NEWSನಮ್ಮರಾಜ್ಯ

ಮೇ 25- ರಾಜ್ಯದಲ್ಲಿ 69 ಹೊಸ ಸೋಂಕು ದೃಢ, ವಿಶ್ವಮಾರಿಗೆ ಮಹಿಳೆ ಬಲಿ

ವಿಜಯಪಥ ಸಮಗ್ರ ಸುದ್ದಿ

ಬೆಂಗಳೂರು: ಮಹಾರಾಷ್ಟ್ರದ ನಂಜು ಕರ್ನಾಟಕವನ್ನು ದಿನೇದಿನೆ ಬಾಧಿಸುತ್ತಿದೆ. ನಾಲ್ಕು ದಿನಗಳಿಂದಲೂ ರಾಜ್ಯದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ ಶತಕ ದಾಟುತ್ತಿದ್ದು ಇಂದು 69 ಪ್ರಕರಣಗಳು ಮತ್ತೆಯಾಗಿವೆ. ಈ ಮೂಲಕ ರಾಜ್ಯದಲ್ಲಿ ಸೋಂಕಿತರ ಸಂಖ್ಯೆ 2,158ಕ್ಕೆ ಏರಿಕೆಯಾಗಿದೆ.

ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ಕೊರೊನಾ ಸೋಂಕಿಗೆ 55 ವರ್ಷದ ಮಹಿಳೆಯೊಬ್ಬರು ಇಂದು ಬಲಿಯಾಗಿದ್ದಾರೆ. ಈ ಮೂಲಕ ಕೋವಿಡ್‌-19ಗೆ ಬಲಿಯಾದವರ ಸಂಖ್ಯೆ 43ಕ್ಕೆ ಏರಿಕೆಯಾಗಿದೆ. ಇನ್ನು ಇಂದು ಕಂಡಿರುವ 69 ಕೊರೊನಾ ಪಾಸಿಟಿವ್‌ ಕೇಸ್‌ಗಳಲ್ಲಿ 51 ಪ್ರಕರಣ ಮಹಾರಾಷ್ಟ್ರದಿಂದ ಬಂದವರದ್ದಾಗಿದೆ.

ನಿಮ್ಮ ನೆಚ್ಚಿನ ಸುದ್ದಿಗಳಿಗೆ ವಿಜಯಪಥ ಆಪ್‌ ಡೌನ್ಲೋಡ್‌ ಮಾಡಿಕೊಳ್ಳಲು ಇಲ್ಲಿ ಕ್ಲಿಕ್ಕಿಸಿ    https://play.google.com/store/apps/detail

ಇಂದು ಪತ್ತೆಯಾಗಿರುವುದರಲ್ಲಿ ಅತಿಹೆಚ್ಚು ಉಡುಪಿ ಜಿಲ್ಲೆಯಲ್ಲಿ 16, ಯಾದಗಿರಿಯಲ್ಲಿ 15, ಕಲಬುರಗಿಯಲ್ಲಿ 14, ಬೆಂಗಳೂರಿನಲ್ಲಿ 6, ದಕ್ಷಿಣ ಕನ್ನಡ, ಬಳ್ಳಾರಿ ಮತ್ತು ಧಾರವಾಡದಲ್ಲಿತಲಾ 3, ಕೋಲಾರ ಮತ್ತು  ಮಂಡ್ಯದಲ್ಲಿ ತಲಾ 2,  ರಾಮನಗರ, ರಾಮನಗರ, ತುಮಕೂರು, ವಿಜಯಪುರ, ಬೀದರ್‌ನಲ್ಲಿ ತಲಾ ಒಂದೊಂದು ಪ್ರಕರಣ ಪತ್ತೆಯಾಗಿದೆ.

ರಾಜ್ಯದಲ್ಲಿ ಒಟ್ಟಾರೆ 2,158 ಕೊರೊನಾ ಪ್ರಕರಣಗಳು ಪತ್ತೆಯಾಗಿದ್ದು, ಇದುವರೆಗೆ ಮಹಾಮಾರಿಗೆ 43 ಮಂದಿ ಬಲಿಯಾಗಿದ್ದಾರೆ.

ನಿಮ್ಮ ನೆಚ್ಚಿನ ಸುದ್ದಿಗಳಿಗೆ ವಿಜಯಪಥ ಆಪ್‌ ಡೌನ್ಲೋಡ್‌ ಮಾಡಿಕೊಳ್ಳಲು ಇಲ್ಲಿ ಕ್ಲಿಕ್ಕಿಸಿ    https://play.google.com/store/apps/detail

ದೇಶದಲ್ಲಿ 139,049 ಕ್ಕೇರಿದ ಸೋಂಕಿತರ ಸಂಖ್ಯೆ
ಇನ್ನು ದೇಶದಲ್ಲಿ ಈವರೆಗೆ 139,049 ಮಂದಿಗೆ ಸೋಂಕು ಇರುವುದು ದೃಢಪಟ್ಟಿದೆ. 4,024 ಮಂದಿ ಮೃತಪಟ್ಟಿದ್ದಾರೆ. 57,721  ಮಂದಿ ರೋಗಮುಕ್ತರಾಗಿದ್ದಾರೆ. ಪ್ರಪಂಚಾದ್ಯಂತ ಈವರೆಗೆ 5,512,764 ಜನರಲ್ಲಿ ಸೋಂಕು ಇರುವುದನ್ನು ವಿಶ್ವ ಆರೋಗ್ಯ ಸಂಸ್ಥೆ ಖಚಿತಪಡಿಸಿದೆ. ಇನ್ನು 346,867 ಜನರು ಮೃತಪಟ್ಟಿದ್ದಾರೆ 2,309,224 ಮಂದಿ ರೋಗದಿಂದ ಮುಕ್ತಗೊಂಡಿದ್ದಾರೆ. view by country

ನಿಮ್ಮ ನೆಚ್ಚಿನ ಸುದ್ದಿಗಳಿಗೆ ವಿಜಯಪಥ ಆಪ್‌ ಡೌನ್ಲೋಡ್‌ ಮಾಡಿಕೊಳ್ಳಲು ಇಲ್ಲಿ ಕ್ಲಿಕ್ಕಿಸಿ    https://play.google.com/store/apps/detail

mgid.com, 613802, DIRECT, d4c29acad76ce94f
mgid.com, 613802, DIRECT, d4c29acad76ce94f

Leave a Reply

error: Content is protected !!