NEWSಕೃಷಿನಮ್ಮಜಿಲ್ಲೆ

ಪ್ರತ್ಯೇಕ ಸ್ಥಳಗಳಲ್ಲಿ ವರುಣನ ಆರ್ಭಟ: ಮರ ಬಿದ್ದು ಟೆಕ್ಕಿ ಬೆನ್ನುಮೂಳೆ ಮುರಿತ -ಮಗು ಸೇರಿ ಏಳು ಮಂದಿ ಸಾವು

ವಿಜಯಪಥ ಸಮಗ್ರ ಸುದ್ದಿ

ಬೆಂಗಳೂರು: ಮಳೆ ಬೀಳುತ್ತಿದ್ದ ವೇಳೆ ರಸ್ತೆಯಲ್ಲಿ ನಡೆದುಕೊಂಡು ಹೋಗುತ್ತಿದ್ದ ಟೆಕ್ಕಿಯ ಮೇಲೆ ಮರದ ಕೊಂಬೆ ಬಿದ್ದು ಬೆನ್ನು ಮೂಳೆ ಮುರಿದಿರುವ ಘಟನೆ ರಾಜ್ಯ ರಾಜಧಾನಿಯ ಸಿ.ವಿ.ರಾಮನ್ ನಗರದ ನಾಗವಾರಪಾಳ್ಯ 2ನೇ ಕ್ರಾಸ್​ನಲ್ಲಿ ನಡೆದಿದೆ.

ಐಟಿ ಕಂಪನಿ ಉದ್ಯೋಗಿ ರವಿಕುಮಾರ್ (26) ಬೆನ್ನು ಮೂಳೆ ಮುರಿತಕ್ಕೊಳಗಾದ ಗಾಯಾಳು. ಮಳೆ ಬೀಳುತ್ತಿದ್ದಾಗ ಟೆಕ್ಕಿಯು ರಸ್ತೆಯಲ್ಲಿ ನಡೆದುಕೊಂಡು ಹೋಗುತ್ತಿದ್ದರು. ಇದೇ ಸಮಯಕ್ಕೆ ಮರದ ಕೊಂಬೆವೊಂದು ಮುರಿದು ಟೆಕ್ಕಿ ಮೇಲೆ ಬಿದ್ದಿದೆ. ಪರಿಣಾಮ ಬೆನ್ನು ಮೂಳೆ ಮುರಿದು ತೀವ್ರ ಗಾಯಗೊಂಡಿದ್ದಾನೆ.

ಸದ್ಯ ಗಾಯಾಳುವಿಗೆ ನಗರದ ಎಚ್​ಎಎಲ್​ನ ಮಣಿಪಾಲ್ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗುತ್ತಿದೆ. ಮರ ಜೋರಾಗಿ ಬಿದ್ದಿದ್ದರಿಂದ ಟೆಕ್ಕಿಯ ಸ್ಪೈನ್ ಕಾರ್ಡ್ ಮುರಿದು ಹೋಗಿದೆ. ಬಿಬಿಎಂಪಿ ಉಸ್ತುವಾರಿಯಲ್ಲಿ ಗಾಯಾಳುವಿಗೆ ಚಿಕಿತ್ಸೆ ಕೊಡಿಸಲಾಗುತ್ತಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಭಾರಿ ಮಳೆಗೆ ಗೋಡೆ ಕುಸಿದು ಮಗು ಸೇರಿ ಏಳು ಮಂದಿ ಸಾವು: ಇನ್ನು ಭಾರಿ ಮಳೆಯಿಂದಾಗಿ ನಿರ್ಮಾಣ ಹಂತದ ಕಟ್ಟಡ ಗೋಡೆ ಕುಸಿದು ದುರಂತ ಸಂಭವಿಸಿದೆ. ಇಂದು ಬೆಳಗ್ಗೆ ನಾಲ್ಕು ವರ್ಷದ ಮಗು ಸೇರಿ ಒಟ್ಟು 7 ಮಂದಿ ಮೃತಪಟ್ಟಿದ್ದಾರೆ. ತೆಲಂಗಾಣದ ಬಚುಪಳ್ಳಿಯಲ್ಲಿ ಮಳೆಯಿಂದಾಗಿ ದುರಂತ ಸಂಭವಿಸಿದೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.

ಬಚುಪಳ್ಳಿ ಪೊಲೀಸರು ನೀಡಿರುವ ಮಾಹಿತಿ ಪ್ರಕಾರ.. ಮೃತರು ಒಡಿಶಾ ಹಾಗೂ ಛತ್ತೀಸ್​ಗಢ ಮೂಲದ ವಲಸೆ ಕಾರ್ಮಿಕರು. ಬಿಲ್ಡಿಂಗ್ ನಿರ್ಮಾಣ ಸಂಬಂಧ ತೆಲಂಗಾಣಕ್ಕೆ ಬಂದಿದ್ದರು. ಮೃತರ ದೇಹಗಳನ್ನು ವಶಕ್ಕೆ ಪಡೆದು ಮರಣೋತ್ತರ ಪರೀಕ್ಷೆ ಮಾಡಲಾಗಿದೆ ಎಂದು ತಿಳಿಸಿದ್ದಾರೆ.

