CRIMENEWSಸಿನಿಪಥ

ಕನ್ನಡ ಚಿತ್ರರಂಗದ ಹಿರಿಯ ಹಾಸ್ಯನಟ ಬ್ಯಾಂಕ್‌ ಜನಾರ್ಧನ್‌ ವಿಧಿವಶ

ವಿಜಯಪಥ ಸಮಗ್ರ ಸುದ್ದಿ

ಬೆಂಗಳೂರು: ಸ್ಯಾಂಡಲ್‌ವುಡ್‌ ಕನ್ನಡ ಚಿತ್ರರಂಗದ ಹಿರಿಯ ಹಾಸ್ಯನಟ 77 ವರ್ಷದ ಬ್ಯಾಂಕ್‌ ಜನಾರ್ಧನ್‌ ಅವರು ತಡರಾತ್ರಿ ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ವಿಧಿವಶರಾಗಿದ್ದಾರೆ.

ಹಲವು ದಿನಗಳಿಂದ ಅನಾರೋಗ್ಯಕ್ಕೆ ತುತ್ತಾಗಿದ್ದ ಅವರನ್ನು ಖಾಸಗಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗುತ್ತಿತ್ತು, ಆದರೆ ಚಿಕಿತ್ಸೆ ಫಲಕಾರಿಯಾಗದೆ ಇಂದು ತಡರಾತ್ರಿ 2.30ರಲ್ಲಿ ನಿಧನರಾಗಿದ್ದಾರೆ ಎಂದು ಅವರ ಕುಟುಂಬದ ಮೂಲಗಳು ತಿಳಿಸಿವೆ.

ಸುಲ್ತಾನ್‌ ಪಾಳ್ಯದಲ್ಲಿರುವ ಅವರ ನಿವಾಸದಲ್ಲಿ ಪಾರ್ಥೀವ ಶರೀರ ಇಡಲಾಗಿದ್ದು, ಅಂತಿಮ ದರ್ಶನಕ್ಕೆ ವ್ಯವಸ್ಥೆ ಮಾಡಲಾಗಿದೆ. ಮಧ್ಯಾಹ್ನ 3–4 ಗಂಟೆ ವೇಳೆಗೆ ಅಂತ್ಯಕ್ರಿಯೆ ನೆರವೇರಿಸಲಾಗುವುದು ಎಂದು ಕುಟುಂಬದವರು ತಿಳಿಸಿದ್ದಾರೆ.

500ಕ್ಕೂ ಹೆಚ್ಚು ಸಿನಿಮಾಗಳಲ್ಲಿ ಅಭಿನಯ: ಪೋಷಕ ನಟ ಪಾತ್ರಕ್ಕೆ ಹೆಸರುವಾಸಿಯಾಗಿದ್ದ ಜನಾರ್ಧನ್‌ ಅವರು 500ಕ್ಕೂ ಹೆಚ್ಚು ಚಲನ ಚಿತ್ರಗಳಲ್ಲಿ ನಟಿಸಿದ್ದಾರೆ. ಸಿನಿಮಾ ಅಲ್ಲದೇ, ಕಿರುತೆರೆ ಹಾಗೂ ರಂಗಭೂಮಿಯಲ್ಲೂ ತಮ್ಮ ಛಾಪು ಮೂಡಿಸಿ ಕನ್ನಡಿಗರ ಮನಗೆದ್ದಿದ್ದಾರೆ.

80, 90ರ ದಶಕದಲ್ಲಿ ಬಹುಬೇಡಿಕೆ ಹೊಂದಿದ್ದ ಹಾಸ್ಯನಟರಲ್ಲಿ ಒಬ್ಬರಾದ ಜನಾರ್ಧನ್‌ ಅವರು, ಉಪೇಂದ್ರ ನಿರ್ದೇಶನದ ಶ್‌, ತರ್ಲೆ ನನ್ಮಗ, ಬೆಳ್ಳಿಯಪ್ಪ ಬಂಗಾರಪ್ಪ, ಗಣೇಶ ಸುಬ್ರಮಣ್ಯ, ಕೌರವ ಚಿತ್ರಗಳಲ್ಲಿ ಗಮನ ಸೆಳೆಯುವ ಪಾತ್ರ ನಿರ್ವಹಿಸಿದ್ದಾರೆ. ‌

ಮಾಂಗಲ್ಯ, ರೋಬೋ ಫ್ಯಾಮಿಲಿ, ಪಾಪ ಪಾಂಡು, ಜೋಕಾಲಿ ಸೇರಿದಂತೆ ಸಾಲು ಸಾಲು ಸೀರಿಯಲ್‌ಗಳಲ್ಲಿ ಬಣ್ಣ ಹಚ್ಚಿ ಸೈ ಎನಿಸಿಕೊಂಡಿದ್ದು ಸಿನಿಮ ರಸಿಕರ ಮನಸೂರೆಗೊಂಡಿದ್ದಾರೆ.

