Please assign a menu to the primary menu location under menu

NEWSದೇಶ-ವಿದೇಶರಾಜಕೀಯ

ಮಹಾನಗರ ಪಾಲಿಕೆ ಚುನಾವಣೆಯಲ್ಲಿ ಜಯಭೇರಿ: ದೆಹಲಿ ಪಾಲಿಕೆಯ ಗದ್ದುಗೆಯನ್ನೂ ಹಿಡಿದ ಆಮ್​ ಆದ್ಮಿ ಪಕ್ಷ

ವಿಜಯಪಥ ಸಮಗ್ರ ಸುದ್ದಿ

ನ್ಯೂಡೆಲ್ಲಿ: ದೆಹಲಿ ಮಹಾನಗರ ಪಾಲಿಕೆ ಚುನಾವಣೆಯಲ್ಲಿ ಆಮ್​ ಆದ್ಮಿ ಪಕ್ಷ ಭರ್ಜರಿ ಜಯಭೇರಿ ಬಾರಿಸಿದ್ದು, ಈ ಮೂಲಕ 126 ಮ್ಯಾಜಿಕ್​ ನಂಬರ್​ಗಳನ್ನು ದಾಟಿರುವ ಪಕ್ಷ ದೆಹಲಿಯ ಪಾಲಿಕೆ ಗದ್ದುಗೆ ಹಿಡಿದಿದೆ. ಅಂತಿಮ ಫಲಿತಾಂಶ ಘೋಷಣೆಯೊಂದೇ ಬಾಕಿ ಇದೆ.

ಹೌದು ದೆಹಲಿ ಮಹಾನಗರ ಪಾಲಿಕೆಯಲ್ಲಿ 15 ವರ್ಷಗಳಿಂದ ಆಡಳಿತ ನಡೆಸುತ್ತಿದ್ದ ಬಿಜೆಪಿಯನ್ನು ಹಿಮ್ಮೆಟ್ಟಿಸಿದ ಆಮ್​ ಆದ್ಮಿ ಪಕ್ಷ ಚುನಾವಣೆಯಲ್ಲಿ ಗೆದ್ದು ಬೀಗುವ ಜತೆಗೆ ಗದ್ದುಗೆ ಏರಿದೆ. 250 ಸ್ಥಾನಗಳ ಮತ ಎಣಿಕೆಯಲ್ಲಿ ಆಪ್​ 126 ಸ್ಥಾನಗಳನ್ನು ಜಯಿಸಿದ್ದು, ಮ್ಯಾಜಿಕ್​ ನಂಬರ್​ಗೆ ಬೇಕಾದ ಸ್ಥಾನಗಳನ್ನು ಪಡೆದುಕೊಂಡಿದೆ. ಅಷ್ಟೇ ಅ ಲ್ಲ ಇನ್ನೂ 8 ಸ್ಥಾನಗಳನ್ನು ಹೆಚ್ಚುವರಿಯಾಗಿಯೂ ಪಡೆದುಕೊಂಡಿದೆ.

ಗೆಲುವಿನ ಸಂಭ್ರಮದಲ್ಲಿ ಬಿಜೆಪಿ, ಆಪ್​ ಕಾರ್ಯಕರ್ತರು: ರಾಷ್ಟ್ರ ರಾಜಧಾನಿಯಲ್ಲಿ ಅಧಿಕಾರ ನಡೆಸುತ್ತಿರುವ ಆಪ್ ಇದೀಗ ಪಾಲಿಕೆಯಲ್ಲೂ ಅಧಿಕಾರ ಸ್ಥಾಪಿಸಿದೆ. ಈ ಗೆಲುವಿನ ಮೂಲಕ ಕಾರ್ಯಕರ್ತರು ದೆಹಲಿಯಾದ್ಯಂತ ಸಂಭ್ರಮಾಚರಣೆಯಲ್ಲಿ ತೊಡಗಿದ್ದಾರೆ.

ಸದ್ಯ ಆಪ್​ 134 ಸ್ಥಾನಗಳಲ್ಲಿ ಗೆಲುವು ಸಾಧಿಸಿದೆ. ಬಿಜೆಪಿ 104 ರಲ್ಲಿ ಗೆದಿದ್ದರೆ, ಕಾಂಗ್ರೆಸ್​ 9 ಹಾಗೂ ಇತರರು 3ರರಲ್ಲಿ ಗೆಲುವು ಸಾಧಿಸಿದ್ದಾರೆ. ಚುನಾವಣಾ ಪೂರ್ವ ಮತ್ತು ಚುನಾವಣೋತ್ತರ ಸಮೀಕ್ಷೆಗಳು ಪಾಲಿಕೆ ಚುನಾವಣೆಯಲ್ಲಿ ಆಪ್​ 140 ರಿಂದ 150 ಕ್ಕೂ ಅಧಿಕ ಸ್ಥಾನ ಪಡೆಯಲಿದೆ ಎಂದು ಭವಿಷ್ಯ ನುಡಿದಿದ್ದವು.

