Please assign a menu to the primary menu location under menu

CrimeNEWSನಮ್ಮರಾಜ್ಯ

ಮಹಿಳೆಯರ ಮೇಲೆ ದೌರ್ಜನ್ಯ: ಜೆಡಿಎಸ್‌ನಿಂದ ಸಂಸದ ಪ್ರಜ್ವಲ್‌ ರೇವಣ್ಣ ಅಮಾನತು

ವಿಜಯಪಥ ಸಮಗ್ರ ಸುದ್ದಿ

ಹುಬ್ಬಳ್ಳಿ: ಸಂಸದ ಪ್ರಜ್ವಲ್‌ ರೇವಣ್ಣ ಅವರನ್ನು ಜೆಡಿಎಸ್‌ನಿಂದ ಅಮಾನತು ಮಾಡಿ ಪಕ್ಷದ ಮಹಾ ಪ್ರಧಾನ ಕಾರ್ಯದರ್ಶಿ (Secretary General) ಕೆ.ಆರ್‌.ಶಿವಕುಮಾರ್‌ ಆದೇಶ ಹೊರಡಿಸಿದ್ದಾರೆ.

ಹುಬ್ಬಳ್ಳಿಯಲ್ಲಿ ಇಂದು ನಡೆದ ಪಕ್ಷದ ಕೋರ್‌ ಕಮಿಟಿ ಸಭೆ ಬಳಿಕ ಮಾಜಿ ಮುಖ್ಯಮಂತ್ರಿ ಕುಮಾರಸ್ವಾಮಿ ನೇತೃತ್ವದಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ಎಸ್‌ಐಟಿ ತನಿಖೆಯ ವರದಿ ಬರುವವರೆಗೆ ಪಕ್ಷದಿಂದ ಅಮಾನತು ಮಾಡಲಾಗುತ್ತದೆ. ಒಂದು ವೇಳೆ ಎಸ್‌ಐಟಿ ತನಿಖೆಯಲ್ಲಿ ಪ್ರಜ್ವಲ್‌ ರೇವಣ್ಣ ತಪ್ಪಿತಸ್ಥ ಎಂದು ಸಾಬೀತಾದರೆ ಶಾಶ್ವತವಾಗಿ ಅಮಾನತು ಮಾಡಲಾಗುತ್ತಿದೆ ಎಂದು ತಿಳಿಸಿದರು.

ಪ್ರಜ್ವಲ್ ಮೇಲಿನ ಎಸ್‌ಐಟಿ ತನಿಖೆಯನ್ನು ಸ್ವಾಗತ ಮಾಡಿದ್ದೇವೆ. ತನಿಖೆಗೆ ಸಂಪೂರ್ಣ ಸಹಕಾರ ನೀಡಲು ಕಮಿಟಿಯಲ್ಲಿ ತೀರ್ಮಾನವಾಗಿದೆ. ಪಕ್ಷದಿಂದ ಅಮಾನತು ಮಾಡಲು ದೇವೇಗೌಡರಿಗೆ ಶಿಫಾರಸು ಮಾಡಲಾಗಿತ್ತು. ಅವರು ತಕ್ಷಣದಿದಲೇ ಜಾರಿಗೆ ಬರುವಂತೆ ಅಮಾನತು ಮಾಡಲು ಸೂಚನೆ ನೀಡಿದ್ದರು ಎಂದು ತಿಳಿಸಿದರು.

ಇನ್ನು ಎಷ್ಟು ದಿನ‌ ಅಂತ ಇಲ್ಲ. ನಾನು ರಣಹೇಡಿ ಅಲ್ಲ. ಪ್ರತಿಭಟನೆ ಮಾಡಿ ನಮ್ಮನ್ನು ಹೆದರಿಸಿದ್ರೆ, ನಾನು ನಮ್ಮ ಕಾರ್ಯಕರ್ತರಿಗೆ ಕರೆ ಕೊಟ್ಟ್ರೆ ನಾಳೆ ನೀವು ಬೀದಿಯಲ್ಲಿ ಓಡಾಡೋಕೆ ಆಗಲ್ಲ ಎಂದು ಇದೇ ವೇಳೆ ಮಾಜಿ ಸಿಎಂ ಎಚ್‌ಡಿಕೆ ವಿರೋದಿಗಳಿಗೆ ಎಚ್ಚರಿಕೆ ಸಂದೇಶವನ್ನು ರವಾನಿಸಿದರು.

