NEWSದೇಶ-ವಿದೇಶನಮ್ಮರಾಜ್ಯ

ಬಿಜೆಪಿಯ ಈರಣ್ಣ ಕಡಾಡಿ, ಅಶೋಕ್ ಗಸ್ತಿ ರಾಜ್ಯಸಭಾ ಅಭ್ಯರ್ಥಿಗಳು

ರಾಜ್ಯಸಭಾ ಚುನಾವಣೆ l ಹೊಸ ಮುಖಗಳಿಗೆ ಮಣೆಹಾಕಿದ ಬಿಜೆಪಿ ವರಿಷ್ಠರು

ವಿಜಯಪಥ ಸಮಗ್ರ ಸುದ್ದಿ

ನ್ಯೂಡೆಲ್ಲಿ: ರಾಜ್ಯ ಬಿಜೆಪಿಯಲ್ಲಿನ ಹಲವು ಗೊಂದಲಗಳ ನಡುವೆ ರಾಜ್ಯಸಭೆ ಚುನಾವಣೆಗೆ ಅಭ್ಯರ್ಥಿಗಳನ್ನು ಘೋಷಿಸಲಾಗಿದೆ. ಈರಣ್ಣ ಕಡಾಡಿ ಮತ್ತು ಅಶೋಕ್ ಗಸ್ತಿ ಅವರ ಹೆಸರನ್ನು ಘೋಷಣೆ ಮಾಡಲಾಗಿದ್ದು,  ಈ ಮೂಲಕ ಉತ್ತರ ಕರ್ನಾಟಕ ಮತ್ತು ಹೈದರಾಬಾದ್ ಕರ್ನಾಟಕಕ್ಕೆ ಆದ್ಯತೆ ನೀಡಲಾಗಿದೆ.

ಹಾಲಿ ಸಂಸದ ಪ್ರಭಾಕರ ಕೋರೆ ಮತ್ತು ಉಮೇಶ್ ಕತ್ತಿ ಬದಲಿಗೆ ಈರಣ್ಣ ಕಡಾಡಿ ಹಾಗೂ ಅಶೋಕ್ ಗಸ್ತಿ ಅವರಿಗೆ ರಾಜ್ಯಸಭಾ ಟಿಕೆಟ್ ನೀಡಿ ವರಿಷ್ಠರು ಇಬ್ಬರ ಕಚ್ಚಾಟ ಮೂರನೆಯವರಿಗೆ ಲಾಭ ಎಂಬುದನ್ನು ತೋರಿಸಿಕೊಟ್ಟಿದ್ದಾರೆ.

ನಿಮ್ಮ ನೆಚ್ಚಿನ ಸುದ್ದಿಗಳಿಗೆ ವಿಜಯಪಥ ಆಪ್‌ ಡೌನ್ಲೋಡ್‌ ಮಾಡಿಕೊಳ್ಳಲು ಇಲ್ಲಿ ಕ್ಲಿಕ್ಕಿಸಿ   https://play.google.com/store/apps/detail

ಕತ್ತಿ ಹಾಗೂ ಕೋರೆ ಹೆಸರನ್ನು ರಾಜ್ಯ ಬಿಜೆಪಿ ನಾಯಕರು ಕೇಂದ್ರಕ್ಕೆ ಶಿಫಾರಸು ಮಾಡಿದ್ದರು. ಚುನಾವಣೆಯಲ್ಲಿ ಬಿಜೆಪಿಯ ಮೂರನೇ ಅಭ್ಯರ್ಥಿ ಇರುವುದಿಲ್ಲ.

ಇನ್ನು ಬಿಜೆಪಿಯ ರಾಜ್ಯ ರಾಜಕಾರಣದಲ್ಲಿ ಹಲವು ದಿನಗಳಿಂದ ನಡೆಯುತ್ತಿದ್ದ ಶೀತಲ ಸಮರಕ್ಕೆ ಇಂದು ಬಿಜೆಪಿಯ ರಾಷ್ಟ್ರೀಯ ವರಿಷ್ಠರು ಈ ಇಬ್ಬರು ಅಭ್ಯರ್ಥಿಗಳ ಹೆಸರನ್ನು ಘೋಷಣೆ ಮಾಡುವ ಮೂಲಕ ತಮ್ಮ ನಿಲುವನ್ನು ಪ್ರಕಟಿಸಿದ್ದಾರೆ. ಈ ಮೂಲಕ ರಾಜ್ಯದಲ್ಲಿ ಎದಿದ್ದ ಬಿರುಗಾಳಿಯನ್ನು ಶಮನಗೊಳಿಸುವಲ್ಲಿ ವರಿಷ್ಠರ ಪಾತ್ರ ಹಿರಿದಾಗಿದೆ.