ತೆಲಂಗಾಣ ಹಲವು ಭಾಗಗಳಲ್ಲಿ ಭಾರೀ ಮಳೆಯಾಗುತ್ತಿದೆ. ಪರಿಣಾಮ ಜನ ಜೀವನ ಅಸ್ತವ್ಯಸ್ತಗೊಂಡಿದೆ. ಹೈದರಾಬಾದ್​ನಲ್ಲಿ ಮಳೆಯಿಂದ ನಗರ ತತ್ತರಿಸಿ ಹೋಗಿದೆ. ರಸ್ತೆಗಳಲ್ಲಿ ನೀರು ನಿಂತಿದ್ದರಿಂದ ಟ್ರಾಫಿಕ್ ಜಾಮ್ ಉಂಟಾಗಿದೆ. ಡಿಆರ್​ಎಫ್ ಘಟಕ ರಕ್ಷಣೆಗೆ ದೌಡಾಯಿಸಿದೆ ಎಂದು ಗ್ರೇಟರ್​ ಹೈದರಾಬಾದ್ ಮುನ್ಸಿಪಾಲ್ ಕಾರ್ಪೊರೇಷನ್​​ ಅಧಿಕಾರಿಗಳು ತಿಳಿಸಿದ್ದಾರೆ.

Leave a Reply

error: Content is protected !!
LATEST
ಸರಿಸಮಾನ ವೇತನದ ನಿರ್ಧಾರ: ನಮಗೆ ಸಾರಿಗೆ ಸಚಿವರು ಕೊಟ್ಟ ಭರವಸೆ ಶೀಘ್ರ ಈಡೇರಲಿದೆ ಎಂದ ಅಧಿಕಾರಿ, ಮೇಲ್ವಿಚಾರಕರ ಮುಖಂಡ... KSRTC: ಸ್ವಯಂ ಘೋಷಿತ ಕಾರ್ಮಿಕ ನಾಯಕರ "ಚೌಕಾಶಿ" ವೇತನ ಒಪ್ಪಂದಕ್ಕೆ ಇತೀಶ್ರೀ ಹಾಡಿ - ಎಂಡಿಗೆ ಮನವಿ NWKRTC: ತಾಂತ್ರಿಕ ದೋಷದಿಂದ ಚಾಲಕನ ನಿಯಂತ್ರಣ ತಪ್ಪಿ ಮರಕ್ಕೆ ಡಿಕ್ಕಿ ಹೊಡೆದ ಬಸ್‌- ಚಾಲನಾ ಸಿಬ್ಬಂದಿಗಳಿಗೆ ಗಾಯ ನಿರುದ್ಯೋಗಿ ಯುವಕ - ಯುವತಿಯರಿಗೆ ಮಾತ್ರ: PM ಇಂಟರ್ನ್​ಶಿಪ್ಪ್‌ಗೆ ಅರ್ಜಿ ಹಾಕಿ -ಪ್ರತಿ ತಿಂಗಳು ₹5000 ಭತ್ಯೆ ಪಡೆಯಿರ... KSRTC ನೌಕರರು ಈಗಾಗಲೇ ಮುಷ್ಕರಕ್ಕೆ ಸಿದ್ಧ, ನಾವು ದಿನಾಂಕ ಘೋಷಣೆ ಮಾಡುತ್ತೇವೆ -ಸರ್ಕಾರಕ್ಕೆ ಜಂಟಿ ಕ್ರಿಯಾ ಸಮಿತಿ ಎಚ್... KSRTC: ಮೊಬೈಲ್‌ನಲ್ಲಿ ಮಾತನಾಡಿಕೊಂಡು ಬಸ್‌ ಚಾಲನೆ - ಚಾಲಕನ ನಿರ್ಲಕ್ಷ್ಯಕ್ಕೆ ಕಿಡಿ KSRTC ಕೋಲಾರ: ನೌಕರರ ಪರ ನಿಲ್ಲಬೇಕಾದ ಕಾರ್ಮಿಕ ಕಲ್ಯಾಣ ಅಧಿಕಾರಿಯೇ ವಿರುದ್ಧ ನಿಂತರೆ ಎಲ್ಲಿ ಸಿಗಲಿದೆ ನ್ಯಾಯ? ಮೈಸೂರು: ಸಾಲದ 1ಕಂತು ಕಟ್ಟಿಲ್ಲದ್ದಕ್ಕೆ ಟ್ರ್ಯಾಕ್ಟರ್ ಜಪ್ತಿ ಮಾರಾಟ - ಕೋಟಕ್ ಮಹೇಂದ್ರ ಬ್ಯಾಂಕ್‌ಗೆ ರೈತರ ಮುತ್ತಿಗೆ ಕೆಟ್ಟು ನಿಂತಿದ್ದ KSRTC ಬಸ್‌ ರಿಪೇರಿ ವೇಳೆ ಕಾರು ಡಿಕ್ಕಿ-ಕಂಡಕ್ಟರ್‌  ಮೃತ BMTC: ಸ್ಕೂಟರ್​​ಗೆ ಸೈಡ್​ ಬಿಡಲಿಲ್ಲ ಎಂದು ಬಸ್‌ ಚಾಲಕನ ಮೇಲೆ ಕಿಡಿಗೇಡಿಯಿಂದ ಹಲ್ಲೆ- ಇದು 9ನೇ ಪ್ರಕರಣ- ಆತಂಕದಲ್ಲಿ ...