NEWSನಮ್ಮಜಿಲ್ಲೆಸಂಸ್ಕೃತಿ

ಚಾಮುಂಡೇಶ್ವರಿ, ನಂಜುಂಡೇಶ್ವರನ ದರ್ಶನ ಪಡೆದ ಸಚಿವ ಎಸ್‍ಟಿಎಸ್

ಚಾಮುಂಡೇಶ್ವರಿ ದರ್ಶನಕ್ಕೆ ಆಷಾಢ ಮಾಸದಲ್ಲಿ ಪ್ರವೇಶ ಬಗ್ಗೆ ಚರ್ಚಿಸಿ ನಿರ್ಧಾರ

ವಿಜಯಪಥ ಸಮಗ್ರ ಸುದ್ದಿ
  • ಕೊರೋನಾ ಮಹಾಮಾರಿಯಿಂದ ನಾಡಿನ ಜನತೆ ಕಾಪಾಡುವಂತೆ ಪ್ರಾರ್ಥನೆ

 ಮೈಸೂರು: ಕೊರೊನಾ ಹಿನ್ನೆಲೆ ಕಳೆದ ಮೂರು ತಿಂಗಳಿನಿಂದ ಲಾಕ್‍ಡೌನ್ ಆಗಿ ಪ್ರವೇಶ ನಿಷೇಧಕ್ಕೊಳಪಟ್ಟಿದ್ದ ದೇವಸ್ಥಾನಗಳು ಸಾರ್ವಜನಿಕ ದರ್ಶನಕ್ಕೆ ಮುಕ್ತವಾದ ಹಿನ್ನೆಲೆಯಲ್ಲಿ ಸಹಕಾರ ಹಾಗೂ ಮೈಸೂರು ಜಿಲ್ಲಾ ಉಸ್ತುವಾರಿ ಸಚಿವ ಎಸ್.ಟಿ.ಸೋಮಶೇಖರ್ ಮೈಸೂರಿನ ಚಾಮುಂಡೇಶ್ವರಿ ದೇವಸ್ಥಾನ ಹಾಗೂ ನಂಜನಗೂಡಿನ ಶ್ರೀ ನಂಜುಂಡೇಶ್ವರ ದೇವಸ್ಥಾನಕ್ಕೆ ಭೇಟಿ ನೀಡಿ ದರ್ಶನ ಪಡೆದರು.

ನಾಡಿನ ಸಮಸ್ತ ಜನತೆಯನ್ನು ಕೊರೊನಾ ಎಂಬ ಮಹಾಮಾರಿಯಿಂದ ದೂರ ಮಾಡುವಂತೆ ತಾಯಿ ಚಾಮುಂಡೇಶ್ವರಿ ಹಾಗೂ ಶ್ರೀ ನಂಜುಂಡೇಶ್ವರನಲ್ಲಿ ಪ್ರಾರ್ಥಿಸುವ ಮೂಲಕ ಸರ್ವರಿಗೂ ಒಳಿತನ್ನು ಮಾಡುವಂತೆ ಕೇಳಿಕೊಂಡರು.

ನಿಮ್ಮ ನೆಚ್ಚಿನ ಸುದ್ದಿಗಳಿಗೆ ವಿಜಯಪಥ ಆಪ್‌ ಡೌನ್ಲೋಡ್‌ ಮಾಡಿಕೊಳ್ಳಲು ಇಲ್ಲಿ ಕ್ಲಿಕ್ಕಿಸಿ    https://play.google.com/store/apps/detail

ಮೈಸೂರು ಜಿಲ್ಲೆಯಲ್ಲಿ ಈಗಾಗಲೇ ಕೊರೊನಾ ನಿಯಂತ್ರಣಕ್ಕೆ ಬಂದಿದೆ. ಆದರೂ ಮುನ್ನೆಚ್ಚರಿಕೆ ಕ್ರಮ ತೆಗೆದುಕೊಳ್ಳಲಾಗಿದೆ. ಹೊರ ರಾಜ್ಯಗಳಿಂದ ಬರುವವರ ಬಗ್ಗೆ ಜಿಲ್ಲಾಡಳಿತ ನಿಗಾ ವಹಿಸಿದೆ. ಪೊಲೀಸರು ಮಫ್ತಿಯಲ್ಲಿದ್ದು ಗಮನಿಸುತ್ತಿದ್ದಾರೆ ಎಂದು ತಿಳಿಸಿದರು.