ಆದರೆ ರಾಜ್ಯ ಬಿಜೆಪಿಯೊಳಗೆ ಇನ್ನೂ ಬೂದಿ ಮುಚ್ಚಿದ ಕೆಂಡದಂತ್ತಿರುವ ಹಲವು ಶಾಸಕರ ಭಿನ್ನಾಭಿಪ್ರಾಯ ಇದರಿಂದ ಭುಗಿಲೇಳಲಿದೆಯೇ ಎಂಬ ಪ್ರಶ್ನೆಗೆ ವರಿಷ್ಠರೆ ಉತ್ತರ ಕೊಡಬೇಕಿದೆ.

ನಿಮ್ಮ ನೆಚ್ಚಿನ ಸುದ್ದಿಗಳಿಗೆ ವಿಜಯಪಥ ಆಪ್‌ ಡೌನ್ಲೋಡ್‌ ಮಾಡಿಕೊಳ್ಳಲು ಇಲ್ಲಿ ಕ್ಲಿಕ್ಕಿಸಿ   https://play.google.com/store/apps/detail

Leave a Reply

error: Content is protected !!
LATEST
ಡಿ.9ರಿಂದ ವಿಧಾನಮಂಡಳ ಅಧಿವೇಶನ, ಉಕ ಪ್ರಗತಿಗೆ ಒತ್ತು: ಸ್ಪೀಕರ್ ಖಾದರ್ ವಿವಿಧ ಬೇಡಿಕೆಗಳ  ಈಡೇರಿಸಿ ಆಗ್ರಹಿಸಿ ಇಪಿಎಸ್ ಪಿಂಚಣಿದಾರರ ಪ್ರತಿಭಟನೆ: ಅಧಿಕಾರಿಗಳ ವಿರುದ್ಧ ಆಕ್ರೋಶ ಸರ್ಕಾರದ ತಾತ್ಸಾರದಿಂದಾಗಿ ಆರ್ಥಿಕವಾಗಿ ಸಬಲವಾಗಿದ್ದರೂ ಸಂಕಷ್ಟದ ಪರಿಸ್ಥಿತಿ ತಲುಪಿದ KSRTC ಸಾರಿಗೆ ನಿಗಮಗಳು! KSRTC ಚಾಲನಾ ಸಿಬ್ಬಂದಿ ಕಾರ್ಮಿಕರಲ್ಲ ನೌಕರರು - ಹುದ್ದೆ ಅರಿವಿಲ್ಲದವರು ಕಾರ್ಮಿಕ ಪದ ಬಳಸುತ್ತಿದ್ದಾರೆ..! ಸಾರಿಗೆ ಸಿಬ್ಬಂದಿಗಳಿಗೆ ಮೋಸ ಮಾಡಿರುವ ನಿಮಗೆ ಯಾವ ನೈತಿಕತೆ ಇದೆ: ಬಿಜೆಪಿಗರ ತರಾಟೆಗೆ ತೆಗೆದುಕೊಂಡ ರಾಮಲಿಂಗಾರೆಡ್ಡಿ ನ.27 "ನಿಧಿ ಆಪ್ಕೆ ನಿಕಟ್" ಇಪಿಎಸ್ ಪಿಂಚಣಿದಾರರ ಪ್ರತಿಭಟನೆ ಬೆಂಗ್ರಾ: ವಿವೇಕಾನಂದರ ಜನ್ಮ ದಿನ ಅಂಗವಾಗಿ ನ.30ರಂದು ಯುವ ಜನೋತ್ಸವ ಕಾಂಗ್ರೆಸ್‌ ತನ್ನ ಪ್ರಣಾಳಿಕೆಯಲ್ಲೇ ಸರಿ ಸಮಾನ ವೇತನ ಘೋಷಣೆ ಮಾಡಿದೆ: ಸರ್ಕಾರ ಕೊಡಲು ಸಿದ್ಧವಿದ್ದರೂ ಕ್ರಿಯಾ ಸಮಿತಿ ಕ್... ಸರಿಸಮಾನ ವೇತನದ ನಿರ್ಧಾರ: ನಮಗೆ ಸಾರಿಗೆ ಸಚಿವರು ಕೊಟ್ಟ ಭರವಸೆ ಶೀಘ್ರ ಈಡೇರಲಿದೆ ಎಂದ ಅಧಿಕಾರಿ, ಮೇಲ್ವಿಚಾರಕರ ಮುಖಂಡ... KSRTC: ಸ್ವಯಂ ಘೋಷಿತ ಕಾರ್ಮಿಕ ನಾಯಕರ "ಚೌಕಾಶಿ" ವೇತನ ಒಪ್ಪಂದಕ್ಕೆ ಇತೀಶ್ರೀ ಹಾಡಿ - ಎಂಡಿಗೆ ಮನವಿ