NEWSವಿಡಿಯೋ

ಕೊರೊನಾ ಸೋಂಕಿಗೆ ಶೀಘ್ರದಲ್ಲೇ ಲಸಿಕೆ ಲಭ್ಯವಾಗಲಿದೆ: ಪ್ರಧಾನಿ ಮೋದಿ

ವಿಜಯಪಥ ಸಮಗ್ರ ಸುದ್ದಿ

ನ್ಯೂಡೆಲ್ಲಿ: ಕೊರೊನಾ ಸೋಂಕಿನ ಲಸಿಕೆ ಬಗ್ಗೆ ಸಂಶೋಧನೆ ನಡೆಯುತ್ತಿದ್ದು,  ಶೀಘ್ರದಲ್ಲೇ ಲಸಿಕೆ ಲಭ್ಯವಾಗಲಿದೆ   ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದರು.

ಇಂದು ಸಂಜೆ ದೇಶವಾಸಿಗಳ ಕುರಿತು ಕೊರೊನಾ ಬಗ್ಗೆ ಮಾತನಾಡಿದ ಅವರು , ದೇಶದ 2 ಸಾವಿರ ಲ್ಯಾಬ್ ಗಳಲ್ಲಿ ಕೊರೊನಾ ಟೆಸ್ಟ್ ಮಾಡಲಾಗ್ತಿದೆ. 90 ಲಕ್ಷದಷ್ಟು ಬೆಡ್ ಗಳ ವ್ಯವಸ್ಥೆ ದೇಶದಲ್ಲಿದೆ. ಭಾರತದಲ್ಲಿ ನಾಗರೀಕರ ಜೀವ ಉಳಿಸುವಲ್ಲಿ ಸರ್ಕಾರ ಸಫಲವಾಗಿದೆ. ಇಂತಹ ಸಂದರ್ಭದಲ್ಲಿ ಜನರು ಬೇಜಾವಾಬ್ದಾರಿತನ ತೋರಿಸಬಾರದು. ನಿರ್ಲಕ್ಷ್ಯ ನಿಮ್ಮನ್ನು ಅಪಾಯಕ್ಕೆ ದೂಡಬಹುದು. ಭಾರತದಲ್ಲಿ ಕೊರೊನಾ ನಿಯಮಗಳನ್ನು ಉಲ್ಲಂಘನೆ ಮಾಡಲಾಗ್ತಿದೆ ಎಂದು ಅಸಮಾಧಾನ ವ್ಯಕ್ತಪಡಿಸಿದರು.

ಜನತಾ ಕರ್ಫ್ಯೂ ಬಳಿಕ ಇಂದಿನವರೆಗೆ ಹಲವು ಸಂಕಷ್ಟಗಳನ್ನು ಎದುರಿಸಿದ್ದೇವೆ. ಕೊರೊನಾ ನಡುವೆ ಜೀವನ ನಿರ್ವಹಣೆಗಾಗಿ ಜನರು ಮನೆಯಿಂದ ಹೊರ ಬರುತ್ತಿದ್ದಾರೆ. ಲಾಕ್‍ಡೌನ್ ತೆರವು ಆಗಿರಬಹುದು ಆದ್ರೆ ವೈರಸ್ ಹೋಗಿಲ್ಲ. ಕಳೆದ ಎಂಟು ದಿನಗಳಿಂದ ಕಾಪಾಡಿಕೊಂಡ ಸ್ಥಿತಿಯನ್ನು ಮುಂದೆ ಹಾಳು ಮಾಡಿಕೊಳ್ಳಬಾರದು. ಭಾರತದಲ್ಲಿ ಕೊರೊನಾ ಗುಣಮುಖ ಪ್ರಮಾಣ ಶೇ.83ರಷ್ಟಿದೆ. ಅಭಿವೃದ್ಧಿ ರಾಷ್ಟ್ರಗಳಲ್ಲಿ ಕೊರೊನಾ ಮರಣ ಪ್ರಮಾಣ ಹೆಚ್ಚಿದ್ದು, ನಮ್ಮಲ್ಲಿ ಕಡಿಮೆ ಇದೆ ಎಂದರು.

ಸದ್ಯ ಸಾಲು ಸಾಲು ಹಬ್ಬಗಳು ಬಂದಿದೆ. ಈ ಸಮಯದಲ್ಲಿ ಅತ್ಯಂತ ಎಚ್ಚರಿಕೆಯಿಂದ ಹಬ್ಬಗಳನ್ನು ಆಚರಿಸಿ. ಈ ಹಬ್ಬಗಳು ನಿಮ್ಮಲ್ಲಿ ಉತ್ಸಾಹ ಮತ್ತು ಸಂತೋಷವನ್ನು ತರಲಿ ಎಂದು ಆಶಿಸುತ್ತೇನೆ. ಹಾಗಾಗಿ ಮಾಸ್ಕ್ ಧರಿಸುವಿಕೆ ಸೇರಿ ಎಲ್ಲ ಕೊರೊನಾ ನಿಯಮಗಳನ್ನ ಪಾಲಿಸಿ ಎಂದು ಆಗ್ರಹಿಸುತ್ತೇನೆ. ಕೊರೊನಾ ತಡೆಯುವಲ್ಲಿ ಸರ್ಕಾರ ನಡೆಸುತ್ತಿರುವ ಶ್ರಮಕ್ಕೆ ಎಲ್ಲರೂ ಸಾಥ್ ನೀಡಬೇಕು ಎಂದು ಮನವಿ ಮಾಡಿದರು.

