NEWSನಮ್ಮಜಿಲ್ಲೆನಮ್ಮರಾಜ್ಯ

ನ್ಯಾಯಾಂಗದ ಆದೇಶ ಉಲ್ಲಂಘಿಸಿ ರೈತರ ಮೇಲೆ ದೌರ್ಜನ್ಯ, ಎಎಪಿಯಿಂದ ನ.4 ರಂದು ಬೃಹತ್ ಪ್ರತಿಭಟನಾ ರ‍್ಯಾಲಿ

ವಿಜಯಪಥ ಸಮಗ್ರ ಸುದ್ದಿ

ಪಿರಿಯಾಪಟ್ಟಣ: ತಾಲೂಕಿನ ದಂಡಾಧಿಕಾರಿ ಕೆ.ಚಂದ್ರಮೌಳಿ, ರೆವೆನ್ಯೂ ಇನ್ಸ್ ಪೆಕ್ಟರ್, ಸರ್ವೇಯರ್, ಪೊಲೀಸ್ ಇಲಾಖೆ ಹಾಗೂ ಗ್ರಾಮ ಲೆಕ್ಕಾಧಿಕಾರಿಗಳು ನ್ಯಾಯಾಲಯದ ಆದೇಶ ಉಲ್ಲಂಘನೆ ಮಾಡಿ ಅಸಹಾಯಕ ರೈತರ ಹಾಗೂ ಬಡ ಕುಟುಂಬಗಳ ಮೇಲೆ ದೌರ್ಜನ್ಯ ಮೆರೆದಿದ್ದಾರೆ ಎಂದು ಆಮ್ ಆದ್ಮಿ ಪಕ್ಷದ ಹಿಂದುಳಿದ ವರ್ಗಗಳ ರಾಜ್ಯಾಧ್ಯಕ್ಷ ರಾಜಶೇಖರ್ ದೊಡ್ಡಣ್ಣ ಮೌರ್ಯ ಆರೋಪಿಸಿದರು.

ಈ ಬಗ್ಗೆ ಪಟ್ಟಣದಲ್ಲಿ ಮಾತನಾಡಿದ ಅವರು ತಾಲೂಕಿನ ಬೆಮ್ಮತ್ತಿ ಗ್ರಾಮದ ಸರ್ವೆ ನಂಬರ್ 126 ರಲ್ಲಿ ಬೈರಾ, ಮತ್ತು ಮಹದೇವ್ ಎಂಬುವ ರೈತರು ಉಳುಮೆ ಮಾಡಿಕೊಡು ಬರುತ್ತಿದ್ದಾರೆ ಹಾಗೂ ಅನೇಕ ಅಸಸ್ಮೆಂಟ್ ಗಳಲ್ಲಿ ಬಡವರು ಅಸಹಾಯಕರು ಮನೆ ನಿರ್ಮಿಸಿಕೊಂಡು ವಾಸಿಸುತ್ತ ಬರುತ್ತಿದ್ದು, ಇದು ಹಿಡುವಳಿ ಭೂಮಿಯಾದ ಕಾರಣ ಮಾಲೀಕತ್ವದ ವಿಚಾರಕ್ಕೆ ಸಂಬಂಧಿಸಿದಂತೆ ನ್ಯಾಯಾಲಯದಲ್ಲಿ ವ್ಯಾಜ್ಯ ನಡೆಯುತ್ತಿರುವ ಸಂದರ್ಭದಲ್ಲಿ ಭೂಮಾಫಿಯಾ ಹಿನ್ನೆಲೆಯುಳ್ಳ ಬಲಾಢ್ಯರು ಸ್ಥಳೀಯ ರಾಜಕೀಯ ಹಾಗೂ ಅಧಿಕಾರಿಗಳ ಜೊತೆಗೂಡಿ ಅಕ್ರಮ ಖಾತೆ ಮಾಡಿಸಿಕೊಂಡು ಸ್ಥಳೀಯ ರೈತರು ಹಾಗೂ ಬಡ ಕುಟುಂಬಗಳ ಮೇಲೆ ದೌರ್ಜನ್ಯ ಎಸಗಿದ್ದಾರೆ ಎಂದು ಆರೋಪಿಸಿದರು.

ಇನ್ನು ಇರುವ ಮನೆಗಳನ್ನು ನೆಲಸಮ ಮಾಡಿ, ಭೂಮಿಯ ವ್ಯಾಜ್ಯ ನ್ಯಾಯಾಲಯದಲ್ಲಿರುವಾಗ ತಹಸೀಲ್ದಾರ್ ಕೆ.ಚಂದ್ರಮೌಳಿ ಹಾಗೂ ಪೊಲೀಸ್ ಇಲಾಖೆಯವರು ರೈತರ ಮೇಲೆ ದಬ್ಬಾಳಿಕೆ ನಡೆಸಿ ಅವರನ್ನು ಭೂಮಿಯಿಂದ ಹೊರದಬ್ಬಿ ದೌರ್ಜನ್ಯ ಮೆರೆದಿದ್ದಾರೆ.

