NEWSದೇಶ-ವಿದೇಶನಮ್ಮರಾಜ್ಯ

ದೆಹಲಿಯಲ್ಲಿ ಕರ್ನಾಟಕದ ಎಎಪಿ ನಾಯಕರು, ಕಾರ್ಯಕರ್ತರಿಂದ ಬಿರುಸಿನ ಮತ ಪ್ರಚಾರ

ವಿಜಯಪಥ ಸಮಗ್ರ ಸುದ್ದಿ

ನ್ಯೂಡೆಲ್ಲಿ: ಲೋಕಸಭೆ 2024ರ ಆರನೇ ಹಂತದ ಮತದಾನಕ್ಕೆ ಇದೇ ಮೇ 25ರಂದು ನಡೆಯಲಿದ್ದು, ಈ ಹಿನ್ನೆಲೆಯಲ್ಲಿ ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಆಮ್‌ ಆದ್ಮಿ ಪಾರ್ಟಿ ಬಿರುಸಿನ ಪ್ರಚಾರ ನಡೆಸುತ್ತಿದೆ.

ಆಪ್ ಸ್ಪರ್ಧಿಸಿರುವ ದೆಹಲಿಯ ನಾಲ್ಕು ಕ್ಷೇತ್ರಗಳಲ್ಲಿ ಪ್ರಚಾರ ನಡೆಸಲು ಕರ್ನಾಟಕದಿಂದಲೂ AAP ಮುಖಂಡರು ಮತ್ತು ಕಾರ್ಯಕರ್ತರು ದೆಹಲಿಯಲ್ಲಿ ಮೊಕ್ಕಾಂಹೂಡಿ ಪ್ರಚಾರ ಕಾರ್ಯದಲ್ಲಿ ತೊಡಗಿದ್ದಾರೆ.

ಕಳೆದ 15 ದಿನಗಳಿಂದ ದೆಹಲಿಯಲ್ಲಿ ಬೀಡು ಬಿಟ್ಟಿರುವ ಕರ್ನಾಟಕ ಎಎಪಿ ನಾಯಕರು, ಪಕ್ಷದ ಅಭ್ಯರ್ಥಿಗಳ ಪರ ಪ್ರಚಾರ ಮಾಡುತ್ತಿದ್ದು, ಗೆಲುವಿಗಾಗಿ ಶ್ರಮಿಸುತ್ತಿದ್ದಾರೆ. ದೆಹಲಿಯ ಮೆಟ್ರೋ ನಿಲ್ದಾಣಗಳು, ಪ್ರಮುಖ ಮಾರುಕಟ್ಟೆಗಳು ಮತ್ತು ಜನಸಂದಣಿ ಪ್ರದೇಶಗಳಲ್ಲಿ ಪ್ರಚಾರ ಮಾಡುತ್ತಿದ್ದಾರೆ.

ಅರವಿಂದ್ ಕೇಜ್ರಿವಾಲ್ ಅವರನ್ನು ಅಕ್ರಮವಾಗಿ ಬಂಧಿಸಿದ್ದನ್ನು ವಿರೋಧಿಸಿ ‘ಜೈಲ್ ಕಾ ಜವಾಬ್ ವೋಟ್ ಸೆ ದೇಂಗೆ’ ಘೋಷಣೆಯಡಿ ಸಹಿ ಸಂಗ್ರಹ ಮಾಡುವ ಮೂಲಕ ಜನರ ಗಮನ ಸೆಳೆಯುವ ಪ್ರಯತ್ನ‌ದಲ್ಲಿ ತೊಡಗಿದ್ದಾರೆ.

ರಾಷ್ಟ್ರ ಸಂಘಟನಾ ಕಾರ್ಯದರ್ಶಿ ಪೃಥ್ವಿ ರೆಡ್ಡಿ, ರಾಜ್ಯ ಪ್ರಧಾನ ಕಾರ್ಯದರ್ಶಿ ಸಂಚಿತ್ ಸಹವಾನಿ, ರಾಜ್ಯ ಸಂಘಟನಾ ಕಾರ್ಯದರ್ಶಿ ಮೋಹನ್ ದಾಸರಿ, ರಾಜ್ಯ ಖಜಾಂಚಿ ಪ್ರಕಾಶ್ ನೆಡುಂಗಡಿ, ರಾಜ್ಯ ಮಾಧ್ಯಮ ಸಂಚಾಲ ಜಗದೀಶ್ ವಿ. ಸದಂ, ರಾಜ್ಯ ಕಾರ್ಯದರ್ಶಿಗಳಾದ ರವಿಕುಮಾರ್, ಉಷಾ ಮೋಹನ್, ಬೆಂಗಳೂರು ನಗರಾಧ್ಯಕ್ಷ ಡಾ. ಸತೀಶ್.

