NEWSನಮ್ಮರಾಜ್ಯಸಂಸ್ಕೃತಿ

ನಾಡ ಅಧಿದೇವತೆ ಚಾಮುಂಡಿ ತಾಯಿಯ ವರ್ಧಂತಿ ಸಂಭ್ರಮ: ಬೆಟ್ಟಕ್ಕೆ ಹರಿದು ಬರುತ್ತಿದೆ ಭಕ್ತ ಸಾಗರ

ವಿಜಯಪಥ ಸಮಗ್ರ ಸುದ್ದಿ

ಮೈಸೂರು: ಇಂದು ನಾಡ ಅಧಿದೇವತೆ ಚಾಮುಂಡೇಶ್ವರಿ ತಾಯಿಯ ವರ್ಧಂತಿ ಸಂಭ್ರಮ ಮನೆಮಾಡಿದ್ದು, ಚಾಮುಂಡಿಬೆಟ್ಟಕ್ಕೆ ಸಹಸ್ರಾರು ಭಕ್ತರು ಭೇಟಿ ನೀಡಿ, ತಾಯಿಯ ದರ್ಶನ ಪಡೆಯುತ್ತಿದ್ದಾರೆ.

ಮೈಸೂರಿನ ಅಧಿದೇವತೆ ಚಾಮುಂಡೇಶ್ವರಿ ದೇವಿಯ ಜನ್ಮದಿನವನ್ನು ಶ್ರೀ ಚಾಮುಂಡೇಶ್ವರಿ ವರ್ಧಂತಿ ಮಹೋತ್ಸವ ಎಂದು ಆಚರಿಸಲಾಗುತ್ತದೆ. ಈ ಹಿನ್ನೆಲೆಯಲ್ಲಿ ಇಂದು ಚಾಮುಂಡಿಬೆಟ್ಟದಲ್ಲಿ ವಿಶೇಷ ಪೂಜೆ, ಹೋಮ ಹವನಗಳೊಂದಿಗೆ ದೇವಿಯ ಮೆರವಣಿಗೆಯನ್ನು ಮಾಡಲಾಯಿತು.

ಇಡೀ ಮೈಸೂರು ನಗರವು ತಮ್ಮ ಆರಾಧ್ಯ ದೇವಿಯ ಜನ್ಮದಿನವನ್ನು ಬೆಳಗ್ಗೆಯಿಂದಲೇ ಪ್ರಸಾದ ವಿತರಿಸುವ ಮೂಲಕ ಆಚರಿಸುತ್ತಿದೆ. ಅಲ್ಲದೆ ನಿನ್ನೆ ಶುಕ್ರವಾರವಾಗಿದ್ದರಿಂದ ಮೈಸೂರು ಜಿಲ್ಲೆ ತಿ.ನರಸೀಪುರ ತಾಲೂಕಿನ ಬೀಡನಹಳ್ಳಿ ಗ್ರಾಮದ ಚಾಮುಂಡೇಶ್ವರಿ ದೇವಾಲಯದಲ್ಲಿ ತಾಯಿಯ ವರ್ಧಂತಿ ಆಚರಿಸಲಾಯಿತು.

ಇನ್ನು ಚಾಮುಂಡೇಶ್ವರಿ ವರ್ಧಂತಿ ಮಹೋತ್ಸವ ದಿನದಂದು ತಾಯಿ ಚಾಮುಂಡಿಯನ್ನು ಅದ್ದೂರಿಯಾಗಿ ಅಲಂಕರಿಸಲಾಗಿದ್ದು, ಹೂವು, ಹಣ್ಣುಗಳಿಂದ ವಿಶೇಷವಾಗಿ ಅಲಂಕೃತಗೊಂಡ ದೇವಿಯು ಗರ್ಭಗುಡಿಯಿಂದ ಸಾರ್ವಜನಿಕರಿಗೆ ನೇರ ದರ್ಶನ ನೀಡುತ್ತಿದ್ದಾಳೆ.

ವರ್ಧಂತಿ ಮಹೋತ್ಸವದ ಹಿನ್ನೆಲೆಯಲ್ಲಿ ಇಂದು ದೇವಿಗೆ ಮಾತ್ರವಲ್ಲ, ಇಡೀ ದೇವಾಲಯವನ್ನು ಹೂವು ಮತ್ತು ಹಣ್ಣುಗಳಿಂದ ಸುಂದರವಾಗಿ ಅಲಂಕರಿಸಲಾಗಿದೆ. ಇನ್ನು ಚಾಮುಂಡಿಬೆಟ್ಟಕ್ಕೆ ಖಾಸಗಿ ವಾಹನಗಳನ್ನು ನಿರ್ಬಂಧಿಸಲಾಗಿದ್ದು, ಸಾರ್ವಜನಿಕರಿಗೆ ವಿಶೇಷ ಬಸ್‌ ಸೌಲಭ್ಯಗಳನ್ನು ಮಾಡಲಾಗಿದೆ.

