ದೇವನಹಳ್ಳಿ: ಪ್ರಸಿದ್ಧ ವೇಣುಗೋಪಾಲ ಸ್ವಾಮಿಯ ಬ್ರಹ್ಮ ರಥೋತ್ಸವಕ್ಕೆ ಜಿಲ್ಲಾ ಉಸ್ತುವಾರಿ ಸಚಿವ ಮುನಿಯಪ್ಪ ಚಾಲನೆ ನೀಡಿದರು.
ದೇವರ ದರ್ಶನ ಪಡೆದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಸಚಿವರು, ಐತಿಹಾಸಿಕ ಪ್ರಸಿದ್ಧ ವೇಣುಗೋಪಾಲ ಸ್ವಾಮಿಯ ಬ್ರಹ್ಮರಥೋತ್ಸವದಿಂದು ನಾಡಿನ ಸಮಸ್ತ ಜನತೆಗೆ ಆಯುರಾರೋಗ್ಯ ಭಾಗ್ಯವನ್ನು ಕರುಣಿಸಲಿ ಎಂದರು.
ದೇವಸ್ಥಾನದ ಅಭಿವೃದ್ಧಿಯ ವಿಚಾರವಾಗಿ ಮಾತನಾಡಿ ಮುಜರಾಯಿ ಸಚಿವ ರಾಮಲಿಂಗಾರೆಡ್ಡಿ ಅವರ ಸಹಕಾರದೊಂದಿಗೆ ದೇವಸ್ಥಾನದ ಸಮಗ್ರ ಅಭಿವೃದ್ಧಿಗೆ ಸರ್ಕಾರದ ವತಿಯಿಂದ ಎಲ್ಲ ರೀತಿಯ ಅಭಿವೃದ್ಧಿಯನ್ನು ಮಾಡಲು ಶ್ರಮಿಸಲಾಗುವುದು ಎಂದರು.
ಇನ್ನು ಈ ಸಂದರ್ಭದಲ್ಲಿ ಬಯ್ಯಪ್ಪಾ ಅಧ್ಯಕ್ಷ ಶಾಂತಕುಮಾರ್, ತಾಲೂಕು ಗ್ಯಾರಂಟಿ ಅನುಷ್ಠಾನ ಸಮಿತಿ ಅಧ್ಯಕ್ಷ ಜಗನ್ನಾಥ್, ಬಯ್ಯಪ್ಪಾ ಸದಸ್ಯ ಪ್ರಸನ್ನ ಕುಮಾರ್, ರಾಮಚಂದ್ರಪ್ಪ, ತಹಸೀಲ್ದಾರ್ ಬಾಲಕೃಷ್ಣ ಹಾಗೂ ದೇವಸ್ಥಾನದ ಆಡಳಿತ ಮಂಡಳಿ ಸದಸ್ಯರು ಉಪಸ್ಥಿತರಿದ್ದರು.