NEWSನಮ್ಮಜಿಲ್ಲೆನಮ್ಮರಾಜ್ಯ

ವಾಲ್ಮೀಕಿ ಅಭಿವೃದ್ಧಿ ನಿಗಮದ ಪ್ರಕರಣ: ಇಂದು ಸಚಿವ ನಾಗೇಂದ್ರ ಸ್ವಯಂ ರಾಜೀನಾಮೆ ಸಾಧ್ಯತೆ

ವಿಜಯಪಥ ಸಮಗ್ರ ಸುದ್ದಿ

ಬೆಂಗಳೂರು: ಮಹರ್ಷಿ ವಾಲ್ಮೀಕಿ ಪರಿಶಿಷ್ಟ ಪಂಗಡಗಳ ಅಭಿವೃದ್ಧಿ ನಿಗಮದ ಹಣ ಅಕ್ರಮ ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿದಂತೆ ಇಂದು ಸಚಿವ ನಾಗೇಂದ್ರ ಸ್ವಯಂ ರಾಜೀನಾಮೆ ನೀಡುವ ಸಾಧ್ಯತೆ ಹೆಚ್ಚಾಗಿದೆ.

ಪರಿಶಿಷ್ಟ ವರ್ಗಗಳ ಕಲ್ಯಾಣ ಸಚಿವರಾಗಿರುವ ನಾಗೇಂದ್ರ ಅವರಿಗೆ ತನಿಖೆ ಮುಗಿಯುವರೆಗೆ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡುವಂತೆ ಸರ್ಕಾರ ಸೂಚಿಸಿದೆ. ಈ ಸಂಬಂಧ ಹೈಕಮಾಂಡ್ ಜತೆ ಸಿಎಂ ಸಿದ್ದರಾಮಯ್ಯ, ಡಿಸಿಎಂ ಶಿವಕುಮಾರ್‌ ಮಾತುಕತೆ ನಡೆಸಿದ್ದಾರೆ ಎಂದು ಬಲ್ಲ ಮೂಲಗಳಿಂದ ತಿಳಿದು ಬಂದಿದೆ.

ಈಗಾಗಲೇ ಪ್ರಕರಣ ಸಂಬಂಧ ಸಿಬಿಐ ಎಫ್‌ಐಆರ್‌ ದಾಖಲಿಸಿದೆ. ಈ ಪ್ರಕರಣ ಸಿಬಿಐಗೆ ಹೋದಲ್ಲಿ ಸಚಿವ ಸ್ಥಾನದಲ್ಲಿ ಮುಂದುವರಿಯುವುದು ಕಷ್ಟ. ಬಳಿಕ ರಾಜೀನಾಮೆ ನೀಡಿದರೆ ಸರ್ಕಾರ, ಪಕ್ಷಕ್ಕೆ ಮುಜುಗರವಾಗಲಿದೆ. ಅದರ ಬದಲು ಈಗಲೇ ರಾಜೀನಾಮೆ ಕೊಡುವಂತೆ ಸೂಚನೆ ನೀಡಲಾಗಿದೆ ಎಂದು ತಿಳಿದು ಬಂದಿದೆ.

ಬುಧವಾರ ನಾಗೇಂದ್ರ ಅವರನ್ನು ತಮ್ಮ ನಿವಾಸಕ್ಕೆ ಕರೆಸಿಕೊಂಡಿದ್ದ ಮುಖ್ಯಮಂತ್ರಿ ಸಿದ್ದರಾಮಯ್ಯ ನೈತಿಕ ಹೊಣೆಹೊತ್ತು ರಾಜೀನಾಮೆ ನೀಡಿದರೆ ಬೇರೆ ಸಂದೇಶ ರವಾನೆಯಾಗುತ್ತದೆ. ಹೀಗಾಗಿ ರಾಜೀನಾಮೆ ನೀಡುವುದು ಸೂಕ್ತ ಎಂದು ಸಲಹೆ ನೀಡಿದ್ದಾರೆ ಎನ್ನಲಾಗುತ್ತಿದೆ.