ಇನ್ನು ಅಧಿಕಾರದಲ್ಲಿದ್ದ ಬಿಜೆಪಿಯನ್ನು ಮತದಾರರು ಮತ್ತೊಮ್ಮೆ ಕೈಬಿಟ್ಟಿದ್ದು, ರಾಷ್ಟ್ರ ರಾಜಧಾನಿಯಲ್ಲೇ ಬಿಜೆಪಿಗೆ ತೀವ್ರ ಹಿನ್ನಡೆ ಉಂಟಾಗಿದೆ ಎಂದೆ ಹೇಳಬಹುದು.

ಎಎಪಿ ಅಭ್ಯರ್ಥಿಗಳು ಹೆಚ್ಚಿನ ಸಂಖ್ಯೆಯಲ್ಲಿ ಗೆಲುವು ಪಡೆದಿರುವುದು ಪಕ್ಷದ ಕಾರ್ಯಕರ್ತರಲ್ಲಿ ಹುಮ್ಮಸ್ಸು ಹೆಚ್ಚಿಸಿದೆ. ಈಗಾಗಲೇ ನಗರದೆಲ್ಲೆಡೆ ಸಂಭ್ರಮಾಚರಣೆ ನಡೆಸುತ್ತಿದ್ದಾರೆ. ಇತ್ತ ಗೆದ್ದ ಬಿಜೆಪಿಗರು ಕೂಡ ಗೆಲುವಿನ ಖುಷಿಯಲ್ಲಿದ್ದಾರೆ.

ಬಿಜೆಪಿಯ ನಾಗಾಲೋಟದ ಬಗ್ಗೆ ಪ್ರತಿಕ್ರಿಯಿಸಿರುವ ಪಂಜಾಬ್​ ಮುಖ್ಯಮಂತ್ರಿ ಭಗವಂತ್​ ಮಾನ್​, ಅರವಿಂದ್ ಕೇಜ್ರಿವಾಲ್ ಅವರು ದೆಹಲಿಯಲ್ಲಿ 15 ವರ್ಷಗಳ ಕಾಂಗ್ರೆಸ್ ಆಡಳಿತ ಮತ್ತು ಈಗ ಪಾಲಿಕೆಯಲ್ಲಿ 15 ವರ್ಷಗಳ ಬಿಜೆಪಿ ಆಡಳಿತವನ್ನು ಬೇರು ಸಮೇತ ಕಿತ್ತುಹಾಕುತ್ತಿದ್ದಾರೆ. ದೆಹಲಿಯ ಜನರು ದ್ವೇಷದ ರಾಜಕಾರಣವನ್ನು ಇಷ್ಟಪಡುವುದಿಲ್ಲ ಎಂಬುದು ಈ ಫಲಿತಾಂಶ ತೋರಿಸುತ್ತದೆ. ದೆಹಲಿಯ ಶಾಲೆ, ಆಸ್ಪತ್ರೆ, ವಿದ್ಯುತ್, ಸ್ವಚ್ಛತೆ ಮತ್ತು ಮೂಲಸೌಕರ್ಯಗಳ ಅಭಿವೃದ್ಧಿಗೆ ಜನರು ಮತ ಹಾಕಿದ್ದಾರೆ ಎಂದು ಸಂತಸ ಹಂಚಿಕೊಂಡರು.

ಪಕ್ಷಗಳ ಬಲಾಬಲ
ಪಕ್ಷ ಗೆಲುವು
ಆಪ್​ 134
ಬಿಜೆಪಿ 104
ಕಾಂಗ್ರೆಸ್ 09
ಸ್ವತಂತ್ರ 03

1,300 ಅಭ್ಯರ್ಥಿಗಳು ಸ್ಪರ್ಧೆಯಲ್ಲಿದ್ದಾರೆ. ದೆಹಲಿಯಲ್ಲಿ ಅಧಿಕಾರದಲ್ಲಿರುವ ಎಎಪಿ ಹಾಗೂ ಕೇಂದ್ರದಲ್ಲಿ ಅಧಿಕಾರದಲ್ಲಿರುವ ಬಿಜೆಪಿ ಎಲ್ಲ ಕ್ಷೇತ್ರಗಳಲ್ಲಿಯೂ ಸ್ಪರ್ಧಿಸಿದ್ದವು. ಎಎಪಿ ಉದಯವಾದಾಗಿನಿಂದ ದೆಹಲಿಯಲ್ಲಿ ತನ್ನ ನೆಲೆಯನ್ನು ಕಂಡುಕೊಳ್ಳಲು ಹೆಣಗಾಡುತ್ತಿರುವ ಕಾಂಗ್ರೆಸ್, 247 ಸ್ಥಾನಗಳಲ್ಲಿ ಕಣಕ್ಕಿಳಿದಿದೆ. ತಾಂತ್ರಿಕ ಕಾರಣಗಳಿಂದಾಗಿ ಕಾಂಗ್ರೆಸ್‌ನ ಮೂವರು ಅಭ್ಯರ್ಥಿಗಳ ನಾಮಪತ್ರಗಳು ತಿರಸ್ಕೃತಗೊಂಡಿದ್ದರು.

