NEWSಕೃಷಿನಮ್ಮರಾಜ್ಯ

ದ.ಕ.ದಲ್ಲಿ ವರುಣನ ಅಬ್ಬರ- ಮಣ್ಣಗುಂಡಿ ಬಳಿ ಗುಡ್ಡಕುಸಿತ: BM ಹೆದ್ದಾರಿ ಬಂದ್

ವಿಜಯಪಥ ಸಮಗ್ರ ಸುದ್ದಿ

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಮಳೆ ಮುಂದುವರಿದ ಹಿನ್ನೆಲೆ ಕಡಬ ತಾಲೂಕಿನ ಮಣ್ಣಗುಂಡಿ ಬಳಿ ಭೂಕುಸಿತ ಉಂಟಾಗಿದ್ದು, ಬೆಂಗಳೂರು-ಮಂಗಳೂರು ರಾಷ್ಟ್ರೀಯ ಹೆದ್ದಾರಿ ಬಂದ್ ಆಗಿದೆ. ಆದರೂ ಧರ್ಮಸ್ಥಳ, ಕುಕ್ಕೆ ಸುಬ್ರಹ್ಮಣ್ಯ ಸಂಚಾರಕ್ಕೆ ಯಾವುದೆ ಅಡಚಣೆ ಇಲ್ಲ.

ಜಿಲ್ಲೆಯಲ್ಲಿ ಬುಧವಾರ ರಾತ್ರಿ ಸುರಿದ ಭಾರೀ ಮಳೆಗೆ ಹಲವೆಡೆ ಅವಾಂತರ ಸೃಷ್ಟಿಯಾಗಿದೆ. ಮಣ್ಣಗುಂಡಿ ಬಳಿ ಭೂಕುಸಿತವಾಗಿದೆ. ರಾಷ್ಟ್ರೀಯ ಹೆದ್ದಾರಿ-75ರ ಮೇಲೆ ಎರಡು ಬದಿ ಮಣ್ಣು ಕುಸಿದಿದ್ದು, ಸಂಚಾರ ಬಂದ್ ಆಗಿದೆ. ಈ ಹಿನ್ನೆಲೆ ಮಂಗಳೂರಿನಿಂದ ಬೆಂಗಳೂರಿಗೆ ಸಾಗುವ ಲಾರಿ, ಬಸ್, ಟ್ರಕ್‌ಗಳ ಸಂಚಾರ ಸ್ಥಗಿತಗೊಂಡಿದೆ.

ಈ ನಡುವೆಯೂ ಬೆಂಗಳೂರಿನಿಂದ ಧರ್ಮಸ್ಥಳ, ಕುಕ್ಕೆ ಸುಬ್ರಹ್ಮಣ್ಯಕ್ಕೆ ಸಂಚರಿಸಲು ಯಾವುದೇ ಅಡಚಣೆ ಇಲ್ಲ, ಧರ್ಮಸ್ಥಳ ಕ್ರಾಸ್‌ನಿಂದ ಸ್ವಲ್ಪ ಮುಂದೆ ಕುಸಿತ ಉಂಟಾಗಿದೆ. ನೆಲ್ಯಾಡಿ ಬಳಿ ಎಡಕ್ಕೆ ಹೋಗಿ ಕೊಕ್ಕಡ ಮಾರ್ಗವಾಗಿ ರಾ.ಹೆ.75ನ್ನು ತಲುಪಬಹುದು ಎಂದು ಜಿಲ್ಲಾ ಪೊಲೀಸ್‌ ವರಿಷ್ಠಾಧಿಕಾರಿ ಡಾ.ಅರುಣ್ ತಿಳಿಸಿದ್ದಾರೆ.

ಮಂಗಳೂರಿನ ಕದ್ರಿ ಹಿಲ್ಸ್‌ನ ಸರ್ಕ್ಯೂಟ್ ಹೌಸ್ ಬಳಿ ರಸ್ತೆ ಮೇಲೆ ಬೃಹತ್ ಗುಡ್ಡ ಕುಸಿದಿದ್ದು, ಭಾರೀ ಪ್ರಮಾಣದ ಕಲ್ಲು, ಮಣ್ಣು ರಸ್ತೆಯಲ್ಲಿರುವುದರಿಂದ ವಾಹನ ಸಂಚಾರಕ್ಕೆ ಅಡಚಣೆಯಾಗಿದೆ.

ಇನ್ನು ಈ ರಸ್ತೆಯಲ್ಲಿ ರಾತ್ರಿ ವೇಳೆ ಗುಡ್ಡ ಕುಸಿದು ಬಿದ್ದಿರೋದ್ರಿಂದ ಯಾವುದೇ ಅನಾಹುತವಾಗಿಲ್ಲ. ಇತ್ತ ರಸ್ತೆಗೆ ಬಿದ್ದಿರೋ ಕಲ್ಲು, ಮಣ್ಣನ್ನು ಪಾಲಿಕೆ ಸಿಬ್ಬಂದಿಗಳು ತೆರವುಗೊಳಿಸುತ್ತಿದ್ದಾರೆ.

