Please assign a menu to the primary menu location under menu

NEWSನಮ್ಮಜಿಲ್ಲೆಸಂಸ್ಕೃತಿ

ವಿಶ್ವಕರ್ಮ ಸಮುದಾಯ ಮುಂಚೂಣಿಗೆ ಬರಬೇಕು : ಮಾಜಿ ಮೇಯರ್‌ ಸಂದೇಶ್ ಸ್ವಾಮಿ

ವಿಜಯಪಥ ಸಮಗ್ರ ಸುದ್ದಿ

ಮೈಸೂರು: ವಿಶ್ವ ಸೃಷ್ಟಿಕರ್ತರು ವಿಶ್ವಕರ್ಮರು, ಅವರ ಜಯಂತಿ ವಿಶ್ವಕರ್ಮ ಸಮುದಾಯಕ್ಕೆ ಮಾತ್ರ ಸೀಮಿತವಾಗದೆ ಸಮಾಜದ ಎಲ್ಲರೂ ಆಚರಿಸುವ ಜಯಂತಿಯಾಗಬೇಕು ಎಂದು ಮಾಜಿ ಮೇಯರ್‌ ಸಂದೇಶ್ ಸ್ವಾಮಿ ಹೇಳಿದ್ದಾರೆ.

ಇರ್ವಿನ್ ರಸ್ತೆಯ ಪಂಚಮುಖಿ ಆಂಜನೇಯಸ್ವಾಮಿ ದೇವಸ್ಥಾನದ ಆವರಣದಿಂದ ಜೀವಧಾರ ರಕ್ತನಿಧಿ ಕೇಂದ್ರ ಹಾಗೂ ದೇವರಾಜ ಮೊಹಲ್ಲಾ ನಾಗರಿಕ ವೇದಿಕೆ ಆಯೋಜಿಸಿದ್ದ ವಿಶ್ವಕರ್ಮ ಜಯಂತಿ ಅಂಗವಾಗಿ 35ವರ್ಷಗಳಿಂದ ಶಿಲ್ಪ ಕಲೆಗಳನ್ನು ಉಳಿಸಿ ಬೆಳೆಸುತ್ತಿರುವ ವಿವಿಧ ಕ್ಷೇತ್ರದ ಹಿರಿಯ ಶಿಲ್ಪಿಗಳನ್ನು ಸನ್ಮಾನಿಸಿ ಮಾತನಾಡಿದರು.

ವಿಶ್ವಕರ್ಮ ಸಮುದಾಯಕ್ಕೆ ಶಿಕ್ಷಣ ಹಾಗೂ ಹೊಸ ತಂತ್ರಜ್ಞಾನ ತರಬೇತಿಯ ಅಗತ್ಯವಿದೆ. ಈ ನಿಟ್ಟಿನಲ್ಲಿ ಸಮುದಾಯಕ್ಕೆ ಸರ್ಕಾರ ನೆರವು ನೀಡಬೇಕು. ಸರ್ಕಾರ ಶಿಲ್ಪಿಗಳನ್ನು ಗುರುತಿಸಿ ವಿಶೇಷ ಅನುದಾನ ನೀಡಲು ಮುಂದಾಗಬೇಕು ಎಂದರು.

ಇನ್ನು ಸಮುದಾಯದ ಜನರನ್ನು ಸಮಾಜದ ಮುಂಚೂಣಿಗೆ ತರುವುದರಲ್ಲಿ ಸರ್ಕಾರ ಮುಂದಾಗಬೇಕು. ಇಡೀ ದೇಶದಲ್ಲಿ ಕರ್ನಾಟಕದಲ್ಲಿ ಅತಿ ಹೆಚ್ಚು ಶಿಲ್ಪಿಗಳು ಇದ್ದು ಅವರು ಮಾಡಿರುವಂತಹ ಸೇವೆಗೆ ಹಂಪೆ, ಬೇಲೂರು, ಹಳೇಬೀಡು, ಶ್ರವಣಬೆಳಗೊಳ ಇಂತಹ ಅಪರೂಪದ ಕೆತ್ತನೆಗಳೆ ಸಾಕ್ಷಿಯಾಗಿವೆ ಎಂದು ಹೇಳಿದರು.

ಇತ್ತೀಚಿನ ದಿನಗಳಲ್ಲಿ ಆದಿಗುರು ಶಂಕರಾಚಾರ್ಯರು ಹಾಗೂ ನೇತಾಜಿ ಸುಭಾಷ್ ಚಂದ್ರ ಬೋಸ್ ಅದ್ಭುತ ಕೆತ್ತನೆಯನ್ನು ಮಾಡಿರುವವರು ನಮ್ಮ ಮೈಸೂರಿನ ಅರುಣ್ ಯೋಗಿ ಅವರು ಎಂದು ಹೇಳಿಕೊಳ್ಳುವುದಕ್ಕೆ ಹೆಮ್ಮೆಯಾಗುತ್ತದೆ. ನಮ್ಮ ಸಂಸ್ಥಾನದ ಅಂದಿನ ಮಹಾರಾಜರ ಆಸ್ಥಾನದಲ್ಲಿ ಶಿಲ್ಪಿಗಳನ್ನು ಗುರುತಿಸಿ ವಿಶೇಷ ಸ್ಥಾನಮಾನಗಳನ್ನು ನೀಡಿದ್ದರು ಎಂದರು.