ಚಾಮುಂಡೇಶ್ವರಿ ತಾಯಿ ದರ್ಶನಕ್ಕೆ ಜನ ಕಾಯುತ್ತಿದ್ದರು. ಆಷಾಢ ಮಾಸದ ಸಂದರ್ಭದಲ್ಲಿ ಏನು ಮಾಡಬಹುದು? ಯಾವ ರೀತಿ ಕ್ರಮಗಳನ್ನು ಕೈಗೊಳ್ಳಬಹುದು? ಎಂಬ ಬಗ್ಗೆ ಜಿಲ್ಲಾಧಿಕಾರಿಗಳು ಹಾಗೂ ಪೊಲೀಸ್ ಉನ್ನತಾಧಿಕಾರಿಗಳ ಜತೆ ಚರ್ಚಿಸಿ ತೀರ್ಮಾನ ಕೈಗೊಳ್ಳಲಾಗುವುದು ಎಂದು ತಿಳಿಸಿದರು.

ನಿಮ್ಮ ನೆಚ್ಚಿನ ಸುದ್ದಿಗಳಿಗೆ ವಿಜಯಪಥ ಆಪ್‌ ಡೌನ್ಲೋಡ್‌ ಮಾಡಿಕೊಳ್ಳಲು ಇಲ್ಲಿ ಕ್ಲಿಕ್ಕಿಸಿ    https://play.google.com/store/apps/detail

ಆಷಾಢ ಮಾಸ ಆಚರಣೆಗೆ ತಾಯಿ ಚಾಮುಂಡೇಶ್ವರಿ ದರ್ಶನ ಪಡೆಯಲು ಒಮ್ಮೆಲೆಗೆ 50 ಸಾವಿರದಿಂದ 1 ಲಕ್ಷ ಮಂದಿ ಬರುವ ಸಾಧ್ಯತೆ ಹಿನ್ನೆಲೆಯಲ್ಲಿ ಸಾಮಾಜಿಕ ಅಂತರ ಕಾಯ್ದುಕೊಳ್ಳುವುದು ಕಷ್ಟವಾಗುತ್ತದೆ. ಹೀಗಾಗಿ ಮುಂದಿನ ದಿನಗಳಲ್ಲಿ ಯಾವ ರೀತಿಯಾಗಿ ಪ್ರವೇಶಕ್ಕೆ ಅನುಮತಿ ಕೊಡಬೇಕು ಎಂಬ ನಿಟ್ಟಿನಲ್ಲಿ ನಿರ್ಧಾರ ಕೈಗೊಳ್ಳಲಾಗುವುದು ಎಂದು ಸಚಿವರು ಸುದ್ದಿಗಾರರಿಗೆ ತಿಳಿಸಿದರು.

ಕಾರ್ಯಕ್ರಮದಲ್ಲಿ ಶಾಸಕರಾದ ಜಿ.ಟಿ.ದೇವೇಗೌಡ, ಎಸ್.ಎ.ರಾಮದಾಸ್, ಎಲ್.ನಾಗೇಂದ್ರ. ಹರ್ಷವರ್ಧನ್, ಜಿಲ್ಲಾಧಿಕಾರಿ ಅಭಿರಾಂ ಜಿ. ಶಂಕರ್, ಜಿಲ್ಲಾ ಪೊಲೀಸ್‌ ವರಿಷ್ಠಾಧಿಕಾರಿ ಸಿ.ಬಿ.ರಿಷ್ಯಂತ್ ಇತರ ಪ್ರಮುಖರು ಹಾಜರಿದ್ದರು.

