Breaking NewsNEWSಸಿನಿಪಥ

ಭಾರತೀಯ ಸಿನಿಮಾ ರಂಗದ ಖ್ಯಾತ ಗಾಯಕಿ ವಾಣಿ ಜಯರಾಂ ನಿಧನ

ವಿಜಯಪಥ ಸಮಗ್ರ ಸುದ್ದಿ

ಚೆನ್ನೈ: ಹಿರಿಯ ಹಾಗೂ ಖ್ಯಾತ ಹಿನ್ನೆಲೆ ಗಾಯಕಿ ವಾಣಿ ಜಯರಾಂ (78) ಇಂದು ನಗರದ ತಮ್ಮ ನಿವಾಸದಲ್ಲಿ ನಿಧನರಾಗಿದ್ದಾರೆ.

ಭಾರತೀಯ ಸಿನಿಮಾ ರಂಗದ ಖ್ಯಾತ ಗಾಯಕಿ ವಾಣಿ ಜಯರಾಂ ಅವರು ಚೆನ್ನೈನ ನುಂಗಂಬಾಕ್ಕಂನ ಹಡ್ಡೋಸ್ ರಸ್ತೆಯಲ್ಲಿರುವ ಅವರ ನಿವಾಸದಲ್ಲಿ ನಿಧನರಾಗಿದ್ದು, ವಿಷಯ ತಿಳಿದಿ ಕೂಡಲೇ ಅವರ ನಿವಾಸಕ್ಕೆ ಹಿರಿಯ ಪೊಲೀಸ್‌ ಅಧಿಕಾರಿಗಳು ಧಾವಿಸಿದ್ದಾರೆ.

ಕನ್ನಡವೂ ಸೇರಿದಂತೆ ಅನೇಕ ಭಾಷೆಗಳ ಚಿತ್ರಗಳಿಗೆ ಹಾಡಿದ ಹೆಗ್ಗಳಿಕೆ ಇವರದ್ದು. 1974ರಲ್ಲಿ ಪೋಷ್ಸುಮಂಗಲಿ ಚಿತ್ರದ ಮೂಲಕ ಗಾಯಕಿಯಾಗಿ ಸಿನಿಮಾ ರಂಗ ಪ್ರವೇಶಿಸಿದ್ದ ಇವರು ಹತ್ತು ಸಾವಿರಕ್ಕೂ ಹೆಚ್ಚು ಗೀತೆಗಳನ್ನು ಹಾಡಿದ್ದಾರೆ. ಈ ಗೀತೆಗಳಿಗಾಗಿಯೇ ಅವರಿಗೆ ಮೂರು ಬಾರಿ ರಾಷ್ಟ್ರ ಪ್ರಶಸ್ತಿ ಕೂಡ ಬಂದಿದೆ.

ಮೊನ್ನೆಯಷ್ಟೇ ಕೇಂದ್ರ ಸರಕಾರ ದೇಶದ ಅತ್ಯುನ್ನತ ನಾಗರಿಕ ಪ್ರಶಸ್ತಿ ಪದ್ಮ ಭೂಷಣವನ್ನೂ ಘೋಷಿಸಿದೆ. ಹುಟ್ಟಿದ್ದು ತಮಿಳುನಾಡಿನ ವೆಲ್ಲೋರ್‌ನಲ್ಲಿ. ಬಾಲ್ಯದಿಂದಲೇ ಸಂಗೀತ ಅಭ್ಯಾಸ ಮಾಡಿದ್ದ ಅವರು, ನಂತರ ಮದ್ರಾಸ್ ವಿವಿಯಲ್ಲಿ ಸ್ನಾತಕೋತ್ತರ ಪದವಿ ಪೂರೈಸಿದವರು.

ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾದಲ್ಲೂ ಕೆಲಸ ಮಾಡಿದರು. ಮದುವೆಯ ನಂತರ ಮತ್ತು ಮುಂಬೈನಲ್ಲಿ ಅವರು ನೆಲೆಯೂರಿ ಹಿಂದೂಸ್ತಾನಿ ಶಾಸ್ತ್ರೀಯ ಸಂಗೀತದಲ್ಲಿ ತರಬೇತಿ ಪಡೆದಿದ್ದರು.

ಕನ್ನಡ, ಹಿಂದಿ, ತೆಲುಗು, ತಮಿಳು, ಮಲಯಾಳಂ, ಮರಾಠಿ, ಓಡಿಯಾ, ಗುಜರಾತಿ, ಬಂಗಾಳಿ ಸೇರಿದಂತೆ ಭಾರತೀಯ ನಾನಾ ಭಾಷೆಗಳ ಸಿನಿಮಾಗಳಿಗೆ ಹಾಡಿದ ಹೆಗ್ಗಳಿಕೆ ಇವರದ್ದು. ಕನ್ನಡದಲ್ಲಿ ಅನುಭವ, ರಣರಂಗ, ಶಿವ ಮೆಚ್ಚಿದ ಕಣ್ಣಪ್ಪ, ಒಲವಿನ ಉಡುಗೊರೆ, ಮಲಯ ಮಾರುತ ಸೇರಿದಂತೆ ಐವತ್ತಕ್ಕೂ ಹೆಚ್ಚು ಗೀತೆಗಳನ್ನು ಹಾಡಿದ್ದಾರೆ.