ಈಗಿನ ಸರ್ಕಾರ ಸಹ ಕೂಡ ಇಂತಹ ಶಿಲ್ಪಿಗಳನ್ನು ಗುರುತಿಸಿ ವಿಶೇಷ ಸ್ಥಾನಮಾನ ಹಾಗೂ ಅನುದಾನಗಳನ್ನು ನೀಡಿ ಸಮುದಾಯವನ್ನು ಮುಂಚೂಣಿಗೆ ತರಬೇಕೆಂದು ಮನವಿ ಮಾಡಿದರು.

ಹಿರಿಯ ಶಿಲ್ಪಿಗಳಾದ ಎಂ.ಎಸ್ ಸೋಮಾಚಾರ್, ಎಸ್. ಎನ್. ಕೇಶವಮೂರ್ತಿ, ಮಂಜಾಚಾರ್, ಸಿದ್ದಪ್ಪ, ರವಿಶಂಕರ್ ,ಅನಿಲ್ ಕುಮಾರ್, ನಾಗೇಂದ್ರ, ಸತೀಶ್ ಮೂರ್ತಿ, ವಸಂತ್ ಕುಮಾರ್, ಆನಂದ್ ಅವರನ್ನು ಸನ್ಮಾನಿಸಲಾಯಿತು.

Leave a Reply

error: Content is protected !!
LATEST
NWKRTC: ಹುಬ್ಬಳ್ಳಿ-ಧಾರವಾಡ ಹೈಕೋರ್ಟ್‌ ನಡುವೆ ಹೊಸ ಬಸ್‌ಗಳ ಸಂಚಾರ- ವಕೀಲರ ಮನವಿ ಸ್ಪಂದಿಸಿದ ಅಧಿಕಾರಿಗಳು ಡಿ.1ರಂದು ಲಾಲ್‌ಬಾಗ್‌ನಲ್ಲಿ ಇಪಿಎಸ್ ಪಿಂಚಿಣಿದಾರರ 83ನೇ ತಿಂಗಳ ಸಭೆ ಸಾರಿಗೆ ನೌಕರರಿಗೆ ಪ್ರಣಾಳಿಕೆಯಲ್ಲಿ ಕೊಟ್ಟ ಭರವಸೆ ಅನುಷ್ಠಾನಗೊಳಿಸಿ : ಸರ್ಕಾರಕ್ಕೆ ಬೈರಣ್ಣ ಒತ್ತಾಯ KSRTC: ಸಮಸ್ತ 4ನಿಗಮಗಳ ಅಧಿಕಾರಿಗಳು-ನೌಕರರು ಇಟ್ಟಿರುವ ಬೇಡಿಕೆಗಳ ಈಡೇರಿಸಿಕೊಳ್ಳುವುದು ಅಸಾಧ್ಯವೆ ಅಲ್ಲ! ಡಿ.9ರಿಂದ ವಿಧಾನಮಂಡಳ ಅಧಿವೇಶನ, ಉಕ ಪ್ರಗತಿಗೆ ಒತ್ತು: ಸ್ಪೀಕರ್ ಖಾದರ್ ವಿವಿಧ ಬೇಡಿಕೆಗಳ  ಈಡೇರಿಸಿ ಆಗ್ರಹಿಸಿ ಇಪಿಎಸ್ ಪಿಂಚಣಿದಾರರ ಪ್ರತಿಭಟನೆ: ಅಧಿಕಾರಿಗಳ ವಿರುದ್ಧ ಆಕ್ರೋಶ ಸರ್ಕಾರದ ತಾತ್ಸಾರದಿಂದಾಗಿ ಆರ್ಥಿಕವಾಗಿ ಸಬಲವಾಗಿದ್ದರೂ ಸಂಕಷ್ಟದ ಪರಿಸ್ಥಿತಿ ತಲುಪಿದ KSRTC ಸಾರಿಗೆ ನಿಗಮಗಳು! KSRTC ಚಾಲನಾ ಸಿಬ್ಬಂದಿ ಕಾರ್ಮಿಕರಲ್ಲ ನೌಕರರು - ಹುದ್ದೆ ಅರಿವಿಲ್ಲದವರು ಕಾರ್ಮಿಕ ಪದ ಬಳಸುತ್ತಿದ್ದಾರೆ..! ಸಾರಿಗೆ ಸಿಬ್ಬಂದಿಗಳಿಗೆ ಮೋಸ ಮಾಡಿರುವ ನಿಮಗೆ ಯಾವ ನೈತಿಕತೆ ಇದೆ: ಬಿಜೆಪಿಗರ ತರಾಟೆಗೆ ತೆಗೆದುಕೊಂಡ ರಾಮಲಿಂಗಾರೆಡ್ಡಿ ನ.27 "ನಿಧಿ ಆಪ್ಕೆ ನಿಕಟ್" ಇಪಿಎಸ್ ಪಿಂಚಣಿದಾರರ ಪ್ರತಿಭಟನೆ