ಈ ಅನ್ಯಾಯದ ವಿರುದ್ಧ ಪ್ರತಿಭಟನೆ ನಡೆಸಲು ಪೊಲೀಸನ್ನು ಅನುಮತಿ ಕೇಳಿದಾಗ ಪ್ರತಿಭಟನಾ ಮೆರವಣಿಗೆಗೆ ಅವಕಾಶ ನೀಡುವುದಿಲ್ಲ, ಮಿತಿಮೀರಿ ಪ್ರತಿಭಟನೆಗೆ ಮುಂದಾದರೆ ಜೈಲುಪಾಲಾಗುವ ಬೆದರಿಕೆ ಒಡ್ಡುತ್ತಿದ್ದಾರೆ ಎಂದು ಆರೋಪಿಸಿದ ಅವರು, ನ.4ರ ಶುಕ್ರವಾರ ಪಟ್ಟಣದ ಬಿ.ಎಂ.ರಸ್ತೆಯ ಉಪ್ಪಾರಗೇರಿಯಿಂದ ತಾಲೂಕು ಆಡಳಿತ ಭವನದಲ್ಲಿರುವ ತಹಸೀಲ್ದಾರ್ ಕಚೇರಿಯ ವರೆಗೆ ರೈತರ ಹಾಗೂ ಅಸಹಾಯಕರ ಮೆಲೆ ದೌರ್ಜ್ಯನ್ಯ ಮೆರೆಯುತ್ತಿರುವ ತಾಲೂಕು ಆಡಳಿತ ಹಾಗೂ ಪೊಲೀಸ್ ಅಧಿಕಾರಿಗಳ ವಿರುದ್ಧ ಪ್ರತಿಭಟನೆ ನಡೆಸುವುದಾಗಿ ತಿಳಿಸಿದ್ದಾರೆ.

ಈ ಸಂದರ್ಭದಲ್ಲಿ ರೈತರಾದ ನಾಗೇಂದ್ರ, ಭೈರಯ್ಯ, ಸುಶೀಲಾ, ಶೃತಿ, ರೇಣುಕುಮಾರ್, ಗೋವಿಂದರಾಜ್, ತಿಮ್ಮೇಗೌಡ, ಬಸವರಾಜು, ಲಕ್ಷ್ಮಿ, ಜಯಮ್ಮ, ಜ್ಯೋತಿ, ರೇಣುಕಾ, ಹೊನ್ನಮ್ಮ ಸೇರಿದಂತೆ ಮತ್ತಿತರರು ಉಪಸ್ಥಿತರಿದ್ದರು.

Leave a Reply

error: Content is protected !!
LATEST
KSRTC: ಮೊಬೈಲ್‌ನಲ್ಲಿ ಮಾತನಾಡಿಕೊಂಡು ಬಸ್‌ ಚಾಲನೆ - ಚಾಲಕನ ನಿರ್ಲಕ್ಷ್ಯಕ್ಕೆ ಕಿಡಿ KSRTC ಕೋಲಾರ: ನೌಕರರ ಪರ ನಿಲ್ಲಬೇಕಾದ ಕಾರ್ಮಿಕ ಕಲ್ಯಾಣ ಅಧಿಕಾರಿಯೇ ವಿರುದ್ಧ ನಿಂತರೆ ಎಲ್ಲಿ ಸಿಗಲಿದೆ ನ್ಯಾಯ? ಮೈಸೂರು: ಸಾಲದ 1ಕಂತು ಕಟ್ಟಿಲ್ಲದ್ದಕ್ಕೆ ಟ್ರ್ಯಾಕ್ಟರ್ ಜಪ್ತಿ ಮಾರಾಟ - ಕೋಟಕ್ ಮಹೇಂದ್ರ ಬ್ಯಾಂಕ್‌ಗೆ ರೈತರ ಮುತ್ತಿಗೆ ಕೆಟ್ಟು ನಿಂತಿದ್ದ KSRTC ಬಸ್‌ ರಿಪೇರಿ ವೇಳೆ ಕಾರು ಡಿಕ್ಕಿ-ಕಂಡಕ್ಟರ್‌  ಮೃತ BMTC: ಸ್ಕೂಟರ್​​ಗೆ ಸೈಡ್​ ಬಿಡಲಿಲ್ಲ ಎಂದು ಬಸ್‌ ಚಾಲಕನ ಮೇಲೆ ಕಿಡಿಗೇಡಿಯಿಂದ ಹಲ್ಲೆ- ಇದು 9ನೇ ಪ್ರಕರಣ- ಆತಂಕದಲ್ಲಿ ... KSRTC ಬಸ್‌ನಲ್ಲಿ ₹70 ಸಾವಿರ ಮೌಲ್ಯದ ತಂಬಾಕು ಸಾಗಿಸಿದ ಚನ್ನಪಟ್ಟಣ ಘಟಕದ ಕಂಡಕ್ಟರ್‌ ತಮಿಳುನಾಡಿನಲ್ಲಿ ಬಂಧನ KKRTC ಕೊಪ್ಪಳ ಘಟಕಕ್ಕೆ  RTO ಅಧಿಕಾರಿಗಳ ತಂಡ ಭೇಟಿ: ನೌಕರರಿಗೆ ವಾಯುಮಾಲಿನ್ಯ ದುಷ್ಪರಿಣಾಮಗಳ ಬಗ್ಗೆ ಅರಿವು ಗಂಭೀರ ಸ್ವರೂಪ ಪಡೆಯುತ್ತಿದೆ ದೆಹಲಿ ರೈತರ ಹೋರಾಟ: ನ.26ರಿಂದ ಉಪವಾಸ ಸತ್ಯಾಗ್ರಹ 87ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನ ಸಾಗರದಂತೆ ಬನ್ನಿ: ಮೀರಾ ಶಿವಲಿಂಗಯ್ಯ ಕರೆ SC, ST ಅಲೆಮಾರಿ ಸಮುದಾಯಗಳ ಯೋಜನೆಗಳು ಸದ್ಬಳಕೆ ಆಗಬೇಕು: ಡಿಸಿ ಶಿವಶಂಕರ