ಮೇರಿಹಿಲ್‌ನ ಕೆನರಾ ವಿಕಾಸ ಕಾಲೇಜಿನ ಕಾಂಪೌಂಡ್ ಗೋಡೆ ಬುಧವಾರ ತಡರಾತ್ರಿ ಕುಸಿದು ಬಿದ್ದಿದ್ದು, ಕಾಂಪೌಂಡ್ ಪಕ್ಕ ನಿಲ್ಲಿಸಿದ್ದ 16 ಬೈಕ್ ಹಾಗೂ ಒಂದು ಇನೋವಾ ಕಾರ್ ಸಂಪೂರ್ಣವಾಗಿ ಹಾನಿಯಾಗಿದೆ. ಕಾಂಪೌಂಡ್ ಕುಸಿಯುವ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದೆ.

Megha
the authorMegha

Leave a Reply

error: Content is protected !!
Latest news
7ಕೋಟಿಗೂ ಹೆಚ್ಚು ಮಂದಿಗೆ ಸಿಹಿಸುದ್ದಿ: UPI-ATMನಲ್ಲಿ ಶೇ.75ರಷ್ಟು ಪಿಎಫ್‌ ಹಣ ವಿತ್‌ಡ್ರಾಗೆ ಅವಕಾಶ- ಜೂನ್ ಅಂತ್ಯದ... ತಪ್ಪಿಸಿಕೊಳ್ಳಲು ಯತ್ನಿಸಿದ ಕೊಲೆ ಪ್ರಕರಣದ ಪ್ರಮುಖ ಆರೋಪಿ: ಕಾಲಿಗೆ ಹಾಡುಹಗಲೇ ಗುಂಡು ಹಾರಿಸಿ ಬಂಧಿಸಿದ ಪೊಲೀಸರು KSRTC: ಸಾರಿಗೆ ನಿಗಮದ ನೌಕರರಿಗೆ ಗಳಿಕೆ ರಜೆ (EL) ನಗದೀಕರಣ ಸೌಲಭ್ಯ ವಿಸ್ತರಿಸಿ ಎಂಡಿ ಆದೇಶ KSRTC: ಶೇ.1.5ರಷ್ಟು ಹೆಚ್ಚಳದ ತುಟ್ಟಿಭತ್ಯೆ ಜೂನ್‌ ವೇತನದಲ್ಲಿ ಅನುಷ್ಠಾನಗೊಳಿಸಿ ನೌಕರರಿಗೆ ಪಾವತಿಸಲು ಎಂಡಿ ಆದೇಶ 'ಕರ್ತವ್ಯ' ಆಪ್ ನೋಂದಣಿ ಶೇ.70.6 ರಷ್ಟು ಪ್ರಗತಿ - ಮಾಧ್ಯಮಗಳ ವರದಿಗೆ ಸರ್ಕಾರದ ಸ್ಪಷ್ಟನೆ ಗೃಹಲಕ್ಷ್ಮಿ, ಗೃಹಜ್ಯೋತಿಗೆ  ಹೊಸದಾಗಿ ಅರ್ಜಿ ಸಲ್ಲಿಸಬೇಕೆಂಬ ನಿರ್ಧಾರ ಸ್ವಾಗತಾರ್ಹ KSRTC ಪುತ್ತೂರು: ಡ್ರಿಂಕ್ಸ್ ಪರೀಕ್ಷಿಸಲು ಮಷೀನ್ ತಂದಿದ್ದಾರೆ ಎಂದು ತಪ್ಪು ತಿಳಿದು ಹೆದರಿದ ನೌಕರ- ಮೆಟ್ಟಲುಗಳಿಂದ ಬಿ... 2037ರ ವೇಳೆಗೆ ಬೆಂಗಳೂರು ಆಗಲಿದೆ ಜಾಗತಿಕ ಆರ್ಥಿಕ ಶಕ್ತಿಕೇಂದ್ರ: 35 ಲಕ್ಷ ಕೋಟಿ ರೂ.ಗೂ ಅಧಿಕ ಕಾಂಚಾಣ, 30 ಲಕ್ಷ ಹೊಸ ... ಪಂಜಾಬ್ ಮಾದರಿ ಕರ್ನಾಟಕದಲ್ಲೂ ಹೆದ್ದಾರಿ ಟೋಲ್‌ ರದ್ದತಿಗೆ ಆಗ್ರಹಿಸಿ 23ರಂದು ರೈತ ಸಂಘಟನೆಗಳ ಒಕ್ಕೂಟದಿಂದ ಪ್ರತಿಭಟನೆ KSRTC ನೌಕರರ ಪತ್ತಿನ ಸಹಕಾರ ಸಂಘದ ಅಧ್ಯಕ್ಷ ಓಂಕಾರಪ್ಪನ ಸಹಿ ಮಾಡುವ ಅಧಿಕಾರ ರದ್ದುಗೊಳಿಸಿ ತನಿಖೆಗೆ ಹೈ ಕೋರ್ಟ್‌ ಆದೇಶ