ಕಳೆದ 24 ವರ್ಷಗಳಲ್ಲಿ ಬಿಜೆಪಿ ದೆಹಲಿಯಲ್ಲಿ ರಾಜ್ಯ ಸರ್ಕಾರವನ್ನು ರಚಿಸದಿದ್ದರೂ, ಎಂಸಿಡಿ ಮೇಲೆ ನಿಯಂತ್ರಣ ಸಾಧಿಸಿಕೊಂಡು ಬಂದಿತ್ದೆತು.  2015ರ ಅಸೆಂಬ್ಲಿ ಚುನಾವಣೆಯಲ್ಲಿ ಎಎಪಿ 70 ಸ್ಥಾನಗಳಲ್ಲಿ ದಾಖಲೆಯ 67 ಸ್ಥಾನಗಳನ್ನು ಗೆದ್ದ ನಂತರವೂ, ಅಂದರೆ ಎರಡು ವರ್ಷಗಳ ಬಳಿಕ ಬಿಜೆಪಿ ತನ್ನ 272 ಸ್ಥಾನಗಳಲ್ಲಿ 181 ಸ್ಥಾನಗಳನ್ನು ಗೆಲ್ಲುವ ಮೂಲಕ ಎಂಸಿಡಿ ಮೇಲೆ ಹಿಡಿತವನ್ನು ಉಳಿಸಿಕೊಂಡಿತ್ತು. ದೆಹಲಿ ಮುನ್ಸಿಪಲ್ ಕಾರ್ಪೊರೇಷನ್‌‌ನ ಈ ಹಿಂದಿನ ಚುನಾವಣೆಯಲ್ಲಿ ಎಎಪಿ 48 ಕ್ಷೇತ್ರಗಳಲ್ಲಿ, ಕಾಂಗ್ರೆಸ್ 30 ಸ್ಥಾನಗಳಲ್ಲಿ ಗೆದ್ದಿದ್ದವು.

ಎಎಪಿ ಕಳೆದ ವರ್ಷದ ಆರಂಭದಿಂದಲೇ ತಯಾರಿ ನಡೆಸಿತ್ತು. ಕಸದ ಸಮಸ್ಯೆಯ ಮೇಲೆ ನೇರವಾಗಿ ತನ್ನ ಗುರಿ ಇಟ್ಟುಕೊಂಡಿದ್ದೆದು, ಕೇಜ್ರಿವಾಲ್ ಸರ್ಕಾರ, ಕೇಜ್ರಿವಾಲ್ ಕಾರ್ಪೊರೇಟರ್ಎಂ ಬ ಘೋಷಣೆಯನ್ನು ಎಎಪಿ ಮಾಡಿತ್ತು. ಈ ಮೂಲಕ ಬಿಜೆಪಿಯ  ಡಬ್ಬಲ್ ಇಂಜಿನ್ ಸರ್ಕಾರ ಘೋಷಣೆಗೆ ಎಎಪಿ ಪ್ರತಿ ಅಸ್ತ್ರ ಪ್ರಯೋಗಿಸಿ ಯಶಸ್ವಿಯಾಗಿದೆ.