ಪೂರ್ಣ ಪ್ರಮಾಣದಲ್ಲಿ ಸಫಲತೆ ಸಿಗದೇ ಖುಷಿ ಪಡೋದು ಸರಿಯಲ್ಲ. ಕೆಲಸ ಪೂರ್ಣವಾಗದೇ ಸಂತೋಷಪಡೋದು ಒಳ್ಳೆಯದಲ್ಲ. ಕೊರೊನಾಗೆ ವ್ಯಾಕ್ಸಿನ್ ಸಿಗೋವರೆಗೂ ಎಲ್ಲ ನಿಯಮಗಳನ್ನ ಪಾಲಿಸಬೇಕು. ವಿದೇಶಗಳು ಸೇರಿ ದೇಶದಲ್ಲಿ ಕೊರೊನಾ ವ್ಯಾಕ್ಸಿನ್ ಗಾಗಿ ಸಂಶೋಧನೆಗಳು ನಡೆಯುತ್ತಿವೆ. ವ್ಯಾಕ್ಸಿನ್ ಸಿದ್ಧವಾದ ಕೂಡಲೇ ಅದನ್ನ ಪ್ರತಿ ದೇಶವಾಸಿಗೆ ಹೇಗೆ ತಲುಪಿಸಬೇಕು ಎಂಬುದರ ಬಗ್ಗೆ ಸರ್ಕಾರ ಕೆಲಸ ಮಾಡುತ್ತಿದೆ.

ದೇಶದ ಜನತೆಗೆ ದಸರಾ, ನವರಾತ್ರಿ, ಈದ್, ಗುರುನಾನಕ, ದೀಪಾವಳಿ ಹಬ್ಬದ ಶುಭಾಶಯ ತಿಳಿಸಿದ ಅವರು, ಸಾರ್ವಜನಿಕ ಸ್ಥಳಗಳಲ್ಲಿ ಕೊರೊನಾ ನಿಯಮಗಳನ್ನು ಪಾಲಿಸುವಂತೆ  ಸಲಹೆಯನ್ನೂ ನೀಡಿದರು.

Leave a Reply

error: Content is protected !!
LATEST
KSRTC: ಮೊಬೈಲ್‌ನಲ್ಲಿ ಮಾತನಾಡಿಕೊಂಡು ಬಸ್‌ ಚಾಲನೆ - ಚಾಲಕನ ನಿರ್ಲಕ್ಷ್ಯಕ್ಕೆ ಕಿಡಿ KSRTC ಕೋಲಾರ: ನೌಕರರ ಪರ ನಿಲ್ಲಬೇಕಾದ ಕಾರ್ಮಿಕ ಕಲ್ಯಾಣ ಅಧಿಕಾರಿಯೇ ವಿರುದ್ಧ ನಿಂತರೆ ಎಲ್ಲಿ ಸಿಗಲಿದೆ ನ್ಯಾಯ? ಮೈಸೂರು: ಸಾಲದ 1ಕಂತು ಕಟ್ಟಿಲ್ಲದ್ದಕ್ಕೆ ಟ್ರ್ಯಾಕ್ಟರ್ ಜಪ್ತಿ ಮಾರಾಟ - ಕೋಟಕ್ ಮಹೇಂದ್ರ ಬ್ಯಾಂಕ್‌ಗೆ ರೈತರ ಮುತ್ತಿಗೆ ಕೆಟ್ಟು ನಿಂತಿದ್ದ KSRTC ಬಸ್‌ ರಿಪೇರಿ ವೇಳೆ ಕಾರು ಡಿಕ್ಕಿ-ಕಂಡಕ್ಟರ್‌  ಮೃತ BMTC: ಸ್ಕೂಟರ್​​ಗೆ ಸೈಡ್​ ಬಿಡಲಿಲ್ಲ ಎಂದು ಬಸ್‌ ಚಾಲಕನ ಮೇಲೆ ಕಿಡಿಗೇಡಿಯಿಂದ ಹಲ್ಲೆ- ಇದು 9ನೇ ಪ್ರಕರಣ- ಆತಂಕದಲ್ಲಿ ... KSRTC ಬಸ್‌ನಲ್ಲಿ ₹70 ಸಾವಿರ ಮೌಲ್ಯದ ತಂಬಾಕು ಸಾಗಿಸಿದ ಚನ್ನಪಟ್ಟಣ ಘಟಕದ ಕಂಡಕ್ಟರ್‌ ತಮಿಳುನಾಡಿನಲ್ಲಿ ಬಂಧನ KKRTC ಕೊಪ್ಪಳ ಘಟಕಕ್ಕೆ  RTO ಅಧಿಕಾರಿಗಳ ತಂಡ ಭೇಟಿ: ನೌಕರರಿಗೆ ವಾಯುಮಾಲಿನ್ಯ ದುಷ್ಪರಿಣಾಮಗಳ ಬಗ್ಗೆ ಅರಿವು ಗಂಭೀರ ಸ್ವರೂಪ ಪಡೆಯುತ್ತಿದೆ ದೆಹಲಿ ರೈತರ ಹೋರಾಟ: ನ.26ರಿಂದ ಉಪವಾಸ ಸತ್ಯಾಗ್ರಹ 87ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನ ಸಾಗರದಂತೆ ಬನ್ನಿ: ಮೀರಾ ಶಿವಲಿಂಗಯ್ಯ ಕರೆ SC, ST ಅಲೆಮಾರಿ ಸಮುದಾಯಗಳ ಯೋಜನೆಗಳು ಸದ್ಬಳಕೆ ಆಗಬೇಕು: ಡಿಸಿ ಶಿವಶಂಕರ