CrimeNEWSಸಿನಿಪಥ

ಭೂತಾಯಿ ಮಡಿಲು ಸೇರಿದ ಹಿರಿಯ ನಟಿ ಲೀಲಾವತಿ: ಸರ್ಕಾರಿ ಗೌರವಗಳೊಂದಿಗೆ ಅಂತ್ಯಕ್ರಿಯೆ

ವಿಜಯಪಥ ಸಮಗ್ರ ಸುದ್ದಿ

ನೆಲಮಂಗಲ: ಬೆಂಗಳೂರು ಗ್ರಾಮಾಂತರ ಜಿಲ್ಲೆಯ ನೆಲಮಂಗಲದ ಸೋಲದೇವನಹಳ್ಳಿಯಲ್ಲಿರುವ ಹಿರಿಯ ನಟಿ ಡಾ.ಲೀಲಾವತಿ ಅವರ ತೋಟದಲ್ಲಿ ಸಕಲ ಸರ್ಕಾರಿ ಗೌರವದೊಂದಿಗೆ ಡಾ. ಲೀಲಾವತಿ ಅವರ ಅಂತ್ಯಕ್ರಿಯೆಯನ್ನು ಇಂದು (ಶನಿವಾರ) ಸಂಜೆ ನೆರವೇರಿಸಲಾಯಿತು.

ಕುಟುಂಬಸ್ಥರು, ಚಿತ್ರರಂಗದ ಗಣ್ಯರು ಅಗಲಿದ ಹಿರಿಯ ನಟಿಗೆ ಅಂತಿಮ ನಮನ ಸಲ್ಲಿಸಿದರು. ಲೀಲಾವತಿ ಅವರ ಪುತ್ರ ವಿನೋದ್ ರಾಜ್‌ ಅವರು ಅಂತಿಮ ವಿಧಿವಿಧಾನಗಳನ್ನು ನೆರವೇರಿಸಿದರು. ಮೂರು ಸುತ್ತಿನ ಕುಶಾಲ ತೋಪು ಸಿಡಿಸುವ ಮೂಲಕ ಸಕಲ ಸರ್ಕಾರಿ ಗೌರವ ಸಲ್ಲಿಸಲಾಯಿತು.

ಕರ್ನಾಟಕ ಸರ್ಕಾರದ ಪರವಾಗಿ ಮೂರು ಸುತ್ತು ಕುಶಾಲು ತೋಪು ಸಿಡಿಸಿ ಸಕಲ ಸರ್ಕಾರಿ ಗೌರವ ಸಲ್ಲಿಕೆ ಮಾಡಲಾಯಿತು. ಆಹಾರ ನಾಗರಿಕ ಸರಬರಾಜು ಮತ್ತು ಗ್ರಾಹಕರ ವ್ಯವಹಾರಗಳ ಹಾಗೂ ಬೆಂಗಳೂರು ಗ್ರಾಮಾಂತರ ಜಿಲ್ಲಾ ಉಸ್ತುವಾರಿ ಸಚಿವ ಕೆ.ಎಚ್.ಮುನಿಯಪ್ಪ ಸೇರಿದಂತೆ ಹಲವು ನಾಯಕರು, ಚಿತ್ರರಂಗದ ಗಣ್ಯರು, ಅಭಿಮಾನಿಗಳು ಅಂತಿಮ ನಮನ ಸಲ್ಲಿಸಿದರು.

ಜಿಲ್ಲಾಧಿಕಾರಿ ಡಾ.ಶಿವಶಂಕರ.ಎನ್, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಮಲ್ಲಿಕಾರ್ಜುನ ಬಾಲದಂಡಿ, ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯ ನಿರ್ವಹಣಾಧಿಕಾರಿ ಡಾ. ಅನುರಾಧ.ಕೆ.ಎನ್, ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ಪುರುಷೋತ್ತಮ್, ಉಪ ವಿಭಾಗಾಧಿಕಾರಿ ಶ್ರೀನಿವಾಸ್, ತಹಸೀಲ್ದಾರ್ ಅರುಂಧತಿ ಸೇರಿದಂತೆ ಮತ್ತಿತರರು ಉಪಸ್ಥಿತರಿದ್ದರು.

Leave a Reply

error: Content is protected !!
LATEST
ಮೈತ್ರಿ ತೆಕ್ಕೆಗೆ ಬನ್ನೂರು ಪುರಸಭೆ: ಜೆಡಿಎಸ್‌ಗೆ ಅಧ್ಯಕ್ಷ ಗದ್ದುಗೆ, ಬಿಜೆಪಿಗೆ ಉಪಾಧ್ಯಕ್ಷ ಗಾದಿ ರಾಜ್ಯದ ಆರು ಪ್ರತ್ಯೇಕ ಸ್ಥಳಗಳಲ್ಲಿ ಅಪಘಾತ: 13 ಮಂದಿ ಸಾವು, ಹಲವರಿಗೆ ಗಾಯ ಯಡಿಯೂರು ಕೆರೆ: ಗಣಪತಿ ವಿಸರ್ಜನಾ ಕಲ್ಯಾಣಿಗೆ ನೀರು ತುಂಬಿಸಿದ ಬಿಬಿಎಂಪಿ ತಂದೆ ನಿಧನರಾದ ದುಃಖದಲ್ಲಿರುವ ನೌಕರನಿಗೆ ರಜೆ ಕೊಡದೆ ಗೈರು ತೋರಿಸಿದ್ದು ಅಲ್ಲದೆ ಕಾರಣ ಕೇಳಿ ನೋಟಿಸ್‌ ಕೊಟ್ಟ ಅಧಿಕಾರಿ... KKRTC ಬಸ್‌-ಶಾಲಾ ಬಸ್‌ ಮುಖಾಮುಖಿ ಡಿಕ್ಕಿ: ಇಬ್ಬರು ಮೃತ- 25ಕ್ಕೂ ಹೆಚ್ಚು ಮಕ್ಕಳಿಗೆ ಗಾಯ KSRTC: 38 ತಿಂಗಳ ವೇತನ ಹೆಚ್ಚಳ ಹಿಂಬಾಕಿಗೆ ಆಗ್ರಹಿಸಿ BMS ಪ್ರತಿಭಟನೆ- ಸರ್ಕಾರದ ವಿರುದ್ಧ ಕಿಡಿ MSRTC: ನೌಕರರ ಮುಷ್ಕರಕ್ಕೆ ಮಣಿದು 6500 ರೂ. ವೇತನ ಹೆಚ್ಚಳಕ್ಕೆ ಒಪ್ಪಿದ ಸರ್ಕಾರ- ಧರಣಿ ವಾಪಸ್‌ MSRTC: ತೀವ್ರಗೊಂಡ ನೌಕರರ ಮುಷ್ಕರ- 11 ಸಂಘಟನೆಗಳ ಒಗ್ಗಟ್ಟು- ನಿಗಮಕ್ಕೆ ನಡುಕ ಚಾಮುಂಡಿಬೆಟ್ಟದಲ್ಲಿ ಧೂಮಪಾನ, ಮದ್ಯಪಾನ, ಗುಟ್ಕಾ ನಿಷೇಧ: ಸಿಎಂ ಘೋಷಣೆ ಪೋಡಿ ಮುಕ್ತ ಅಭಿಯಾನ, ಪೌತಿ ಖಾತೆ ಆಂದೋಲನಕ್ಕೆ ಕ್ರಮ: ಕಂದಾಯ ಸಚಿವ ಕೃಷ್ಣ ಬೈರೇಗೌಡ