CrimeNEWSದೇಶ-ವಿದೇಶ

ಪಾಕಿಸ್ತಾನದಲ್ಲಿ ವಿಮಾನ ಅಪಘಾತ: 107 ಮಂದಿ ಸಾವು

ವಿಜಯಪಥ ಸಮಗ್ರ ಸುದ್ದಿ

ಕರಾಚಿ:  ಪಾಕಿಸ್ತಾನದಲ್ಲಿ ವಿಮಾನ ಅಪಘಾತ ಸಂಭವಿಸಿದ್ದು, ಸಿಬ್ಬಂದಿ  ಸೇರಿ  ವಿಮಾನದಲ್ಲಿದ್ದ  107 ಪ್ರಯಾಣಿಕರು ಮೃತಪಟ್ಟಿರುವ ಶಂಕೆ ವ್ಯಕ್ತವಾಗಿದೆ.

ಕರಾಚಿಗೆ ವಿಮಾನ ನಿಲ್ದಾಣದಿಂದಸ್ವಲ್ಪ ದೂರದಲ್ಲಿರುವ ಮಾಲಿರ್‌ನ ಮಾಡೆಲ್ ಕಾಲೋನಿ ಬಳಿಯ ಜಿನ್ನಾ ಗಾರ್ಡ್‌ನ್ ವಸತಿ ಪ್ರದೇಶದಲ್ಲಿ ವಿಮಾನ ಅಪಘಾತಕ್ಕೀಡಾಗಿದೆ . ಕರಾಚಿ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಇಳಿಯುವದಕ್ಕೆ ಕೆಲವೇ ಕ್ಷಣಗಳ ಮುಂಚೆ ಅಪಘಾತಕ್ಕಿಡಾಗಿದ್ದು, ಅವಘಡಕ್ಕೆ ನಿಖರವಾದ ಕಾರಣ ತಿಳಿದುಬಂದಿಲ್ಲ.

ನಿಮ್ಮ ನೆಚ್ಚಿನ ಸುದ್ದಿಗಳಿಗೆ ವಿಜಯಪಥ ಆಪ್ಡೌನ್ಲೋಡ್ಮಾಡಿಕೊಳ್ಳಲು ಇಲ್ಲಿ ಕ್ಲಿಕ್ಕಿಸಿ  https://play.google.com/store/apps/detail

ಲಾಹೋರ್‌ನಿಂದ ಕರಾಚಿಗೆ ಬರುತ್ತಿದ್ದ PIAಗೆ ಸೇರಿದ ಏರ್‌ಬಸ್ A320 ವಿಮಾನವೇ ಅಪಘಾತಕ್ಕೀಡಾಗಿರುವುದು. ವಿಮಾನದಲ್ಲಿ  107 ಮಂದಿ ಪ್ರಯಾಣಿಸುತ್ತಿದ್ದರು ಎಂದು ತಿಳಿದರು ಬಂದಿದೆ.

ಜನವಸತಿ ಪ್ರದೇಶದಲ್ಲಿ ವಿಮಾನ ಅಪಘಾತಕ್ಕೀಡಾಗಿರುವುದಿಂದ ಸಾವು-ನೋವಿನ ಸಂಖ್ಯೆ ಹೆಚ್ಚಳವಾಗಿರುವ ಸಾಧ್ಯತೆ ಇದೆ ಎಂದು ಆತಂಕ ವ್ಯಕ್ತವಾಗಿದೆ.  ಸದ್ಯ ಸ್ಥಳದಲ್ಲಿ ದಟ್ಟ ಹೊಗೆ ಆವರಿಸಿದ್ದು ವಿಷಯ ತಿಳಿದ ಅಗ್ನಿಶಾಮಕ ಸಿಬ್ಬಂದಿ ಸೇರಿ ಪೊಲೀಸರು ಸ್ಥಳಕ್ಕಾಗಮಿಸಿ ಪರಿಶೀಲನೆ ನಡೆಸಿದ್ದಾರೆ.

ನಿಮ್ಮ ನೆಚ್ಚಿನ ಸುದ್ದಿಗಳಿಗೆ ವಿಜಯಪಥ ಆಪ್ಡೌನ್ಲೋಡ್ಮಾಡಿಕೊಳ್ಳಲು ಇಲ್ಲಿ ಕ್ಲಿಕ್ಕಿಸಿ  https://play.google.com/store/apps/detail

 

Leave a Reply