ಇನ್ನೊಂದೆಡೆ ಬಿಜೆಪಿ ಜೂನ್‌ 6ರ ಒಳಗಡೆ ರಾಜೀನಾಮೆ ನೀಡಬೇಕು ಎಂದು ಆಗ್ರಹಿಸಿತ್ತು. ಇಂದಿಗೆ ಡೆಡ್‌ಲೈನ್‌ ಅಂತ್ಯವಾಗಿದ್ದು ರಾಜೀನಾಮೆ ನೀಡದೇ ಇದ್ದರೆ ಬಿಜೆಪಿ ಉಗ್ರವಾಗಿ ಪ್ರತಿಭಟಿಸುವ ಸಾಧ್ಯತೆಯಿದೆ. ಈ ಎಲ್ಲದರ ಹಿನ್ನೆಲೆಯಲ್ಲಿ ನಾಗೇಂದ್ರ ಸ್ವಯಂ ರಾಜೀನಾಮೆ ನೀಡುವ ಮೂಲಕ ಪಕ್ಷಕ್ಕೆ ಮತ್ತು ಸರ್ಕಾರಕ್ಕೆ ಆಗುವ ಮುಜುಗರವನ್ನು ತಪ್ಪಿಸಲು ವಲ್ಲದ ಮನಸ್ಸಿನಿಂದಲೇ ಮುಂದಾಗಿದ್ದಾರೆ ಎನ್ನಲಾಗುತ್ತಿದೆ.

Leave a Reply

error: Content is protected !!
LATEST
KSRTC ಬಸ್‌ ರಿಪೇರಿ ಮಾಡಿದ ಖರ್ಚಿನ ಬಿಲ್‌ನಲ್ಲಿ ಸ್ಕ್ರಾಪ್‌ನ ಹಣ ತೋರಿಸದೆ ಗುಳುಂ: ಕ್ರಮಕ್ಕಾಗಿ ಎಂಡಿಗೆ ದೂರು 160 ಕ್ಯಾಬಿನೆಟ್ ಸೆಕ್ರೆಟರಿಯೇಟ್, ಡೆಪ್ಯೂಟಿ ಫೀಲ್ಡ್ ಆಫೀಸರ್ ಹುದ್ದೆಗಳಿಗೆ ಕೂಡಲೇ ಅರ್ಜಿ ಹಾಕಿ ಮುನಿರತ್ನಗೆ ಜಾಮೀನು ಮಂಜೂರು ಮಾಡಿದ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಹೋರಾಟ ಪಂಜಾಬ್, ಹರಿಯಾಣ ರೈತರದಷ್ಟೇ ಎಂಬಂತೆ ಬಿಂಬಿಸುವ ಸುಪ್ರೀಂ ಆದೇಶ ಪುನರ್ ಪರಿಶೀಲಿಸಿ: ಕುರುಬೂರ್‌ ಶಾಂತಕುಮಾರ್ KSRTC ಅಧಿಕಾರಿಗಳು-ನೌಕರರಲ್ಲಿ, ನೌಕರರು-ನೌಕರರಲ್ಲೇ ಒಗ್ಗಟ್ಟಿಲ್ಲಕ್ಕೆ ಈ ಸ್ಥಿತಿ: NWKRTC ನಿಗಮದ ಅಧ್ಯಕ್ಷ ಭರಮಗೌಡ KSRTC ನೌಕರರ ವೇತನ ಹೆಚ್ಚಳದ 38 ತಿಂಗಳ ಹಿಂಬಾಕಿ ಬೇಗ ಕೊಟ್ಟರೆ ನನಗೂ ಸಮಾಧಾನ: ಸಚಿವ ರಾಮಲಿಂಗಾ ರೆಡ್ಡಿ KSRTC-ನಮ್ಮ ಸರ್ಕಾರ ಸರಿ ಸಮಾನ ವೇತನ ಕೊಡುತ್ತದೆ ನೆಮ್ಮದಿಯಾಗಿರಿ: ಕಾಂಗ್ರೆಸ್‌ ಪ್ರಣಾಳಿಕೆ ಸಮಿತಿ ಉಪಾಧ್ಯಕ್ಷ ರಾಧಾಕೃ... KSRTC: ಅಗ್ರಿಮೆಂಟ್‌ ಎಂಬ ಸೆಟಲ್‌ಮೆಂಟ್‌ ಭೂತವನ್ನು ಬುಡಸಮೇತ ಕಿತ್ತೊಗೆಯಬೇಕು - ವಕೀಲ ನಟರಾಜ ಶರ್ಮಾ ವೇತನ ಸಂಬಂಧ 4ವರ್ಷಕ್ಕೊಮ್ಮೆ ಆಗುವ ಅಗ್ರಿಮೆಂಟ್‌ ಬೇಡ ಕೊಟ್ಟ ಭರವಸೆ ಈಡೇರಿಸಿ: ಸಾರಿಗೆ ಸಚಿವರಿಗೆ ಚಂದ್ರು ಒತ್ತಾಯ ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳ 247 ಹುದ್ದೆಗಳಿಗೆ ಅರ್ಜಿ ಆಹ್ವಾನ: 3 ವರ್ಷ ವಯಸ್ಸಿನ ಸಡಿಲಿಕೆ, ಡಿಗ್ರಿ ಅರ್ಹತೆ