NEWSದೇಶ-ವಿದೇಶರಾಜಕೀಯ

ಇಂದು ಕೇರಳದ ನೂತನ ಸಿಎಂಆಗಿ ವಿ.ಡಿ. ಸತೀಶನ್‌ ಪ್ರಮಾಣ ವಚನ ಸ್ವೀಕಾರ

ಇಂದು ಸಚಿವರಾಗಿ ಪ್ರಮಾಣ ವಚನ ಸ್ವೀಕರಿಸುವವರಿವರು: ರಮೇಶ್ ಚೆನ್ನಿತ್ತಲ, ಸನ್ನಿ ಜೋಸೆಫ್, ಕೆ ಮುರಳೀಧರನ್, ಎ ಪಿ ಅನಿಲ್ ಕುಮಾರ್, ಪಿ.ಸಿ ವಿಷ್ಣುನಾಧ್, ಬಿಂಧು ಕೃಷ್ಣ, ಎಂ ಲಿಜ್ಜು, ಟಿ ಸಿದ್ದಿಕ್, ರೋಜಿ ಎಂ. ಜಾನ್, ಕೆ.ಎ ತುಳಸಿ ಮತ್ತು ಒ.ಜೆ ಜನೀಶ್ ಕಾಂಗ್ರೆಸ್ ಸಚಿವರಾಗಿದ್ದಾರೆ. ಜತೆಗೆ ಪಿ.ಕೆ ಕುನ್ಹಾಲಿಕುಟ್ಟಿ, ಕೆ.ಎಂ. ಶಾಜಿ, ಎನ್ ಶಂಸುದ್ದೀನ್, ಪಿ.ಕೆ. ಬಶೀರ್ ಮತ್ತು ವಿ.ಇ. ಅಬ್ದುಲ್ ಗಫೂರ್, ಮಾನ್ಸ್ ಜೋಸೆಫ್ (ಕೆಸಿ-ಜೋಸೆಫ್), ಅನೂಪ್ ಜೇಕಬ್ (ಕೆಸಿ-ಜೇಕಬ್), ಶಿಬು ಬೇಬಿ ಜಾನ್ (ಆರ್‌ಎಸ್‌ಪಿ) ಮತ್ತು ಸಿಪಿ ಜಾನ್ (ಸಿಎಂಪಿ) ಇತರ ಸಚಿವರು ನಾಮನಿರ್ದೇಶನಗೊಂಡಿದ್ದಾರೆ.

ವಿಜಯಪಥ ಸಮಗ್ರ ಸುದ್ದಿ

ತಿರುವನಂತಪುರಂ: ಕೇರ ರಾಜ್ಯದ ನೂತನ ಮುಖ್ಯಮಂತ್ರಿಯಾಗಿ ಇಂದು ವಿ.ಡಿ. ಸತೀಶನ್‌ ಹಾಗೂ ಇತರ 20 ಮಂದಿ ಸಂಪುಟ ಸಚಿವರಾಗಿ ಪ್ರಮಾಣ ವಚನ ಸ್ವೀಕರಿಸಲಿದ್ದಾರೆ.

ಪ್ರಮಾಣ ವಚನ ಸ್ವೀಕಾರ ಸಮಾರಂಭಕ್ಕೂ ಮುನ್ನವೇ ಸತೀಶನ್‌ ಭಾನುವಾರ (ನಿನ್ನೆ) ಯುಡಿಎಫ್ ಮೈತ್ರಿಕೂಟದ ಸಚಿವ ಸಂಪುಟವನ್ನು ಅನಾವರಣಗೊಳಿಸಿದರು. 21 ಸಚಿವರಲ್ಲಿ ಸತೀಶನ್ ಸೇರಿದಂತೆ 14 ಮಂದಿ ಮೊದಲ ಬಾರಿಗೆ ಸಚಿವರಾಗಿದ್ದಾರೆ. ಅಲ್ಲದೇ ಸಂಪುಟದಲ್ಲಿ ಇಬ್ಬರು ಮಹಿಳೆಯರು ಮತ್ತು ಪರಿಶಿಷ್ಟ ಜಾತಿ ಸಮುದಾಯದ ಇಬ್ಬರು ಸದಸ್ಯರು ಸೇರಿದ್ದಾರೆ.

