ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಮಳೆ ಮುಂದುವರಿದ ಹಿನ್ನೆಲೆ ಕಡಬ ತಾಲೂಕಿನ ಮಣ್ಣಗುಂಡಿ ಬಳಿ ಭೂಕುಸಿತ ಉಂಟಾಗಿದ್ದು, ಬೆಂಗಳೂರು-ಮಂಗಳೂರು ರಾಷ್ಟ್ರೀಯ ಹೆದ್ದಾರಿ ಬಂದ್ ಆಗಿದೆ. ಆದರೂ ಧರ್ಮಸ್ಥಳ, ಕುಕ್ಕೆ ಸುಬ್ರಹ್ಮಣ್ಯ ಸಂಚಾರಕ್ಕೆ ಯಾವುದೆ ಅಡಚಣೆ ಇಲ್ಲ.
ಜಿಲ್ಲೆಯಲ್ಲಿ ಬುಧವಾರ ರಾತ್ರಿ ಸುರಿದ ಭಾರೀ ಮಳೆಗೆ ಹಲವೆಡೆ ಅವಾಂತರ ಸೃಷ್ಟಿಯಾಗಿದೆ. ಮಣ್ಣಗುಂಡಿ ಬಳಿ ಭೂಕುಸಿತವಾಗಿದೆ. ರಾಷ್ಟ್ರೀಯ ಹೆದ್ದಾರಿ-75ರ ಮೇಲೆ ಎರಡು ಬದಿ ಮಣ್ಣು ಕುಸಿದಿದ್ದು, ಸಂಚಾರ ಬಂದ್ ಆಗಿದೆ. ಈ ಹಿನ್ನೆಲೆ ಮಂಗಳೂರಿನಿಂದ ಬೆಂಗಳೂರಿಗೆ ಸಾಗುವ ಲಾರಿ, ಬಸ್, ಟ್ರಕ್ಗಳ ಸಂಚಾರ ಸ್ಥಗಿತಗೊಂಡಿದೆ.
ಈ ನಡುವೆಯೂ ಬೆಂಗಳೂರಿನಿಂದ ಧರ್ಮಸ್ಥಳ, ಕುಕ್ಕೆ ಸುಬ್ರಹ್ಮಣ್ಯಕ್ಕೆ ಸಂಚರಿಸಲು ಯಾವುದೇ ಅಡಚಣೆ ಇಲ್ಲ, ಧರ್ಮಸ್ಥಳ ಕ್ರಾಸ್ನಿಂದ ಸ್ವಲ್ಪ ಮುಂದೆ ಕುಸಿತ ಉಂಟಾಗಿದೆ. ನೆಲ್ಯಾಡಿ ಬಳಿ ಎಡಕ್ಕೆ ಹೋಗಿ ಕೊಕ್ಕಡ ಮಾರ್ಗವಾಗಿ ರಾ.ಹೆ.75ನ್ನು ತಲುಪಬಹುದು ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ.ಅರುಣ್ ತಿಳಿಸಿದ್ದಾರೆ.
ಮಂಗಳೂರಿನ ಕದ್ರಿ ಹಿಲ್ಸ್ನ ಸರ್ಕ್ಯೂಟ್ ಹೌಸ್ ಬಳಿ ರಸ್ತೆ ಮೇಲೆ ಬೃಹತ್ ಗುಡ್ಡ ಕುಸಿದಿದ್ದು, ಭಾರೀ ಪ್ರಮಾಣದ ಕಲ್ಲು, ಮಣ್ಣು ರಸ್ತೆಯಲ್ಲಿರುವುದರಿಂದ ವಾಹನ ಸಂಚಾರಕ್ಕೆ ಅಡಚಣೆಯಾಗಿದೆ.
ಇನ್ನು ಈ ರಸ್ತೆಯಲ್ಲಿ ರಾತ್ರಿ ವೇಳೆ ಗುಡ್ಡ ಕುಸಿದು ಬಿದ್ದಿರೋದ್ರಿಂದ ಯಾವುದೇ ಅನಾಹುತವಾಗಿಲ್ಲ. ಇತ್ತ ರಸ್ತೆಗೆ ಬಿದ್ದಿರೋ ಕಲ್ಲು, ಮಣ್ಣನ್ನು ಪಾಲಿಕೆ ಸಿಬ್ಬಂದಿಗಳು ತೆರವುಗೊಳಿಸುತ್ತಿದ್ದಾರೆ.