ಯಾವ ಕುಟುಂಬಕ್ಕೂ ಅನ್ಯಾಯ ಆಗಬಾರದು. ಮಹಿಳೆಯರ ಪರ ನಮ್ಮ ಪಕ್ಷವಿದೆ. ಚುನಾವಣೆ ಸಮೀಪದಲ್ಲಿ ಪೆನ್‌ ಡ್ರೈವ್ ಬಿಡುಗಡೆ ಮಾಡಲಾಗಿದೆ. ಮಹಿಳಾ ಆಯೋಗದ ವರದಿ ಮೇಲೆ ಸರ್ಕಾರ ತೀರ್ಮಾನ ತೆಗೆದುಕೊಂಡಿದೆ ಎಂದರು.

ಅಮಾನತು ಆದೇಶದಲ್ಲಿ ಏನಿದೆ: ಹಾಸನ ಲೋಕಸಭಾ ಕ್ಷೇತ್ರದ ಸದಸ್ಯರಾದ ಪ್ರಜ್ವಲ್ ರೇವಣ್ಣನವರು ಮಹಿಳೆಯರ ಮೇಲೆ ದೌರ್ಜನ್ಯ ಎಸಗಿದ್ದಾರೆ ಎನ್ನಲಾದ ವಿಡಿಯೋಗಳು ಸಾಮಾಜಿಕ ಜಾಲತಾಣ ಮತ್ತು ಮಾಧ್ಯಮಗಳಲ್ಲಿ ವ್ಯಾಪಕವಾಗಿ ಹರಿದಾಡುತ್ತಿದ್ದು, ಪಕ್ಷದ ಘನತೆ ಮತ್ತು ಗೌರವಗಳಿಗೆ ಹಾಗೂ ಮುಖಂಡತ್ವಕ್ಕೆ ಸಾಕಷ್ಟು ಧಕ್ಕೆ ಉಂಟಾಗಿರುತ್ತದೆ.

ಮುಂದುವರಿದು, ರಾಜ್ಯದಲ್ಲಿನ ಪ್ರಸ್ತುತ ಕಾಂಗ್ರೆಸ್ ಸರ್ಕಾರ ಮಹಿಳೆಯರ ಮೇಲೆ ಎಸಗಿದೆ ಎಂದು ಹೇಳಲಾಗಿರುವ ಚಿತ್ರಗಳು ಮತ್ತು ವಿಡಿಯೋಗಳ ಬಗ್ಗೆ ತನಿಖೆ ನಡೆಸಲು ಒಂದು ವಿಶೇಷ ತನಿಖಾದಳ (Special Investigation Team-SIT)ವನ್ನು ರಚಿಸಿದ್ದು ಈ ತನಿಖಾದಳ ಈಗಾಗಲೇ ತನ್ನ ಕಾರ್ಯಗಳನ್ನು ಪ್ರಾರಂಭಿಸಿದೆ.

ಈ ಹಿನ್ನೆಲೆಯಲ್ಲಿ ಜನತಾದಳ (ಜಾತ್ಯತೀತ) ಪಕ್ಷದ ಸಂವಿಧಾನ ಮತ್ತು ನಿಯಮಾವಳಿಗಳಡಿಯಲ್ಲಿ Article XXII-Breach of Discipline-4 ಹಾಗೂ Punishment-60 ಲೋಕಸಭಾ ಕ್ಷೇತ್ರದ ಸದಸ್ಯ ಪ್ರಜ್ವಲ್ ರೇವಣ್ಣ ಅವರನ್ನು ತತ್‌ಕ್ಷಣದಿಂದ ಜಾರಿಗೆ ಬರುವಂತೆ ಪಕ್ಷದಿಂದ ಅಮಾನತುಗೊಳಿಸಲಾಗಿದೆ.

