Please assign a menu to the primary menu location under menu

NEWSಕೃಷಿನಮ್ಮರಾಜ್ಯ

ಕೇಂದ್ರ-ರಾಜ್ಯ ಸರ್ಕಾರಗಳ ನಿರ್ಲಕ್ಷ್ಯ: ಸೆ.26 ರಂದು ಸಹಸ್ರಾರು ರೈತರಿಂದ ವಿಧಾನ ಸೌಧ ಚಲೋ: ಬರಡನಪುರ ನಾಗರಾಜ್

ವಿಜಯಪಥ ಸಮಗ್ರ ಸುದ್ದಿ

ಮೈಸೂರು: ಜಿಲ್ಲೆಯ ಸಾವಿರಾರು ಕಬ್ಬು ಬೆಳೆಗಾರ, ಕೃಷಿ ಪಂಪ್‌ಸೆಟ್‌ ರೈತರಿಂದ ಇದೇ ಸೆ.26 ರಂದು ಬೆಂಗಳೂರು ವಿಧಾನಸೌಧ ಚಲೋ ರಾಜ್ಯ ಕಬ್ಬು ಬೆಳೆಗಾರ ಸಂಘದ ರಾಜ್ಯಾಧ್ಯಕ್ಷ ಕುರುಬೂರು ಶಾಂತಕುಮಾರ್ ನೇತೃತ್ವದಲ್ಲಿ ನಡೆಸಲಾಗುವುದು ಎಂದು ಸಂಘದ ಮೈಸೂರು ಜಿಲ್ಲಾ ಪ್ರಧಾನ ಕಾರ್ಯದರ್ಶಿ ಬರಡನಪುರ ನಾಗರಾಜ್ ತಿಳಿಸಿದ್ದಾರೆ.

ಇಂದು ಆಯೋಜಿಸಿದ್ದ ಮೈಸೂರು ತಾಲೂಕು ಕಬ್ಬು ಬೆಳೆಗಾರ ರೈತರ ಸಭೆಯ ಬಳಿಕ ಮಾತನಾಡಿದರು. ಕಬ್ಬಿನ ಎಫ್‌ಆರ್‌ಪಿ ದರ ನಿಗದಿ ಮಾಡಿರುವುದನ್ನು ವಿರೋಧಿಸಿ, ನ್ಯಾಯಯುತ ದರ ನಿಗದಿಗಾಗಿ ಒತ್ತಾಯಿಸಿ, ರೈತರ ಬೃಹತ್ ಬೆಂಗಳೂರು ವಿಧಾನಸೌಧ ಚಲೋ, ಕಬ್ಬು ಉತ್ಪಾದನೆಗೆ ಬಳಸುವ ರಸಗೊಬ್ಬರ, ಪೊಟ್ಯಾಶ್ ಚೀಲಕ್ಕೆ ಹೆಚ್ಚುವರಿಯಾಗಿ 900 ರೂ. ಡಿಎಪಿ ಬೆಲೆ 350 ರೂ. ಏರಿಕೆಯಾಗಿದೆ ಕಟಾವು ಕೂಲಿ 400 ರೂಪಾಯಿ, ಬೀಜದ ಬೆಲೆ ಎಕರೆಗೆ 1 ಸಾವಿರ ರೂ. ಹೆಚ್ಚುವರಿಯಾಗಿ ಏರಿಕೆಯಾಗಿದೆ. ಆದರೆ ಕೇಂದ್ರ ಸರ್ಕಾರ ಸಕ್ಕರೆ ಇಳುವರಿಯನ್ನು 10.25 ಏರಿಕೆ ಮಾಡಿ 150 ರೂ. ಹೆಚ್ಚುವರಿ ಮಾಡಿ ಟನ್‌ಗೆ 3050 ರೂ. ನಿಗದಿ ಮಾಡಿದೆ. ಇದು ಕಬ್ಬು ಬೆಳೆಗಾರರಿಗೆ ಮಾಡಿದ ಅನ್ಯಾಯ ಎಂದರು.