ಮೇರಿಹಿಲ್ನ ಕೆನರಾ ವಿಕಾಸ ಕಾಲೇಜಿನ ಕಾಂಪೌಂಡ್ ಗೋಡೆ ಬುಧವಾರ ತಡರಾತ್ರಿ ಕುಸಿದು ಬಿದ್ದಿದ್ದು, ಕಾಂಪೌಂಡ್ ಪಕ್ಕ ನಿಲ್ಲಿಸಿದ್ದ 16 ಬೈಕ್ ಹಾಗೂ ಒಂದು ಇನೋವಾ ಕಾರ್ ಸಂಪೂರ್ಣವಾಗಿ ಹಾನಿಯಾಗಿದೆ. ಕಾಂಪೌಂಡ್ ಕುಸಿಯುವ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದೆ.

Related


You Might Also Like
ತಿ.ನರಸೀಪುರ: ಸಚಿವ ಮಹದೇವಪ್ಪ ಹೆಸರಲ್ಲಿ 27 ಲಕ್ಷ ರೂ. ವಂಚನೆ: ಮಹಿಳೆ ವಿರುದ್ಧ ಪೊಲೀಸ್ ಠಾಣೆ ಮುಂದೆ ಪ್ರತಿಭಟನೆ
ತಿ.ನರಸೀಪುರ : ಸಚಿವ ಎಚ್.ಸಿ.ಮಹದೇವಪ್ಪ ಅವರ ಹೆಸರಿನಲ್ಲಿ ಖತರ್ನಾಕ್ ಮಹಿಳೆಯೊಬ್ಬಳು 27 ಲಕ್ಷ ರೂ. ವಂಚಿಸಿರುವ ಘಟನೆ ಮೈಸೂರು ಜಿಲ್ಲೆಯ ತಿ.ನರಸೀಪುರ ತಾಲೂಕಿನ ಕೊಳತ್ತೂರು ಗ್ರಾಮದಲ್ಲಿ ನಡೆದಿದೆ....
KSRTC ನೌಕರರಿಗೆ ಹೇಗಾದರೂ ಸರಿಯೇ ಸರಿಸಮಾನ ವೇತನ ಬೇಕಷ್ಟೆ !
ಬೆಂಗಳೂರು: ಕರ್ನಾಟಕ ರಾಜ್ಯ ರಸ್ತೆ ಸಾರಿಗೆಯ ನಾಲ್ಕೂ ನಿಗಮಗಳ ಅಧಿಕಾರಿಗಳು-ನೌಕರರಿಗೆ ಸರ್ಕಾರಿ ನೌಕರರಿಗೆ ಸರಿ ಸಮಾನ ವೇತನ ಕೊಡುವ ಸಂಬಂಧ 2020ಕ್ಕೂ ಹಿಂದೆಯೇ ಅಂದಿನ ಸರ್ಕಾರ ನಿರ್ಧರಿಸಿತ್ತು....
KSRTC-ಪ್ರಯಾಣಿಕರು ಟಿಕೆಟ್ ಕಳೆದುಕೊಂಡರೆ ಕಂಡಕ್ಟರ್ ವಿರುದ್ಧ ಕ್ರಮ ತೆಗೆದುಕೊಳ್ಳಬಾರದು: ಎಂಡಿ ಆದೇಶ
ಬೆಂಗಳೂರು: ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮದ ಬಸ್ಗಳಲ್ಲಿ ಪ್ರಯಾಣಿಸುವಾಗ ಪ್ರಯಾಣಿಕರು ಟಿಕೆಟ್ ಕಳೆದುಕೊಂಡಿರುವುದು ತನಿಖಾ ಸಿಬ್ಬಂದಿಗೆ ತಪಾಸಣೆ ವೇಳೆ ತಿಳಿದು ಬಂದರೆ ಅಂಥವರಿಗೆ ಮತ್ತೆ ಟಿಕೆಟ್ಕೊಡಬೇಕು....
8ನೇ ವೇತನ ಆಯೋಗ: ಕೇಂದ್ರ ಸರ್ಕಾರಿ ನೌಕರರ ಮೂಲ ವೇತನ 34,500 ರೂ.ಗೆ ಏರಿಕೆ!
ಕೇಂದ್ರ ಸರ್ಕಾರಿ ನೌಕರರು ಮತ್ತು ಪಿಂಚಣಿದಾರರು 8ನೇ ವೇತನ ಆಯೋಗದಲ್ಲಿ (8th Pay Commission) ತಮ್ಮ ಬೇಸಿಕ್ ಸಂಬಳದ ಭಾರಿ ಏರಿಕೆಯ ನಿರೀಕ್ಷೆಯಲ್ಲಿದ್ದಾರೆ. 8ನೇ ವೇತನ ಆಯೋಗದಲ್ಲಿ...
