್ನು ಆಹಾರ ನಾಗರಿಕ ಸರಬರಾಜು ಮತ್ತು ಗ್ರಾಹಕ ವ್ಯವಹಾರಗಳ ಸಚಿವ ಕೆ.ಎಚ್.ಮುನಿಯಪ್ಪ ಒತ್ತಾಯಿಸಿದ್ದಾರೆ. ಇಂದು ನಡೆದ ಸಚಿವ ಸಂಪುಟದ...
ವಿವೇಚನಾತ್ಮಕವಾಗಿ ನೈಸರ್ಗಿಕ ಸಂಪತ್ ಬಳಸಿದರಷ್ಟೇ ಉಳಿಗಾಲ: ಸಚಿವ ಈಶ್ವರ ಖಂಡ್ರೆ
ಪಳೆಯುಳಿಕೆ ಇಂಧನಕ್ಕೆ ಪರ್ಯಾಯವಾಗಿ ನವೀಕೃತ ಮತ್ತು ಜೈವಿಕ ಇಂಧನ ಬಳಕೆಗೆ ಕರೆ ಬೆಂಗಳೂರು: ಪರಿಸರ ಸ್ನೇಹಿಯಾದ ನವೀಕರಿಸಬಹುದಾದ ಮತ್ತು ಜೈವಿಕ ಇಂಧನ ಬಳಕೆಗೆ ಹೆಚ್ಚಿನ ಒತ್ತು ನೀಡುವ...
KKRTC ಕಂಡಕ್ಟರ್ ಮೇಲೆ ಹಲ್ಲೆ: ಮೂವರಿಗೆ ₹75 ಸಾವಿರ ದಂಡ- ಕಟ್ಟಲಾಗದಿದ್ದರೆ 6 ತಿಂಗಳು ಜೈಲು ಶಿಕ್ಷೆ- ಕೋರ್ಟ್ ಮಹತ್ವದ ತೀರ್ಪು
ಕಲಬುರಗಿ: ಕಲ್ಯಾಣ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆ ಬಸ್ ನಿರ್ವಾಹಕರ ಮೇಲೆ ಹಲ್ಲೆ ಮಾಡಿದ ಮೂವರಿಗೆ ಅಫಜಲಪುರ ಪ್ರಧಾನ ದಿವಾಣಿ ನ್ಯಾಯಾಲಯ ಮತ್ತು ಜೆಎಂಎಫ್ಸಿ ನ್ಯಾಯಾಲಯ ತಲಾ...
KKRTC ವಿಜಯಪುರ: ತಂದೆ ನಿಧನರಾದ ನಾಲ್ಕೇ ದಿನಕ್ಕೆ ಡ್ಯೂಟಿಗೆ ಬರಬೇಕಿತ್ತು ಅಂತ ಚಾಲಕನಿಗೆ ಗೈರುಹಾಜರಿ ಮಾಡಿದ ಡಿಸಿ ನಾರಾಯಣಪ್ಪ ಕುರುಬರ
ಒಟ್ಟು 58 ದಿನ ರಜೆಯಲ್ಲಿದ್ದ ಚಾಲಕ ಕಂ ನಿರ್ವಾಹಕನಿಗೆ ಹಿಂದೆ ಮುಂದೆ ಗೈರು ಹಾಜರಿ ತೋರಿಸಿ 7ದಿನ ರಜೆ ಮಂಜೂರು ಮಾಡಿದ ಡಿಸಿಯ ನಡೆ ಅನುಮಾನಕ್ಕೆ ಎಡೆ...
BMTC: ಯುವತಿ ಮೇಲೆ ಬಸ್ ನುಗ್ಗಿಸಲು ಯತ್ನ ಪ್ರಕರಣದ FIRಗೆ ಹೈ ಕೋರ್ಟ್ ತಡೆ
ಬಿಎಂಟಿಸಿ ಚಾಲಕನ ಪರ ವಕ್ಕಾಲತ್ತು ವಹಿಸಿದ್ದ ಸುಪ್ರೀಂ ಕೋರ್ಟ್ ಹಾಗೂ ಹೈ ಕೋರ್ಟ್ ವಕೀಲ ಎಚ್.ಬಿ.ಶಿವರಾಜು ಬಹುತೇಕ ಸಾರಿಗೆ ನೌಕರರ ಎಲ್ಲ ಪ್ರಕರಣಗಳಲ್ಲೂ ಜಾಣ್ಮೆಯ ವಾದ ಮಂಡಿಸಿ...
KSRTC ನೂತನ 2000 ಚಾಲಕ ಕಂ ನಿರ್ವಾಹಕರಿಗೆ ನಿಯೋಜನಾ ಆದೇಶ ಪತ್ರ ವಿತರಣೆ: ಸಾರಿಗೆ ಸಚಿವ ರಾಮಲಿಂಗಾರೆಡ್ಡಿ
ಬೆಂಗಳೂರು: ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮದಲ್ಲಿ ಎಂಟು ವರ್ಷಗಳ ಬಳಿಕ ಬೃಹತ್ ನೇಮಕಾತಿ ನಡೆದಿದ್ದು, 2000 ಚಾಲಕ ಕಂ ನಿರ್ವಾಹಕ ಅಭ್ಯರ್ಥಿಗಳ ನೇಮಕಾತಿಯು ಪಾರದರ್ಶಕವಾಗಿ ಮಾಡಲಾಗಿದೆ....
ಜೂ.21ರಂದು 11ನೇ ಅಂತಾರಾಷ್ಟ್ರೀಯ ಯೋಗ ದಿನಾಚರಣೆ: ಡಿಸಿ ಬಸವರಾಜು
ಬೆಂಗಳೂರು ಗ್ರಾಮಾಂತರ: ಜಿಲ್ಲಾ ಮಟ್ಟದ 11ನೇ ಅಂತಾರಾಷ್ಟ್ರೀಯ ಯೋಗ ದಿನಾಚರಣೆಯನ್ನು ಜೂನ್ 21 ರಂದು ದೇವನಹಳ್ಳಿ ಟೌನ್ ನಲ್ಲಿರುವ ಕ್ರೀಡಾಂಗಣದಲ್ಲಿ ಹಮ್ಮಿಕೊಳ್ಳಲಾಗಿದೆ ಎಂದು ಜಿಲ್ಲಾಧಿಕಾರಿ ಎ.ಬಿ.ಬಸವರಾಜು ತಿಳಿಸಿದ್ದಾರೆ....