ರಾಜ್ಯಪಾಲ ರಾಜೇಂದ್ರ ಅರ್ಲೇಕರ್ ಅವರಿಗೆ ಸಚಿವರ ಪಟ್ಟಿ ಸಲ್ಲಿಸಿದ ನಂತರ, ರಾಜ್ಯಪಾಲರು ಸರ್ಕಾರ ರಚನೆಗೆ ಅನುಮೋದನೆ ನೀಡಿದರು. ಇಡೀ ಯುಡಿಎಫ್ ಸಚಿವಾಲಯ ಇಂದು ಒಟ್ಟಿಗೆ ಪ್ರಮಾಣ ವಚನ ಸ್ವೀಕರಿಸಲಿದೆ. ಕಳೆದ 6 ದಶಕಗಳಲ್ಲಿ ಇದೇ ಮೊದಲ ಬಾರಿಗೆ ಪೂರ್ಣ ಯುಡಿಎಫ್ ಸಂಪುಟ ಏಕಕಾಲದಲ್ಲಿ ಪ್ರಮಾಣ ವಚನ ಸ್ವೀಕರಿಸುವ ಸಮಾರಂಭ ಇದಾಗಿದೆ.

ಸಂಪುಟದಲ್ಲಿ ಸ್ಥಾನ ಪಡೆದುಕೊಂಡ ಕಾಂಗ್ರೆಸ್‌ನ 11 ಶಾಸಕರು : ಇನ್ನು ಮುಖ್ಯಮಂತ್ರಿ ಹುದ್ದೆಯೊಂದಿಗೆ 11 ಮಂದಿ ಕಾಂಗ್ರೆಸ್‌ ಶಾಸಕರು ಕೇರಳ ನೂತನ ಸಂಪುಟದಲ್ಲಿ ಸ್ಥಾನ ಪಡೆದುಕೊಂಡಿದ್ದಾರೆ. ಇದರೊಂದಿಗೆ ಭಾರತೀಯ ಯೂನಿಯನ್ ಮುಸ್ಲಿಂ ಲೀಗ್ (ಐಯುಎಂಎಲ್)ನ ಐವರು, ಕೇರಳ ಕಾಂಗ್ರೆಸ್ (ಜೋಸೆಫ್), ಕ್ರಾಂತಿಕಾರಿ ಸಮಾಜವಾದಿ ಪಕ್ಷ (ಆರ್‌ಎಸ್‌ಪಿ), ಕೇರಳ ಕಾಂಗ್ರೆಸ್ (ಜಾಕೋಬ್) ಮತ್ತು ಕಮ್ಯುನಿಸ್ಟ್ ಮಾರ್ಕ್ಸ್ವಾದಿ ಪಕ್ಷ (ಸಿಎಂಪಿ) ಗಳು ತಲಾ ಒಂದು ಸ್ಥಾನ ಪಡೆದುಕೊಂಡಿವೆ.

ಇಂದು ಸಚಿವರಾಗಿ ಪ್ರಮಾಣ ವಚನ ಸ್ವೀಕರಿಸುವವರಿವರು: ರಮೇಶ್ ಚೆನ್ನಿತ್ತಲ, ಸನ್ನಿ ಜೋಸೆಫ್, ಕೆ ಮುರಳೀಧರನ್, ಎ ಪಿ ಅನಿಲ್ ಕುಮಾರ್, ಪಿ.ಸಿ ವಿಷ್ಣುನಾಧ್, ಬಿಂಧು ಕೃಷ್ಣ, ಎಂ ಲಿಜ್ಜು, ಟಿ ಸಿದ್ದಿಕ್, ರೋಜಿ ಎಂ. ಜಾನ್, ಕೆ.ಎ ತುಳಸಿ ಮತ್ತು ಒ.ಜೆ ಜನೀಶ್ ಕಾಂಗ್ರೆಸ್ ಸಚಿವರಾಗಿದ್ದಾರೆ. ಜತೆಗೆ ಪಿ.ಕೆ ಕುನ್ಹಾಲಿಕುಟ್ಟಿ, ಕೆ.ಎಂ. ಶಾಜಿ, ಎನ್ ಶಂಸುದ್ದೀನ್, ಪಿ.ಕೆ. ಬಶೀರ್ ಮತ್ತು ವಿ.ಇ. ಅಬ್ದುಲ್ ಗಫೂರ್, ಮಾನ್ಸ್ ಜೋಸೆಫ್ (ಕೆಸಿ-ಜೋಸೆಫ್), ಅನೂಪ್ ಜೇಕಬ್ (ಕೆಸಿ-ಜೇಕಬ್), ಶಿಬು ಬೇಬಿ ಜಾನ್ (ಆರ್‌ಎಸ್‌ಪಿ) ಮತ್ತು ಸಿಪಿ ಜಾನ್ (ಸಿಎಂಪಿ) ಇತರ ಸಚಿವರು ನಾಮನಿರ್ದೇಶನಗೊಂಡಿದ್ದಾರೆ.

