ಬೆಂಗಳೂರು: ರಾಜ್ಯದಲ್ಲಿ ಕೊರೊನಾ ಸೋಂಕು ಮರಣ ಮೃದಂಗ ಮುಂದುವರಿದಿದ್ದು, ಬುಧವಾರ ಮಹಾಮಾರಿಗೆ ಮತ್ತೆ ಮೂವರು ಬಲಿಯಾಗಿದ್ದಾರೆ. ಇದರೊಂದಿಗೆ ರಾಜ್ಯದಲ್ಲಿ ಸೋಂಕಿನಿಂದ ಮೃತಪಟ್ಟವರ ಸಂಖ್ಯೆ 71ಕ್ಕೇರಿಕೆಯಾಗಿದೆ. (ಅನ್ಯಕಾರಣದಿಂದ ಇಬ್ಬರು ಮೃತ).
ಇಂದು 120 ಜನರಲ್ಲಿ ಕೊರೊನಾ ಪಾಸಿಟಿವ್ ದೃಢಪಟ್ಟಿದ್ದು, ರಾಜ್ಯದಲ್ಲಿ ಸೋಂಕಿತರ ಸಂಖ್ಯೆ 6041ಕ್ಕೆ ಏರಿಕೆಯಾಗಿದೆ. ಇನ್ನು 120 ಸೋಂಕಿತರಲ್ಲಿ 68 ಮಂದಿ ಅಂತಾರಾಜ್ಯ ಪ್ರಯಾಣದ ಹಿನ್ನೆಲೆ ಹೊಂದಿದ್ದು, ಮೂವರು ಅಂತಾರಾಷ್ಟ್ರೀಯ ಪ್ರಯಾಣದಿಂದ ಮರಳಿದ್ದಾರೆ.
ನಿಮ್ಮ ನೆಚ್ಚಿನ ಸುದ್ದಿಗಳಿಗೆ ವಿಜಯಪಥ ಆಪ್ ಡೌನ್ಲೋಡ್ ಮಾಡಿಕೊಳ್ಳಲು ಇಲ್ಲಿ ಕ್ಲಿಕ್ಕಿಸಿ https://play.google.com/store/apps/detail
ಬೆಂಗಳೂರು 42, ಯಾದಗಿರಿಯಲ್ಲಿ 27, ವಿಜಯಪುರದಲ್ಲಿ 13, ಕಲಬುರಗಿಯಲ್ಲಿ 11 ಹಾಗೂ ಬೀದರ್ ನಲ್ಲಿ 5 ಪ್ರಕರಣ ಸೇರಿದಂತೆ ಇಂದು ಹೊಸದಾಗಿ 120 ಮಂದಿಗೆ ಕೊರೊನಾ ಪಾಸಿಟಿವ್ ದೃಢಪಟ್ಟಿದೆ. ಅಲ್ಲದೆ ಇಂದು 257 ಮಂದಿ ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆ ಹೊಂದಿದ್ದಾರೆ.
ಧಾರವಾಡ ಜಿಲ್ಲೆಯ 58 ವರ್ಷದ ವ್ಯಕ್ತಿ ಕೊರೊನಾಗೆ ಬಲಿಯಾಗಿದ್ದು, ಇವರು ಮಹಾರಾಷ್ಟ್ರದಿಂದ ಹಿಂದಿರುಗಿದ್ದರು ಹುಬ್ಬಳ್ಳಿ ಧಾರವಾಡ ಜಿಲ್ಲೆಯ ನಿಗದಿತ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಆದರೆ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ.
ನಿಮ್ಮ ನೆಚ್ಚಿನ ಸುದ್ದಿಗಳಿಗೆ ವಿಜಯಪಥ ಆಪ್ ಡೌನ್ಲೋಡ್ ಮಾಡಿಕೊಳ್ಳಲು ಇಲ್ಲಿ ಕ್ಲಿಕ್ಕಿಸಿ https://play.google.com/store/apps/detail
ಇನ್ನು ಬೆಂಗಳೂರು ನಗರ ಜಿಲ್ಲೆಯಲ್ಲಿ ಇಬ್ಬರು ಮೃತಪಟ್ಟಿದ್ದು ಅದರಲ್ಲಿ 32ವರ್ಷದ ಮತ್ತು 57 ವರ್ಷದ ಪುರುಷರು ಮೃತಪಟ್ಟಿದ್ದಾರೆ. ಇವರನ್ನು ನಿಗದಿತ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗುತ್ತಿತ್ತು ಆದರೆ ಚಿಕಿತ್ಸೆ ಫಲಕಾರಿಯಾಗದೆ ಅಸುನೀಗಿದ್ದಾರೆ ಎಂದು ಆರೋಗ್ಯ ಇಲಾಖೆ ಅಧಿಕಾರಿಗಳು ತಿಳಿಸಿದ್ದಾರೆ.
ದೇಶದಲ್ಲಿ 276,583 ಕ್ಕೇರಿದ ಸೋಂಕಿತರ ಸಂಖ್ಯೆ
ಇನ್ನು ದೇಶದಲ್ಲಿ ಈವರೆಗೆ 276,583 ಮಂದಿಗೆ ಸೋಂಕು ಇರುವುದು ದೃಢಪಟ್ಟಿದೆ. 7,745 ಮಂದಿ ಮೃತಪಟ್ಟಿದ್ದಾರೆ. 135,206 ಮಂದಿ ರೋಗಮುಕ್ತರಾಗಿದ್ದಾರೆ. ಪ್ರಪಂಚಾದ್ಯಂತ ಈವರೆಗೆ 7,354,275 ಜನರಲ್ಲಿ ಸೋಂಕು ಇರುವುದನ್ನು ವಿಶ್ವ ಆರೋಗ್ಯ ಸಂಸ್ಥೆ ಖಚಿತಪಡಿಸಿದೆ. ಇನ್ನು 414,377 ಜನರು ಮೃತಪಟ್ಟಿದ್ದಾರೆ 3,628,913 ಮಂದಿ ರೋಗದಿಂದ ಮುಕ್ತಗೊಂಡಿದ್ದಾರೆ. view by country
ನಿಮ್ಮ ನೆಚ್ಚಿನ ಸುದ್ದಿಗಳಿಗೆ ವಿಜಯಪಥ ಆಪ್ ಡೌನ್ಲೋಡ್ ಮಾಡಿಕೊಳ್ಳಲು ಇಲ್ಲಿ ಕ್ಲಿಕ್ಕಿಸಿ https://play.google.com/store/apps/detail