NEWS

ಹಿರಿಯ ಸಾಹಿತಿ ಪ್ರೊ.ಜಿ.ಎಚ್‌.ನಾಯಕ ನಿಧನ

ವಿಜಯಪಥ ಸಮಗ್ರ ಸುದ್ದಿ

ಮೈಸೂರು: ಕನ್ನಡ ಸಾಹಿತ್ಯ ಲೋಕದಲ್ಲಿ ತಮ್ಮ ನಿಷ್ಠುರ ಮಾತು, ವಿಮರ್ಶೆಯಿಂದ ಪ್ರಸಿದ್ದರಾಗಿದ್ದ ಹಿರಿಯ ಸಾಹಿತಿ ಪ್ರೊ.ಜಿ.ಎಚ್‌.ನಾಯಕ ಶುಕ್ರವಾರ ಇಹಲೋಕ ತ್ಯಜಿಸಿದ್ದಾರೆ. 88 ವರ್ಷದ ಜಿ.ಎಚ್​. ನಾಯಕ ಖ್ಯಾತ ವಿಮರ್ಶಕ, ಪ್ರಾಧ್ಯಾಪಕರಲ್ಲಿ ಒಬ್ಬರಾಗಿದ್ದರು.

ಜಿ.ಎಚ್. ನಾಯಕ ಎಂದೇ ಕನ್ನಡ ಸಾಹಿತ್ಯ ಲೋಕದಲ್ಲಿ ಚಿರಪರಿಚಿತರಾಗಿದ್ದ ವಿಮರ್ಶಕರಾದ ಗೋವಿಂದರಾಯ ಹಮ್ಮಣ್ಣ ನಾಯಕ ಅವರು 1935 ಸೆಪ್ಟಂಬರ್‌ 18ರಂದು ಉತ್ತರ ಕನ್ನಡ ಜಿಲ್ಲೆಯ ಅಂಕೋಲಾ ತಾಲೂಕಿನ ಸೂರ್ವೆ ಗ್ರಾಮದಲ್ಲಿ ಜನಿಸಿದರು. ಮೈಸೂರು ವಿಶ್ವವಿದ್ಯಾಲಯದಲ್ಲಿ ಕನ್ನಡ ಅಧ್ಯಾಪಕರಾಗಿ ಮುಂದೆ ಪ್ರಾಧ್ಯಾಪಕರಾಗಿ ಸುದೀರ್ಘ ಸೇವೆ ಸಲ್ಲಿಸಿ ನಿವೃತ್ತಿಯಾಗಿದ್ದರು. ಆ ಬಳಿಕ ಮೈಸೂರಿನ ಸರಸ್ವತಿಪುರಂನಲ್ಲಿ ನೆಲೆಸಿದ್ದರು.

ಕೇಂದ್ರ ಸಾಹಿತ್ಯ ಅಕಾಡೆಮಿ, ಪಂಪ ಪ್ರಶಸ್ತಿ ಪುರಸ್ಕೃತರಾಗಿದ್ದ ನಾಯಕರಿಗೆ ಪತ್ನಿ, ಸಾಮಾಜಿಕ ಹೋರಾಟಗಾರ್ತಿ ಮೀರಾ ನಾಯಕ. ಪುತ್ರಿ ಕೀರ್ತಿ ಹಾಗೂ ಮೊಮ್ಮಗಳನ್ನು ಅಗಲಿದ್ದಾರೆ. ಅಂತ್ಯಕ್ರಿಯೆಗೆ ಸಿದ್ಧತೆ ಮಾಡಿಕೊಳ್ಳುತ್ತಿದ್ದು, ಮೊಮ್ಮಗಳು ಇಂಗ್ಲೆಂಡ್‌ನಿಂದ ಶನಿವಾರ ಬಂದ ನಂತರ ಮೈಸೂರಿನಲ್ಲೇ ನೆರವೇರಿಸಲಾಗುವುದು ಎಂದು ಕುಟುಂಬದ ಮೂಲಗಳು ತಿಳಿಸಿವೆ.

ಅವರ ಕೃತಿಗಳು: 1. ಸಮಕಾಲೀನ (1973), 2. ಅನಿವಾರ್ಯ (1980), 3 ನಿರಪೇಕ್ಷೆ (1984), 4. ನಿಜದನಿ (1988), 5. ವಿನಯ ವಿಮರ್ಶೆ (1991), 6. ಸಕಾಲಿಕ (1995) 7. ಗುಣ ಗೌರವ (2002), 8. ಹರಿಶ್ಚಂದ್ರ ಕಾವ್ಯ ಓದು-ವಿಮರ್ಶೆ (2002), 9. ಕೃತಿ ಸಾಕ್ಷಿ (2006), 10. ಸ್ಥಿತಿ ಪ್ರಜ್ಞೆ (2007), 11. ಮತ್ತೆ ಮತ್ತೆ ಪಂಪ (2008), 12. ಸಾಹಿತ್ಯ ಸಮೀಕ್ಷೆ (2009), 13. ಉತ್ತರಾರ್ಧ (2011).