BMTC: 7ತಿಂಗಳಾದರೂ ಇನ್ನೂ ಜಾರಿಗೆ ಬರದ ಎಂಡಿ ಹೊರಡಿಸಿದ 1ರಂದೇ ವೇತನ ಪಾವತಿ ಆದೇಶ- ರಬ್ಬರ್ ಸ್ಟ್ಯಾಂಪಾದ ರಾಮಚಂದ್ರನ್!
ಬೆಂಗಳೂರು: ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆಯ ಅಧಿಕಾರಿ/ನೌಕರರಿಗೆ ಪ್ರತಿ ತಿಂಗಳು 1ನೇ ತಾರೀಖಿನಂದು ವೇತನ ಪಾತಿಸಬೇಕು ಎಂದು ಫೆಬ್ರವರಿ ತಿಂಗಳ ವೇತನ ಮಾರ್ಚ್1ರಂದೆ ಜಮಾ ಮಾಡುವುದಾಗಿ ಹೇಳಿದ...
NWKRTC ಬಸ್-ಲಾರಿ ನಡುವೆ ಭೀಕರ ಡಿಕ್ಕಿ: ಇಬ್ಬರೂ ಚಾಲಕರಿಗೂ ಗಂಭೀರ ಗಾಯ
ಕಬ್ಬೂರ: ವಾಯವ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆ ಹಾಗೂ ಲಾರಿ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ಇಬ್ಬರೂ ಚಾಲಕರು ಸೇರಿದಂತೆ ಪ್ರಯಾಣಿಕರಿಗೂ ಗಂಭೀರ ಗಾಯಗಳಾಗಿರುವ ಘಟನೆ ಕಬ್ಬೂರ...
ವಿಮಾನದ ಮೂಲಕ ಮೈಸೂರಿಗೆ ಆಗಮಿಸಿದ ರಾಷ್ಟ್ರಪತಿ ದ್ರೌಪದಿ ಮುರ್ಮು
ಮೈಸೂರು: ಎರಡು ದಿನಗಳ ಮೈಸೂರು ಭೇಟಿಗಾಗಿ ಸೋಮವಾರ (ಸೆ.1) ರಾಷ್ಟ್ರಪತಿ ದ್ರೌಪದಿ ಮುರ್ಮು ಮೈಸೂರಿನ ವಿಮಾನ ನಿಲ್ದಾಣಕ್ಕೆ ಬಂದಿಳಿದರು. ರಾಷ್ಟ್ರಪತಿ ಮುರ್ಮು ಅವರನ್ನು ರಾಜ್ಯಪಾಲ ಥಾವರ್ ಚಂದ್...
ಕನಿಷ್ಠ 7500 ರೂ. ಪಿಂಚಣಿಗೆ ಆಗ್ರಹಿಸಿ ಇಪಿಎಸ್ ಪಿಂಚಣಿದಾರರ ಬೃಹತ್ ಪ್ರತಿಭಟನೆ
ಬೆಂಗಳೂರು: "ನಿಧಿ ಅಪ್ಕೆನಿಕಟ್" ಕಾರ್ಯಕ್ರಮದಂದು ನಗರದ ರಿಚ್ಮಂಡ್ ವೃತ್ತದಲ್ಲಿರುವ ಪ್ರಾದೇಶಿಕ ಭವಿಷ್ಯ ನಿಧಿ ಕಚೇರಿ ಆವರಣದಲ್ಲಿ ಇಪಿಎಸ್ ಪಿಂಚಣಿದಾರರ 29ನೇ ಬೃಹತ್ ಪ್ರತಿಭಟನಾ ಸಭೆ ಜರುಗಿತು. ಕನಿಷ್ಠ...
ವಸತಿ ಸಚಿವ ಜಮೀರ್ ಅಹ್ಮದ್ ಖಾನ್ ಅಕ್ರಮ ಆಸ್ತಿ ಗಳಿಕೆ ಪ್ರಕರಣ: ನಟಿ ರಾಧಿಕಾ ವಿಚಾರಣೆ
ಬೆಂಗಳೂರು: ವಸತಿ ಸಚಿವ ಜಮೀರ್ ಅಹ್ಮದ್ ಖಾನ್ ಅವರ ಅಕ್ರಮ ಆಸ್ತಿ ಗಳಿಕೆ ಪ್ರಕರಣದಲ್ಲಿ ಲೋಕಾಯುಕ್ತ ಪೊಲೀಸರು ನಟಿ ರಾಧಿಕಾ ಕುಮಾರಸ್ವಾಮಿ ಅವರನ್ನು ವಿಚಾರಣೆಗೆ ಒಳಪಡಿಸಿದ್ದಾರೆ. ಎರಡು...