ಬೆಂಗಳೂರು ಸಂಘಟನಾ ಕಾರ್ಯದರ್ಶಿ ಅಶೋಕ್ ಮೃತ್ಯುಂಜಯ, ಜಗದೀಶ್ ಬಾಬು, ಪುಟ್ಟಣ್ಣ, ಮಂಜುನಾಥ್, ಮುನೇಶ್ ಕುಮಾರ್, ಅಂಜನಾ ಗೌಡ, ಮಹಾಲಕ್ಷ್ಮಿ ಸೇರಿದಂತೆ ಇನ್ನಿತರ ಮುಖಂಡರು ಮತ್ತು ಕರ್ನಾಟಕದ ಅನೇಕ ಜಿಲ್ಲೆಗಳಿಂದ ಆಗಮಿಸಿರುವ ಎಎಪಿ ಕಾರ್ಯಕರ್ತರು ಬಿರುಸಿನ ಪ್ರಚಾರದಲ್ಲಿ ತೊಡಗಿದ್ದಾರೆ.

Leave a Reply

error: Content is protected !!
LATEST
KSRTC: ಮೊಬೈಲ್‌ನಲ್ಲಿ ಮಾತನಾಡಿಕೊಂಡು ಬಸ್‌ ಚಾಲನೆ - ಚಾಲಕನ ನಿರ್ಲಕ್ಷ್ಯಕ್ಕೆ ಕಿಡಿ KSRTC ಕೋಲಾರ: ನೌಕರರ ಪರ ನಿಲ್ಲಬೇಕಾದ ಕಾರ್ಮಿಕ ಕಲ್ಯಾಣ ಅಧಿಕಾರಿಯೇ ವಿರುದ್ಧ ನಿಂತರೆ ಎಲ್ಲಿ ಸಿಗಲಿದೆ ನ್ಯಾಯ? ಮೈಸೂರು: ಸಾಲದ 1ಕಂತು ಕಟ್ಟಿಲ್ಲದ್ದಕ್ಕೆ ಟ್ರ್ಯಾಕ್ಟರ್ ಜಪ್ತಿ ಮಾರಾಟ - ಕೋಟಕ್ ಮಹೇಂದ್ರ ಬ್ಯಾಂಕ್‌ಗೆ ರೈತರ ಮುತ್ತಿಗೆ ಕೆಟ್ಟು ನಿಂತಿದ್ದ KSRTC ಬಸ್‌ ರಿಪೇರಿ ವೇಳೆ ಕಾರು ಡಿಕ್ಕಿ-ಕಂಡಕ್ಟರ್‌  ಮೃತ BMTC: ಸ್ಕೂಟರ್​​ಗೆ ಸೈಡ್​ ಬಿಡಲಿಲ್ಲ ಎಂದು ಬಸ್‌ ಚಾಲಕನ ಮೇಲೆ ಕಿಡಿಗೇಡಿಯಿಂದ ಹಲ್ಲೆ- ಇದು 9ನೇ ಪ್ರಕರಣ- ಆತಂಕದಲ್ಲಿ ... KSRTC ಬಸ್‌ನಲ್ಲಿ ₹70 ಸಾವಿರ ಮೌಲ್ಯದ ತಂಬಾಕು ಸಾಗಿಸಿದ ಚನ್ನಪಟ್ಟಣ ಘಟಕದ ಕಂಡಕ್ಟರ್‌ ತಮಿಳುನಾಡಿನಲ್ಲಿ ಬಂಧನ KKRTC ಕೊಪ್ಪಳ ಘಟಕಕ್ಕೆ  RTO ಅಧಿಕಾರಿಗಳ ತಂಡ ಭೇಟಿ: ನೌಕರರಿಗೆ ವಾಯುಮಾಲಿನ್ಯ ದುಷ್ಪರಿಣಾಮಗಳ ಬಗ್ಗೆ ಅರಿವು ಗಂಭೀರ ಸ್ವರೂಪ ಪಡೆಯುತ್ತಿದೆ ದೆಹಲಿ ರೈತರ ಹೋರಾಟ: ನ.26ರಿಂದ ಉಪವಾಸ ಸತ್ಯಾಗ್ರಹ 87ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನ ಸಾಗರದಂತೆ ಬನ್ನಿ: ಮೀರಾ ಶಿವಲಿಂಗಯ್ಯ ಕರೆ SC, ST ಅಲೆಮಾರಿ ಸಮುದಾಯಗಳ ಯೋಜನೆಗಳು ಸದ್ಬಳಕೆ ಆಗಬೇಕು: ಡಿಸಿ ಶಿವಶಂಕರ