ಡಾ.ರಾಜ್ ಕುಮಾರ್, ವಿಷ್ಣುವರ್ಧನ್, ಅಂಬರೀಶ್, ಶಿವರಾಜ್ ಕುಮಾರ್, ಅನಂತ್ ನಾಗ್ ಸೇರಿದಂತೆ ಹೆಸರಾಂತ ಕಲಾವಿದರ ಚಿತ್ರಕ್ಕೆ ಹಾಡಿ ಸಿನಿ ಪ್ರಿಯರ ಮನಸೂರೆಗೊಂಡಿದ್ದಾರೆ.

ವಾಣಿ ಜಯರಾಂ ಅವರ ನಿಧನಕ್ಕೆ ಸಿನಿಮಾ, ರಾಜಕೀಯ, ರಂಗಭೂಮಿ ಕಲಾವಿದರು ಸೇರಿದಂತೆ ಗಣ್ಯಾತಿಗಣ್ಯರು ಕಂಬನಿ ಮಿಡಿದ್ದಾರೆ.

Leave a Reply

error: Content is protected !!
LATEST
KSRTC: ₹8.76 ಲಕ್ಷ ನಷ್ಟವುಂಟು ಮಾಡಿರುವ ಅಧಿಕಾರಿಗಳ ವಿರುದ್ಧ ಕಠಿಣ ಕ್ರಮಕ್ಕೆ ಆಗ್ರಹಿಸಿ ಸರ್ಕಾರದ ಮುಖ್ಯ ಕಾರ್ಯದರ್ಶ... BMTC ಚಾಲಕರಿಗೆ ಕೂಡಲೇ ವೇತನ ಪಾವತಿಸಿ: ಎಎಪಿಯ ಜಗದೀಶ್ ವಿ. ಸದಂ ಆಗ್ರಹ ಬಸವನಹಳ್ಳಿ: ನಿವೃತ್ತ ಸಹಾಯಕ ತೋಟಗಾರಿಕಾ ಇಲಾಖೆಯ ನಿರ್ದೇಶಕ ಚಿಕ್ಕಮಾಯಿಗೌಡರ ಪತ್ನಿ ಸಿದ್ದಮ್ಮ ನಿಧನ KSRTC ನೌಕರರ 2024ರ ವೇತನ ಪರಿಷ್ಕರಣೆ, 38 ತಿಂಗಳ ಹಿಂಬಾಕಿ ಬಿಡುಗಡೆಗೆ ಜೂನ್‌ 6ರಬಳಿಕ ನಿರ್ಧಾರ: ರಾಮಲಿಂಗಾರೆಡ್ಡಿ ಚಿಕ್ಕಮಗಳೂರಲ್ಲಿ ಧಾರಾಕಾರ ಮಳೆ- ಬೆಂಗಳೂರಿಗೂ ಆಗಮಿಸಲಿದ್ದಾನೆ ವರುಣ BMTC: ವೇತನಕ್ಕೆ ಆಗ್ರಹಿಸಿ ಬಿಎಂಟಿಸಿ ಎಲೆಕ್ಟ್ರಿಕ್‌ ಬಸ್‌ ಚಾಲಕರ ದಿಢೀರ್‌ ಪ್ರತಿಭಟನೆ ನಮ್ಮಲ್ಲಿ ಒಳಜಗಳ ಗಿಳಜಗಳ ಯಾವುದೂ ಇಲ್ಲ : ಸಿಎಂ ಸಿದ್ದರಾಮಯ್ಯ ಲೋಕಸಮರ 2024: 7ನೇ ಹಂತದ ಚುನಾವಣೆ - ವಾರಣಾಸಿಯಿಂದ 3ನೇ ಬಾರಿಗೆ ಪರೀಕ್ಷೆಗಿಳಿದ ಪ್ರಧಾನಿ ಮೋದಿ KSRTC: ಕರ್ತವ್ಯದ ವೇಳೆಯೇ ಬ್ರೈನ್‌ಸ್ಟ್ರೋಕ್‌ - ಸಾರಿಗೆ ನೌಕರನಿಗೆ ಬೇಕಿದೆ ಆರ್ಥಿಕ ನೆರವು ನಾಲ್ಕನೇ ಹಂತದ ಲೋಕಸಭಾ ಚುನಾವಣೆ: 10 ರಾಜ್ಯಗಳ 96 ಕ್ಷೇತ್ರಗಳಲ್ಲಿ ಒಟ್ಟಾರೆ ಶೇ. 62.84ರಷ್ಟು ಮತದಾನ