ಗಣ್ಯರ ಕಂಬನಿ: ಕನ್ನಡ ಚಿತ್ರರಂಗದ ಹಿರಿಯ ಹಾಸ್ಯನಟ ಬ್ಯಾಂಕ್‌ ಜನಾರ್ಧನ್‌ ಇನ್ನಿಲ್ಲ ಎಂಬ ವಿಷಯಕೇಳಿ ಸ್ಯಾಂಡಲ್‌ವುಡ್‌ ಮಂದಿ ಸೇರಿದಂತೆ ಹಲವು ಗಣ್ಯರು ಕಂಬನಿ ಮಿಡಿದಿದ್ದಾರೆ. ಮೃತರ ಆತ್ಮಕ್ಕೆ ಚಿರಶಾಂತಿ ಸಿಗಲಿ ಅವರ ಕುಟುಂಬದವರಿಗೆ ಈ ಅಗಲಿಕೆಯ ನೋವನ್ನು ಸಹಿಸಿಕೊಳ್ಳುವ ಶಕ್ತಿಯನ್ನು ಆ ದೇವರು ನೀಡಲಿ ಎಂದು ಪ್ರಾರ್ಥಿಸಿದ್ದಾರೆ.

 

Deva
the authorDeva

Leave a Reply

error: Content is protected !!
Latest news
KSRTC ಮೈಸೂರು ಡಿಸಿಗೆ- RC, FC ಚಾಲಕ ನಿರ್ವಾಹಕರ ಜವಾಬ್ದಾರಿನಾ?: ಹೇ ತಲೆಕೆಟ್ಟ ಡಿಸಿ ನೀನು ನಿಜವಾಗಲು ಜವಾಬ್ದಾರಿಯಿಂ... ಭಾರೀ ಮಳೆಗೆ ನೆಲಕಚ್ಚಿದ ಪರಂಗಿ ಅಡಿಕೆ ಗಿಡಗಳು -ಅಪಾರ ಪ್ರಮಾಣದ ಬೆಳೆ ಹಾನಿ ರೈತರ ಗೋಳಾಟ ಪ್ರೀತಿ ನಿರಾಕರಿಸಿದ್ದಕ್ಕೆ ಹೈಟೆನ್ಷನ್ ಕಂಬ ಹತ್ತಿ ಕುಳಿತಿರುವ ಪಾಗಲ್‌ ನಾಳೆಯಿಂದ ಹಮ್ಮಿಕೊಂಡಿದ್ದ ಅರ್ನಿದಿಷ್ಟವಾಧಿ ಸಾರಿಗೆ ನೌಕರರ ಮುಷ್ಕರ ವಾಪಸ್‌: ಜಂಟಿ ಕ್ರಿಯಾ ಸಮಿತಿ ಜಂಟಿ ಕ್ರಿಯಾ ಸಮಿತಿಗೆ ಶಾಕ್‌: KSRTC ನೌಕರರ ಅನಿರ್ದಿಷ್ಟಾವಧಿ ಮುಷ್ಕರಕ್ಕೆ ಹೈ ಕೋರ್ಟ್‌ ತಡೆ ಸಾರಿಗೆ ಕಾರ್ಮಿಕರ ಜಂಟಿ ಕ್ರಿಯಾ ಸಮಿತಿ ಕರೆ ಕೊಟ್ಟಿದ್ದ ಮುಷ್ಕರದಿಂದ ಹಿಂದೆ ಸರಿದ ಮತ್ತೊಂದು KSRTC ನೌಕರರ ಸಂಘ ದುಬಾರೆ ಸಾಕಾನೆ ಶಿಬಿರದಲ್ಲಿ ನಡೆದ ಕಾದಾಟದಲ್ಲಿ ಗಾಯಗೊಂಡಿದ್ದ ಮಾರ್ತಾಂಡ ಸಾವು ಇಂದು ರಾತ್ರಿ 8.30ರಿಂದ 9.30ರವರೆಗೆ KSRTC ಎಂಡಿ ಅಕ್ರಮ್‌ ಪಾಷರ ಭೇಟಿ ಮಾಡಿ ಗೌಪ್ಯ ಸಭೆ ನಡೆಸಿದ ಜಂಟಿ ಮುಖಂಡರು! ಸಾರಿಗೆ ಕಾರ್ಮಿಕರ ಜಂಟಿ ಕ್ರಿಯಾ ಸಮಿತಿ ಕರೆ ಕೊಟ್ಟಿದ್ದ ಮುಷ್ಕರದಿಂದ ಹಿಂದೆ ಸರಿದ KSRTC ಪ.ಜಾ.-ಪ.ಪಂ ನೌಕರರ ಸಂಘ ಗುಡುಗು ಸಿಡಿಲಿನ ಆರ್ಭಟ: ಮನೆ ಮುಂದೆ ನಿಂತಿದ್ದ ಶಿಕ್ಷಕ ಹೃದಯಾಘಾತಕ್ಕೆ ಬಲಿ