ಕಬ್ಬಿನಿಂದ ಬರುವ ಸಕ್ಕರೆ ಇಳುವರಿ 10 ರಿಂದ 10.25ಕ್ಕೆ ಏರಿಕೆ ಮಾಡಿ ಕಬ್ಬು ಬೆಳೆ ರೈತರಿಗೆ ಮತ್ತೊಂದು ದ್ರೋಹ ಬಗೆದಿದೆ. ಇದರಿಂದ ರೈತರಿಗೆ ಟನ್‌ಗೆ 75 ರೂ. ಕಡಿತವಾಗುತ್ತದೆ, ಉತ್ತರಪ್ರದೇಶ ಸರ್ಕಾರದ ಮಾನದಂಡದಂತೆ ಕನಿಷ್ಠ 3500 ರೂ. ನಿಗದಿ ಆಗಲೇಬೇಕು.

ಕೇಂದ್ರ ಸರ್ಕಾರ ವಿದ್ಯುತ್ ಕಾಯ್ದೆ ತಿದ್ದುಪಡಿ ಮಾಡಿ ಖಾಸಗೀಕರಣ ಮಾಡುವುದನ್ನು ರಾಜ್ಯದ 40 ಲಕ್ಷ ಕೃಷಿ ಪಂಪ್‌ಸೆಟ್‌ ರೈತರು ವಿರೋಧಿಸುತ್ತೇವೆ, ರೈತರಿಗೆ ಕೃಷಿ ಪಂಪ್‌ಸೆಟ್‌ಗಳಿಗೆ ನೀಡುವ ಉಚಿತ ವಿದ್ಯುತ್‌ಅನ್ನು ನಿಲ್ಲಿಸುವ ಹುನ್ನಾರದಿಂದ ಸಂಸತ್ತಲ್ಲಿ 2022 ವಿದ್ಯುತ್ ಬಿಲ್ ಮಂಡಿಸಲಾಗಿದೆ. ಈಗಾಗಲೇ ತಮಿಳುನಾಡು, ತೆಲಂಗಾಣ, ಆಂಧ್ರ, ಪಂಜಾಬ್, ಕೇರಳ ಬಿಹಾರ್ ರಾಜ್ಯ ಸರ್ಕಾರಗಳು ವಿರೋಧ ವ್ಯಕ್ತಪಡಿಸಿವೆ ಅದರಂತೆ ಕರ್ನಾಟಕ ರಾಜ್ಯವು ಕೂಡ ವಿದ್ಯುತ್ ಕಾಯ್ದೆ ಖಾಸಗೀಕರಣ ಮಾಡುವುದನ್ನು ವಿರೋಧಿಸಬೇಕು, ಕರ್ನಾಟಕದ ರೈತರನ್ನು ಸಂರಕ್ಷಿಸಬೇಕು ಎಂದು ಹೇಳಿದರು.

ಎಲ್ಲ ಕೃಷಿ ಉತ್ಪನ್ನಗಳಿಗೆ ಕಾತರಿ ಕನಿಷ್ಠ ಬೆಂಬಲ ಬೆಲೆ ಕಾಯ್ದೆ ಜಾರಿಗೆ ತರಬೇಕು. ಅತಿವೃಷ್ಟಿ ಬೆಳೆ ನಷ್ಟದಿಂದ ರೈತರು ಕಂಗಾಲಾಗಿದ್ದು ಬೆಳೆ ಸಾಲ ಕಟ್ಟಲು ಕಷ್ಟವಾಗಿರುತ್ತದೆ ಆದ್ದರಿಂದ ರೈತರ ಸಾಲವನ್ನು ನವೀಕರಣ ಮಾಡಿ ಶೇಕಡ 25ರಷ್ಟು ಹೆಚ್ಚುವರಿಯಾಗಿ ಸಾಲ ನೀಡುವ ಯೋಜನೆ ಕೂಡಲೇ ಜಾರಿಗೆ ತರಬೇಕು. ಮೊಸರು ಮಜ್ಜಿಗೆ ಅಪ್ಪಳ ಬೆಲ್ಲ ಕೃಷಿ ಉಪಕರಣಗಳು ಹನಿ ನೀರಾವರಿ ಉಪಕರಣಗಳು, ರಸಗೊಬ್ಬರ, ಕೀಟನಾಶಕ, ಗಳ ಮೇಲೆ ವಿಧಿಸಿರುವ ಜಿಎಸ್ಟಿ ರದ್ದುಗೊಳಿಸಬೇಕು. ರಾಜ್ಯದಲ್ಲಿ ಜಾರಿ ಮಾಡಿರುವ ಎಪಿಎಂಸಿ ತಿದ್ದುಪಡಿ ಕಾಯ್ದೆ ವಾಪಸ್ ಪಡೆಯಬೇಕು ಎಂದು ಒತ್ತಾಯಿಸಿದರು.