ಉಪಮುಖ್ಯಮಂತ್ರಿ ಮನೀಶ್ ಸಿಸೋಡಿಯಾ ಸೇರಿದಂತೆ ಹಲವು ಎಎಪಿ ಸಚಿವರ ಮೇಲೆ ಬಿಜೆಪಿ ಭ್ರಷ್ಟಾಚಾರದ ಆರೋಪಗಳನ್ನು ಮಾಡಿತ್ತು. ಜನರಿಗೆ ವಸತಿ ಭರವಸೆಗಳನ್ನು ನೀಡಿದೆ. ಬಂಧಿತ ಸಚಿವ ಸತ್ಯೇಂದ್ರ ಜೈನ್ ತಿಹಾರ್ ಜೈಲಿನಲ್ಲಿ ವಿಶೇಷ ಚಿಕಿತ್ಸೆ ಪಡೆದಿರುವ ಸಿಸಿಟಿವಿ ವಿಡಿಯೋಗಳು ಹೊರಬಿದ್ದಿವೆ. ಎಎಪಿಯನ್ನು ಕೆಣಕಲು ಕಾಂಗ್ರೆಸ್ ಕೂಡ ಇದನ್ನು ಬಳಸಿಕೊಂಡಿತ್ತು. ಒಂದಿಷ್ಟು ಪ್ರಭಾವ ಬೀರುವ ನಿರೀಕ್ಷೆಯಲ್ಲಿ ಕಾಂಗ್ರೆಸ್ ಇತ್ತು. 2019ರಲ್ಲಿ ಶೀಲಾ ದೀಕ್ಷಿತ್ ಅವರ ಮರಣದ ನಂತರ ದೆಹಲಿಯಲ್ಲಿ ತನ್ನ ಇತಿಹಾಸ ಮರುಕಳಿಸುವ ಪ್ರಯತ್ನದಲ್ಲಿ ಕಾಂಗ್ರೆಸ್ ಪಕ್ಷವಿತ್ತು.

Leave a Reply

error: Content is protected !!
LATEST
ಸಾರಿಗೆ ನೌಕರರಿಗೆ ಪ್ರಣಾಳಿಕೆಯಲ್ಲಿ ಕೊಟ್ಟ ಭರವಸೆ ಅನುಷ್ಠಾನಗೊಳಿಸಿ : ಸರ್ಕಾರಕ್ಕೆ ಬೈರಣ್ಣ ಒತ್ತಾಯ KSRTC: ಸಮಸ್ತ 4ನಿಗಮಗಳ ಅಧಿಕಾರಿಗಳು-ನೌಕರರು ಇಟ್ಟಿರುವ ಬೇಡಿಕೆಗಳ ಈಡೇರಿಸಿಕೊಳ್ಳುವುದು ಅಸಾಧ್ಯವೆ ಅಲ್ಲ! ಡಿ.9ರಿಂದ ವಿಧಾನಮಂಡಳ ಅಧಿವೇಶನ, ಉಕ ಪ್ರಗತಿಗೆ ಒತ್ತು: ಸ್ಪೀಕರ್ ಖಾದರ್ ವಿವಿಧ ಬೇಡಿಕೆಗಳ  ಈಡೇರಿಸಿ ಆಗ್ರಹಿಸಿ ಇಪಿಎಸ್ ಪಿಂಚಣಿದಾರರ ಪ್ರತಿಭಟನೆ: ಅಧಿಕಾರಿಗಳ ವಿರುದ್ಧ ಆಕ್ರೋಶ ಸರ್ಕಾರದ ತಾತ್ಸಾರದಿಂದಾಗಿ ಆರ್ಥಿಕವಾಗಿ ಸಬಲವಾಗಿದ್ದರೂ ಸಂಕಷ್ಟದ ಪರಿಸ್ಥಿತಿ ತಲುಪಿದ KSRTC ಸಾರಿಗೆ ನಿಗಮಗಳು! KSRTC ಚಾಲನಾ ಸಿಬ್ಬಂದಿ ಕಾರ್ಮಿಕರಲ್ಲ ನೌಕರರು - ಹುದ್ದೆ ಅರಿವಿಲ್ಲದವರು ಕಾರ್ಮಿಕ ಪದ ಬಳಸುತ್ತಿದ್ದಾರೆ..! ಸಾರಿಗೆ ಸಿಬ್ಬಂದಿಗಳಿಗೆ ಮೋಸ ಮಾಡಿರುವ ನಿಮಗೆ ಯಾವ ನೈತಿಕತೆ ಇದೆ: ಬಿಜೆಪಿಗರ ತರಾಟೆಗೆ ತೆಗೆದುಕೊಂಡ ರಾಮಲಿಂಗಾರೆಡ್ಡಿ ನ.27 "ನಿಧಿ ಆಪ್ಕೆ ನಿಕಟ್" ಇಪಿಎಸ್ ಪಿಂಚಣಿದಾರರ ಪ್ರತಿಭಟನೆ ಬೆಂಗ್ರಾ: ವಿವೇಕಾನಂದರ ಜನ್ಮ ದಿನ ಅಂಗವಾಗಿ ನ.30ರಂದು ಯುವ ಜನೋತ್ಸವ ಕಾಂಗ್ರೆಸ್‌ ತನ್ನ ಪ್ರಣಾಳಿಕೆಯಲ್ಲೇ ಸರಿ ಸಮಾನ ವೇತನ ಘೋಷಣೆ ಮಾಡಿದೆ: ಸರ್ಕಾರ ಕೊಡಲು ಸಿದ್ಧವಿದ್ದರೂ ಕ್ರಿಯಾ ಸಮಿತಿ ಕ್...