ಸಂಪಾದನಾ ಗ್ರಂಥಗಳು: 1. ಕನ್ನಡ ಸಣ್ಣಕಥೆಗಳು, 2. ಹೊಸಗನ್ನಡ ಕವಿತೆಗಳು, 3. ಸಂವೇದನೆ (ಅಡಿಗರ ಗೌರವ ಗ್ರಂಥ), 4. ಶ್ರೀ ರಾಮಾಯಣ ದರ್ಶನಂ ಕುವೆಂಪು ಸ್ವಹಸ್ತಾಕ್ಷರ ಪ್ರತಿ, 5. ಶತಮಾನದ ಕನ್ನಡ ಸಾಹಿತ್ಯ (ಸಂಪುಟ – 1.2), 6. ಆತ್ಮಕಥನ- ಬಾಳು.

ಸಂದ ಪ್ರಶಸ್ತಿಗಳು: 1. ಉತ್ತರಾರ್ಧ ಕೃತಿಗೆ 2014 ರಲ್ಲಿ ಕೇಂದ್ರ ಸಾಹಿತ್ಯ ಅಕಾಡೆಮಿ ಪ್ರಶಸ್ತಿ 2. ನಿರಪೇಕ್ಷ ವಿಮರ್ಶಾ ಕೃತಿಗೆ ‘ಕರ್ನಾಟಕ ಸಾಹಿತ್ಯ ಅಕಾಡೆಮಿ’ಯ ಪ್ರಶಸ್ತಿ. 3. ನಿಜದನಿ ವಿಮರ್ಶಾ ಕೃತಿಗೆ ‘ವಿ.ಎಂ.ಇನಾಂದಾರ ಸ್ಮಾರಕ ಬಹುಮಾನ’ ಲಭಿಸಿವೆ. 4. ಪಂಪ ಪ್ರಶಸ್ತಿ ಸಂದಿವೆ.

Leave a Reply

error: Content is protected !!
LATEST
ಅಕ್ರಮ ಹಣ ಸಂಪಾದನೆ: ಅಬಕಾರಿ ಉಪ ನಿರೀಕ್ಷಕನಿಗೆ 3 ವರ್ಷ ಕಠಿಣ ಶಿಕ್ಷೆ, ₹50 ಲಕ್ಷ ದಂಡ ಪೋಸ್ಟ್ ಆಫೀಸ್ ಸೇವೆಗಳು ಈಗ ಗ್ರಾಮ ಒನ್ ಕೇಂದ್ರಗಳಲ್ಲೂ ಲಭ್ಯ 5ವರ್ಷದೊಳಗಿನ ಮಕ್ಕಳಿಗೆ PCV ಲಸಿಕೆ ಹಾಕಿಸಿ: ಸುರಳ್ಕರ್ ವಿಕಾಸ್ ಕಿಶೋರ್ KSRTC: ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ತುಮಕೂರು ಘಟಕ 1-2ರ ಗುತ್ತಿಗೆ ಚಾಲಕರಿಂದ ದಿಢೀರ್‌ ಪ್ರತಿಭಟನೆ ಮೆಜೆಸ್ಟಿಕ್‌: KSRTC ಟಿಸಿಗಳಿಗೆ ಕಂಡಕ್ಟರ್‌ಗಳು ₹10 ಕೊಟ್ಟರಷ್ಟೆ ಲಾಗ್‌ಶೀಟ್‌ ಮೇಲೆ ಸಹಿ ಇಲ್ಲದಿದ್ದರೆ ಕ್ಲಾಸ್‌ !!? ಕನಸನ್ನು ನನಸಾಗಿಸಲು ಪ್ರಯತ್ನ ಮುಖ್ಯ: ಮಕ್ಕಳಿಗೆ ಡಿಸಿಎಂ ಶಿವಕುಮಾರ್ ಕಿವಿಮಾತು KSRTC: ಸಮಸ್ಯೆ  ಹೇಳಿಕೊಂಡು ಬರುವ ನೌಕರರ ಭೇಟಿ ಮಾಡದೆ ಸೂಟ್‌ಕೇಸ್‌ ತಂದವರೊಂದಿಗೆ ಹರಟೆ ಹೊಡೆಯುವ ಕೆಲ ಸಾಹೇಬರೆನಿಸಿಕೊ... ಆಟೋಟದಲ್ಲಿ ಕೂಟದ ಕಟ್ಟಾಳುಗಳು ಬ್ಯುಸಿ: ನೌಕರರು ನಂಬಿ 4ವರ್ಷ ಕಳೆದರೂ ಈಡೇರೇಯಿಲ್ಲ ಬೇಡಿಕೆ - ದಿಕ್ಕು ತಪ್ಪುತ್ತಿದೆಯೇ ... BMTC ಬಸ್‌-ಟ್ರಕ್‌-ಇನೋವಾ ಕಾರು ನಡುವೆ ಸರಣಿ ಅಪಘಾತ: ಇಬ್ಬರು ಮೃತ, ಬಸ್‌ ಚಾಲಕನ ಸ್ಥಿತಿ ಗಂಭೀರ KSRTC: ಕೂಟದ ಅಜೆಂಡ ದಿಕ್ಕು ತಪ್ಪುತ್ತಿದೆಯೇ - ಸರಿ ಸಮಾನ ವೇತನದ ಪಾಡೇನು?