ಬ್ಯಾಂಕುಗಳು ರೈತರ ಕೃಷಿ ಸಾಲಕ್ಕೆ ಸಿಬಿಲ್ ಸ್ಕೋರ್ ನೋಡಿ ಸಾಲ ಕೊಡುತ್ತೇವೆ ಎನ್ನುವುದನ್ನು ಕೈಬಿಡಬೇಕು. ದೆಹಲಿ ರೈತ ಹೋರಾಟದಲ್ಲಿ ಮಡಿದ 750 ರೈತ ಕುಟುಂಬಗಳಿಗೆ ಕೇಂದ್ರ ಸರ್ಕಾರ ನೀಡಿದ ಭರವಸೆಯಂತೆ ಕೂಡಲೇ ಪರಿಹಾರ ಬಿಡುಗಡೆ ಮಾಡಲಿ. ರೈತರಿಗೆ ಕೃಷಿ ಸಾಲ ನೀಡುವಾಗ, ಬ್ಯಾಂಕುಗಳು ಸಿಬಿಲ್ ಸ್ಕೋರ್ ಪರಿಗಣನೆ ಮಾಡಿ ಸಾಲ ನೀಡಬೇಕೆ, ಬೇಡವೇ ಎಂಬ ನೀತಿ ಅನುಸರಿಸುತ್ತಿವೆ. ಇನ್ನು ಈ ಬಗ್ಗೆ ಭರವಸೆ ನೀಡಿದ ಕರ್ನಾಟಕ ವಲಯದ ರಿಸರ್ವ್ ಬ್ಯಾಂಕ್ ಆಫ್ ಇಂಡಿಯಾ ಮುಖ್ಯಸ್ಥರು ಭರವಸೆ ಹುಸಿಗೊಳಿಸಿದ್ದಾರೆ. ಇದು ರೈತರಿಗೆ ಮಾಡಿದ ಅಪಮಾನ ಇದೇ ದಿನ ಆರ್ ಬಿ ಐ ಕಚೇರಿಗೂ ಮುತ್ತಿಗೆ ಹಾಕಲಾಗುವುದು ಎಂದರು.

ಕೇಂದ್ರ-ರಾಜ್ಯ ಸರ್ಕಾರಗಳು ನಿರ್ಲಕ್ಷ ನೀತಿ ಅನುಸರಿಸುತ್ತಿರುವ ಕಾರಣ ಸಹಸ್ರಾರು ಸಂಖ್ಯೆಯಲ್ಲಿ ರೈತರು ವಿಧಾನಸೌಧ ಚಲೋ ನಡೆಸಲಿದ್ದೇವೆ ಎಂದು ಜಿಲ್ಲಾ ಪ್ರಧಾನ ಕಾರ್ಯದರ್ಶಿ ಬರಡನಪುರ ನಾಗರಾಜ್ ತಿಳಿಸಿದ್ದಾರೆ.