ಇದು ರಾಷ್ಟ್ರೀಯ ಅಧ್ಯಕ್ಷರ ಅನುಮೋದನೆಯಂತೆ ಅಮಾನತು ಮಾಡಲಾಗಿದೆ ಎಂದು ಮಹಾ ಪ್ರಧಾನಕಾರ್ಯದರ್ಶಿ ಕೆ.ಆರ್. ಶಿವಕುಮಾರ್ ಆದೇಶ ಪ್ರತಿಯಲ್ಲಿ ವಿವರಿಸಿದ್ದಾರೆ.

Leave a Reply

error: Content is protected !!
LATEST
NWKRTC: ಹುಬ್ಬಳ್ಳಿ-ಧಾರವಾಡ ಹೈಕೋರ್ಟ್‌ ನಡುವೆ ಹೊಸ ಬಸ್‌ಗಳ ಸಂಚಾರ- ವಕೀಲರ ಮನವಿ ಸ್ಪಂದಿಸಿದ ಅಧಿಕಾರಿಗಳು ಡಿ.1ರಂದು ಲಾಲ್‌ಬಾಗ್‌ನಲ್ಲಿ ಇಪಿಎಸ್ ಪಿಂಚಿಣಿದಾರರ 83ನೇ ತಿಂಗಳ ಸಭೆ ಸಾರಿಗೆ ನೌಕರರಿಗೆ ಪ್ರಣಾಳಿಕೆಯಲ್ಲಿ ಕೊಟ್ಟ ಭರವಸೆ ಅನುಷ್ಠಾನಗೊಳಿಸಿ : ಸರ್ಕಾರಕ್ಕೆ ಬೈರಣ್ಣ ಒತ್ತಾಯ KSRTC: ಸಮಸ್ತ 4ನಿಗಮಗಳ ಅಧಿಕಾರಿಗಳು-ನೌಕರರು ಇಟ್ಟಿರುವ ಬೇಡಿಕೆಗಳ ಈಡೇರಿಸಿಕೊಳ್ಳುವುದು ಅಸಾಧ್ಯವೆ ಅಲ್ಲ! ಡಿ.9ರಿಂದ ವಿಧಾನಮಂಡಳ ಅಧಿವೇಶನ, ಉಕ ಪ್ರಗತಿಗೆ ಒತ್ತು: ಸ್ಪೀಕರ್ ಖಾದರ್ ವಿವಿಧ ಬೇಡಿಕೆಗಳ  ಈಡೇರಿಸಿ ಆಗ್ರಹಿಸಿ ಇಪಿಎಸ್ ಪಿಂಚಣಿದಾರರ ಪ್ರತಿಭಟನೆ: ಅಧಿಕಾರಿಗಳ ವಿರುದ್ಧ ಆಕ್ರೋಶ ಸರ್ಕಾರದ ತಾತ್ಸಾರದಿಂದಾಗಿ ಆರ್ಥಿಕವಾಗಿ ಸಬಲವಾಗಿದ್ದರೂ ಸಂಕಷ್ಟದ ಪರಿಸ್ಥಿತಿ ತಲುಪಿದ KSRTC ಸಾರಿಗೆ ನಿಗಮಗಳು! KSRTC ಚಾಲನಾ ಸಿಬ್ಬಂದಿ ಕಾರ್ಮಿಕರಲ್ಲ ನೌಕರರು - ಹುದ್ದೆ ಅರಿವಿಲ್ಲದವರು ಕಾರ್ಮಿಕ ಪದ ಬಳಸುತ್ತಿದ್ದಾರೆ..! ಸಾರಿಗೆ ಸಿಬ್ಬಂದಿಗಳಿಗೆ ಮೋಸ ಮಾಡಿರುವ ನಿಮಗೆ ಯಾವ ನೈತಿಕತೆ ಇದೆ: ಬಿಜೆಪಿಗರ ತರಾಟೆಗೆ ತೆಗೆದುಕೊಂಡ ರಾಮಲಿಂಗಾರೆಡ್ಡಿ ನ.27 "ನಿಧಿ ಆಪ್ಕೆ ನಿಕಟ್" ಇಪಿಎಸ್ ಪಿಂಚಣಿದಾರರ ಪ್ರತಿಭಟನೆ