ಬೆಟ್ಟಕ್ಕೆ ಬರುವ ಸಾರ್ವಜನಿಕರಿಗೆ ತೊಂದರೆಯಾಗದಂತೆ ಕಟ್ಟುನಿಟ್ಟಿನ ಭದ್ರತೆ ಕೈಗೊಳ್ಳಲಾಗಿದ್ದು, ಪ್ರಸಾದ ವ್ಯವಸ್ಥೆಯನ್ನು ಸಹ ಮಾಡಲಾಗಿದೆ. ಈ ಹಿನ್ನೆಲೆಯಲ್ಲಿ ಸಾರ್ವಜನಿಕರು ಬೆಟ್ಟದಲ್ಲಿ ಸರತಿ ಸಾಲಿನಲ್ಲಿ ನಿಂತು ದೇವಿಯ ದರ್ಶನ ಪಡೆಯುತ್ತಿದ್ದಾರೆ.

Leave a Reply

error: Content is protected !!
LATEST
ಮೈತ್ರಿ ತೆಕ್ಕೆಗೆ ಬನ್ನೂರು ಪುರಸಭೆ: ಜೆಡಿಎಸ್‌ಗೆ ಅಧ್ಯಕ್ಷ ಗದ್ದುಗೆ, ಬಿಜೆಪಿಗೆ ಉಪಾಧ್ಯಕ್ಷ ಗಾದಿ ರಾಜ್ಯದ ಆರು ಪ್ರತ್ಯೇಕ ಸ್ಥಳಗಳಲ್ಲಿ ಅಪಘಾತ: 13 ಮಂದಿ ಸಾವು, ಹಲವರಿಗೆ ಗಾಯ ಯಡಿಯೂರು ಕೆರೆ: ಗಣಪತಿ ವಿಸರ್ಜನಾ ಕಲ್ಯಾಣಿಗೆ ನೀರು ತುಂಬಿಸಿದ ಬಿಬಿಎಂಪಿ ತಂದೆ ನಿಧನರಾದ ದುಃಖದಲ್ಲಿರುವ ನೌಕರನಿಗೆ ರಜೆ ಕೊಡದೆ ಗೈರು ತೋರಿಸಿದ್ದು ಅಲ್ಲದೆ ಕಾರಣ ಕೇಳಿ ನೋಟಿಸ್‌ ಕೊಟ್ಟ ಅಧಿಕಾರಿ... KKRTC ಬಸ್‌-ಶಾಲಾ ಬಸ್‌ ಮುಖಾಮುಖಿ ಡಿಕ್ಕಿ: ಇಬ್ಬರು ಮೃತ- 25ಕ್ಕೂ ಹೆಚ್ಚು ಮಕ್ಕಳಿಗೆ ಗಾಯ KSRTC: 38 ತಿಂಗಳ ವೇತನ ಹೆಚ್ಚಳ ಹಿಂಬಾಕಿಗೆ ಆಗ್ರಹಿಸಿ BMS ಪ್ರತಿಭಟನೆ- ಸರ್ಕಾರದ ವಿರುದ್ಧ ಕಿಡಿ MSRTC: ನೌಕರರ ಮುಷ್ಕರಕ್ಕೆ ಮಣಿದು 6500 ರೂ. ವೇತನ ಹೆಚ್ಚಳಕ್ಕೆ ಒಪ್ಪಿದ ಸರ್ಕಾರ- ಧರಣಿ ವಾಪಸ್‌ MSRTC: ತೀವ್ರಗೊಂಡ ನೌಕರರ ಮುಷ್ಕರ- 11 ಸಂಘಟನೆಗಳ ಒಗ್ಗಟ್ಟು- ನಿಗಮಕ್ಕೆ ನಡುಕ ಚಾಮುಂಡಿಬೆಟ್ಟದಲ್ಲಿ ಧೂಮಪಾನ, ಮದ್ಯಪಾನ, ಗುಟ್ಕಾ ನಿಷೇಧ: ಸಿಎಂ ಘೋಷಣೆ ಪೋಡಿ ಮುಕ್ತ ಅಭಿಯಾನ, ಪೌತಿ ಖಾತೆ ಆಂದೋಲನಕ್ಕೆ ಕ್ರಮ: ಕಂದಾಯ ಸಚಿವ ಕೃಷ್ಣ ಬೈರೇಗೌಡ