ನಿಮ್ಮ ನೆಚ್ಚಿನ ಸುದ್ದಿಗಳಿಗೆ ವಿಜಯಪಥ ಆಪ್‌ ಡೌನ್ಲೋಡ್‌ ಮಾಡಿಕೊಳ್ಳಲು ಇಲ್ಲಿ ಕ್ಲಿಕ್ಕಿಸಿ    https://play.google.com/store/apps/detail

Leave a Reply

error: Content is protected !!
LATEST
ಮೈತ್ರಿ ತೆಕ್ಕೆಗೆ ಬನ್ನೂರು ಪುರಸಭೆ: ಜೆಡಿಎಸ್‌ಗೆ ಅಧ್ಯಕ್ಷ ಗದ್ದುಗೆ, ಬಿಜೆಪಿಗೆ ಉಪಾಧ್ಯಕ್ಷ ಗಾದಿ ರಾಜ್ಯದ ಆರು ಪ್ರತ್ಯೇಕ ಸ್ಥಳಗಳಲ್ಲಿ ಅಪಘಾತ: 13 ಮಂದಿ ಸಾವು, ಹಲವರಿಗೆ ಗಾಯ ಯಡಿಯೂರು ಕೆರೆ: ಗಣಪತಿ ವಿಸರ್ಜನಾ ಕಲ್ಯಾಣಿಗೆ ನೀರು ತುಂಬಿಸಿದ ಬಿಬಿಎಂಪಿ ತಂದೆ ನಿಧನರಾದ ದುಃಖದಲ್ಲಿರುವ ನೌಕರನಿಗೆ ರಜೆ ಕೊಡದೆ ಗೈರು ತೋರಿಸಿದ್ದು ಅಲ್ಲದೆ ಕಾರಣ ಕೇಳಿ ನೋಟಿಸ್‌ ಕೊಟ್ಟ ಅಧಿಕಾರಿ... KKRTC ಬಸ್‌-ಶಾಲಾ ಬಸ್‌ ಮುಖಾಮುಖಿ ಡಿಕ್ಕಿ: ಇಬ್ಬರು ಮೃತ- 25ಕ್ಕೂ ಹೆಚ್ಚು ಮಕ್ಕಳಿಗೆ ಗಾಯ KSRTC: 38 ತಿಂಗಳ ವೇತನ ಹೆಚ್ಚಳ ಹಿಂಬಾಕಿಗೆ ಆಗ್ರಹಿಸಿ BMS ಪ್ರತಿಭಟನೆ- ಸರ್ಕಾರದ ವಿರುದ್ಧ ಕಿಡಿ MSRTC: ನೌಕರರ ಮುಷ್ಕರಕ್ಕೆ ಮಣಿದು 6500 ರೂ. ವೇತನ ಹೆಚ್ಚಳಕ್ಕೆ ಒಪ್ಪಿದ ಸರ್ಕಾರ- ಧರಣಿ ವಾಪಸ್‌ MSRTC: ತೀವ್ರಗೊಂಡ ನೌಕರರ ಮುಷ್ಕರ- 11 ಸಂಘಟನೆಗಳ ಒಗ್ಗಟ್ಟು- ನಿಗಮಕ್ಕೆ ನಡುಕ ಚಾಮುಂಡಿಬೆಟ್ಟದಲ್ಲಿ ಧೂಮಪಾನ, ಮದ್ಯಪಾನ, ಗುಟ್ಕಾ ನಿಷೇಧ: ಸಿಎಂ ಘೋಷಣೆ ಪೋಡಿ ಮುಕ್ತ ಅಭಿಯಾನ, ಪೌತಿ ಖಾತೆ ಆಂದೋಲನಕ್ಕೆ ಕ್ರಮ: ಕಂದಾಯ ಸಚಿವ ಕೃಷ್ಣ ಬೈರೇಗೌಡ