ಮುಂಬೈ: ಕ್ವಾರಂಟೈನ್ ಕೇಂದ್ರದಲ್ಲೂ ಕಾಮುಕರ ಕ್ರೌರ್ಯಮೆರೆದಿದ್ದು, ಕೊರೊನಾ ಸೋಂಕಿತೆಯೊಬ್ಬರ ಮೇಲೆ ಅತ್ಯಾಚಾರವೆಸಗಿರುವ ಘಟನೆ ಮುಂಬೈನಲ್ಲಿ ನಡೆದಿದೆ.
ನವೀ ಮುಂಬೈನ ಪನ್ವೆಲ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಕಾಮುಕ ಕೊರೊನಾ ಸೋಂಕಿನ ನಡುವೆಯೇ ತನ್ನ ಅಟ್ಘಟಹಾಸವನ್ನು ಮೆರೆದಿದ್ದಾನೆ. ಇದರಿಂದ ಕ್ವಾರಂಟೈನ್ ಕೇಂದ್ರದಲ್ಲಿದ್ದ ಸೋಂಕಿತೆ ಅತ್ಯಾಚಾರಕ್ಕೆ ಒಳಗಾಗಿದ್ದಾರೆ. ಈ ಬಗ್ಗೆ ಸಂತ್ರಸ್ಥೆ ಪೊಲೀಸ್ ಠಾಣೆಯಲ್ಲಿ ದೂರು ನೀಡಿದ್ದು, ಪ್ರಕರಣ ದಾಖಲಿಸಿಕೊಂಡಿರುವ ಪನ್ವೆಲ್ ಪೊಲೀಸ್ ಠಾಣೆ ಅಧಿಕಾರಿಗಳು ತನಿಖೆ ನಡೆಸುತ್ತಿದ್ದಾರೆ.
40 ವರ್ಷದ ಮಹಿಳೆಗೆ ಕೋವಿಡ್-19 ಸೋಂಕು ದೃಢವಾಗಿದ್ದ ಹಿನ್ನೆಲೆಯಲ್ಲಿ ಪನ್ವೆಲ್ ನಲ್ಲಿರುವ ಇಂಡಿಯಾ ಬುಲ್ಸ್ ಕ್ವಾರಂಟೈನ್ ಕೇಂದ್ರದಲ್ಲಿಆಕೆಯನ್ನು ಇರಿಸಲಾಗಿತ್ತು. ಈ ವೇಳೆ ಅದೇ ಕೇಂದ್ರದಲ್ಲಿ ಸೋಂಕಿತರ ಸಂಪರ್ಕಕ್ಕೆ ಬಂದಿದ್ದಾತನನ್ನೂ ಇರಿಸಲಾಗಿತ್ತು. ಆತ ಈ ಮಹಿಳೆ ಮೇಲೆ ಅತ್ಯಾಚಾರ ವೆಸಗಿದ್ದಾನೆ. ಎಂದು ಪೊಲೀಸ್ ಅಧಿಕಾರಿ ಅಶೋಕ್ ರಜಪೂತ್ ತಿಳಿಸಿದ್ದಾರೆ.
ಆರೋಪಿಯನ್ನು ಬಂಧಿಸಿಲ್ಲ. ಕಾರಣ ಆತನ ಕೊರೊನಾ ಟೆಸ್ಟ್ ವರದಿ ಇನ್ನು ಬಂದಿಲ್ಲ. ಹೀಗಾಗಿ ಮುಂಜಾಗ್ರತಾ ಕ್ರಮವಾಗಿ ಆತನನ್ನು ಪ್ರತ್ಯೇಕವಾಗಿರಿಸಿ ವರದಿಗಾಗಿ ಕಾಯುತ್ತಿದ್ದೇವೆ. ಅತ್ಯಾಚಾರ ಪ್ರಕರಣ ದಾಖಲಿಸಲಾಗಿದೆ ಎಂದು ಹೇಳಿದ್ದಾರೆ.