ಡಿಕೆಶಿ, ಖರ್ಗೆ ಕೇರಳಕ್ಕೆ: ಇಂದು ಪ್ರಮಾಣ ಸ್ವೀಕಾರ ಸಮಾರಂಭಕ್ಕೆ ಕರ್ನಾಟಕ ಉಪಮುಖ್ಯಮಂತ್ರು ಡಿ.ಕೆ. ಶಿವಕುಮಾರ್‌ ಹಾಗೂ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಕೇರಳಕ್ಕೆ ತೆರಳಲಿದ್ದು, ನೂತನ ಸಿಎಂ ಹಾಗೂ ಸಚಿವರಿಗೆ ಶುಭಕೋರಲಿದ್ದಾರೆ.

Megha
the authorMegha

Leave a Reply

error: Content is protected !!
Latest news
ಗೃಹಲಕ್ಷ್ಮಿ, ಗೃಹಜ್ಯೋತಿಗೆ  ಹೊಸದಾಗಿ ಅರ್ಜಿ ಸಲ್ಲಿಸಬೇಕೆಂಬ ನಿರ್ಧಾರ ಸ್ವಾಗತಾರ್ಹ KSRTC ಪುತ್ತೂರು: ಡ್ರಿಂಕ್ಸ್ ಪರೀಕ್ಷಿಸಲು ಮಷೀನ್ ತಂದಿದ್ದಾರೆ ಎಂದು ತಪ್ಪು ತಿಳಿದು ಹೆದರಿದ ನೌಕರ- ಮೆಟ್ಟಲುಗಳಿಂದ ಬಿ... 2037ರ ವೇಳೆಗೆ ಬೆಂಗಳೂರು ಆಗಲಿದೆ ಜಾಗತಿಕ ಆರ್ಥಿಕ ಶಕ್ತಿಕೇಂದ್ರ: 35 ಲಕ್ಷ ಕೋಟಿ ರೂ.ಗೂ ಅಧಿಕ ಕಾಂಚಾಣ, 30 ಲಕ್ಷ ಹೊಸ ... ಪಂಜಾಬ್ ಮಾದರಿ ಕರ್ನಾಟಕದಲ್ಲೂ ಹೆದ್ದಾರಿ ಟೋಲ್‌ ರದ್ದತಿಗೆ ಆಗ್ರಹಿಸಿ 23ರಂದು ರೈತ ಸಂಘಟನೆಗಳ ಒಕ್ಕೂಟದಿಂದ ಪ್ರತಿಭಟನೆ KSRTC ನೌಕರರ ಪತ್ತಿನ ಸಹಕಾರ ಸಂಘದ ಅಧ್ಯಕ್ಷ ಓಂಕಾರಪ್ಪನ ಸಹಿ ಮಾಡುವ ಅಧಿಕಾರ ರದ್ದುಗೊಳಿಸಿ ತನಿಖೆಗೆ ಹೈ ಕೋರ್ಟ್‌ ಆದೇಶ BMTC: 30ನೇ ಘಟಕದ ಎಲೆಕ್ಟ್ರಿಕ್‌ ಬಸ್‌ಗಳ ಅಸಮರ್ಪಕ ಕಾರ್ಯಾಚರಣೆ ವಿರುದ್ಧ ಸಿಎಸ್‌ಗೆ ದೂರು ನೀಡಿದ ನಿರ್ವಾಹಕರು ಪಬ್‌ನಲ್ಲಿ ಸಂಭವಿಸಿದ ಭೀಕರ ಅಗ್ನಿ ಅವಘಡ -ಅಬಕಾರಿ ಡಿಸಿ ಅಮಾನತಿಗೆ ಶಿಫಾರಸು: ಸಚಿವ ಡಾ.ಯತೀಂದ್ರ ಸಿದ್ದರಾಮಯ್ಯ ಹೊಲದ ಕೂಲಿ ಕೆಲಸ ಬಿಟ್ಟು ಮತ್ತೆ ಶಿಕ್ಷಣದತ್ತ ಹೆಜ್ಜೆ ಇಟ್ಟ ವಿದ್ಯಾರ್ಥಿನಿ: ಪ್ರಾಂಶುಪಾಲರ ಮಾನವೀಯತೆಗೆ ಬೆಲೆ ಕಟ್ಟಲಾದ... ಕನಿಷ್ಠ ವಿದ್ಯಾರ್ಹತೆ SSLC ಪಾಸ್‌: ಡಿಪ್ಲೊಮಾ ಇನ್ ಕೋ ಆಪರೇಟಿವ್ ಮ್ಯಾನೇಜ್‌ಮೆಂಟ್ ಪ್ರವೇಶಕ್ಕೆ ಅರ್ಜಿ ಆಹ್ವಾನ ಕರ್ನಾಟಕದಲ್ಲಿ ‘ಕರ್ತವ್ಯ’ ಕ್ರಾಂತಿ: ಸ್ವದೇಶಿ ಎಐ ತಂತ್ರಜ್ಞಾನದ ಹೊಸ ಹೆಜ್ಜೆ