ಸಭೆಯಲ್ಲಿ ರಾಜ್ಯ ಸಂಘಟನಾ ಕಾರ್ಯದರ್ಶಿ ಅತ್ತಹಳ್ಳಿ ದೇವರಾಜ್, ತಾಲೂಕು ಅಧ್ಯಕ್ಷ ಲಕ್ಷ್ಮಿಪುರ ವೆಂಕಟೇಶ್, ಸಾತಗಳ್ಳಿ ಬಸವರಾಜ್, ಕೆ.ಆರ್.ಎಸ್. ರಾಮೇಗೌಡ, ಕಾಟೂರು ಮಹದೇವಸ್ವಾಮಿ, ವರಕೋಡು ನಾಗೇಶ್, ಜಯರಾಮೇಗೌಡ, ಪಿ.ರಾಜು, ಪಾಳ್ಯ ಸ್ವಾಮಿ, ನಾಗರಾಜು, ವಾಜಮಂಗಲ ಮಹಾದೇವ, ಮಾಲಿಂಗ ನಾಯಕ ಸಾಕಮ್ಮ, ಮರಿಚೆನ್ನಯ್ಯ, ಚುಂಚುರಾಯನಹುಂಡಿ ಲಿಂಗಣ್ಣ, ನಂಜುಂಡಪ್ಪ, ಜವರಪ್ಪ ಇನ್ನು ಮುಂತಾದವರಿದ್ದರು.

Leave a Reply

error: Content is protected !!
LATEST
KSRTC: ರಸ್ತೆಗಿಳಿದ 20 ಹೊಸ ಅಂಬಾರಿ ಉತ್ಸವ ಸ್ಲೀಪರ್​​ ಬಸ್​ಗಳು- ಸಚಿವರಿಂದ ಲೋಕಾರ್ಪಣೆ KSRTCಗೆ ₹6543 ಕೋಟಿ ಅನುದಾನ ಬಿಡುಗಡೆ ಮಾಡಿರುವ ನಮಗೆ ₹414 ಕೋಟಿ ಬಿಡುಗಡೆ ಮಾಡುವುದು ಕಷ್ಟವೇ: ರಾಮಲಿಂಗಾರೆಡ್ಡಿ ಗಾಯಾಳು ಅಯ್ಯಪ್ಪ ಮಾಲಾಧಾರಿಗಳ ಆರೋಗ್ಯ ವಿಚಾರಿಸಿದ ಸಚಿವ ಪರಮೇಶ್ವರ್‌ KSRTC ಅಧಿಕಾರಿಗಳಿಲ್ಲದ ಡಿ.31ರ ಸಾರಿಗೆ ಮುಷ್ಕರ ನೌಕರರ ಹರಕೆ ಕುರಿ ಮಾಡುವ ಹೋರಾಟವೇ..!? BBMP- ₹2 ಕೋಟಿ ವೆಚ್ಚದಲ್ಲಿ ರಾಜಕಾಲುವೆ ಅಭಿವೃದ್ಧಿ : ಆಯುಕ್ತ ತುಷಾರ್ ಗಿರಿನಾಥ್ ಡಿ.31 ರಂದು ಇಳಕಲ್‌ನಲ್ಲಿ ಇಪಿಎಸ್ 95 ಪಿಂಚಣಿದಾರರ ಬೃಹತ್‌ ಸಮಾವೇಶ ಚನ್ನರಾಯಪಟ್ಟಣ ರೈತ ನಿಯೋಗದಿಂದ ಸಿಎಂ ಭೇಟಿ: ಭೂ ಸ್ವಾಧೀನ ಕೈಬಿಡಲು ಮನವಿ KSRTC: ಟಿಸಿಗಳಿಂದ ಪ್ರತಿ ತಿಂಗಳು ಸಾವಿರ ರೂ. ಭಿಕ್ಷೆ ಬೇಡುತ್ತಿರುವ ಡಿಸಿ, ಡಿಟಿಒಗಳು..! ಇ-ಖಾತಾ ಕಾಲಮಿತಿಯೊಳಗೆ ಅಧಿಕಾರಿಗಳು ವಿಲೇಮಾಡಿ: ತುಷಾರ್ ಗಿರಿನಾಥ್ ಕನಿಷ್ಠ ಪಿಂಚಣಿ ಶೀಘ್ರ ಜಾರಿ: ಕಾರ್ಮಿಕ ಸಚಿವ ಮನ್ಸುಖ್ ಮಾಂಡವಿಯಾ ಭರವಸೆ