ವಿಡಿಯೋ

ಧಗಧಗನೆ ಉರಿದ ಮೆಗಾ ಮೆಡಿಕಲ್ ಬಹುಮಹಡಿ ಕಟ್ಟಡ

ವಿಜಯಪಥ ಸಮಗ್ರ ಸುದ್ದಿ

ಮೈಸೂರು:  ಕುವೆಂಪು ನಗರದಲ್ಲಿರುವ ಮೆಗಾ ಮೆಡಿಕಲ್ ಬಹುಮಹಡಿ ಕಟ್ಟಡದಲ್ಲಿ ಶನಿವಾರ ನಸುಕಿನಲ್ಲಿ ಅಗ್ನಿ ಅವಘಡ ಸಂಭವಿಸಿದ್ದು ಅಪಾರ ಪ್ರಮಾಣದ ನಷ್ಟ ಉಂಟಾಗಿದೆ.

ಮೂರು ಅಂತಸ್ತಿನ ಕಟ್ಟಡದಲ್ಲಿ ನಸುಕಿನ ಮೂರು ಗಂಟೆಯಲ್ಲಿ ಬೆಂಕಿ ಕಾಣಿಸಿಕೊಂಡಿತು. ವಿಷಯ ತಿಳಿದ ಕೂಡಲೇ 9 ಅಗ್ನಿಶಾಮಕ ವಾಹನಗಳು  ಕಾರ್ಯಾಚರಣೆ  ಮಾಡಿದವು. 60 ಅಗ್ನಿಶಾಮಕ ಸಿಬ್ಬಂದಿಗೆ  ಬೆಂಕಿಯನ್ನು  ನಂದಿಸಲು ಸುಮಾರು ಮೂರು ಗಂಟೆ  ಬೇಕಾಯಿತು.

ಅವಘಡಕ್ಕೆ ವಿದ್ಯುತ್ ಶಾರ್ಟ್ ಸರ್ಕ್ಯೂಟ್ ಕಾರಣ ಎಂದು ತಿಳಿದು ಬಂದಿದೆ.  ಬೆಳಗ್ಗೆಯಷ್ಟೇ ಬೆಂಕಿಯನ್ನು ನಿಯಂತ್ರಣಕ್ಕೆ ತರಲಾಗಿದ್ದು ನಷ್ಟದ ಅಂದಾಜು ಇನ್ನಷ್ಟೇ ತಿಳಿಯಬೇಕಿದೆ.

ಕಾರ್ಯಾಚರಣೆಯಲ್ಲಿ ಜಿಲ್ಲಾ ಅಗ್ನಿಶಾಮಕ ಅಧಿಕಾರಿಗಳಾದ  ರಾಜು,  ನವೀನ್,  ಗಂಗಾ ನಾಯಕ ಹಾಗೂ ಭರತ್ ಕುಮಾರ್,  ಠಾಣಾಧಿಕಾರಿಗಳಾದ ಗಂಗಾಧರ,  ನಾಗರಾಜು ಅರಸ್,  ಶಿವಸ್ವಾಮಿ ಹಾಗೂ ಸಿಬ್ಬಂದಿ  ಭಾಗವಹಿಸಿದ್ದರು.

Leave a Reply

error: Content is protected !!
LATEST
KSRTC: ಮೊಬೈಲ್‌ನಲ್ಲಿ ಮಾತನಾಡಿಕೊಂಡು ಬಸ್‌ ಚಾಲನೆ - ಚಾಲಕನ ನಿರ್ಲಕ್ಷ್ಯಕ್ಕೆ ಕಿಡಿ KSRTC ಕೋಲಾರ: ನೌಕರರ ಪರ ನಿಲ್ಲಬೇಕಾದ ಕಾರ್ಮಿಕ ಕಲ್ಯಾಣ ಅಧಿಕಾರಿಯೇ ವಿರುದ್ಧ ನಿಂತರೆ ಎಲ್ಲಿ ಸಿಗಲಿದೆ ನ್ಯಾಯ? ಮೈಸೂರು: ಸಾಲದ 1ಕಂತು ಕಟ್ಟಿಲ್ಲದ್ದಕ್ಕೆ ಟ್ರ್ಯಾಕ್ಟರ್ ಜಪ್ತಿ ಮಾರಾಟ - ಕೋಟಕ್ ಮಹೇಂದ್ರ ಬ್ಯಾಂಕ್‌ಗೆ ರೈತರ ಮುತ್ತಿಗೆ ಕೆಟ್ಟು ನಿಂತಿದ್ದ KSRTC ಬಸ್‌ ರಿಪೇರಿ ವೇಳೆ ಕಾರು ಡಿಕ್ಕಿ-ಕಂಡಕ್ಟರ್‌  ಮೃತ BMTC: ಸ್ಕೂಟರ್​​ಗೆ ಸೈಡ್​ ಬಿಡಲಿಲ್ಲ ಎಂದು ಬಸ್‌ ಚಾಲಕನ ಮೇಲೆ ಕಿಡಿಗೇಡಿಯಿಂದ ಹಲ್ಲೆ- ಇದು 9ನೇ ಪ್ರಕರಣ- ಆತಂಕದಲ್ಲಿ ... KSRTC ಬಸ್‌ನಲ್ಲಿ ₹70 ಸಾವಿರ ಮೌಲ್ಯದ ತಂಬಾಕು ಸಾಗಿಸಿದ ಚನ್ನಪಟ್ಟಣ ಘಟಕದ ಕಂಡಕ್ಟರ್‌ ತಮಿಳುನಾಡಿನಲ್ಲಿ ಬಂಧನ KKRTC ಕೊಪ್ಪಳ ಘಟಕಕ್ಕೆ  RTO ಅಧಿಕಾರಿಗಳ ತಂಡ ಭೇಟಿ: ನೌಕರರಿಗೆ ವಾಯುಮಾಲಿನ್ಯ ದುಷ್ಪರಿಣಾಮಗಳ ಬಗ್ಗೆ ಅರಿವು ಗಂಭೀರ ಸ್ವರೂಪ ಪಡೆಯುತ್ತಿದೆ ದೆಹಲಿ ರೈತರ ಹೋರಾಟ: ನ.26ರಿಂದ ಉಪವಾಸ ಸತ್ಯಾಗ್ರಹ 87ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನ ಸಾಗರದಂತೆ ಬನ್ನಿ: ಮೀರಾ ಶಿವಲಿಂಗಯ್ಯ ಕರೆ SC, ST ಅಲೆಮಾರಿ ಸಮುದಾಯಗಳ ಯೋಜನೆಗಳು ಸದ್ಬಳಕೆ ಆಗಬೇಕು: ಡಿಸಿ ಶಿವಶಂಕರ